ವಂದೇ ಮಾತರಂ ಗೀತೆಯ 2 ಚರಣ ಮಾತ್ರ ಹಾಡಲು ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್​​ಗೆ ರಿಟ್ ಅರ್ಜಿ ಸಲ್ಲಿಕೆ

ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆಯ 2 ಚರಣಗಳನ್ನು ಮಾತ್ರ ಹಾಡಲು ಹೊರಡಿಸಿರುವ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ವಕೀಲ ಗಿರೀಶ್ ಭಾರದ್ವಾಜ್ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಮಂತ್ರಿ, ರಾಜ್ಯಪಾಲರ ಕಾರ್ಯಕ್ರಮಗಳನ್ನು ಹೊರತುಪಡಿಸಿ ಉಳಿದ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ 2 ಚರಣ ಮಾತ್ರ ಹಾಡಲು ರಾಜ್ಯ ಸರ್ಕಾರ ತೀರ್ಮಾನಿಸಿತ್ತು.

ವಂದೇ ಮಾತರಂ ಗೀತೆಯ 2 ಚರಣ ಮಾತ್ರ ಹಾಡಲು ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್​​ಗೆ ರಿಟ್ ಅರ್ಜಿ ಸಲ್ಲಿಕೆ
ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್​​ಗೆ ರಿಟ್ ಅರ್ಜಿ ಸಲ್ಲಿಕೆ
Image Credit source: Getty Images
Edited By:

Updated on: Sep 15, 2026 | 12:52 PM

ಬೆಂಗಳೂರು, ಸೆಪ್ಟೆಂಬರ್​​ 15: ವಂದೇ ಮಾತರಂ ಗೀತೆಯ 2 ಚರಣ ಮಾತ್ರ ಹಾಡಲು ರಾಜ್ಯ ಸರ್ಕಾರ ತೀರ್ಮಾನ ಹಿನ್ನೆಲೆ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್​​ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ. ರಾಷ್ಟ್ರಗೀತೆಯನ್ನು ಕಡಿತಗೊಳಿಸುವ ಕಾನೂನು ವ್ಯಾಪ್ತಿ ರಾಜ್ಸರ್ಕಾರಕ್ಕಿಲ್ಲ ಎಂದು ಉಲ್ಲೇಖಿಸಿ ವಕೀಲ ಗಿರೀಶ್ ಭಾರದ್ವಾಜ್ ಹೈಕೋರ್ಟ್​​ ಮೊರೆ ಹೋಗಿದ್ದಾರೆ. ಕಾಯ್ದೆಯಿಂದ ಮಾಡಲಾಗದ್ದನ್ನು ರಾಜ್ಯಸರ್ಕಾರ ಆದೇಶದಿಂದ ಮಾಡಹೊರಟಿದೆ ಎಂದವರು ದೂರಿದೆ.

ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಲು ಮನವಿ

ವಂದೇ ಮಾತರಂ ಗೀತೆಯನ್ನು 2 ಚರಣಗಳಿಗೆ ಸೀಮಿತಗೊಳಿಸುವಂತಿಲ್ಲ. ಹೀಗಾಗಿ ಸೆಪ್ಟೆಂಬರ್​​ 8ರ ರಾಜ್ಯ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಲು ಮನವಿ ಮಾಡಲಾಗಿದೆ. ಸಚಿವ ಸಂಪುಟದ ನಿರ್ಣಯ ಆಧರಿಸಿ ರಾಜ್ಯಸರ್ಕಾರ ಈ ಬಗ್ಗೆ ಆದೇಶಿಸಿತ್ತು. ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಮಂತ್ರಿ, ರಾಜ್ಯಪಾಲರ ಕಾರ್ಯಕ್ರಮಗಳನ್ನು ಹೊರತುಪಡಿಸಿ ಉಳಿದ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ 2 ಚರಣ ಮಾತ್ರ ಹಾಡಲು ರಾಜ್ಯ ಸರ್ಕಾರ ತೀರ್ಮಾನಿಸಿತ್ತು.

ಇದನ್ನೂ ಓದಿ: ರಾಜ್ಯ ಸರ್ಕಾರದ ಆದೇಶಕ್ಕೆ ಸೆಡ್ಡು: ಪ್ರಜಾಸೇವೆ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗೀತೆ ಪೂರ್ತಿಯಾಗಿ ಹಾಡಿಸಿದ ಶಾಸಕ ಜನಾರ್ದನ ರೆಡ್ಡಿ

ಭಾರತದ ರಾಷ್ಟ್ರೀಯ ಚಳವಳಿಯ ಸಂದರ್ಭದಲ್ಲಿ ದೇಶದ ಜನರಲ್ಲಿ ರಾಷ್ಟ್ರೀಯತೆ, ಏಕತೆ ಮತ್ತು ದೇಶಭಕ್ತಿಯ ಭಾವನೆಯನ್ನು ಮೂಡಿಸುವಲ್ಲಿ ‘ವಂದೇ ಮಾತರಂ’ ಗೀತೆಯು ಮಹತ್ವದ ಪಾತ್ರವನ್ನು ವಹಿಸಿರುತ್ತದೆ. ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯವು ವಂದೇ ಮಾತರಂ ರಾಷ್ಟ್ರೀಯ ಗೀತೆಯ ಅಧಿಕೃತ ಆವೃತ್ತಿ ಹಾಗೂ ವಿವಿಧ ಸರ್ಕಾರಿ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅದರ ಗಾಯನ ಅಥವಾ ವಾದನಕ್ಕೆ ಸಂಬಂಧಿಸಿದಂತೆ ಸಂದರ್ಭಾನುಸಾರ ಪಾಲಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸಿದೆ. ಆ ಮಾರ್ಗಸೂಚಿಗಳಲ್ಲಿ ರಾಷ್ಟ್ರೀಯ ಗೀತೆಯ ವಾದನ ಮತ್ತು ಸಾಮೂಹಿಕ ಗಾಯನಕ್ಕೆ ಸಂಬಂಧಿಸಿದ ಸಂದರ್ಭಗಳನ್ನು ಪ್ರತ್ಯೇಕವಾಗಿ ನಿರ್ದಿಷ್ಟಪಡಿಸಲಾಗಿದೆ. ರಾಜ್ಯದಲ್ಲಿ ನಡೆಯುವ ವಿವಿಧ ಸರ್ಕಾರಿ ಕಾರ್ಯಕ್ರಮಗಳು ಮತ್ತು ಸಮಾರಂಭಗಳ ಸ್ವರೂಪ ಹಾಗೂ ಸಂದರ್ಭಕ್ಕೆ ಅನುಗುಣವಾಗಿ ಗೀತೆಯ ವಾದನ/ಗಾಯನಕ್ಕೆ ಸಂಬಂಧಿಸಿದಂತೆ ಏಕರೂಪತೆ, ಗೌರವ ಮತ್ತು ಸೂಕ್ತ ಶಿಷ್ಟಾಚಾರವನ್ನು ಕಾಯ್ದುಕೊಳ್ಳುವ ಅಗತ್ಯವನ್ನು ಸರ್ಕಾರವು ಪರಿಗಣಿಸಿದೆ ಎಂದೂ ಆದೇಶದಲ್ಲಿ ತಿಳಿಸಲಾಗಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:52 pm, Tue, 15 September 26

ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More
Loading...
Unable to load recommendations.
Follow Us