AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price Increase: ಕಚ್ಚಾತೈಲ ದರ ಏರಿಕೆ ಹಿನ್ನೆಲೆ ಬೆಂಗಳೂರಿನ ಬಹುತೇಕ ಪೆಟ್ರೋಲ್ ಬಂಕ್​ಗಳಲ್ಲಿ ನೋ ಸ್ಟಾಕ್ ಬೋರ್ಡ್

ಮಾರುಕಟ್ಟೆಯಲ್ಲಿರುವ ಬೇಡಿಕೆಯಷ್ಟು ಇಂಧನ ಪೂರೈಕೆಯಾಗ್ತಿಲ್ಲ. ರಾಜ್ಯಕ್ಕೆ ಇಂಧನ ಪೂರೈಕೆಯಾಗದೆ ಬಂಕ್ ಮಾಲೀಕರು ಇಕ್ಕಟ್ಟಿನಲ್ಲಿ ಸಿಲುಕಿವೆ. ಹಲವು ಪೆಟ್ರೋಲ್ ಬಂಕ್ಗಳಲ್ಲಿ ನೋ ಸ್ಟಾಕ್ ಬೋರ್ಡ್ ಅಳವಡಿಕೆಸಲಾಗಿದೆ.

Petrol Diesel Price Increase: ಕಚ್ಚಾತೈಲ ದರ ಏರಿಕೆ ಹಿನ್ನೆಲೆ ಬೆಂಗಳೂರಿನ ಬಹುತೇಕ ಪೆಟ್ರೋಲ್ ಬಂಕ್​ಗಳಲ್ಲಿ ನೋ ಸ್ಟಾಕ್ ಬೋರ್ಡ್
ಕಚ್ಚಾತೈಲ ದರ ಏರಿಕೆ ಹಿನ್ನೆಲೆ ಬೆಂಗಳೂರಿನ ಬಹುತೇಕ ಪೆಟ್ರೋಲ್ ಬಂಕ್ಗಳಲ್ಲಿ ನೋ ಸ್ಟಾಕ್ ಬೋರ್ಡ್
TV9 Web
| Updated By: ಆಯೇಷಾ ಬಾನು|

Updated on:Apr 07, 2022 | 10:56 AM

Share

ಬೆಂಗಳೂರು: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರ ಏರಿಕೆ ಹಿನ್ನೆಲೆಯಲ್ಲಿ ಬಹುತೇಕ ಪೆಟ್ರೋಲ್ ಬಂಕ್ಗಳಲ್ಲಿ ನೋ ಸ್ಟಾಕ್ ಬೋರ್ಡ್ ಹಾಕಲಾಗಿದೆ. ಸಮಯಕ್ಕೆ ಸರಿಯಾಗಿ ಪೆಟ್ರೋಲ್, ಡೀಸೆಲ್ ಸಿಗದೆ ವಾಹನ ಸವಾರರು ಪರದಾಡುತ್ತಿದ್ದಾರೆ. ತೈಲ ದರ ಏರಿಕೆಯಿಂದ ಕಂಗೆಟ್ಟಿರುವ ಸರಬರಾಜು ಕಂಪನಿಗಳು ಆರ್ಥಿಕ ಹೊರೆ ಇಳಿಸಲು ಸರಬರಾಜಿಗೆ ಮಿತಿ ಹಾಕಿವೆ.

ಮಾರುಕಟ್ಟೆಯಲ್ಲಿರುವ ಬೇಡಿಕೆಯಷ್ಟು ಇಂಧನ ಪೂರೈಕೆಯಾಗ್ತಿಲ್ಲ. ರಾಜ್ಯಕ್ಕೆ ಇಂಧನ ಪೂರೈಕೆಯಾಗದೆ ಬಂಕ್ ಮಾಲೀಕರು ಇಕ್ಕಟ್ಟಿನಲ್ಲಿ ಸಿಲುಕಿವೆ. ಹಲವು ಪೆಟ್ರೋಲ್ ಬಂಕ್ಗಳಲ್ಲಿ ನೋ ಸ್ಟಾಕ್ ಬೋರ್ಡ್ ಅಳವಡಿಕೆಸಲಾಗಿದೆ. ಇದರಿಂದ ವಾಹನಗಳಲ್ಲಿ ಓಡಾಡುವ ಸವಾರರಿಗೆ ಸಮಸ್ಯೆ ಎದುರಾಗಿದೆ.

ಬೆಂಗಳೂರು ಹಾಗೂ ಪ್ರಮುಖ ನಗರಗಳ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಾಗಿದೆ? Petrol Diesel Price Today | ದೆಹಲಿ: ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಸತತವಾಗಿ ಏರಿಕೆ ಮಾಡಲಾಗುತ್ತಿದೆ. ಈ ಮಧ್ಯೆ, ಇಂದು (ಏಪ್ರಿಲ್ 7, 2022) ಇಂಧನ ದರದಲ್ಲಿ ಯಾವುದೇ ಏರಿಕೆ ಕಂಡುಬಂದಿಲ್ಲ. ಮಾರ್ಚ್ 22ರಂದು ಆರಂಭವಾದ ಬೆಲೆ ಏರಿಕೆ ಸತತವಾಗಿ ಹೆಚ್ಚುತ್ತಲೇ ಇದೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿದಿನ ಏರುತ್ತಲೇ ಇದೆ. ಅದರ ಪರಿಣಾಮ ಕಳೆದ 17 ದಿನಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ ಸರಾಸರಿ ₹ 10 ರಷ್ಟು ಹೆಚ್ಚಾಗಿದೆ. ಮೊದಲ ನಾಲ್ಕು ದಿನಗಳಲ್ಲಿ ಇಂಧನ ಬೆಲೆಗಳನ್ನು ದಿನಕ್ಕೆ ಪ್ರತಿ ಲೀಟರ್ಗೆ ತಲಾ 80 ಪೈಸೆಯಂತೆ ಹೆಚ್ಚಿಸಲಾಗಿಯಿತು. ನಂತರದ ದಿನಗಳಲ್ಲಿ ಪೆಟ್ರೋಲ್ ಧಾರಣೆಯನ್ನು ಲೀಟರ್ಗೆ 50 ಮತ್ತು 30, ಮತ್ತೆ 80 ಪೈಸೆಯಷ್ಟು ಹೆಚ್ಚಿಸಲಾಗುತ್ತಿದೆ. ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲಯಲ್ಲಿ ಏರಿಕೆ ಮಾಡಲಾಗಿಲ್ಲ.

ದೆಹಲಿಯಲ್ಲಿಂದು ಪೆಟ್ರೋಲ್ ಬೆಲೆ ಒಂದು ಲೀಟರ್ಗೆ ₹ 105.41 ಮುಟ್ಟಿದೆ. ಲೀಟರ್ ಡೀಸೆಲ್ ಬೆಲೆ ₹ 96.67 ತಲುಪಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹ 120.51, ಡೀಸೆಲ್ ₹ 104.77ಕ್ಕೆ ಮಾರಾಟವಾಗುತ್ತಿದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.95 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 101.04 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 115.12 ರೂ. ಡೀಸೆಲ್ ಬೆಲೆ ಲೀಟರ್ಗೆ 99.83 ರೂ. ಆಗಿದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.16 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.86 ರೂಪಾಯಿ ದಾಖಲಾಗಿದೆ. ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 119.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.49 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 116.92 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.69 ರೂಪಾಯಿ ನಿಗದಿಯಾಗಿದೆ.

ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ನಿರ್ಧರಿಸಲಾಗುತ್ತದೆ. ಸ್ಥಳೀಯ ಚಿಲ್ಲರೆ ಮಾರಾಟ ದರಕ್ಕೆ ಅನುಗುಣವಾಗಿ ಪ್ರತಿ ರಾಜ್ಯದಲ್ಲಿಯೂ ಪೆಟ್ರೋಲ್-ಡೀಸೆಲ್ ದರಗಳಲ್ಲಿ ವ್ಯತ್ಯಾಸ ಆಗುತ್ತದೆ.

ಇದನ್ನೂ ಓದಿ: Petrol Diesel Price Today: ಬೆಂಗಳೂರು ಹಾಗೂ ಪ್ರಮುಖ ನಗರಗಳ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಾಗಿದೆ? ಇಲ್ಲಿದೆ ವಿವರ

ಸರೋಜಿನಿ ನಾಯ್ಡು ಬಯೋಪಿಕ್​ನಲ್ಲಿ ಶಾಂತಿಪ್ರಿಯಾ, ಸೋನಲ್​: ಪ್ಯಾನ್​ ಇಂಡಿಯಾ ಚಿತ್ರಕ್ಕೆ ಕನ್ನಡಿಗನ ನಿರ್ದೇಶನ

Published On - 10:55 am, Thu, 7 April 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?