ಸರ್ಕಾರ ನಿಯಮಗಳಿಗೆ ಡೋಂಟ್ ಕೇರ್! ಮಾಸ್ಕ್ ಧರಿಸಿಲ್ಲ, ಸಾಮಾಜಿಕ ಅಂತರವಿಲ್ಲ

ಗದಗ ನಗರದ ಪಂಚರಹೊಂಡದ ಬಳಿಯ ತರಕಾರಿ ಮಾರ್ಕೆಟ್ನಲ್ಲಿ ಜನಸಾಗರವೇ ಸೇರಿದೆ. ಮಾಸ್ಕ್, ಸಾಮಾಜಿಕ ಅಂತರ ಇಲ್ಲದೇ ಜನರು ಖರೀದಿಗೆ ಮುಗಿ ಬಿದ್ದಿದ್ದಾರೆ. ಒಮಿಕ್ರಾನ್ ಭಯವಿಲ್ಲದೇ ಮಕ್ಕಳು, ವೃದ್ಧರು, ಮಹಿಳೆಯರು ಸೇರಿದಂತೆ ವ್ಯಾಪಾರಸ್ಥರು ನಿರ್ಲಕ್ಷ್ಯ ಮೆರೆದಿದ್ದಾರೆ.

ಸರ್ಕಾರ ನಿಯಮಗಳಿಗೆ ಡೋಂಟ್ ಕೇರ್! ಮಾಸ್ಕ್ ಧರಿಸಿಲ್ಲ, ಸಾಮಾಜಿಕ ಅಂತರವಿಲ್ಲ
ಮಾಸ್ಕ್ ಧರಿಸದೆ ತಕರಾರಿ ಖರೀದಿಸುತ್ತಿದ್ದಾರೆ
Follow us
TV9 Web
| Updated By: sandhya thejappa

Updated on:Dec 05, 2021 | 11:37 AM

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಮೂರನೇ ಅಲೆ ಬಗ್ಗೆ ಆತಂಕ ಹೆಚ್ಚಾಗುತ್ತಿದೆ. ಈಗಾಗಲೇ ಕರ್ನಾಟಕದಲ್ಲಿ ರೂಪಾಂತರಿ ಒಮಿಕ್ರಾನ್ ಕೂಡಾ ಕಾಣಿಸಿಕೊಂಡಿದೆ. ಈ ನಡುವೆ ಜನರು ಹೆಚ್ಚು ನಿಗಾ ವಹಿಸಬೇಕು. ಸರ್ಕಾರ ಮುನ್ನಚ್ಚರಿಕೆ ಕ್ರಮವಾಗಿ ಕೆಲ ನಿಯಮಗಳನ್ನು ಜಾರಿಗೊಳಿಸಿದೆ. ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಜೊತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಅಂತ ತಿಳಿಸಿದೆ. ಹೀಗಿದ್ದರೂ ಜನ ಮಾತ್ರ ನಿರ್ಲಕ್ಷ್ಯ ತೋರಿದ್ದಾರೆ.

ಗದಗ ನಗರದ ಪಂಚರಹೊಂಡದ ಬಳಿಯ ತರಕಾರಿ ಮಾರ್ಕೆಟ್​ನಲ್ಲಿ ಜನಸಾಗರವೇ ಸೇರಿದೆ. ಮಾಸ್ಕ್, ಸಾಮಾಜಿಕ ಅಂತರ ಇಲ್ಲದೇ ಜನರು ಖರೀದಿಗೆ ಮುಗಿ ಬಿದ್ದಿದ್ದಾರೆ. ಒಮಿಕ್ರಾನ್ ಭಯವಿಲ್ಲದೇ ಮಕ್ಕಳು, ವೃದ್ಧರು, ಮಹಿಳೆಯರು ಸೇರಿದಂತೆ ವ್ಯಾಪಾರಸ್ಥರು ನಿರ್ಲಕ್ಷ್ಯ ಮೆರೆದಿದ್ದಾರೆ. ಕೇವಲ ಗದಗದಲ್ಲಿ ಮಾತ್ರವಲ್ಲ. ರಾಜ್ಯದ ಹಲವೆಡೆ ಇದೇ ರೀತಿ ಜನ ವರ್ತಿಸುತ್ತಿದ್ದಾರೆ. ಧಾರವಾಡದಲ್ಲೂ ಕೊರೊನಾ ಮರೆತು ಜನ ದಿನನಿತ್ಯದ ಸಾಮಗ್ರಿಗಳನ್ನು ಕೊಂಡುಕೊಳ್ಳುತ್ತಿದ್ದಾರೆ.

ಸರ್ಕಾರದ ರೂಲ್ಸ್​ಗಳಿಗೆ ಡೋಂಟ್ ಕೇರ್ ಯಾದಗಿರಿಯಲ್ಲಿ ಜನರು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ತರಕಾರಿ ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಮಾಯವಾಗಿದೆ. ಕೊರೊನಾ ರೂಪಾಂತರಿ ಭಯವಿಲ್ಲದೆ ಓಡಾಡುತ್ತಿರುವ ಜನರಿಗೆ ಹೇಳೋರಿಲ್ಲ ಕೇಳೋರಿಲ್ಲ ಎನ್ನುವಂತೆ ಆಗಿದೆ. ಇನ್ನು ವಿಜಯಪುರದಲ್ಲೂ ಸಾಮಾಜಿಕ ಅಂತರ ಕಾಪಾಡದೆ, ಮಾಸ್ಕ್ ಧರಿಸದೆ ಜನರು ಓಡಾಡುತ್ತಿದ್ದಾರೆ. ಕ್ಯಾಮೆರಾ ನೋಡಿ ಕೆಲವರು ಮಾಸ್ಕ್ ಹಾಕಿಕೊಳ್ಳುತ್ತಿದ್ದಾರೆ.

ಮಾಸ್ಕ್ ಹಾಕದವರಿಗೆ ಬಿಸಿ ಮುಟ್ಟಿಸಿದ ಬಿಬಿಎಂಪಿ ಬೆಂಗಳೂರಿನ ಮಾರುಕಟ್ಟೆಗಳಿಗೆ ಮಾಸ್ಕ್ ಹಾಕದೆ ಬರುವ ಜನರಿಗೆ ಬಿಬಿಎಂಪಿ ದಂಡ ವಿಧಿಸುತ್ತಿದೆ. ಬಿಬಿಎಂಪಿ ಮಾರ್ಷಲ್​ಗಳು ಮಾಸ್ಕ್ ಧರಿಸದವರಿಗೆ 250 ರೂ. ದಂಡ ಹಾಕುತ್ತಿದ್ದಾರೆ.

ಇದನ್ನೂ ಓದಿ

ಪತಿ ಕೋಟಿ ರಾಮು ನಿರ್ಮಾಣದ ಕೊನೇ ಚಿತ್ರ ರಿಲೀಸ್​ ಮಾಡಲಿರುವ ಮಾಲಾಶ್ರೀ; ಡಿ.31ಕ್ಕೆ ‘ಅರ್ಜುನ್​ ಗೌಡ’

ಪತಿ ಕೋಟಿ ರಾಮು ನಿರ್ಮಾಣದ ಕೊನೇ ಚಿತ್ರ ರಿಲೀಸ್​ ಮಾಡಲಿರುವ ಮಾಲಾಶ್ರೀ; ಡಿ.31ಕ್ಕೆ ‘ಅರ್ಜುನ್​ ಗೌಡ’

Published On - 11:37 am, Sun, 5 December 21

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ