ಕಾಂಗ್ರೆಸ್ ಸರ್ಕಾರವಿರುವ ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಿಲ್ಲ: ಸಿಎಂ ಬೊಮ್ಮಾಯಿ

| Updated By: preethi shettigar

Updated on: Nov 05, 2021 | 2:53 PM

ಕಾಂಗ್ರೆಸ್ ಸರ್ಕಾರವಿರುವ ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಿಲ್ಲ. ಅಲ್ಲದೇ ಅವರು ಪೆಟ್ರೋಲ್ ಇಳಿಕೆ ಮಾಡುವುದಕ್ಕೆ ನಿರಾಕರಿಸಿದ್ದಾರೆ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ಸರ್ಕಾರವಿರುವ ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಿಲ್ಲ: ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
Follow us on

ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯ ಬಗ್ಗೆ ವಿಪಕ್ಷಗಳು ಟೀಕಿಸಬೇಕೆಂದು ಟೀಕೆ ಮಾಡಬಾರದು. ಮೊದಲ ಬಾರಿಗೆ 7 ರೂಪಾಯಿ ದರ ಇಳಿಕೆಯಾಗಿದೆ. ಇದಕ್ಕೆ ವಿರೋಧ ಪಕ್ಷದವರು ಮೆಚ್ಚುಗೆ ವ್ಯಕ್ತಪಡಿಸಬೇಕು. ಆದರೆ ಅವರು ಇದಕ್ಕೂ ಟೀಕೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರವಿರುವ ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಿಲ್ಲ. ಅಲ್ಲದೇ ಅವರು ಪೆಟ್ರೋಲ್ ಇಳಿಕೆ ಮಾಡುವುದಕ್ಕೆ ನಿರಾಕರಿಸಿದ್ದಾರೆ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ತೈಲ ಬೆಲೆ ಇಳಿಕೆಗೆ ಟೀಕೆ ಮಾಡುತ್ತಿದ್ದಾರೆ. ಉಪ ಚುನಾವಣೆಯಲ್ಲಿ ಸೋತಿದ್ದಕ್ಕೆ ಪೆಟ್ರೋಲ್​, ಡೀಸೆಲ್​ ಬೆಲೆ ಕಡಿಮೆ ಮಾಡಿದ್ದಾರೆ ಎಂದು ಅನೇಕರು ಹೇಳುತ್ತಾರೆ. ಚುನಾವಣೆಗೂ ಮುನ್ನ ಬೆಲೆ ಇಳಿಕೆ ಮಾಡಿದ್ದರೂ ಟೀಕೆ ಮಾಡುತ್ತಿದ್ದರು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರ ಸರ್ಕಾರ ಇದ್ದಾಗ ಅವರು ಬೆಲೆ ಕಡಿಮೆ ಮಾಡಿಲ್ಲ. ಕಾಂಗ್ರೆಸ್ ಆಡಳಿತ ಇರುವ ರಾಜ್ಯಗಳಲ್ಲಿ ಅವರು ಬೆಲೆ ಕಡಿಮೆ ಮಾಡಲು ನಿರಾಕರಿಸಿದ್ದಾರೆ. ಇದು ಕಾಂಗ್ರೆಸ್​ ಪಕ್ಷದ ನಿಲುವಾ ಹಾಗಾದರೆ? ಬೆಲೆ ಏರಿಕೆ ಅಥವಾ ಇಳಿಕೆ ಬಗ್ಗೆ ಮಾತಾಡುವ ನೈತಿಕತೆ ಕಾಂಗ್ರೆಸ್​ಗೆ ಇಲ್ಲ. ಇನ್ನು ಸಿಲಿಂಡರ್ ಬೆಲೆ ಕಡಿಮೆ ಮಾಡುವ ವಿಚಾರವಾಗಿ ಕೇಂದ್ರ ನಿರ್ಧಾರ ಮಾಡುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪುನೀತ್ ಸಾವಿನ ತನಿಖೆ ವಿಚಾರಕ್ಕೆ ಸ್ಪಷ್ಟನೆ ನೀಡಿದ ಸಿಎಂ
ಪುನೀತ್ ಸಾವಿನ ತನಿಖೆ ವಿಚಾರವಾಗಿ ದೂರು ದಾಖಲಾಗುತ್ತಿರುವ ಬಗ್ಗೆ ಗಮನಕ್ಕೆ ಬಂದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

ಬಿಬಿಎಂಪಿ ಹಿರಿಯ ಅಧಿಕಾರಿಗಳ ಜತೆ ಸಿಎಂ ಸಭೆ
ಬೆಂಗಳೂರಿನಲ್ಲಿ ಧಾರಾಕಾರ ಮಳೆಯಿಂದ ಹಾನಿ ಹಿನ್ನೆಲೆ ಕೆಲವೇ ಕ್ಷಣಗಳಲ್ಲಿ ಸಿಎಂ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಯಲಿದೆ. ವಿಪತ್ತು ನಿರ್ವಹಣಾ ಇಲಾಖೆ ಅಧಿಕಾರಿಗಳು ಹಾಗೂ ಬಿಬಿಎಂಪಿ ಹಿರಿಯ ಅಧಿಕಾರಿಗಳ ಜತೆ ಸಿಎಂ 1.30ಕ್ಕೆ ಬಸವರಾಜ ಬೊಮ್ಮಾಯಿ ಸಭೆ ನಡೆಸಲಿದ್ದು, ಮಳೆ ಹಾನಿಯ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.

ಕೋಲಾರ: ಉಪಚುನಾವಣೆ ಸೋಲಿನಿಂದ ತೈಲ ಬೆಲೆ ಇಳಿಕೆ ಮಾಡಿಲ್ಲ: ಸಚಿವ ಮುನಿರತ್ನ
ತೈಲ ದರ ಇಳಿಕೆಗೆ ಸಚಿವ ಮುನಿರತ್ನ ಸಂತಸ‌ ವ್ಯಕ್ತಪಡಿಸಿದ್ದಾರೆ. ಬಳಿಕ ಮಾತನಾಡಿದ ಅವರು, ಉಪಚುನಾವಣೆ ಸೋಲಿನಿಂದ ತೈಲಬೆಲೆ ಇಳಿಕೆಯಾಗಿಲ್ಲ. ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಿಂದ ದಿನ ಬೆಲೆ ಏರಿಕೆಯಾಗಿದೆ ಎಂದು ಹೇಳಿದ್ದಾರೆ.

ಬಳಿಕ ಮಾತನಾಡಿದ ಅವರು ಉಪಚುನಾವಣೆ ಸೋಲಿನಿಂದ ಬಿಜೆಪಿಗೆ ಹಿನ್ನಡೆಯಾಗಿಲ್ಲ. ಕಳೆದ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋತಿದನ್ನು ಮರೆತಿದೆ ಎಂದು ಹೇಳಿದ್ದಾರೆ.

ಸಿಪಿ ಯೋಗಿಶ್ವರ್ ಬಿಜೆಪಿ ಬಿಡೋ ಮಾತಿಲ್ಲ: ಸಚಿವ ಮುನಿರತ್ನ
ಸಿ.ಪಿ.ಯೋಗಿಶ್ವರ್ ಕಾಂಗ್ರೆಸ್ ಸೇರುವ ವಿಚಾರ ಊಹಾಪೋಹಾ. ಸಿಪಿ ಯೋಗಿಶ್ವರ್​ ಬಿಜೆಪಿ ಬಿಡುವ ಮಾತಿಲ್ಲ. ಸಿಪಿವೈ ಅವರನ್ನು ಕಾಂಗ್ರೆಸ್ ಸೇರಿಸಿಕೊಳ್ಳಲು ಇನ್ನೊಬ್ಬರು ಬಯಸ್ತಿದ್ದಾರೆ. ಸಿಪಿ ಯೋಗಿಶ್ವರ್ ಅವರಿಗೆ ಸಚಿವ ಸ್ಥಾನ ನೀಡುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ ಎಂದು ಕೋಲಾರದ ಕೋಟಿಲಿಂಗ ದೇಗುಲದಲ್ಲಿ ಸಚಿವ ಮುನಿರತ್ನ ಹೇಳಿಕೆ ನೀಡಿದ್ದಾರೆ.

ಪುನೀತ್ ರಾಜ್‌ಕುಮಾರ್‌ಗೆ ಪದ್ಮಶ್ರೀ ಪ್ರಶಸ್ತಿ ನೀಡಬೇಕು: ಸಚಿವ ಮುನಿರತ್ನ
ನಟ ಪುನೀತ್ ರಾಜ್‍ಕುಮಾರ್​ರಿಗೆ ಪದ್ಮಶ್ರೀ ಪ್ರಶಸ್ತಿ ನೀಡಬೇಕು. ನಮ್ಮ ಪುನೀತ್ ರಾಜ್‍ಕುಮಾರ್  ಅವರಿಗೆ ಪ್ರಶಸ್ತಿ ಸಿಕ್ಕಲ್ಲಿ ಅದಕ್ಕಿಂತ ಖುಷಿ ಮತ್ತೊಂದಿಲ್ಲ. ನಾಯಕ ನಟನಾಗಿ ಅಲ್ಲದೆ, ಸಮಾಜ ಸೇವೆಯಲ್ಲಿ ಅವರ ಕಾರ್ಯ ಶ್ಲಾಘನೀಯ. ಸರ್ಕಾರ ಅವರಿಗೆ ಪ್ರಶಸ್ತಿ ನೀಡಬೇಕೆಂಬ ಆಗ್ರಹ ನನ್ನದು ಎಂದು ಸಚಿವ ಮುನಿರತ್ನ ತಿಳಿಸಿದ್ದಾರೆ.

ಸಿಎಂ ಮನೆಗೆ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಭೇಟಿ
ಸೆಂಟ್ರಲ್ ಕ್ಷೇತ್ರದ ಸಂಸದ ಪಿ.ಸಿ.ಮೋಹನ್ ಮತ್ತು ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಅವರು ಬೆಂಗಳೂರಿನ ಆರ್.ಟಿ.ನಗರದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ಮನೆಗೆ ಭೇಟಿ ನೀಡಿದ್ದಾರೆ. ಬಿಜೆಪಿ ನಾಯಕರು ಸಿಎಂಗೆ ಹಬ್ಬದ ಶುಭಾಶಯ ತಿಳಿಸಿದ್ದಾರೆ.

ಇದನ್ನೂ ಓದಿ:
ದೀಪಾವಳಿ ಮುಗಿದ ತಕ್ಷಣ ಭತ್ತ ಖರೀದಿ ಪ್ರಕ್ರಿಯೆ ಆರಂಭ: ಸಿಎಂ ಬಸವರಾಜ ಬೊಮ್ಮಾಯಿ

Petrol, diesel price: ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ 7 ರೂ. ಇಳಿಕೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ

Published On - 2:00 pm, Fri, 5 November 21