ಬೆಂಗಳೂರಿನಲ್ಲಿ ರಾತ್ರಿ ವೇಳೆ ಒಂಟಿಯಾಗಿ ಓಡಾಡುತ್ತಿದ್ದವರನ್ನು ಬೆದರಿಸಿ ಸುಲಿಗೆ, ಆರೋಪಿಗಳು ಅರೆಸ್ಟ್
ಮಹಾನಗರದಲ್ಲಿ ಇತ್ತೀಚೆಗೆ ಕೊಲೆ, ಕಳ್ಳತನ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದೆ. ಪೊಲೀಸರು ಈ ಕುರಿತು ಎಷ್ಟೇ ಕಠಿಣ ಕ್ರಮ ಕೈಗೊಂಡರು ಯಾವುದೇ ಪ್ರಯೋಜನವಾಗಿಲ್ಲ. ಅದರಂತೆ ಇದೀಗ ರಾತ್ರಿ ವೇಳೆ ಒಂಟಿಯಾಗಿ ಓಡಾಡ್ತಿದ್ದವರನ್ನ ಬೆದರಿಸಿ ಸುಲಿಗೆ, ಜೊತೆಗೆ ಮನೆ ಮುಂದೆ ನಿಲ್ಲಿಸಿದ್ದ ಬೈಕ್ಗಳನ್ನ ಕಳ್ಳತನ ಮಾಡುತ್ತಿದ್ದ ಆರೊಪಿಗಳನ್ನ ಬಂಧಿಸಲಾಗಿದೆ.
ಬೆಂಗಳೂರು: ಮಹಾನಗರದಲ್ಲಿ ಇತ್ತೀಚೆಗೆ ಕೊಲೆ, ಕಳ್ಳತನ(Theft) ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದೆ. ಪೊಲೀಸರು ಈ ಕುರಿತು ಎಷ್ಟೇ ಕಠಿಣ ಕ್ರಮ ಕೈಗೊಂಡರು ಯಾವುದೇ ಪ್ರಯೋಜನವಾಗಿಲ್ಲ. ಹೌದು ಜೊತೆಗೆ ಪೊಲೀಸರ ಮೇಲೆ ಭಯವೂ ಇದ್ದಂತೆ ಕಾಣಿಸುತ್ತಿಲ್ಲ. ಕೆಲವು ದಿನಗಳ ಹಿಂದೆ ಸಿಲಿಕಾನ್ ಸಿಟಿಯಲ್ಲಿ ಹಾಡಹಗಲೇ ಇಬ್ಬರನ್ನ ಕೊಲೆ ಮಾಡಿ, ಬಳಿಕ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದ. ಅದಷ್ಟೇ ಅಲ್ಲದೇ, ಪೊಲೀಸರ ಹೆಸರು ಹೇಳಿಕೊಂಡು ಬಂದು ಯುವಕರಿದ್ದ ರೂಂಗೆ ನುಗ್ಗಿ ಹಣ, ಇತರೆ ಬೆಲೆಬಾಳುವ ವಸ್ತುಗಳನ್ನು ದರೋಡೆ ಮಾಡಿದ್ದರು. ಇದೀಗ ರಾತ್ರಿ ವೇಳೆ ಒಂಟಿಯಾಗಿ ಓಡಾಡುವವರನ್ನೇ ಟಾರ್ಗೆಟ್ ಮಾಡಿ ಸುಲಿಗೆ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
7 ಲಕ್ಷ ಮೌಲ್ಯದ ಬೈಕ್ಗಳು ಸೇರಿ ಇತರೆ ವಸ್ತುಗಳು ವಶ
ಇನ್ನು ಆರೋಪಿಗಳಾದ ವಿನೀತ್ ಕುಮಾರ್, ಪ್ರಕಾಶ್ ಅಲಿಯಾಸ್ ಪ್ರಾನ್ಸಿಸ್ ಎಂಬುವವರನ್ನ ಬಾಣಸವಾಡಿ, ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ. ಬಂಧಿತರಿಂದ ಬರೊಬ್ಬರಿ 7 ಲಕ್ಷ ಮೌಲ್ಯದ ಬೈಕ್ಗಳು, ಇತರೆ ವಸ್ತುಗಳು ವಶಕ್ಕೆ ಪಡೆಯಲಾಗಿದ್ದು, ರಾತ್ರಿ ವೇಳೆ ಒಂಟಿಯಾಗಿ ಓಡಾಡುತ್ತಿದ್ದವರನ್ನು ಬೆದರಿಸಿ, ಅವರಿಗೆ ಮಾರಕಾಸ್ತ್ರ ತೋರಿಸಿ ಹಣ ಸುಲಿಗೆ, ಜೊತೆಗೆ ಮನೆಗಳ ಮುಂದೆ ನಿಲ್ಲಿಸುತ್ತಿದ್ದ ಬೈಕ್ ಕದ್ದು ಮಾರುತ್ತಿದ್ದರು. ಈ ಕುರಿತು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 7:08 am, Thu, 20 July 23