ಅಯೋಧ್ಯೆ ರಾಮಮಂದಿರ ಸ್ಫೋಟಿಸಲು ಪಿಎಫ್​ಐ ಸಂಚು ರೂಪಿಸಿತ್ತು: ವಿಚಾರಣೆ ವೇಳೆ ಬಾಯ್ಬಿಟ್ಟ ಆರೋಪಿಗಳು

ರಾಮಮಂದಿರದ ಮೇಲೆ ಬಾಂಬ್ ದಾಳಿಗೆ ಷಡ್ಯಂತ್ರ ರೂಪಿಸಿದ್ದ ಪಿಎಫ್ಐ ಕಾರ್ಯಕರ್ತರು ಅದೇ ಜಾಗದಲ್ಲಿ ನಂತರ ಮಸೀದಿ ನಿರ್ಮಿಸುವ ಆಲೋಚನೆ ಹೊಂದಿದ್ದರು.

ಅಯೋಧ್ಯೆ ರಾಮಮಂದಿರ ಸ್ಫೋಟಿಸಲು ಪಿಎಫ್​ಐ ಸಂಚು ರೂಪಿಸಿತ್ತು: ವಿಚಾರಣೆ ವೇಳೆ ಬಾಯ್ಬಿಟ್ಟ ಆರೋಪಿಗಳು
ಪಿಎಫ್ಐ (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Oct 20, 2022 | 11:44 AM

ಬೆಂಗಳೂರು: ಅಯೋಧ್ಯೆ ರಾಮಮಂದಿರ (Ayodhya Ram Mandir) ಸ್ಫೋಟಿಸಲು ಪಿಎಫ್​ಐ (PFI) ಸಂಚು ರೂಪಿಸಿದ್ದ ಆಘಾತಕಾರಿ ಮಾಹಿತಿ ಇದೀಗ ಬೆಳಕಿಗೆ ಬಂದಿದೆ. ರಾಮಮಂದಿರದ ಮೇಲೆ ಬಾಂಬ್ ದಾಳಿಗೆ ಷಡ್ಯಂತ್ರ ರೂಪಿಸಿದ್ದ ಪಿಎಫ್ಐ ಕಾರ್ಯಕರ್ತರು ಅದೇ ಜಾಗದಲ್ಲಿ ನಂತರ ಮಸೀದಿ ನಿರ್ಮಿಸುವ ಆಲೋಚನೆ ಹೊಂದಿದ್ದರು ಎಂದು ಹೇಳಲಾಗಿದೆ. ಇತ್ತೀಚೆಗೆ ದೇಶವ್ಯಾಪಿ ಪಿಎಫ್​ಐ ಕಾರ್ಯಕರ್ತರ ಮನೆಗಳ ಮೇಲೆ ದಾಳಿ ನಡೆಸಿದ್ದ ವೇಳೆ ಮಹಾರಾಷ್ಟ್ರದಲ್ಲಿ 35 ಮಂದಿಯನ್ನು ಬಂಧಿಸಲಾಗಿತ್ತು. ಮಾಲೆಂಗಾವ್, ಪುಣೆ ಸೇರಿದ ಹಲವೆಡೆ ದಾಳಿ ನಡೆದಿತ್ತು. ವಿಚಾರಣೆ ವೇಳೆ ಆರೋಪಿಗಳು ರಾಮಮಂದಿರ ಸ್ಫೋಟಿಸುವ ಸಂಚಿನ ಬಗ್ಗೆ ತಿಳಿಸಿದ್ದಾರೆ.

ಪಿಎಫ್​ಐ ಸಂಚಿನ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅಯೋಧ್ಯೆ ರಾಮಮಂದಿರ ಸ್ಫೋಟಕ್ಕೆ ಪಿಎಫ್​ಐ ಸಂಚು ವಿಚಾರದ ಬಗ್ಗೆ ಹೆಚ್ಚಿನ ಮಾಹಿತಿ ಸದ್ಯಕ್ಕೆ ಲಭ್ಯವಿಲ್ಲ. ನಂತರ ಪ್ರತಿಕ್ರಿಯಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಪಿಎಫ್​ಐ ಸದಸ್ಯರ ವಾಟ್ಸಾಪ್ ಗುಂಪಿನ ಅಡ್ಮಿನ್ ಪಾಕಿಸ್ತಾನದ ವ್ಯಕ್ತಿ

ಪಿಎಫ್​ಐ ಸದಸ್ಯರ ವಾಟ್ಸಾಪ್ ಗುಂಪಿನ ಅಡ್ಮಿನ್ ಪಾಕಿಸ್ತಾನ ಮೂಲದ ವ್ಯಕ್ತಿ ಎಂದು ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಈ ವಾಟ್ಸ್ಯಾಪ್​ ಗ್ರೂಪ್ ಅನ್ನು ದೇಶವಿರೋಧಿ ಚಟುವಟಿಕೆಯ ಸಂಚು ರೂಪಿಸಲು ಸಂಘಟಿಸಲಾಗಿತ್ತು ಎಂದು ಆರೋಪಿಸಲಾಗಿದೆ.

ಈ ವಾಟ್ಸ್ಯಾಪ್ ಗ್ರೂಪ್​ನಲ್ಲಿ ಅಫ್ಘಾನಿಸ್ತಾನ ಮತ್ತು ಅರಬ್ ದೇಶಗಳ 175ಕ್ಕೂ ಹೆಚ್ಚು ಸದಸ್ಯರಿದ್ದರು. ಕೆಲ ಸದಸ್ಯರು ವಿದೇಶದಲ್ಲಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಸಮಾಜ ವಿರೋಧಿ ಕೃತ್ಯಗಳಿಗೆ ಸಂಚು ನಡೆಸಿದ ಆರೋಪದ ಮೇಲೆ ಪಿಎಫ್​ಐ ಸಂಘಟನೆಯನ್ನು ಕೇಂದ್ರ ಸರ್ಕಾರವು ಕಳೆದ ಸೆ 22ರಂದು ಐದು ವರ್ಷಗಳ ಅವಧಿಗೆ ನಿಷೇಧಿಸಿ ಆದೇಶ ಹೊರಡಿಸಿತು.

Published On - 11:44 am, Thu, 20 October 22

ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್