ಈಶ್ವರಪ್ಪ ಕೊಲೆಗೆ ಸಂಚು ರೂಪಿಸಿದ್ದ ಪಿಎಫ್​ಐ: ಜಯೇಶ್​ ಪೂಜಾರಿ ಅಲಿಯಾಸ್​ ಶಾಹಿರ್​ನಿಂದ ಸ್ಫೋಟಕ ಮಾಹಿತಿ

|

Updated on: Apr 14, 2023 | 3:00 PM

ಕರ್ನಾಟಕದ ಪ್ರಮುಖ ರಾಜಕಾರಣಿಯೊಬ್ಬರ ಹತ್ಯೆಗೆ ಪಿಎಫ್‌ಐ ಸಂಚು ರೂಪಿಸಿದೆ ಎಂಬ ಸ್ಪೋಟಕ ಮಾಹಿತಿಯೊಂದು ಹೊರಬಿದ್ದಿದೆ. ಮಾಜಿ ಸಚಿವ ಈಶ್ವರಪ್ಪ ಕೊಲೆಗೆ ಪಿಎಫ್​ಐ ಸಂಘಟನೆ ಸಂಚು ರೂಪಿಸಿದೆ ಎಂದು ಜಯೇಶ್​ ಪೂಜಾರಿ ಅಲಿಯಾಸ್​ ಶಾಹಿರ್ ಶೇಖ್​​ನಿಂದ ಸ್ಫೋಟಕ ಮಾಹಿತಿ ಹೊರಬಿದ್ದಿದೆ.

ಈಶ್ವರಪ್ಪ ಕೊಲೆಗೆ ಸಂಚು ರೂಪಿಸಿದ್ದ ಪಿಎಫ್​ಐ: ಜಯೇಶ್​ ಪೂಜಾರಿ ಅಲಿಯಾಸ್​ ಶಾಹಿರ್​ನಿಂದ ಸ್ಫೋಟಕ ಮಾಹಿತಿ
ಕೆ.ಎಸ್​.ಈಶ್ವರಪ್ಪ
Follow us on

ಬೆಂಗಳೂರು: ಕರ್ನಾಟಕದ ಪ್ರಮುಖ ರಾಜಕಾರಣಿಯೊಬ್ಬರ ಹತ್ಯೆಗೆ ಪಿಎಫ್‌ಐ ಸಂಚು ರೂಪಿಸಿದೆ ಎಂಬ ಸ್ಪೋಟಕ ಮಾಹಿತಿಯೊಂದು ಹೊರಬಿದ್ದಿದೆ. ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ (KS Eshwarappa) ಕೊಲೆಗೆ ಪಿಎಫ್​ಐ ಸಂಘಟನೆ ಸಂಚು ರೂಪಿಸಿದೆ ಎಂದು ಜಯೇಶ್​ ಪೂಜಾರಿ ಅಲಿಯಾಸ್​ ಶಾಹಿರ್ ಶೇಖ್​​ನಿಂದ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಬೆಳಗಾವಿಯ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿ ಕಚೇರಿಗೆ ಜಯೇಶ್ ಪೂಜಾರಿ ಅಲಿಯಾಸ್ ಶಾಹಿರ್ ಶೇಖ್​ ಬೆದರಿಕೆ ಕರೆ ಮಾಡಿದ್ದ. ಈ ಹಿನ್ನೆಲೆ ಆತನನ್ನು ನಾಗ್ಪುರ ಪೊಲೀಸರು ವಶಕ್ಕೆ ಪಡೆದಿದ್ದರು. ತನಿಖೆಗೆ ನಡೆಸಿದ ಪೊಲೀಸರು ಶಾಕ್​ ಆಗಿದ್ದಾರೆ. ಕೆ.ಎಸ್.ಈಶ್ವರಪ್ಪ ಟಾರ್ಗೆಟ್ ಆಗಿರುವುದು ವಿಚಾರಣೆಯಿಂದ ತಿಳಿದು ಬಂದಿದೆ. ಜಯೇಶ್ ಪೂಜಾರಿ ಕರ್ನಾಟಕದ ಭೀಕರ ದರೋಡೆಕೋರನಾಗಿದ್ದ. ಈಗ ನಿಷೇಧಿತ ಸಂಘಟನೆಯಾಗಿರುವ ಪಿಎಫ್‌ಐನಲ್ಲಿ ಜಯೇಶ್ ಪೂಜಾರಿ ಕೂಡ ನಾಯಕನಾಗಿದ್ದ. ಜನರಲ್ಲಿ ಭಯ ಮೂಡಿಸಲು ಪಿಎಫ್‌ಐ ಹಲವು ಉನ್ನತ ನಾಯಕರ ಹತ್ಯೆಗೆ ಸಂಚು ರೂಪಿಸಿತ್ತು. 70 ಪುಟಗಳ ವರದಿಯನ್ನು ಐಬಿಗೆ ನಾಗ್ಪುರ ಪೊಲೀಸರು ಸಲ್ಲಿಸಿದ್ದಾರೆ.

ಕೆಎಸ್ ಈಶ್ವರಪ್ಪ ರಾಜಕೀಯ ನಿವೃತ್ತಿ

ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪದಲ್ಲಿರುವಾಗಲೇ ಬಿಜೆಪಿಯ ಹಿರಿಯ ನಾಯಕರೂ ಆಗಿರುವ ಕೆಎಸ್​ ಈಶ್ವರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದಿರುವ ಈಶ್ವರಪ್ಪ, ತಾನು ಸ್ವಯಂ ನಿವೃತ್ತಿ ಘೋಷಣೆ ಮಾಡುತ್ತಿದ್ದೇನೆ. ಈ ಬಾರಿಯ ಚುನಾವಣೆಯಲ್ಲಿ ಯಾವುದೇ ಕ್ಷೇತ್ರಕ್ಕೆ ನನ್ನ ಹೆಸರನ್ನು ಪರಿಗಣಿಸದಂತೆ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: KS Eshwarappa: ಕೆಎಸ್ ಈಶ್ವರಪ್ಪ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ; ಬಿಜೆಪಿ ಹೈಕಮಾಂಡ್​ಗೆ ಟಿಕೆಟ್ ನೀಡಬೇಡಿ ಎಂದು ಮನವಿ

ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ನಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿ. ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ ಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ನನ್ನ ಅನಂತ ಧನ್ಯವಾದಗಳು ಎಂದು ಪತ್ರದಲ್ಲಿ ತಿಳಿಸಿದ್ದರು.

ಬಿಎಸ್ ಯಡಿಯೂರಪ್ಪ ಕೂಡ ರಾಜಕೀಯ ನಿವೃತ್ತಿ ಘೋಷಣೆ 

ರಾಜ್ಯ ಬಿಜೆಪಿಯಲ್ಲಿ ಹಿರಿಯ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿಯೂ ಆಗಿರುವ ಸದ್ಯ ಕೇಂದ್ರ ಬಿಜೆಪಿ ಚುನಾವಣಾ ಸಮಿತಿ ಸದಸ್ಯರಾಗಿರುವ ಬಿಎಸ್ ಯಡಿಯೂರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದರು. ವಿಧಾನಸಭೆ ಅಧಿವೇಶನದ ವೇಳೆ ವಿದಾಯ ಭಾಷಣ ಕೂಡ ಮಾಡಿದ್ದರು. ಅದಾಗ್ಯೂ, ತಾನು ಚುನಾವಣೆಯಲ್ಲಿ ಮಾತ್ರ ಸ್ಪರ್ಧಿಸುವುದಿಲ್ಲ. ರಾಜಕೀಯದಿಂದ ನಿವೃತ್ತಿ ಹೊಂದುತ್ತಿಲ್ಲ. ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ಪ್ರಯತ್ನ ಮಾಡುತ್ತೇನೆ ಅಂತ ಹೇಳಿದ್ದರು.

ಇದನ್ನೂ ಓದಿ: S Angara: ರಾಜಕೀಯ ನಿವೃತ್ತಿ ಹೇಳಿಕೆ ಹಿಂಪಡೆದ ಎಸ್. ಅಂಗಾರ, ಭಾಗೀರಥಿ ಮುರುಳ್ಯ ಪರ ಪ್ರಚಾರ ಮಾಡುವೆ

ಇದಾದ ನಂತರ ಕುಂದಾಪುರ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದರು. ಮುಂದೆ ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಜನರಿಗೆ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, ದಾವಣಗೆರೆ ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಹೇಳುವ ಮೂಲಕ ಬಿಜೆಪಿ ಶಾಸಕ, ಮಾಜಿ ಸಚಿವ ಎಸ್​ಎ ರವೀಂದ್ರನಾಥ್ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದರು. ಆರೋಗ್ಯ ಸರಿಯಿಲ್ಲದ ಕಾರಣಕ್ಕೆ ನಾನೇ ಚುನಾವಣೆಯಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:44 pm, Fri, 14 April 23