ಪ್ರಧಾನಿ ನರೇಂದ್ರ ಮೋದಿ ಸಮಕ್ಷಮ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆಯಲಿರುವ ಬಿಜೆಪಿ ಸಮಾವೇಶದಲ್ಲಿ ಕಪ್ಪು ಬಟ್ಟೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಕಪ್ಪು ಬಣ್ಣದ ಅಂಗಿ, ಟಿಶರ್ಟ್, ಕರವಸ್ತ್ರಗಳನ್ನೂ ಪೊಲೀಸರು ಒಳಗೆ ಬಿಡುತ್ತಿಲ್ಲ. ಕಪ್ಪು ಬಣ್ಣದ ಮಾಸ್ಕ್ ಧರಿಸಿ ಬಂದವರನ್ನೂ ವಾಪಸ್ ಕಳಿಸಲಾಗುತ್ತಿದೆ. ಮಾರ್ಗದಲ್ಲಿ ಅಲ್ಲಲ್ಲಿ ತಪಾಸಣೆ ನಡೆಸಲಾಗುತ್ತಿದ್ದು, ಮೋದಿ ಭಾಷಣದ ವೇಳೆ ಕಪ್ಪುಪಟ್ಟಿ ಪ್ರದರ್ಶಿಸಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ಪೊಲೀಸರು ಈ ಕ್ರಮಕ್ಕೆ ಮುಂದಾಗಿದ್ದಾರೆ.
ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡಿದ ಬಳಿಕ ರಸ್ತೆಯ ಮೂಲಕ ಸಾರ್ವಜನಿಕ ಸಮಾರಂಭಕ್ಕೆ 12.20ಕ್ಕೆ ಆಗಮಿಸಲಿದ್ದಾರೆ. ಈ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಧ್ಯಾಹ್ನ 1.45ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ತಮಿಳುನಾಡಿನ ಮದುರೈಗೆ ಪ್ರಯಾಣ ಬೆಳೆಸಲಿದ್ದಾರೆ.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಸಮಾವೇಶಕ್ಕಾಗಿ ಬಿಜೆಪಿ ಸರ್ಕಾರ ಸಕಲ ಸಿದ್ಧತೆ ನಡೆಸಿದ್ದು, ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಹೊಂದಿದೆ. ದೂರದಿಂದ ಆಗಮಿಸುವ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ. ಸುಮಾರು ನಾಲ್ಕು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.
Published On - 10:44 am, Fri, 11 November 22