ಮಳೆ ಬಂತೆಂದು ಅಂಡರ್​ಪಾಸ್​ನಲ್ಲಿ ವಾಹನ ನಿಲ್ಲಿಸಿದರೆ ದಂಡ ವಿಧಿಸಲಾಗುವುದು : ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೇಗೌಡ

| Updated By: ವಿವೇಕ ಬಿರಾದಾರ

Updated on: Aug 31, 2022 | 8:39 PM

ಮಳೆ ಬಂತೆಂದು ಅಂಡರ್​ಪಾಸ್​ನಲ್ಲಿ ವಾಹನ ನಿಲ್ಲಿಸಿದರೆ ದಂಡ ವಿಧಿಸಲಾಗುವುದು ಎಂದು ಬೆಂಗಳೂರು ಸಂಚಾರಿ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಎಚ್ಚರಿಕೆ ನೀಡಿದ್ದಾರೆ.

ಮಳೆ ಬಂತೆಂದು ಅಂಡರ್​ಪಾಸ್​ನಲ್ಲಿ ವಾಹನ ನಿಲ್ಲಿಸಿದರೆ ದಂಡ ವಿಧಿಸಲಾಗುವುದು : ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೇಗೌಡ
ಸಂಚಾರಿ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ
Follow us on

ಬೆಂಗಳೂರು: ಮಳೆ ಬಂತೆಂದು ಅಂಡರ್​ಪಾಸ್​ನಲ್ಲಿ (Underpass) ವಾಹನ ನಿಲ್ಲಿಸಿದರೆ ದಂಡ ವಿಧಿಸಲಾಗುವುದು ಎಂದು ಬೆಂಗಳೂರು ಸಂಚಾರಿ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಎಚ್ಚರಿಕೆ ನೀಡಿದ್ದಾರೆ. ನಾಯಂಡಹಳ್ಳಿ, ವಿಂಡ್ಸನ್ ಮ್ಯಾನರ್​ ಮಳೆ ಬಂತೆಂದು ಅಂಡರ್​ಪಾಸ್​ನಲ್ಲಿ ವಾಹನ ನಿಲ್ಲಿಸಿಸಲಾಗುತ್ತಿದ್ದು,  ಇದರಿಂದ ಟ್ರಾಫಿಕ್​ಜಾಮ್​ ಉಂಟಾಗುತ್ತಿತ್ತು.

ಇಂತಹ ಸಂದರ್ಭದಲ್ಲಿ ಹೆವಿ ವೆಹಿಕಲ್ಸ್​ ಪಾಸ್​ ಆದಾಗ ಅಪಘಾತವಾಗುತ್ತದೆ. ಹೀಗಾಗಿ ಇನ್ಮುಂದೆ ಅಂಡರ್​ಪಾಸ್​ನಲ್ಲಿ ವಾಹನ ನಿಲ್ಲಿಸದಂತೆ ಸೂಚನೆ ನೀಡಲಾಗಿದೆ. ಕೆಳಸೇತುವೆಯಲ್ಲಿ ಗಾಡಿ ನಿಲ್ಲಿಸಿ ಟ್ರಾಫಿಕ್​ಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದೆಂದು ಅವರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:38 pm, Wed, 31 August 22