ಚಿತ್ರದುರ್ಗ ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ವಿಚಾರ: ಮತ್ತೆ ವಿಚಾರಣೆ ನಡೆಸಲು ಹೈಕೋರ್ಟ್​ ತೀರ್ಮಾನ

ಚಿತ್ರದುರ್ಗದ ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ಹೈ ಕೋರ್ಟ್​​ಗೆ ಡಿ.ಎಸ್.ಮಲ್ಲಿಕಾರ್ಜುನ ಮತ್ತಿತರು ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಚಿತ್ರದುರ್ಗ ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ವಿಚಾರ: ಮತ್ತೆ ವಿಚಾರಣೆ ನಡೆಸಲು ಹೈಕೋರ್ಟ್​ ತೀರ್ಮಾನ
ಕರ್ನಾಟಕ ಉಚ್ಚ ನ್ಯಾಯಾಲಯ
Follow us
TV9 Web
| Updated By: ವಿವೇಕ ಬಿರಾದಾರ

Updated on:Jan 02, 2023 | 5:34 PM

ಬೆಂಗಳೂರು: ಚಿತ್ರದುರ್ಗದ (Chitradurga) ಮುರುಘಾಮಠಕ್ಕೆ (Murugha Math) ಆಡಳಿತಾಧಿಕಾರಿಯಾಗಿ ನಿವೃತ್ತ IAS ಅಧಿಕಾರಿ ಪಿ.ಎಸ್.ವಸ್ತ್ರದ್ ಅವರನ್ನು ಸರ್ಕಾರ ನೇಮಿಸಿದನ್ನು ಪ್ರಶ್ನಿಸಿ ಡಿ.ಎಸ್.ಮಲ್ಲಿಕಾರ್ಜುನ ಮತ್ತಿತರು ಹೈಕೋರ್ಟ್​ಗೆ (High Court) ರಿಟ್ ಅರ್ಜಿ ಸಲ್ಲಿಸಿದ್ದರು. ಡಿಸೆಂಬರ್​ 16 2022ರಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​, ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ಇಂದು (ಜ.2) ಲಿಖಿತ ವಾದಾಂಶದಲ್ಲಿ ಹೊಸ‌ ಅಂಶ‌ ಪ್ರಸ್ತಾಪ ಹಿನ್ನೆಲೆ ಮತ್ತೆ ವಿಚಾರಣೆ ನಡೆಸಲು ನ್ಯಾ.ಕೃಷ್ಣ ಎಸ್.ದೀಕ್ಷಿತ್ ಇದ್ದ ಪೀಠ ನಿರ್ಧರಿಸಿದೆ.

ಅರ್ಜಿಯಲ್ಲಿ ಕೆಲ ತಿದ್ದುಪಡಿ ಸೇರ್ಪಡೆಗೆ ಅವಕಾಶ ಕೋರಿ ರಿಟ್ ಅರ್ಜಿದಾರರು ಹೈಕೋರ್ಟ್​​ಗೆ ಮನವಿ ಸಲ್ಲಿಸಿದ್ದರು. ಇಂದು (ಜ.2) ಹೈಕೋರ್ಟ್ ಮನವಿ ಪುರಸ್ಕರಿಸಿದೆ. 3 ದಿನಗಳಲ್ಲಿ ರಿಟ್ ಅರ್ಜಿ ತಿದ್ದುಪಡಿಗೆ ಹೈಕೋರ್ಟ್ ಸೂಚನೆ‌ ನೀಡಿದೆ. ಹೈಕೋರ್ಟ್  ಮತ್ತೆ ವಿಚಾರಣೆಯನ್ನು ಜನವರಿ 12ಕ್ಕೆ ನಿಗದಿಪಡಿಸಿದೆ. ಹೈಕೋರ್ಟ್ ಹಿಂದೂ ಕಾನೂನಿನಡಿ ಮಠಾಧಿಪತಿಗಳ ಅಧಿಕಾರ ವ್ಯಾಪ್ತಿ ಹಾಗೂ ಇತ್ಯಾದಿಗಳ ಬಗ್ಗೆ ವಿಸ್ತೃತ ಮಾಹಿತಿ ನೀಡಲು ಸೂಚಿಸಿದೆ.

ಇದನ್ನೂ ಓದಿ: ಚಿತ್ರದುರ್ಗ ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ರಿಟ್ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಏನಿದು ಆಡಳಿತಾಧಿಕಾರಿ ನೇಮಕ

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿವಮೂರ್ತಿ ಮುರುಘಾ ಶರಣರನ್ನು ಪೋಕ್ಸೋ ಕಾಯ್ದೆಯಡಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಹಿನ್ನೆಲೆ ಟ್ರಸ್ಟ್ ಮತ್ತು ಶಿಕ್ಷಣ ಸಂಸ್ಥೆಗಳ ನಿರ್ವಹಣೆ ಆಡಳಿತಾಧಿಕಾರಿ ನೇಮಕ ಮಾಡುವಂತೆ ಭಕ್ತರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದರು.

ಇದನ್ನೂ ಓದಿ: ಚಿತ್ರದುರ್ಗದ ಮುರುಘಾಶ್ರೀಯನ್ನು ಗಲ್ಲಿಗೇರಿಸಲು ಒತ್ತಾಯ: ಬಹುಜನ ಸಮಾಜ ಪಕ್ಷದಿಂದ ಪ್ರತಿಭಟನೆ

ಹೀಗಾಗಿ ರಾಜ್ಯ ಸರ್ಕಾರ ಡಿಸೆಂಬರ್ 13 ರಂದು ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ಅವರನ್ನ ಮುರುಘಾಮಠದ ಆಡಳಿತಾಧಿಕಾರಿ ನೇಮಕ ಮಾಡಿ ಆದೇಶ ಹೊರಡಿಸಿತ್ತು. ಮಠದ ಲೆಕ್ಕಪತ್ರ ನಿರ್ವಹಣೆ, ಮಠದ ಚರ ಸ್ಥಿರಾಸ್ತಿ ಹಿತದೃಷ್ಟಿಯಿಂದ ಆಡಳಿತಾಧಿಕಾರಿ ನೇಮಿಸಲಾಗಿದೆ. ವಸ್ತ್ರದ್ ಅವರು ಮುರುಘಾಮಠದ ಟ್ರಸ್ಟ್ ಮತ್ತು ಶಿಕ್ಷಣ ಸಂಸ್ಥೆಗಳ ನಿರ್ವಹಣೆ ಜವಾಬ್ದಾರಿ ನಿರ್ವಹಿಸಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿತ್ತು. ಈ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ಡಿ.ಎಸ್.ಮಲ್ಲಿಕಾರ್ಜುನ ಮತ್ತಿತರು ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಅನಾಥ ಸೇವಾಶ್ರಮ ವಿಶ್ವಸ್ಥ ಸಮಿತಿ ಕಾರ್ಯದರ್ಶಿಯಾಗಿ ಎಸ್.ಕೆ.ಬಸವರಾಜನ್ ನೇಮಕ

ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಗ್ರಾಮದಲ್ಲಿ ಇಂದು (ಜ.2) ಅನಾಥ ಸೇವಾಶ್ರಮ ವಿಶ್ವಸ್ಥ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಸಮಿತಿಯ ಕಾರ್ಯದರ್ಶಿಯಾಗಿ ಮುರುಘಾಮಠದ ಮಾಜಿ ಆಡಳಿತಾಧಿಕಾರಿ, ಮಾಜಿ ಶಾಸಕ ಎಸ್.ಕೆ.ಬಸವರಾಜನ್ ನೇಮಗೊಂಡಿದ್ದಾರೆ. ಇನ್ನು ಖಜಾಂಚಿಯಾಗಿ ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ ಆಯ್ಕೆಯಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:29 pm, Mon, 2 January 23

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು