AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಪ್ಲಾಸ್ಟಿಕ್ ಉತ್ಪಾದನೆ, ಯಾವುದೇ ಕ್ರಮ ತೆಗೆದುಕೊಳ್ಳದ ಮಾಲಿನ್ಯ ನಿಯಂತ್ರಣ ‌ಮಂಡಳಿ

ರಾಜಧಾನಿಯಲ್ಲಿ ಒಂದು ವರ್ಷದ ಹಿಂದೆ ಪ್ಲಾಸ್ಟಿಕ್ ಬ್ಯಾನ್ ಆಗಿತ್ತು. ಇನ್ನು ಸಿಂಗಲ್ ಯೂಸ್ ಪ್ಲಾಸ್ಟಿಕ್​ಗಳನ್ನ ಬಳಕೆ ಮಾಡಿದರೆ ಫೈನ್ ಹಾಕುವುದಾಗಿ ಅಧಿಕಾರಿಗಳು ಹೇಳಿದ್ದರು.‌ ಯಲಚೇನಹಳ್ಳಿಯ ನಾಯ್ಡು ಲೇಔಟ್ ನಲ್ಲಿ ಪ್ಲಾಸ್ಟಿಕ್ ತಯಾರಿ ಮಾಡಿ, ತಮಗಿಷ್ಟದ ಬೆಲೆ ಮಾರಾಟ ಮಾಡ್ತಿದ್ದಾರೆ. ಪ್ಲಾಸ್ಟಿಕ್ ತಯಾರಿಕಾ ಘಟಕದ ಮಾಲೀಕರು ಯಾವುದೇ ಅನುಮತಿ ಪಡೆಯದೇ ಯಾರಿಸುವುದಲ್ಲದೇ, ಎಲ್ಲರೂ ತಾಯಾರಿ ಮಾಡ್ತಿದ್ದಾರೆ.

ಬೆಂಗಳೂರಿನಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಪ್ಲಾಸ್ಟಿಕ್ ಉತ್ಪಾದನೆ, ಯಾವುದೇ ಕ್ರಮ ತೆಗೆದುಕೊಳ್ಳದ ಮಾಲಿನ್ಯ ನಿಯಂತ್ರಣ ‌ಮಂಡಳಿ
ಪ್ಲಾಸ್ಟಿಕ್
Poornima Agali Nagaraj
| Edited By: |

Updated on: Oct 14, 2023 | 10:29 AM

Share

ಬೆಂಗಳೂರು, ಅ.14: ರಾಜ್ಯ ರಾಜಧಾನಿಯಲ್ಲಿ ಸಿಂಗಲ್ ಯೂಸ್ ಫ್ಲಾಸ್ಟಿಕ್​ಗಳನ್ನ (Plastic)  ಬ್ಯಾನ್ ಮಾಡಿ ಒಂದು ವರ್ಷವೇ ಕಳೆದಿದೆ. ಆದರೆ ರಾಜಧಾನಿಯಲ್ಲಿ ಮಾತ್ರ ಪ್ಲಾಸ್ಟಿಕ್ ಮಾತ್ರ ಬ್ಯಾನ್ ಆಗಿಲ್ಲ. ಈ ಬ್ಯಾನ್ ಕೇವಲ ಹೆಸರಿಗೆ ಮಾತ್ರ ಎನ್ನುವಂತೆ ಕಾಣುತ್ತಿದೆ.‌ ಯಾಕೆಂದರೆ ರಾಜಧಾನಿಯಲ್ಲಿ ಯಾವುದೇ ಅಧಿಕಾರಿಗಳ‌ ಭಯವಿಲ್ಲದೇ ಕಾರ್ಖಾನೆಗಳಲ್ಲಿ ಫ್ಲಾಸ್ಟಿಕ್ ತಯಾರಾಗುತ್ತಿದ್ದು, ಅಧಿಕಾರಿಗಳು ಮಾತ್ರ ಏನೂ ಗೊತ್ತಿಲ್ಲದಂತೆ ಕಣ್ಮುಚ್ಚಿ ಕುಳಿತಿದ್ದಾರೆ.‌

ಹೌದು, ರಾಜಧಾನಿಯಲ್ಲಿ ಒಂದು ವರ್ಷದ ಹಿಂದೆ ಪ್ಲಾಸ್ಟಿಕ್ ಬ್ಯಾನ್ ಆಗಿತ್ತು. ಇನ್ನು ಸಿಂಗಲ್ ಯೂಸ್ ಪ್ಲಾಸ್ಟಿಕ್​ಗಳನ್ನ ಬಳಕೆ ಮಾಡಿದರೆ ಫೈನ್ ಹಾಕುವುದಾಗಿ ಅಧಿಕಾರಿಗಳು ಹೇಳಿದ್ದರು.‌ ಇನ್ನು ಸಣ್ಣ-ಪುಟ್ಟ ವ್ಯಾಪಾರಸ್ಥರು ಪ್ಲಾಸ್ಟಿಕ್ ಬಳಸಿದ್ರೆ ಪೌರುಷ ತೋರಿಸುವ ಅಧಿಕಾರಿಗಳು ರಾಜಾರೋಷವಾಗಿ ಕಾರ್ಖಾನೆಗಳಲ್ಲಿ ಪ್ಲಾಸ್ಟಿಕ್ ತಯಾರಾಗುತ್ತಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಹೀಗಾಗಿ ಯಲಚೇನಹಳ್ಳಿಯ ನಾಯ್ಡು ಲೇಔಟ್ ನಲ್ಲಿ ಪ್ಲಾಸ್ಟಿಕ್ ತಯಾರಿ ಮಾಡಿ, ತಮಗಿಷ್ಟದ ಬೆಲೆ ಮಾರಾಟ ಮಾಡ್ತಿದ್ದಾರೆ.

ಇದನ್ನೂ ಓದಿ: ಬಳ್ಳಾರಿಯಿಂದ ಕೊಪ್ಪಳಕ್ಕೆ ವಿದ್ಯಾರ್ಥಿನಿಯನ್ನು ಅಪಹರಿಸಿ ಬೀಯರ್ ಕುಡಿಸಿ ನಾಲ್ವರಿಂದ ಅತ್ಯಾಚಾರ

ಈ ಸಿಂಗಲ್ ಯೂಸ್ ಪ್ಲಾಸ್ಟಿಕ್ ತಯಾರು ಮಾಡ್ಬೇಕು ಅಂತ ಹೇಳಿದ್ರೆ ಪರಿಸರ ನಿಯಂತ್ರಣ ಮಂಡಳಿಯಿಂದ ಒಪ್ಪಿಗೆ ಪಡಿಯಬೇಕು. ಆದರೆ ಈ ಪ್ಲಾಸ್ಟಿಕ್ ತಯಾರಿಕಾ ಘಟಕದ ಮಾಲೀಕರು ಯಾವುದೇ ಅನುಮತಿ ಪಡೆಯದೇ ಯಾರಿಸುವುದಲ್ಲದೇ, ಎಲ್ಲರೂ ತಾಯಾರಿ ಮಾಡ್ತಿದ್ದಾರೆ. ಇನ್ನು, ಈ ಕುರಿತಾಗಿ ಅಧಿಕಾರಿಗಳಿಗೆ ಮಾಹಿತಿ ನೀಡುತ್ತಿದ್ದಂತೆ ಸ್ಥಳ ವೀಕ್ಷಣೆ ಮಾಡಿ ಸ್ಥಳೀಯ ಎಇ ದೂರು ದಾಖಾಲಿಸಿಕೊಂಡಿದ್ದಾರೆ. ಜೊತೆಗೆ ಪ್ಲಾಸ್ಟಿಕ್ ತಯಾರಿಕಾ ಘಟಕದ ಬೆಸ್ಕಾಂ ಪವರ್ ಲೈನ್ ಕಟ್ ಮಾಡುವುದಾಗಿ ಹೇಳಿದ್ದಾರೆ.

ಒಟ್ನಲ್ಲಿ, ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಕೆಗೆ ನಿಷೇಧ ಎನ್ನುವ ಮಾಲಿನ್ಯ ನಿಯಂತ್ರಣ ಮಂಡಳಿ ಪ್ಲಾಸ್ಟಿಕ್ ತಯಾರಿಕಾ ಘಟಕಗಳ‌ ಮೇಲೆ ನಿರ್ಧಾಕ್ಷಿಣ್ಯ ಕ್ರಮ ಜರುಗಿಸದೇ ಇರುವುದುದೇ ಸಧ್ಯ ಪ್ಲಾಸ್ಟಿಕ್ ತಯಾರಿಕೆಗೆ ಕಾರಣವಾಗುತ್ತಿದ್ದು, ಕಾರ್ಖಾನೆಗಳ ಮೇಲೆ ಮಾಲಿನ್ಯ ನಿಯಂತ್ರಣ ಮಂಡಳಿ ಹದ್ದಿನ ಕಣ್ಣಿಡಬೇಕಿದೆ.‌

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ