ಪಾಟರಿ ಟೌನ್ ಮೆಟ್ರೋ ಸ್ಟೇಷನ್​ಗೆ ಪುನೀತ್ ರಾಜ್ ಕುಮಾರ್ ಹೆಸರಿಡಲು ಮನವಿ: ಪಿಎಂ ಮೋದಿ ಕಚೇರಿಯಿಂದ ಸಕಾರಾತ್ಮಕ ಪ್ರತಿಕ್ರಿಯೆ

ನಮ್ಮ ಮೆಟ್ರೋ ಪಿಂಕ್ ಮಾರ್ಗದ ಪಾಟರಿ ಟೌನ್ ಸ್ಟೇಷನ್​ಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಸರಿಡುವ ಸಾಧ್ಯತೆ ದಟ್ಟವಾಗಿದೆ. ಈ ವಿಚಾರವಾಗಿ ಸಲ್ಲಕೆಯಾಗಿರುವ ಮನವಿಗೆ ಪಿಎಂ ಮೋದಿ ಕಚೇರಿಯಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ. ಅದೇ ರೀತಿ ಸಿಎಂ ಸಿದ್ದರಾಮಯ್ಯ ಅವರೂ ಮೆಟ್ರೋ ಎಂಡಿಗೆ ಈ ಬಗ್ಗೆ ಮನವಿ ಸಲ್ಲಿಸಿದ್ದಾರೆ.

ಪಾಟರಿ ಟೌನ್ ಮೆಟ್ರೋ ಸ್ಟೇಷನ್​ಗೆ ಪುನೀತ್ ರಾಜ್ ಕುಮಾರ್ ಹೆಸರಿಡಲು ಮನವಿ: ಪಿಎಂ ಮೋದಿ ಕಚೇರಿಯಿಂದ ಸಕಾರಾತ್ಮಕ ಪ್ರತಿಕ್ರಿಯೆ
ಪಾಟರಿ ಟೌನ್ ಮೆಟ್ರೋ ಸ್ಟೇಷನ್​ಗೆ ಪುನೀತ್ ರಾಜ್ ಕುಮಾರ್ ಹೆಸರಿಡಲು ಮನವಿ: ಪಿಎಂ ಮೋದಿ ಕಚೇರಿಯಿಂದ ಸಕಾರಾತ್ಮಕ ಪ್ರತಿಕ್ರಿಯೆ
Follow us
Kiran Surya
| Updated By: Ganapathi Sharma

Updated on: Jun 10, 2024 | 10:14 AM

ಬೆಂಗಳೂರು, ಜೂನ್ 10: ಗೊಟ್ಟಿಗೆರೆ ಹಾಗೂ ನಾಗವಾರ ನಡುವಣ ನಮ್ಮ ಮೆಟ್ರೋ (Namma Metro) ಪಿಂಕ್ ಮಾರ್ಗದ ಪಾಟರಿ ಟೌನ್ ಸ್ಟೇಷನ್​ಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Puneeth Rajkumar) ಹೆಸರಿಡಲು ಒತ್ತಡ ಹೆಚ್ಚಾಗಿದೆ. ಪಾಟರಿ ಟೌನ್ ಮೆಟ್ರೋ ಸ್ಟೇಷನ್​​ಗೆ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಹೆಸರಿಡುವಂತೆ ಪ್ರಧಾನಿ ನರೇಂದ್ರ ಮೋದಿ (Narendra Modi), ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯಪಾಲರು ಹಾಗೂ ಮೆಟ್ರೋ ಎಂಡಿಗೆ ಕರ್ನಾಟಕ ಬಹುಜನ ಫೆಡರೇಶನ್ ಪತ್ರ ಬರೆದಿದೆ. ಈ ಪತ್ರಕ್ಕೆ ಈಗಾಗಲೇ ಪ್ರಧಾನಿ ಕಾರ್ಯಾಲಯದಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದ್ದು, ಸಿಎಂ ಸಿದ್ದರಾಮಯ್ಯ ಕೂಡ ಮೆಟ್ರೋ ಎಂಡಿಗೆ ಮನವಿ ಪರಿಶೀಲಿಸಲು ಪತ್ರ ಬರೆದಿದ್ದಾರೆ.

ನಿಯಮಾನುಸಾರು ಅಪ್ಪು ಹೆಸರು ಇಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಹೋರಾಟಗಾರರಿಗೆ ಬಿಎಂಆರ್​ಸಿಎಲ್ ಉತ್ತರ ನೀಡಿದೆ. ಈಗಾಗಲೇ ಈ ಮಾರ್ಗದ ಕಾಮಗಾರಿ ಶೇ 50 ರಷ್ಟು ಮುಗಿದಿದ್ದು ಕಾಮಗಾರಿ ಪೂರ್ಣವಾಗುವಷ್ಟರಲ್ಲಿ ಪುನೀತ್ ಹೆಸರಿಡುವ ಬಗ್ಗೆ ತೀರ್ಮಾನ ಕೈಗೊಳ್ಳಬೇಕು ಎಂದು ಸ್ಥಳೀಯ ನಿವಾಸಿಗಳು ಕೂಡ ಮನವಿ ಮಾಡಿದ್ದಾರೆ.

ಒಟ್ಟಿನಲ್ಲಿ ಸಿಲಿಕಾನ್ ಸಿಟಿಯ ಬಹುನಿರೀಕ್ಷಿತ ಪಿಂಕ್‌ ಮಾರ್ಗದ ಪಾಟರಿ ಟೌನ್ ಮೆಟ್ರೋ ಸ್ಟೇಷನ್​​ಗೆ ಪುನೀತ್ ರಾಜ್​​ಕುಮಾರ್ ಹೆಸರಿಡುವಂತೆ ಪ್ರಧಾನಿ, ಸಿಎಂ ಸೇರಿದಂತೆ ರಾಜ್ಯಪಾಲರಿಗೂ ಪತ್ರ ಬರೆದು ಮನವಿ ಮಾಡಲಾಗಿದೆ. ಮೆಟ್ರೋ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮುಂದಿನ ದಿನಗಳಲ್ಲಿ ಅಧಿಕೃತವಾಗಿ ಘೋಷಣೆ ಮಾಡುವ ಎಲ್ಲಾ ಸಾಧ್ಯತೆಗಳಿವೆ.

ಇದನ್ನೂ ಓದಿ: ಬೆಂಗಳೂರಿನ ಅತಿ ಉದ್ದದ ಭೂಗತ ಮೆಟ್ರೋ ಮಾರ್ಗ ಬಹುತೇಕ ರೆಡಿ, ನಮ್ಮ ಮೆಟ್ರೋ ರೈಲು ಸಂಚಾರಕ್ಕೆ BMRCL ಸಿದ್ಧತೆ

ನಮ್ಮ ಮೆಟ್ರೋ ಪಿಂಕ್ ಲೈನ್

ನಮ್ಮ ಮೆಟ್ರೋ ಪಿಂಕ್ ಲೈನ್ ಬೆಂಗಳೂರಿನ ಅತಿ ಉದ್ದದ ಭೂಗತ ಮೆಟ್ರೋ ಮಾರ್ಗ ಎಂದೇ ಪರಿಗಣಿಸಲ್ಪಟ್ಟಿದೆ. ಇದರ ಕಾಮಗಾರಿ ಬಹುತೇಕ ಮುಕ್ತಾಯದ ಹಂತದಲ್ಲಿದೆ. ಈ ಮಾರ್ಗವು 21.26 ಕಿಮೀ ಇದ್ದು, 13.76 ಕಿಮೀ ಭೂಗತ ವಿಭಾಗವನ್ನು ಹೊಂದಿದೆ. 7.5 ಕಿಮೀ ಎತ್ತರದ ವಿಭಾಗವನ್ನು ಹೊಂದಿದೆ. ಇದು ಕಾಳೇನ ಅಗ್ರಹಾರ, ಬನ್ನೇರುಘಟ್ಟ ರಸ್ತೆ, ನಾಗವಾರವನ್ನ ಸಂಪರ್ಕಿಸುತ್ತದೆ. ಇದು 12 ಭೂಗತ ಸೇರಿದಂತೆ 18 ನಿಲ್ದಾಣಗಳನ್ನು ಹೊಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ