AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಸಹ ಏರಿಕೆಯಾದ ಪೆಟ್ರೋಲ್​, ಡೀಸೆಲ್​ ಬೆಲೆ; ಬೆಂಗಳೂರಿನಲ್ಲಿ ಶತಕ ಬಾರಿಸುವ ನಿರೀಕ್ಷೆ

Petrol Diesel Rate Today: ವ್ಯಾಟ್​ ಅಥವಾ ಸರಕು ಸಾಗಣೆ ಶುಲ್ಕದಂತಹ ಸ್ಥಳೀಯ ತೆರಿಗೆಗಳ ಆಧಾರದ ಮೇಲೆ ರಾಜ್ಯದಿಂದ ರಾಜ್ಯಕ್ಕೆ ಪೆಟ್ರೋಲ್​ ಮತ್ತು ಡೀಸೆಲ್​ ದರ ವ್ಯತ್ಯಾಸವಿರುತ್ತದೆ. ದೇಶದಲ್ಲಿ ಪೆಟ್ರೋಲ್​ ಮತ್ತು ಡೀಸೆಲ್​ ಮೇಲೆ ರಾಜಸ್ಥಾನ ಅತಿ ಹೆಚ್ಚು ವ್ಯಾಟ್​ ವಿಧಿಸುತ್ತಿದ್ದರೆ ತೆಲಂಗಾಣ, ಮಧ್ಯಪ್ರದೇಶ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ಅದರ ನಂತರದ ಸ್ಥಾನದಲ್ಲಿದೆ.

Petrol Price Today: ಇಂದು ಸಹ ಏರಿಕೆಯಾದ ಪೆಟ್ರೋಲ್​, ಡೀಸೆಲ್​ ಬೆಲೆ; ಬೆಂಗಳೂರಿನಲ್ಲಿ ಶತಕ ಬಾರಿಸುವ ನಿರೀಕ್ಷೆ
ಸಾಂದರ್ಭಿಕ ಚಿತ್ರ (ಪಿಟಿಐ ಚಿತ್ರ)
TV9 Web
| Edited By: |

Updated on:Jun 16, 2021 | 9:03 AM

Share

Petrol Diesel Price Today | ಬೆಂಗಳೂರು: ಒಂದು ದಿನದ ವಿರಾಮದ ಬಳಿಕ ಇಂದು (ಬುಧವಾರ, ಜೂನ್ 16) ಮತ್ತೆ ಇಂಧನ ದರವನ್ನು (Fuel Price) ಹೆಚ್ಚಿಸಲಾಗಿದೆ. ಮೇ ತಿಂಗಳಿನಿಂದ ಏರಿಕೆ ಕಾಣಲು ಪ್ರಾರಂಭಿಸಿದ ಪೆಟ್ರೋಲ್ (Petrol Rate)​ ಮತ್ತು ಡೀಸೆಲ್​ ದರ (Diesel Rate) ಒಟ್ಟು 26 ಬಾರಿ ಏರಿಕೆ ಕಂಡಿದೆ. ಕರ್ನಾಟಕ ರಾಜ್ಯದ ಚಿಕ್ಕಮಗಳೂರು, ಬಳ್ಳಾರಿ ಹಾಗೂ ಉತ್ತರ ಕನ್ನಡದ ಶಿರಸಿಯಲ್ಲಿ ಈಗಾಗಲೇ ಲೀಟರ್​ ಪೆಟ್ರೋಲ್​ ದರ (Petrol Price) ಶತಕ ಬಾರಿಸಿ ಮುನ್ನುಗ್ಗಿದೆ. ಇಂದು ದರ ಹೆಚ್ಚಳದ ಬಳಿಕ ಬೀದರ್​ ಹಾಗೂ ಹಾವೇರಿ ಜಿಲ್ಲೆಗಳು ಈ ಗುಂಪಿಗೆ ಸೇರಿಕೊಂಡಿವೆ. ಒಂದು ಲೀಟರ್​ ಪೆಟ್ರೋಲ್​ ಬೆಲೆಯನ್ನು 25 ಪೈಸೆ ಏರಿಕೆ ಮಾಡಲಾಗಿದೆ. ಹಾಗೆಯೇ ಲೀಟರ್​ ಡೀಸೆಲ್​ ದರದಲ್ಲಿ 13 ಪೈಸೆ ಹೆಚ್ಚಳ ಮಾಡಲಾಗಿದೆ. 

ಬೀದರ್​ನಲ್ಲಿ ಪೆಟ್ರೋಲ್ 100.74 ರೂಪಾಯಿ ಹಾಗೂ ಲೀಟರ್​ ಡಿಸೇಲ್ ದರ 93.47 ರೂಪಾಯಿಗೆ ಏರಿಕೆ ಆಗಿದೆ. ಮೈಸೂರಿನಲ್ಲಿ ಲೀಟರ್​ ಪೆಟ್ರೋಲ್ 99.45 ಹಾಗೂ ಲೀಟರ್​ ಡೀಸೆಲ್ ದರ 92.26 ರೂಪಾಯಿ ಇದೆ. ಚಿತ್ರದುರ್ಗದಲ್ಲಿ ಲೀಟರ್​ ಪೆಟ್ರೋಲ್ ದರ 101.58ರೂ. ಹಾಗೂ ಲೀಟರ್ ಡೀಸೆಲ್ ದರ 94.09  ರೂಪಾಯಿಗೆ ಏರಿಕೆ ಆಗಿದೆ. ಹಾವೇರಿ ಜಿಲ್ಲೆಯಲ್ಲಿ ಪೆಟ್ರೋಲ್​ ದರ ಶತಕ ಬಾರಿಸಿದ್ದು ಲೀಟರ್​ ಪೆಟ್ರೋಲ್ ಬೆಲೆ 100.44 ರೂ. ಹಾಗೂ ಲೀಟರ್ ಡಿಸೇಲ್ ಬೆಲೆ 93.19 ರೂಪಾಯಿ ಆಗಿದೆ. ಇನ್ನು, ಮಡಿಕೇರಿಯಲ್ಲಿ ಲೀಟರ್​ ಪೆಟ್ರೋಲ್​ ದರ 100.70 ರೂ. ಹಾಗೂ ಲೀಟರ್​ ಡೀಸೆಲ್​ ದರ 93.35 ರೂಪಾಯಿ ಇದೆ.

ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 96.66 ರೂಪಾಯಿ ಆಗಿದೆ. ಹಾಗೆಯೇ ಲೀಟರ್​ ಡೀಸೆಲ್​ ದರ 87.41 ರೂಪಾಯಿಗೆ ಏರಿಕೆ ಆಗಿದೆ. ಪ್ರಮುಖ ಮೆಟ್ರೋ ನಗರಗಳಲ್ಲಿ ಗರಿಷ್ಟ ಮಟ್ಟದಲ್ಲಿದ್ದ ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್​ ಪೆಟ್ರೋಲ್​ ದರ 102.82 ರೂಪಾಯಿಗೆ ಏರಿಕೆ ಆಗಿದೆ ಹಾಗೂ ಲೀಟರ್​ ಡೀಸೆಲ್​ ದರ 94.84 ರೂಪಾಯಿಗೆ ಹೆಚ್ಚಳವಾಗಿದೆ.

ಪಂಚ ರಾಜ್ಯಗಳ ಚುನಾವಣೆಯ ಸಂದರ್ಭದಲ್ಲಿ ಇಂಧನ ದರ ಬದಲಾಗದೇ ಸತತ 18 ದಿನಗಳ ಕಾಲ ಸ್ಥಿರವಾಗಿಯೇ ಉಳಿದಿತ್ತು. ಆ ಬಳಿಕ ಕಳೆದ ಮೇ ತಿಂಗಳಿನಲ್ಲಿ 16 ಬಾರಿ ಹೆಚ್ಚಳವಾಯಿತು. ಜೂನ್​ ತಿಂಗಳ ಪ್ರಾರಂಭದಿಂದ ಒಟ್ಟು 9 ಬಾರಿ ಪೆಟ್ರೋಲ್​ ಮತ್ತು ಡೀಸೆಲ್​ ದರವನ್ನು ಏರಿಕೆ ಮಾಡಲಾಯಿತು. ಕಳೆದ ತಿಂಗಳಿನಿಂದ ಇಲ್ಲಿಯವರೆಗೆ ಒಟ್ಟು 25 ಬಾರಿ ಇಂಧನ ದರವನ್ನು ಹೆಚ್ಚಿಸಲಾಗಿದೆ.

ಇದರ ಬೆನ್ನಲ್ಲೇ ಏಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ  ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ಮತ್ತು ಲಡಾಕ್​ನಲ್ಲಿ ಲೀಟರ್​ ಪೆಟ್ರೋಲ್​ ದರ 100ರ ಗಡಿ ದಾಟಿ ಮುನ್ನುಗ್ಗಿದೆ. ಪಾಕಿಸ್ತಾನದ ಗಡಿಯಂಚಿನಲ್ಲಿರುವ ರಾಜಸ್ಥಾನದ ಶ್ರೀಗಂಗನಗರ್​ ಜಿಲ್ಲೆಯಲ್ಲಿ ಇಂಧನ ದರ ಅತಿ ಗರಿಷ್ಟ ಮಟ್ಟದಲ್ಲಿದೆ. ಪೆಟ್ರೋಲ್​ ಒಂದೇ ಅಲ್ಲದೇ ಡೀಸೆಲ್​ ದರವೂ ಕೂಡಾ 100ರ ಗಡಿ ದಾಟಿದೆ. ಲೀಟರ್​ ಪೆಟ್ರೋಲ್​ ದರ 107.79 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 100.51 ರೂಪಾಯಿ ಇದೆ.

ವ್ಯಾಟ್​ ಅಥವಾ ಸರಕು ಸಾಗಣೆ ಶುಲ್ಕದಂತಹ ಸ್ಥಳೀಯ ತೆರಿಗೆಗಳ ಆಧಾರದ ಮೇಲೆ ರಾಜ್ಯದಿಂದ ರಾಜ್ಯಕ್ಕೆ ಪೆಟ್ರೋಲ್​ ಮತ್ತು ಡೀಸೆಲ್​ ದರ ವ್ಯತ್ಯಾಸವಿರುತ್ತದೆ. ದೇಶದಲ್ಲಿ ಪೆಟ್ರೋಲ್​ ಮತ್ತು ಡೀಸೆಲ್​ ಮೇಲೆ ರಾಜಸ್ಥಾನ ಅತಿ ಹೆಚ್ಚು ವ್ಯಾಟ್​ ವಿಧಿಸುತ್ತಿದ್ದರೆ ತೆಲಂಗಾಣ, ಮಧ್ಯಪ್ರದೇಶ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ಅದರ ನಂತರದ ಸ್ಥಾನದಲ್ಲಿದೆ.

ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 96.58 ರೂಪಾಯಿ ಇದೆ ಹಾಗೆಯೇ ಲೀಟರ್​ ಡೀಸೆಲ್ ದರ 90.25 ರೂಪಾಯಿ ಇದೆ. ಬೆಂಗಳೂರು ನಗರದಲ್ಲಿ ಲೀಟರ್​ ಪೆಟ್ರೋಲ್​ ಬೆಲೆ 99.89 ರೂಪಾಯಿಗೆ ತಲುಪಿದೆ. ಇನ್ನೇನು ಕೆಲ ಪೈಸೆಗಳು ಏರಿಕೆ ಆದರೆ ಶತಕ ಬಾರಿಸುವ ನಿರೀಕ್ಷೆಯಲ್ಲಿದೆ. ಲೀಟರ್​ ಡೀಸೆಲ್​ ದರ 92.89 ರೂಪಾಯಿ ಇದೆ.

ಚೆನ್ನೈನಲ್ಲಿ ಲೀಟರ್​ ಪೆಟ್ರೊಲ್​ ದರ 97.91 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 92.04 ರೂಪಾಯಿ ಇದೆ. ತಿರುವನಂತಪುರದಲ್ಲಿ ಲೀಟರ್​ ಪೆಟ್ರೋಲ್​ ದರ 98.64 ರೂ. ಹಾಗೂ ಲೀಟರ್​ ಡೀಸೆಲ್​ ದರ 93.64 ರೂಪಾಯಿಗೆ ಹೆಚ್ಚಳವಾಗಿದೆ. ಜೈಪುರಲ್ಲಿ ಲೀಟರ್​ ಪೆಟ್ರೋಲ್​ ದರ 103.29 ರೂ. ಹಾಗೂ ಲೀಟರ್​ ಡೀಸೆಲ್​ ದರ 96.38 ರೂಪಾಯಿ ಇದೆ. ಅದೇ ರೀತಿ ಪಾಟ್ನಾದಲ್ಲಿ ಲೀಟರ್​ ಪೆಟ್ರೋಲ್​ ದರ 98.73 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 92.72 ರೂಪಾಯಿ ಇದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 8:28 am, Wed, 16 June 21

Follow Us
Web contact
Web contact

TV9 Kannada

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ