AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ʻಗಾಂಧಿ ಹತ್ಯೆಯ ಸತ್ಯʼ ನಾಟಕ ಪ್ರದರ್ಶನದ ವೇಳೆ ಅಡ್ಡಂಡ ಕಾರ್ಯಪ್ಪ ಮುಖಕ್ಕೆ ಮಸಿ: ದೂರು-ಪ್ರತಿದೂರು ದಾಖಲು

ಬೆಂಗಳೂರಿನ ಸುಚಿತ್ರಾ ಫಿಲ್ಮ್ ಸೊಸೈಟಿಯಲ್ಲಿ ಆಯೋಜಿಸಲಾಗಿದ್ದ ಗಾಂಧಿ ಹತ್ಯೆಯ ಸತ್ಯ ನಾಟಕ ಪ್ರದರ್ಶನ ವೇಳೆ ಮೈಸೂರು ರಂಗಾಯಣದ ಮಾಜಿ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರ ಮುಖಕ್ಕೆ ಮಸಿ ಬಳಿಯಲಾಗಿದೆ. ಈ ವೇಳೆ ಗಲಾಟೆ ಗದ್ದಲವಾಗಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಸಂಬಂಧ ಎರಡು ಪ್ರಕರಣಗಳು ದಾಖಲಾಗಿವೆ.

ʻಗಾಂಧಿ ಹತ್ಯೆಯ ಸತ್ಯʼ ನಾಟಕ ಪ್ರದರ್ಶನದ ವೇಳೆ ಅಡ್ಡಂಡ ಕಾರ್ಯಪ್ಪ ಮುಖಕ್ಕೆ ಮಸಿ: ದೂರು-ಪ್ರತಿದೂರು ದಾಖಲು
Addanda Karyappa
ಪ್ರದೀಪ್​ ಚಿಕ್ಕಾಟಿ
| Edited By: |

Updated on:Nov 01, 2026 | 7:00 AM

Share

ಬೆಂಗಳೂರು, ನವೆಂಬರ್ 01): ಬನಶಂಕರಿಯ ಸುಚಿತ್ರ ಸಿನಿಮಾ ಮತ್ತು ಸಾಂಸ್ಕೃತಿಕ ಅಕಾಡೆಮಿಯಲ್ಲಿ ʻಗಾಂಧಿ ಹತ್ಯೆಯ ಸತ್ಯʼ ನಾಟಕ ಪ್ರದರ್ಶನದ ವೇಳೆ ಏರ್ಪಟ್ಟ ಗದ್ದಲದ ವೇಳೆ ಮೈಸೂರು ರಂಗಾಯಣದ ಮಾಜಿ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರ ಮುಖಕ್ಕೆ ಮಸಿ ಬಳಿಯಲಾಗಿದೆ. ನಾಟಕದಲ್ಲಿ ಮಹಾತ್ಮ ಗಾಂಧೀಜಿ ವಿರುದ್ಧ ಆಕ್ಷೇಪಾರ್ಹ ಸಂಭಾಷಣೆ ಬಳಸಲಾಗಿದೆ ಎಂದು ಆಕ್ರೋಶಗೊಂಡ ಸಂಘಟನೆಗಳ ಮುಖಂಡರು ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಅಕಾಡೆಮಿಗೆ ನುಗ್ಗಿದ್ದಾರೆ. ಬಳಿಕ ಮಾತಿನ ಚಕಮಕಿ ನಡೆದು ಅಡ್ಡಂಡ ಕಾರ್ಯಪ್ಪ ಅವರನ್ನ ಎಳೆದಾಡಿ ಮುಖಕ್ಕೆ ಮಸಿ ಬಳಿದು ಆಕ್ರೋಶ ಹೊರಹಾಕಿದ್ದಾರೆ. ಈ ಸಂಬಂಧ ಬೆಂಗಳೂರಿನ ಬನಶಂಕರಿ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗಿದೆ.

ಗಾಂಧಿ ಹತ್ಯೆ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಕುಶಾಲ್​ ಎಂಬುವರ ದೂರು ದಾಖಲಿಸಿದ್ದರೆ, ಇತ್ತ ನಾಟಕ ಪ್ರದರ್ಶನಕ್ಕೆ ಅಡ್ಡಿಪಡಿಸಿ ಹಲ್ಲೆ, ಕೊಲೆ ಬೆದರಿಕೆ ಹಾಕಲಾಗಿದೆ ಎಂದು ನಾಟಕ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಪ್ರತಿದೂರು ದಾಖಲಿಸಿದ್ದಾರೆ. ಈ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎರಡು ಕಡೆಯ ದೂರುಗಳು ದಾಖಲಾಗಿದ್ದು, ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ನೋಡಿ: ಬೆಂಗಳೂರಲ್ಲಿ ಗಾಂಧಿ ಹತ್ಯೆಯ ನಾಟಕ ಪ್ರದರ್ಶನದ ವೇಳೆ ಹೈಡ್ರಾಮಾ; ಅಡ್ಡಂಡ ಕಾರ್ಯಪ್ಪಗೆ ಮಸಿ ಬಳಿದ ಕಾಂಗ್ರೆಸ್ ಕಾರ್ಯಕರ್ತರು

ಬನಶಂಕರಿ 2ನೇ ಹಂತದಲ್ಲಿರುವ ಅಕಾಡೆಮಿಯಲ್ಲಿ ‘ಕೊಡಗು ರಂಗಭೂಮಿ ಟ್ರಸ್ಟ್’ನಿಂದ ‘ಗಾಂಧಿ ಹತ್ಯೆಯ ಸತ್ಯ’ ಎಂಬ ನಾಟಕ ಪ್ರದರ್ಶನ ಆಯೋಜಿಸಲಾಗಿತ್ತು. ಈ ನಾಟಕವನ್ನ ಅಡ್ಡಂಡ ಕಾರ್ಯಪ್ಪ ಅವರೇ ನಿರ್ದೇಶನ ಮಾಡಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ಮಹಾತ್ಮ ಗಾಂಧಿಯವರನ್ನ ದೇಶ ವಿರೋಧಿ ಹಾಗೂ ಮುಸ್ಲಿಮರ ಪರ ಎಂದು ಬಿಂಬಿಸಿ ಸುಳ್ಳು ಪ್ರಚಾರ ಮಾಡಿದ್ದಾರೆ. ನಾಟಕದ ಮೂಲಕ ಅಡ್ಡಂಡ ಕಾರ್ಯಪ್ಪ ತಪ್ಪು ಸಂದೇಶ ರವಾನೆ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಕಾಂಗ್ರೆಸ್ ಹಾಗೂ ಮಹಾತ್ಮ ಗಾಂಧೀಜಿ ಯವರು ದೇಶ ವಿಭಜಿಸಿದರು ಎಂದು ನಾಟಕದ ಮೂಲಕ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆಪಾದಿಸಿ ಬನಶಂಕರಿ ಠಾಣೆಗೆ ಸಂಘಟನೆಗಳ ಮುಖಂಡರು ದೂರು ನೀಡಿದ್ದಾರೆ. ‘ಬೆಂಗಳೂರಿನಲ್ಲಿ ನಡೆಯುವ ನಾಟಕ ಪ್ರದರ್ಶನಕ್ಕೆ ಮೈಸೂರಿನ ಟಿಕೆಟ್‌ಗಳನ್ನ ಕಾಳಸಂತೆಯಲ್ಲಿ ಮಾರಾಟ ಮಾಡಲಾಗಿದೆ. ಅದನ್ನು ಪ್ರಶ್ನಿಸಿದರೆ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ ನಾಟಕದ ರಚನೆ, ನಿರ್ದೇಶನ ಮಾಡಿರುವ ಅಡ್ಡಂಡ ಕಾರ್ಯಪ್ಪ, ನಾಟಕದಲ್ಲಿ ಅಭಿನಯಿಸಿದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:59 am, Sun, 1 November 26

Follow Us
ಪ್ರದೀಪ್​ ಚಿಕ್ಕಾಟಿ
ಪ್ರದೀಪ್​ ಚಿಕ್ಕಾಟಿ

ಮೂಲತಃ ಚಾಮರಾಜನಗರ ಜಿಲ್ಲೆಯವನಾಗಿದ್ದು, ಶಾಲಾ ದಿನಗಳಿಂದಲೂ ಮಾಧ್ಯಮಕ್ಕೆ ಸೇರುವ ಹಂಬಲ ಇತ್ತು. ಹೀಗಾಗಿ ಫೈರ್ ಅಂಡ್ ಸೇಫ್ಟಿ ಇಂಜಿನಿಯರಿಂಗ್ ವ್ಯಾಸಂಗ ಮಾಡಿ ಕೆಲಸಕ್ಕೆ ಸೇರಿದ್ದರು ಅ ಕೆಲಸ ಬಿಟ್ಟು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿದೆ. ಬಳಿಕ ಸುಮಾರು 7 ವರ್ಷ‌ದಿಂದ ಮೈಸೂರು, ಹೈದರಾಬಾದ್ ನ ಕೆಲ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಪ್ರಸ್ತುತ Tv9 ಕನ್ನಡದ ಕ್ರೈಂ ವರದಿಗಾರನಾಗಿದ್ದೇನೆ. ಓದು, ಬರಹ, ಪ್ರವಾಸ ನನ್ನಿಷ್ಟದ ಹವ್ಯಾಸಗಳು.

Read More
ಉತ್ತರ ಭಾರತದ ಮೊದಲ ಬುಲೆಟ್ ಟ್ರೈನ್ ಕಾರಿಡಾರ್‌ಗೆ ಪ್ರಧಾನಿ ಮೋದಿ ಒಪ್ಪಿಗೆ
ಉತ್ತರ ಭಾರತದ ಮೊದಲ ಬುಲೆಟ್ ಟ್ರೈನ್ ಕಾರಿಡಾರ್‌ಗೆ ಪ್ರಧಾನಿ ಮೋದಿ ಒಪ್ಪಿಗೆ
ಧನುಷ್‌ಗೆ ಮೀಟರ್ ಇಲ್ಲ; ಸೌಂದರ್ಯಾ ಮಾತಿಗೆ ಹೊತ್ತಿ ಉರಿದ ಮನೆ
ಧನುಷ್‌ಗೆ ಮೀಟರ್ ಇಲ್ಲ; ಸೌಂದರ್ಯಾ ಮಾತಿಗೆ ಹೊತ್ತಿ ಉರಿದ ಮನೆ
ಸರ್ದಾರ್ ವಲ್ಲಭಭಾಯಿ ಪಟೇಲ್ ಏಕತಾ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪ ನಮನ
ಸರ್ದಾರ್ ವಲ್ಲಭಭಾಯಿ ಪಟೇಲ್ ಏಕತಾ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪ ನಮನ
ಗುಜರಾತ್‌ನಲ್ಲಿ 400 ಕೋಟಿಗೂ ಅಧಿಕ ವೆಚ್ಚದ ಯೋಜನೆಗಳಿಗೆ ಮೋದಿ ಚಾಲನೆ
ಗುಜರಾತ್‌ನಲ್ಲಿ 400 ಕೋಟಿಗೂ ಅಧಿಕ ವೆಚ್ಚದ ಯೋಜನೆಗಳಿಗೆ ಮೋದಿ ಚಾಲನೆ
ದಾಖಲೆ ಇಲ್ಲದ ಜಮೀನಿಗೆ ಇ-ಸ್ವತ್ತು: ಗ್ರಾಮೀಣ ಭಾಗದ ಜನರಿಗೆ ಗುಡ್​ ನ್ಯೂಸ್
ದಾಖಲೆ ಇಲ್ಲದ ಜಮೀನಿಗೆ ಇ-ಸ್ವತ್ತು: ಗ್ರಾಮೀಣ ಭಾಗದ ಜನರಿಗೆ ಗುಡ್​ ನ್ಯೂಸ್
ಬೆನ್ನಹಿಂದೆ ಚಾಕು ಹಾಕಿದ ಯಶಸ್; ಸುದೀಪ್ ಎದುರೇ ಎದ್ದು ನಡೆದ ಸೌಂದರ್ಯಾ
ಬೆನ್ನಹಿಂದೆ ಚಾಕು ಹಾಕಿದ ಯಶಸ್; ಸುದೀಪ್ ಎದುರೇ ಎದ್ದು ನಡೆದ ಸೌಂದರ್ಯಾ
ನದಿ ತಿರುವು ವಿರೋಧಿಸಿ ಸಿಎಂ, ಪ್ರಧಾನಿಗೆ ಪತ್ರ ಬರೆದ ಶಿರಸಿಯ ಶಾಲಾ ಮಕ್ಕಳು
ನದಿ ತಿರುವು ವಿರೋಧಿಸಿ ಸಿಎಂ, ಪ್ರಧಾನಿಗೆ ಪತ್ರ ಬರೆದ ಶಿರಸಿಯ ಶಾಲಾ ಮಕ್ಕಳು
TV9 ಬಿಗ್ ಇಂಪ್ಯಾಕ್ಟ್;ಸೋರುತ್ತಿದ್ದ ಸರ್ಕಾರಿ ಶಾಲೆಗೆ ಬಂತು ಹೊಸ ಮೇಲ್ಛಾವಣಿ
TV9 ಬಿಗ್ ಇಂಪ್ಯಾಕ್ಟ್;ಸೋರುತ್ತಿದ್ದ ಸರ್ಕಾರಿ ಶಾಲೆಗೆ ಬಂತು ಹೊಸ ಮೇಲ್ಛಾವಣಿ
ಜ್ಞಾನಭಾರತಿ ವಿವಿ ಬಳಿ ಸಿಕ್ಕಿದ್ದು ಫೇಕ್​ ಬಾಂಬ್​! ಖಾಲಿ ಪೈಪ್ ಪತ್ತೆ
ಜ್ಞಾನಭಾರತಿ ವಿವಿ ಬಳಿ ಸಿಕ್ಕಿದ್ದು ಫೇಕ್​ ಬಾಂಬ್​! ಖಾಲಿ ಪೈಪ್ ಪತ್ತೆ
ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಅನ್ಯಾಯ; ಕರವೇ ನಾರಾಯಣ ಗೌಡ ಹೇಳಿದ್ದೇನು?
ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಅನ್ಯಾಯ; ಕರವೇ ನಾರಾಯಣ ಗೌಡ ಹೇಳಿದ್ದೇನು?