AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಬಲ್ ಅಳವಡಿಕೆ, ದುರಸ್ತಿ ಕಾಮಗಾರಿ ಮತ್ತು ಲೋಡ್​​ ಟೆಸ್ಟಿಂಗ್​​ ಕಂಪ್ಲೀಟ್​​: ಪೀಣ್ಯ ಫೈಓವರ್​​ ಸಂಚಾರಕ್ಕೆ ಮುಕ್ತ

ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ ದುರಸ್ತಿ ಪೂರ್ಣಗೊಂಡು, ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಕೇಬಲ್ ಬದಲಾವಣೆ ಮತ್ತು ಲೋಡ್ ಪರೀಕ್ಷೆ ಯಶಸ್ವಿಯಾಗಿದ್ದು, 72 ಗಂಟೆಗಳ ನಂತರ ಡಾ. ಶಿವಕುಮಾರ್ ಸ್ವಾಮೀಜಿ ಮೇಲ್ಸೇತುವೆ ಮತ್ತೆ ಕಾರ್ಯಾರಂಭಿಸಿದೆ. 1,422 ಕೇಬಲ್‌ಗಳನ್ನು 32 ಕೋಟಿ ವೆಚ್ಚದಲ್ಲಿ ಬದಲಾಯಿಸಲಾಗಿದ್ದು, NHAI ಮುಂದಿನ ದಿನಗಳಿಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.

ಕೇಬಲ್ ಅಳವಡಿಕೆ, ದುರಸ್ತಿ ಕಾಮಗಾರಿ ಮತ್ತು ಲೋಡ್​​ ಟೆಸ್ಟಿಂಗ್​​ ಕಂಪ್ಲೀಟ್​​: ಪೀಣ್ಯ ಫೈಓವರ್​​ ಸಂಚಾರಕ್ಕೆ ಮುಕ್ತ
ಪೀಣ್ಯ ಫೈಓವರ್​​ ಸಂಚಾರಕ್ಕೆ ಮುಕ್ತImage Credit source: Tv9 Kannada
ಕಿರಣ್​ ಸೂರ್ಯ
| Edited By: |

Updated on: May 08, 2026 | 12:00 PM

Share

ಬೆಂಗಳೂರು, ಮೇ 08:  ಕೇಬಲ್ ಅಳವಡಿಕೆ, ದುರಸ್ತಿ ಕಾಮಗಾರಿ ಹಾಗೂ ಅಂತಿಮ ಲೋಡ್ ಟೆಸ್ಟಿಂಗ್ ಹಿನ್ನೆಲೆ ಮೇ 5ರಿಂದ ಬಂದ್​​ ಆಗಿದ್ದ ಬೆಂಗಳೂರಿನ (Bengaluru) ಪೀಣ್ಯ ಎಲಿವೇಟೆಡ್ ಫ್ಲೈಓವರ್​ ಈಗ ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ. ಫ್ಲೈ ಓವರ್ ಕೇಬಲ್ ಚೇಂಜ್, ಲೋಡ್ ಟೆಸ್ಟಿಂಗ್ ಸಕ್ಸಸ್ ಆಗಿರುವ ಹಿನ್ನೆಲೆ ಡಾ. ಶಿವಕುಮಾರ್ ಸ್ವಾಮೀಜಿ ಮೇಲ್ಸೇತುವೆ ಮತ್ತೆ ಸಹಜ ಸ್ಥಿತಿಗೆ ಮರಳಿದೆ. ಫ್ಲೈಓವರ್​​ ಬಂದ್​​ ಆಗಿದ್ದ ಹಿನ್ನೆಲೆ ಟ್ರಾಫಿಕ್​​ ಸಮಸ್ಯೆ ಎದುರಿಸುತ್ತಿದ್ದ ವಾಹನ ಸವಾರರು ಈಗ ನಿರಾಳರಾಗಿದ್ದಾರೆ.

  • ಪೀಣ್ಯ ಎಲಿವೇಟೆಡ್ ಫ್ಲೈಓವರ್​ ದುರಸ್ತಿ ಕಾಮಗಾರಿ ಪೂರ್ಣ
  • ವಾಹನಗಳ ಸಂಚಾರಕ್ಕೆ ಬೆಳಿಗ್ಗೆ 11ರಿಂದ ಮೇಲ್ಸೇತುವೆ ಮುಕ್ತ
  • ಡಾ. ಶಿವಕುಮಾರ್ ಸ್ವಾಮೀಜಿ ಫ್ಲೈಓವರ್ ಮತ್ತೆ ಸಹಜ ಸ್ಥಿತಿಗೆ

ಇದನ್ನೂ ಓದಿ: ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್​ 4 ದಿನ ಬಂದ್

72 ಗಂಟೆಗಳ ಬಳಿಕ ಸಂಚಾರಕ್ಕೆ ಮುಕ್ತ

ಬುಧವಾರ ಬೆಳಿಗ್ಗೆ 5 ಗಂಟೆಗೆ ಕ್ಲೋಸ್​​ ಆಗಿದ್ದ ಫ್ಲೈಓವರ್​​ 72 ಗಂಟೆಗಳ ಬಳಿಕ ಅಂದರೆ ಇಂದು (ಮೇ 8) ಬೆಳಿಗ್ಗೆ 11 ಗಂಟೆಗೆ ಮತ್ತೆ ವಾಹನಗಳ ಸಂಚಾರಕ್ಕೆ ಮುಕ್ತಗೊಂಡಿದೆ. ಈ ಬಾರಿ 1,422 ಕೇಬಲ್​​ಗಳನ್ನು ಚೇಂಜ್ ‌ಮಾಡಲಾಗಿದ್ದು, 4 ದಿನಗಳ ಕಾಲ 32 ಟನ್ ಲೋಡ್ ಟೆಸ್ಟಿಂಗ್ ನಡೆಸಲಾಗಿದೆ. ಸುಮಾರು 10ಕ್ಕೂ ಹೆಚ್ಚು ಟ್ರಕ್​​ಗಳಲ್ಲಿ 32 ಟನ್​​ನಷ್ಟು ಲೋಡ್ ಹಾಕಿ ಪರೀಕ್ಷೆ ನಡೆದಿದ್ದು, ಬದಲಾಯಿಸಲಾದ ಕೇಬಲ್​​ಗಳ ಮೊತ್ತ 32 ಕೋಟಿ ರೂಪಾಯಿ ಎನ್ನಲಾಗಿದೆ. ಜೊತೆಗೆ ಮುಂದಿನ ದಿನಗಳಲ್ಲಿ ಈ ಕೇಬಲ್​​ಗಳಿಗೆ ಯಾವುದೇ ಹಾನಿಯಾಗದಂತೆ ಅಗತ್ಯ ಮುಂಜಾಗೃತಾ ಕ್ರಮಗಳನ್ನೂ NHAI ಕೈಗೊಂಡಿದೆ.

ಪೀಣ್ಯ ಮೇಲ್ಸೇತುವೆಯ ಕೆನ್ನಮೆಟಲ್ ವಿಡಿಯಾ ಅಪ್ ರ್‍ಯಾಂಪ್‌ನಿಂದ ಎಸ್‌ಆರ್‌ಎಸ್ ಡೌನ್ ರ್‍ಯಾಂಪ್‌ವರೆಗೆ ಎರಡೂ ಬದಿಯಲ್ಲಿ ವಾಹನ ಸಂಚಾರಕ್ಕೆ ಮೇ 5ರಿಂದ ಅವಕಾಶವಿರಲಿಲ್ಲ. ಇಂದು ಮೇಲ್ಸೇತುವೆ ಸಂಚಾರಕ್ಕೆ ಮುಕ್ತವಾಗುತ್ತಿದ್ದಂತೆ ಸವಾರರು ನಾ ಮುಂದು ತಾ ಮುಂದು ವಾಹನಗಳನ್ನು ಚಲಾಯಿಸಿದ ದೃಶ್ಯಗಳು ಕಂಡುಬಂದಿವೆ. ಫ್ಲೈ ಓವರ್ ವಾಹನಗಳ ಸಂಚಾರಕ್ಕೆ ಮತ್ತೆ ಮುಕ್ತವಾಗಿರುವ ಕಾರಣ ಟ್ರಾಫಿಕ್ ಸಮಸ್ಯೆ ತುಂಬಾ ಕಡಿಮೆ ಆಗಲಿದೆ ಎಂದು ವಾಹನ ಸವಾರರು ಸಂತಸವನ್ನೂ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಕಿರಣ್​ ಸೂರ್ಯ
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ