ಬೆಂಗಳೂರು: ಅನಾರೋಗ್ಯ ಹಿನ್ನೆಲೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ (HD Devegowda) ರ ಮನೆಗೆ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಇಂದು ಭೇಟಿ ನೀಡಿ, ಉಭಯ ಕುಶಲೋಪರಿ ವಿಚಾರಿಸಿದರು. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದರು. ಕೆಲ ದಿನಗಳ ಹಿಂದೆ ರಾಜ್ಯದ ಗಣ್ಯರು, ರಾಜೀಕಿಯ ನಾಯಕರುಗಳು ದೇವೇಗೌಡರ ನಿವಾಸಕ್ಕೆ ತೆರಳಿ ಆರೋಹಗ್ಯ ವಿಚಾರಿಸಿಕೊಂಡು ಬಂದಿದ್ದರು. ಬಳಿಕ ಸ್ವತಃ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ನಾನು ಆರೋಗ್ಯವಾಗಿದ್ದೇನೆ ಸಕ್ರಿಯವಾಗಿ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ಹೇಳಿಕೆ ನೀಡದ್ದರು.
ನಾನು ಆರೋಗ್ಯವಾಗಿದ್ದೇನೆ, ಶೀಘ್ರವೇ ಪಕ್ಷದ ಕಚೇರಿಗೆ ಭೇಟಿ ನೀಡುವೆ: ಹೆಚ್.ಡಿ. ದೇವೇಗೌಡ
ನನ್ನ ಆರೋಗ್ಯ ಉತ್ತಮವಾಗಿದ್ದು, ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇನೆ ಎಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಅವರು (JDS Supremo, Former PM HD Deve Gowda) ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಪ್ರಧಾನಮಂತ್ರಿ ” ಸ್ವಲ್ಪ ಪ್ರಮಾಣದಲ್ಲಿ ಅನಾರೋಗ್ಯ ಉಂಟಾದ ಕಾರಣಕ್ಕೆ ವೈದ್ಯರು ವಿಶ್ರಾಂತಿಗೆ ಸಲಹೆ ಮಾಡಿದ್ದರು. ಆದಕಾರಣ ಕೆಲ ಕಾಲ ಮನೆಯಲ್ಲೇ ವಿಶ್ರಾಂತಿ ಪಡೆಯಬೇಕಾಯಿತು. ಇನ್ನೂ ಕೆಲ ದಿನ ಮನೆಯಲ್ಲೇ ಇದ್ದು ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ಮಾಡಿದ್ದಾರೆ ” ಎಂದು ಅವರು ಹೇಳಿದ್ದಾರೆ (Health).
ಮನೆಯಿಂದಲೇ ನನ್ನೆಲ್ಲಾ ರಾಜಕೀಯ, ಸಂಸದೀಯ ಹಾಗೂ ಪಕ್ಷದ ಜವಾಬ್ದಾರಿಗಳನ್ನು ನಿರ್ವಹಣೆ ಮಾಡಲಿದ್ದೇನೆ. ಹೀಗಾಗಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಕೆಲವು ದಿನಗಳ ಮಟ್ಟಿಗೆ ನನ್ನ ಭೇಟಿಗೆ ಬರುವುದು ಬೇಡ ಎಂದು ಮಾಜಿ ಪ್ರಧಾನಮಂತ್ರಿ ಮನವಿ ಮಾಡಿದ್ದಾರೆ. ಕೆಲ ದಿನಗಳ ನಂತರ ನಾನೇ ಖುದ್ದು ಪಕ್ಷದ ಕಚೇರಿಗೆ ಭೇಟಿ ನೀಡುವುದರ ಜತೆಗೆ, ಎಲ್ಲ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗಿಯಾಗಲಿದ್ದೇನೆ. ಯಾವುದೇ ಕಾರಣಕ್ಕೂ ಮುಖಂಡರು, ಕಾರ್ಯಕರ್ತರು ಅನ್ಯತಾ ಭಾವಿಸಬಾರದು ಎಂದು ಕೋರುತ್ತೇನೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅಲ್ಲದೆ, ನನ್ನ ನಿವಾಸಕ್ಕೆ ಭೇಟಿ ನೀಡಿ ನನ್ನ ಆರೋಗ್ಯ ವಿಚಾರಿಸಿದ ಪ್ರತಿಪಕ್ಷ ನಾಯಕರಾದ ಶ್ರೀ ಸಿದ್ದರಾಮಯ್ಯ, ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಯಡಿಯೂರಪ್ಪ, ಕಂದಾಯ ಸಚಿವ ಶ್ರೀ ಅಶೋಕ್ ಸೇರಿದಂತೆ ಇತರೆ ಎಲ್ಲಾ ಸಚಿವರು, ಮುಖಂಡರಿಗೆ ನಾನು ಆಭಾರಿಯಾಗಿದ್ದೇನೆ ಎಂದೂ ಅವರು ತಿಳಿಸಿದ್ದಾರೆ. ಹಾಗೆಯೇ, ನನ್ನ ಆರೋಗ್ಯಕ್ಕಾಗಿ ನಾಡಿನ ದೇವಾಲಯಗಳಲ್ಲಿ ಪೂಜೆ, ಹರಕೆ ಮಾಡಿಕೊಂಡು ಅನ್ನದಾನ ಇತ್ಯಾದಿಗಳನ್ನು ಮಾಡಿದ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರ ಪ್ರೀತಿ ವಿಶ್ವಾಸಕ್ಕೆ ನನ್ನ ಹೃದಯ ತುಂಬಿ ಬಂದಿದೆ. ಅವರೆಲ್ಲರಿಗೂ ನನ್ನ ಶುಭ ಹಾರೈಕೆಗಳು ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:47 pm, Mon, 26 September 22