ಅವ್ಯವಸ್ಥೆಯ ಆಗರವಾದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ! ಶವದ ಜೊತೆ ರೋಗಿಗೆ ಚಿಕಿತ್ಸೆ
ಸಿಲಿಕಾನ್ ಸಿಟಿ ಬೆಂಗಳೂರಿನ ಅತಿದೊಡ್ಡ ಸರ್ಕಾರಿ ಆಸ್ಪತ್ರೆಯಾಗಿರುವ ವಿಕ್ಟೋರಿಯಾ ಆಸ್ಪತ್ರೆ ಅವ್ಯವಸ್ಥೆಯಿಂದ ಕೂಡಿದೆ. ಜನ ಸಾಮಾನ್ಯರು ಆಸ್ಪತ್ರೆಯ ಅವ್ಯವಸ್ಥೆಯಿಂದ ಪರದಾಡುತ್ತಿದ್ದಾರೆ.
ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿರುವ ಅತಿ ದೊಡ್ಡ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆಯ ಆಗರವಾಗಿದೆ. ವಿಕ್ಟೋರಿಯಾ ಆಸ್ಪತ್ರೆ (Victoria Hospita) ಮೃತದೇಹಗಳ ಪಕ್ಕದಲ್ಲೇ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಆರೋಪ ಕೇಳಿಬಂದಿದೆ. ಒಂದೇ ಬೆಡ್ನಲ್ಲಿ ಶವದ ಜೊತೆ ರೋಗಿಯನ್ನು ಮಲಗಿಸಿ ಚಿಕಿತ್ಸೆ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇನ್ನು ಸ್ಟ್ರೆಚರ್ ಇಲ್ಲದ ಹಿನ್ನೆಲೆ ರೋಗಿಯೊಬ್ಬರು ತೆವಳುತ್ತಾ ಸಾಗಿದ್ದಾರೆ. ಮಾತ್ರವಲ್ಲದೇ ಆಸ್ಪತ್ರೆಯಲ್ಲಿ ಐಸಿಯು ಬೆಡ್ಗಳ ಕೊರತೆ ಹಿನ್ನೆಲೆ ಆ್ಯಂಬುಲೆನ್ಸ್ನಲ್ಲಿಯೇ ರೋಗಿಗಳು ಪರದಾಡುತ್ತಿರುವುದು ಬಯಲಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನ ಅತಿದೊಡ್ಡ ಸರ್ಕಾರಿ ಆಸ್ಪತ್ರೆಯಾಗಿರುವ ವಿಕ್ಟೋರಿಯಾ ಆಸ್ಪತ್ರೆ ಅವ್ಯವಸ್ಥೆಯಿಂದ ಕೂಡಿದೆ. ಜನ ಸಾಮಾನ್ಯರು ಆಸ್ಪತ್ರೆಯ ಅವ್ಯವಸ್ಥೆಯಿಂದ ಪರದಾಡುತ್ತಿದ್ದಾರೆ. ಶವದ ಪಕ್ಕದಲ್ಲೇ ಆಸ್ಪತ್ರೆ ಸಿಬ್ಬಂದಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಮೃತ ವ್ಯಕ್ತಿಯ ಶವ ತೆರವು ಮಾಡದೇ, ಮತ್ತೊಬ್ಬ ರೋಗಿಗೆ ಚಿಕಿತ್ಸೆ ನೀಡುತ್ತಿರುವ ಬಗ್ಗೆ ಆರೋಪ ಕೇಳಿಬಂದಿದೆ.
ಇನ್ನು ಆಸ್ಪತ್ರೆಯಲ್ಲಿ ಐಸಿಯು ಬೆಡ್ ಇಲ್ಲದೇ ಸರಣಿ ಸಾವಾಗಾಗುತ್ತಿದೆ ಅಂತ ಹೇಳಲಾಗುತ್ತಿದೆ. ಐಸಿಯು ಬೆಡ್ ಕೊರತೆಯಿಂದ ರೋಗಿಗಳು ಆಂಬ್ಯುಲೆನ್ಸ್ನಲ್ಲೇ ಪರದಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸ್ಟ್ರೆಚರ್ ಇಲ್ಲದೆ ರೋಗಿ ಆಸ್ಪತ್ರೆ ಮೆಟ್ಟಿಲುಗಳ ಮೇಲೆ ತೆವಳುತ್ತಾ ಗೋಳಾಡಿದ್ದಾರೆ. ನನಗೆ ಈ ಆಸ್ಪತ್ರೆ ಬೇಡ ಅಂತ ತೆವಳುತ್ತಲೇ ರೋಗಿ ಹೊರ ಬಂದಿದ್ದಾರೆ. ಮಾತ್ರವಲ್ಲದೇ ಮಳೆಯ ಮಧ್ಯೆ ಸಿರೀಯಸ್ ಆಗಿರುವ ರೋಗಿಯನ್ನು ಸಾಗಿಸಿದ್ದಾರೆ.
ಆಸ್ಪತ್ರೆಯ ಅವ್ಯವಸ್ಥೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಬಗ್ಗೆ ಸಂಬಂಧಿಸಿದವರ ಜೊತೆ ಚರ್ಚೆ ಮಾಡಿದ್ದೇನೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿನ ಸಮಸ್ಯೆ ಬಗೆಹರಿಯುತ್ತೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ
ದಾವಣಗೆರೆಯಲ್ಲಿ ಮಗುವಿನ ಮೇಲೆ ಹರಿದ ಕಾರು! ಮಗು ಸಾವು, ಗರ್ಭಿಣಿಗೆ ಗಾಯ
Published On - 1:08 pm, Sat, 16 October 21