AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI Recruitment Scam: ಬಂಧಿತರ ಮೇಲೆ ಭ್ರಷ್ಟಾಚಾರ ತಡೆ ಕಾಯ್ದೆ ಅನ್ವಯ ಪ್ರಕರಣ ದಾಖಲು

ಪಿಎಸ್​ಐ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿರುವುದು ದೃಡಪಟ್ಟಿದೆ. ಪಿಎಸ್ಐ ನೇಮಕಾತಿಗಾಗಿಯೇ ಪಡೆದಿದ್ದ ಸುಮಾರು 1.5 ಕೋಟಿಗೂ ಹೆಚ್ಚಿನ ಹಣ ಪತ್ತೆಯಾಗಿದೆ.

PSI Recruitment Scam: ಬಂಧಿತರ ಮೇಲೆ ಭ್ರಷ್ಟಾಚಾರ ತಡೆ ಕಾಯ್ದೆ ಅನ್ವಯ ಪ್ರಕರಣ ದಾಖಲು
ಸಾಂಧರ್ಬಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Oct 12, 2022 | 8:45 AM

Share

ಬೆಂಗಳೂರು: ಅಕ್ಟೋಬರ್ 2021ರಲ್ಲಿ 545 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿಗಾಗಿ ರಾಜ್ಯಾದ್ಯಂತ ನಡೆದ ಲಿಖಿತ ಪರೀಕ್ಷೆಯಲ್ಲಿ ಭಾರೀ ಅಕ್ರಮವಾಗಿದೆ. ಪಿಎಸ್ಐ ಪರೀಕ್ಷೆ ಹೆಸರಲ್ಲಿ ಕೋಟಿ ಕೋಟಿ ಹಣ ಲೂಟಿ ಮಾಡಲಾಗಿದೆ. ಸದ್ಯ ಪಿಎಸ್​ಐ ನೇಮಕಾತಿ ಹಗರಣದಲ್ಲಿ ಬಂಧಿತರಾದವರ ಮೇಲೆ ಸಿಐಡಿ ಪೊಲೀಸರಿಂದ ಮತ್ತೊಂದು ಅಸ್ತ್ರ ಪ್ರಯೋಗ ಮಾಡಲಾಗಿದೆ. ಪಿಎಸ್​ಐ ನೇಮಕಾತಿ ಕೇಸ್​ನಲ್ಲಿ ಪಿ.ಸಿ. ಆಕ್ಟ್ ಅಳವಡಿಸಲಾಗಿದೆ.

ಪಿಎಸ್​ಐ ನೇಮಕಾತಿ ಹಗರಣದ ಕೇಸ್​ನಲ್ಲಿ ಪಿ.ಸಿ. ಆಕ್ಟ್(ಪ್ರಿವೆನ್ಷನ್ ಆಫ್ ಕರಪ್ಷನ್ ಆಕ್ಟ್. ಭ್ರಷ್ಟಾಚಾರ ತಡೆ ಕಾಯ್ದೆ) ಅಳವಡಿಸಲಾಗಿದೆ. ಪಿಎಸ್​ಐ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿರುವುದು ದೃಡಪಟ್ಟಿದೆ. ಪಿಎಸ್ಐ ನೇಮಕಾತಿಗಾಗಿಯೇ ಪಡೆದಿದ್ದ ಸುಮಾರು 1.5 ಕೋಟಿಗೂ ಹೆಚ್ಚಿನ ಹಣ ಪತ್ತೆಯಾಗಿದೆ. ಹಣದ ಮೂಲ ಪರಿಶೀಲನೆ ಮಾಡಿದಾಗ ಅದು ಲಂಚ ಪಡೆದಿದ್ದು ಎಂದು ದೃಡಪಟ್ಟಿದೆ. ಹೀಗಾಗಿ ಲಂಚ ನೀಡಿದವರು ಹಾಗೂ ಲಂಚ ಪಡೆದವರ ವಿರುದ್ಧ ಹೊಸ ಸೆಕ್ಷನ್ ಅಡಿಯಲ್ಲಿ ಸಹ ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಬಂಧಿತರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿ ತನಿಖೆಯನ್ನು ಮುಂದುವರೆಸಿದ್ದಾರೆ. ಇದನ್ನೂ ಓದಿ: ಬಸವ ಎಕ್ಸ್​ಪ್ರೆಸ್​ನಲ್ಲಿ ನೀರಿಲ್ಲ: ವಿಡಿಯೊ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಪ್ರಯಾಣಿಕರು

ಪಿ.ಸಿ. ಆಕ್ಟ್ ಹಾಕಿರುವ ಹಿನ್ನಲೆ ಕೋರ್ಟ್ ಬದಲಾವಣೆಯಾಗಲಿದೆ. ಇದುವರೆಗೆ ಒಂದನೇ ಎಸಿಎಂಎಂ ನ್ಯಾಯಾಲಯದಲ್ಲಿ ಕೇಸ್ ಇತ್ತು. ಆದ್ರೆ ಇನ್ನು ಮುಂದೆ ಸಿಸಿಎಚ್ 23 ನೇ ನ್ಯಾಯಾಲಯದಲ್ಲಿ ಕೇಸ್ ನಡೆಯಲಿದೆ. ಹಣ ವರ್ಗಾವಣೆ ಹಾಗು ಬೇನಾಮಿ ಆಸ್ತಿ ಪತ್ತೆಯಾದ ಹಿನ್ನೆಲೆ ಇಡಿ ಸಹ ಪಿಎಸ್​ಐ ನೇಮಕಾತಿ ಹಗರಣದ ಕೇಸ್​ನಲ್ಲಿ ಎಂಟ್ರಿಯಾಗಲಿದೆ. ಅಲ್ಲದೆ ಈಗಾಗಲೇ ಕೆಲ ಆರೋಪಿಗಳನ್ನು ಇಡಿ ವಿಚಾರಣೆ ನಡೆಸಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ