ಪೀಣ್ಯ ಎಲಿವೇಟೆಡ್ ಫ್ಲೈಓವರ್ ಮೇಲೆ ಸಂಚಾರ ಬಂದ್; ರಾತ್ರಿ 12 ಗಂಟೆಯಿಂದ ಬೆಳಗಿನ ಜಾವ 5 ಗಂಟೆಯವರೆಗೆ ನಿರ್ಬಂಧ

ರಾತ್ರಿ 12 ಗಂಟೆ ನಂತರ ಸರ್ವಿಸ್ ರಸ್ತೆ ಮೂಲಕ ದಾಸರಹಳ್ಳಿ, ಪೀಣ್ಯ, ಜಾಲಹಳ್ಳಿ ಕ್ರಾಸ್ ಮೂಲಕ ಗೊರಗುಂಟೆಪಾಳ್ಯ ತಲುಪಬಹುದು. ಗೊರಗುಂಟೆಪಾಳ್ಯದಿಂದ ಔಟರ್ ರಿಂಗ್ ರೋಡ್ ಬಳಸಿ ನಗರದಿಂದ ಹೊರ ಹೋಗಬಹುದು. ನಗರಕ್ಕೆ ಬರುವ ವಾಹನಗಳು ಮಾದಾವಾರ ಬಳಿ ನೈಸ್ ರಸ್ತೆ ಬಳಸಿಕೊಂಡು ಬರಬಹುದು ಎಂದು ಸಂಚಾರಿ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಆದೇಶಿಸಿದ್ದಾರೆ.

ಪೀಣ್ಯ ಎಲಿವೇಟೆಡ್ ಫ್ಲೈಓವರ್ ಮೇಲೆ ಸಂಚಾರ ಬಂದ್; ರಾತ್ರಿ 12 ಗಂಟೆಯಿಂದ ಬೆಳಗಿನ ಜಾವ 5 ಗಂಟೆಯವರೆಗೆ ನಿರ್ಬಂಧ
ಪೀಣ್ಯ ಫ್ಲೈಓವರ್, ಸಂಚಾರಕ್ಕೆ ನಿರ್ಬಂಧ
Follow us
TV9 Web
| Updated By: preethi shettigar

Updated on:Mar 12, 2022 | 9:02 PM

ಬೆಂಗಳೂರು: ಪೀಣ್ಯ ಎಲಿವೇಟೆಡ್ ಫ್ಲೈಓವರ್(Flyover) ಮೇಲೆ ವಾಹನಗಳ ಓಡಾಟಕ್ಕೆ ನಿರ್ಬಂಧ ಹೆರಲಾಗಿದೆ. ರಾತ್ರಿ 12 ಗಂಟೆಯಿಂದ ಬೆಳಗಿನ ಜಾವ 5 ಗಂಟೆಯವರೆಗೆ ಎಲ್ಲಾ ರೀತಿಯ ವಾಹನಗಳ(Vehicles) ಸಂಚಾರಕ್ಕೆ ನಿರ್ಬಂಧಿಸಲಾಗಿದೆ. ಮೇಲ್ಸೇತುವೆಯಲ್ಲಿ ಭಾರಿ ವಾಹನ ಹಾಗೂ ಲಘು ವಾಹನ ಪ್ರತ್ಯೇಕಿಸಿ ಕಳುಹಿಸುವುದು ಪೊಲೀಸರಿಗೆ(Karnataka police) ಕಷ್ಟ ಸಾಧ್ಯವಾಗಿದೆ. ಜೊತೆಗೆ ಭಾರಿ ವಾಹನಗಳ ತಡೆಗಟ್ಟಲು ಅಳವಡಿಸಿರೋ ಗ್ಯಾಂಟ್ರಿ ಪದೇ ಪದೇ ಡ್ಯಾಮೇಜ್ ಹಿನ್ನೆಲೆಯಲ್ಲಿ ರಾತ್ರಿ 12 ಗಂಟೆ ನಂತರ ಎಲ್ಲಾ ರೀತಿಯ ವಾಹನ ಸಂಚಾರಕ್ಕೆ ಟ್ರಾಫಿಕ್ ಪೊಲೀಸರು ಹೇರಿದ್ದಾರೆ.

ಬೆಳಗಿನ ಜಾವ 5 ಗಂಟೆಯವರೆಗೂ ಮೇಲ್ಸೇತುವೆಯ ಮೇಲೆ ವಾಹನ ಓಡಾಟಕ್ಕೆ ನಿರ್ಬಂಧಿಸಲಾಗಿದ್ದು, ರಾತ್ರಿ 12 ಗಂಟೆ ನಂತರ ಸರ್ವಿಸ್ ರಸ್ತೆ ಮೂಲಕ ದಾಸರಹಳ್ಳಿ, ಪೀಣ್ಯ, ಜಾಲಹಳ್ಳಿ ಕ್ರಾಸ್ ಮೂಲಕ ಗೊರಗುಂಟೆಪಾಳ್ಯ ತಲುಪಬಹುದು. ಗೊರಗುಂಟೆಪಾಳ್ಯದಿಂದ ಔಟರ್ ರಿಂಗ್ ರೋಡ್ ಬಳಸಿ ನಗರದಿಂದ ಹೊರ ಹೋಗಬಹುದು. ನಗರಕ್ಕೆ ಬರುವ ವಾಹನಗಳು ಮಾದಾವಾರ ಬಳಿ ನೈಸ್ ರಸ್ತೆ ಬಳಸಿಕೊಂಡು ಬರಬಹುದು ಎಂದು ಸಂಚಾರಿ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಆದೇಶಿಸಿದ್ದಾರೆ.

ಈ ಹಿಂದೆ ಫೆಬ್ರವರಿ 16 ರಂದು ಪೀಣ್ಯ ಫ್ಲೈಓವರ್​ ವಾಹನ ಸಂಚಾರಕ್ಕೆ ಮುಕ್ತವಾಗಿತ್ತು

ನಗರದ ಪೀಣ್ಯ ಫ್ಲೈಓವರ್​ ವಾಹನ ಸಂಚಾರಕ್ಕೆ ಮುಕ್ತವಾಗಿತ್ತು. ಮೊದಲಿಗೆ ಲಘು ವಾಹನಗಳ ಸಂಚಾರಕ್ಕೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅವಕಾಶ ನೀಡಿತ್ತು. ಪ್ರಸ್ತುತ 4 ಚಕ್ರದ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು.  58 ದಿನಗಳಿಂದ ಬಂದ್ ಆಗಿದ್ದ ಪೀಣ್ಯ ಫ್ಲೈಓವರ್​, ಗೊರಗುಂಟೆಪಾಳ್ಯ-ನಾಗಸಂದ್ರ ನಡುವಿನ ಫ್ಲೈಓವರ್​  ವಾಹನ ಸಂಚಾರಕ್ಕೆ ಮುಕ್ತವಾಗಿತ್ತ. ಆದರೆ, ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಮುಂದುವರಿದಿತ್ತು.

ಗೊರಗುಂಟೆ ಪಾಳ್ಯ-ನಾಗಸಂದ್ರ, ಫ್ಲೈ‌ಓವರ್ ಲಘುವಾಹನಗಳ ಸಂಚಾರಕ್ಕೆ ಮುಕ್ತವಾಗಿದ್ದು ಲಘು ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿತ್ತು. ಆದರೆ ಮತ್ತೆ ನಿರ್ಬಂಧ ಹೇರಲಾಗಿದೆ.

ಇದನ್ನೂ ಓದಿ: ಮುಂಬೈನಲ್ಲಿ ವಿಚ್ಛೇದನಕ್ಕೆ ಟ್ರಾಫಿಕ್​ ಕಾರಣ ಎಂದ ಅಮೃತಾ ಫಡ್ನವೀಸ್​; ಬೆಂಗಳೂರಿಗರು ಇದನ್ನು ಓದಬೇಡಿ ಎಂದ ಪ್ರಿಯಾಂಕಾ ಚತುರ್ವೇದಿ

Bengaluru News: ಪೀಣ್ಯ ಫ್ಲೈಓವರ್​ ವಾಹನ ಸಂಚಾರಕ್ಕೆ ಮುಕ್ತ; ಭಾರಿ ವಾಹನಗಳ ಸಂಚಾರಕ್ಕೆ ಮುಂದುವರಿದ ನಿರ್ಬಂಧ

Published On - 8:58 pm, Sat, 12 March 22

Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?