ಪಾವಗಡ ಬಸ್ ಅಪಘಾತ ಕೇಸ್: ಚಾಲಕ ವಶಕ್ಕೆ, FIR ದಾಖಲು, ಇತ್ತ ಬೆಂಗಳೂರಿನಲ್ಲಿ ರಂಗಭೂಮಿ ಕಲಾವಿದೆ ಮೇಲೆ ಆ್ಯಸಿಡ್ ದಾಳಿ

ಚಾಲಕನ ಹೆಸರು ಬಳಸದೆ ಬಸ್ ನಂಬರ್ ಉಲ್ಲೇಖಿಸಿ FIR ದಾಖಲು ಮಾಡಲಾಗಿದೆ. KA06 C8933 SVT ಬಸ್ ಚಾಲಕ A1 ಎಂದು ಉಲ್ಲೇಖ ಮಾಡಿ ಪ್ರಕರಣ ದಾಖಲು ಮಾಡಲಾಗಿದೆ. ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾವಗಡ ಬಸ್ ಅಪಘಾತ ಕೇಸ್: ಚಾಲಕ ವಶಕ್ಕೆ, FIR ದಾಖಲು, ಇತ್ತ ಬೆಂಗಳೂರಿನಲ್ಲಿ ರಂಗಭೂಮಿ ಕಲಾವಿದೆ ಮೇಲೆ ಆ್ಯಸಿಡ್ ದಾಳಿ
ಸಾಂಕೇತಿಕ ಚಿತ್ರ
Follow us
TV9 Web
| Updated By: ganapathi bhat

Updated on:Mar 20, 2022 | 11:08 AM

ತುಮಕೂರು: ಜಿಲ್ಲೆಯ ಪಾವಗಡದ ಪಳವಳ್ಳಿ ಬಳಿ ಬಸ್ ದುರಂತ ಪ್ರಕರಣಕ್ಕೆ ಸಂಬಂಧಿಸಿ ಖಾಸಗಿ ಬಸ್ ಚಾಲಕ ರಘು ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾಲಕನ ಹೆಸರು ಬಳಸದೆ ಬಸ್ ನಂಬರ್ ಉಲ್ಲೇಖಿಸಿ FIR ದಾಖಲು ಮಾಡಲಾಗಿದೆ. KA06 C8933 SVT ಬಸ್ ಚಾಲಕ A1 ಎಂದು ಉಲ್ಲೇಖ ಮಾಡಿ ಪ್ರಕರಣ ದಾಖಲು ಮಾಡಲಾಗಿದೆ. ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಖಾಸಗಿ ಬಸ್ ಪಲ್ಟಿ ದುರಂತದಲ್ಲಿ ಮೃತರ ಸಂಖ್ಯೆ 6 ಕ್ಕೆ ಏರಿಕೆ ಆಗಿದೆ. 40 ಕ್ಕೂ ಹೆಚ್ಚು ಗಾಯಾಳುಗಳಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 7 ಗಾಯಾಳುಗಳಿಗೆ ವಿಕ್ಟೋರಿಯಾ, ನಿಮ್ಹಾನ್ಸ್‌ನಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ದುರಂತ ಸಂಭವಿಸಿದ ಸ್ಥಳದಲ್ಲಿಯೇ ನಾಲ್ವರು ಮೃತಪಟ್ಟಿದ್ದರು, ಬಳಿಕ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಒಬ್ಬರು ಮೃತಪಟ್ಟಿದ್ದರು. ಚಿಕಿತ್ಸೆ ಫಲಿಸದೆ ರಾತ್ರಿ ವಿಕ್ಟೋರಿಯಾದಲ್ಲಿ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. ಅಜಿತ್, ಕಲ್ಯಾಣ್, ಶಾನವಾಜ್, ಬಾಬು ವಲಿ ಹಾಗೂ ಒಂದೇ ಕುಟುಂಬದ ಅಮೂಲ್ಯ, ಹರ್ಷಿತಾ ಸಾವನ್ನಪ್ಪಿದ್ದಾರೆ.

ಬೆಂಗಳೂರಿನಲ್ಲಿ ರಂಗಭೂಮಿ ಕಲಾವಿದೆ ಮೇಲೆ ಆ್ಯಸಿಡ್ ದಾಳಿ

ಬೆಂಗಳೂರಿನಲ್ಲಿ ರಂಗಭೂಮಿ ಕಲಾವಿದೆ ಮೇಲೆ ಆ್ಯಸಿಡ್ ದಾಳಿ ನಡೆಸಲಾಗಿದೆ. ಮನೆಯ ಜಗುಲಿಯಲ್ಲಿ ಮಲಗಿದ್ದ ದೇವಿ ಮೇಲೆ ಅಟ್ಯಾಕ್ ಮಾಡಲಾಗಿದ್ದು ನಂದಿನಿ ಲೇಔಟ್‌ನ ಗಣೇಶ ಬ್ಲಾಕ್‌ನಲ್ಲಿ ಮಾ.18 ರಂದು ಘಟನೆ ನಡೆದಿದೆ. ರಂಗಭೂಮಿಯ ಸಹಪಾಠಿಗಳಿಂದಲೇ ದೇವಿ ಮೇಲೆ ದಾಳಿ ಮಾಡಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಗಳಾದ ರಮೇಶ್, ಸ್ವಾತಿ, ಯೋಗೇಶ್ ಬಂಧನ ಮಾಡಲಾಗಿದೆ. ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವಿಜಯಪುರ: ಬೀಗ ಹಾಕಿದ್ದ ಮನೆಗಳ ಸರಣಿ ಕಳ್ಳತನ

ಬೀಗ ಹಾಕಿದ್ದ ಮನೆಗಳ ಸರಣಿ ಕಳ್ಳತನ ಮಾಡಿದ ಘಟನೆ ವಿಜಯಪುರ ಜಿಲ್ಲೆ ಇಂಡಿ ಪಟ್ಟಣದಲ್ಲಿ ನಡೆದಿದೆ. ಇಲ್ಲಿ ಮನೆಗಳ ಸರಣಿ ಕಳ್ಳತನ ಮಾಡಲಾಗಿದೆ. ಇಂಡಿಯ ಮಹಾಲಕ್ಷ್ಮಿ ನಗರದಲ್ಲಿ ಘಟನೆ ನಡೆದಿದೆ. ಬೀಗ ಹಾಕಿದ್ದ ಮೂರು ಮನೆಗಳಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ. ನಸುಕಿನಜಾವದಲ್ಲಿ ಕಳ್ಳರ ಕೃತ್ಯ ನಡೆದಿದ್ದು ಮನೆಯಲ್ಲಿದ್ದ ಚಿನ್ನಾಭರಣ ಕದ್ದು ಖದೀಮರು ಪರಾರಿ ಆಗಿದ್ದಾರೆ. ಎಷ್ಟು ಪ್ರಮಾಣದ ಚಿನ್ನಾಭರಣ, ನಗದು ಕಳ್ಳತನವಾಗಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಇಂಡಿ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಪಾವಗಡ ಬಸ್ ಅಪಘಾತ: ವಿಧಿಯಾಟಕ್ಕೆ ಅಕ್ಕ- ತಂಗಿ ಇಬ್ಬರೂ ಬಲಿ; ಮೃತರ ಸಂಖ್ಯೆ 6ಕ್ಕೆ ಏರಿಕೆ

ಇದನ್ನೂ ಓದಿ: Bus Accident: ಪಾವಗಡದ ಭೀಕರ ಬಸ್ ಅಪಘಾತಕ್ಕೆ ನಾಲ್ಕು ಮುಖ್ಯ ಕಾರಣಗಳು; ಏನದು?

Published On - 11:06 am, Sun, 20 March 22

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ