AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೈಂ ರೌಂಡ​ಪ್: ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು, ಧಾರವಾಡಿನಲ್ಲಿ ಬೈಕ್ ಸವಾರ ಮರಣ

ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಗರದ ಜೆ.ಪಿ.ನಗರದ 6ನೇ ಹಂತದಲ್ಲಿ ನಡೆದಿದೆ.

ಕ್ರೈಂ ರೌಂಡ​ಪ್: ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು, ಧಾರವಾಡಿನಲ್ಲಿ ಬೈಕ್ ಸವಾರ ಮರಣ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 19, 2022 | 4:57 PM

Share

ಬೆಂಗಳೂರು: ವಿದ್ಯುತ್ ತಂತಿ (Electric wire) ತಗುಲಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಗರದ ಜೆ.ಪಿ.ನಗರದ 6ನೇ ಹಂತದಲ್ಲಿ ನಡೆದಿದೆ. ನವೀನ್ ಕುಮಾರ್ (37) ಮೃತ ದುರ್ದೈವಿ. ನವೀನ್ ರಾತ್ರಿ 10.30ರ ವೇಳೆ ತನ್ನ ಮನೆ ಟೆರಸ್ ಮೇಲೆ ಹೋಗಿ ಓಡಾಡುತ್ತಿದ್ದನು. ಈ ವೇಳೆ ಮನೆಯ ಪಕ್ಕದಲ್ಲೇ ಹಾದು ಹೋಗಿರುವ ಹೈಟೆನ್ಷನ್​ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾನೆ. ನವೀನ್​ ಸಾವಿಗೆ ಬೆಸ್ಕಾಂ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪ ಕೇಳಿ ಬರುತ್ತಿದೆ. ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಸಾವು

ಧಾರವಾಡ: ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಧಾರವಾಡದ ಕೆಲಗೇರಿ ಬಡಾವಣೆಯ ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ. ಮುಗದ ಗ್ರಾಮದ ನಿವಾಸಿ ದೇವಾನಂದ ಕುಕನೂರ (28) ಮೃತ ಯುವಕ. ದೇವಾನಂದ ಟಾಟಾ ಮಾರ್ಕೋಪೋಲೋನಲ್ಲಿ ಕಾರ್ಮಿಕನಾಗಿದ್ದನು. ಧಾರವಾಡ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:55 pm, Wed, 19 October 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ