AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರೇ ಇತ್ತ ಗಮನಿಸಿ: ಮೋದಿ ಆಗಮನ ಹಿನ್ನೆಲೆ ಇಂದು ಬೆಂಗಳೂರು-ಕನಕಪುರ ರಸ್ತೆಯಲ್ಲಿ ಸಂಚಾರ ಬದಲಾವಣೆ

Bangalore Traffic Advisory: ಪ್ರಧಾನಿ ಮೋದಿ ಇಂದು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ ಕನಕಪುರ ರಸ್ತೆಯಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಕೆಂಗೇರಿ, ಬಿಡದಿ ಮತ್ತು ಬನ್ನೇರುಘಟ್ಟ ಮಾರ್ಗಗಳನ್ನು ಬಳಸುವಂತೆ ಪೊಲೀಸರು ಪ್ರಯಾಣಿಕರಿಗೆ ಸೂಚಿಸಿದ್ದಾರೆ.

ಪ್ರಯಾಣಿಕರೇ ಇತ್ತ ಗಮನಿಸಿ: ಮೋದಿ ಆಗಮನ ಹಿನ್ನೆಲೆ ಇಂದು ಬೆಂಗಳೂರು-ಕನಕಪುರ ರಸ್ತೆಯಲ್ಲಿ ಸಂಚಾರ ಬದಲಾವಣೆ
ಸಾಂದರ್ಭಿಕ ಚಿತ್ರImage Credit source: tv9
ಗಣಪತಿ ಶರ್ಮಾ
|

Updated on:May 10, 2026 | 7:02 AM

Share

ಬೆಂಗಳೂರು, ಮೇ 10: ಆರ್ಟ್ ಆಫ್ ಲಿವಿಂಗ್ ಆಶ್ರಮದ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ 70ನೇ ಜನ್ಮೋತ್ಸವ ಹಾಗೂ ಆಶ್ರಮದ 45ನೇ ವರ್ಷದ ಸಂಭ್ರಮಾಚರಣೆಯಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಪ್ರಧಾನಿಯವರ ಭೇಟಿಯ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಬೆಂಗಳೂರು-ಕನಕಪುರ ಮುಖ್ಯರಸ್ತೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದ್ದು, ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

ಮುಖ್ಯಾಂಶಗಳು

  • ಪ್ರಧಾನಿ ಭೇಟಿ ಹಿನ್ನೆಲೆ ಬೆಂಗಳೂರು-ಕನಕಪುರ ಮಾರ್ಗದಲ್ಲಿ ಸಂಚಾರ ಸಂಪೂರ್ಣ ಬದಲಾವಣೆ.
  • ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಬದಲಿ ರಸ್ತೆ ಬಳಸಲು ಪೊಲೀಸರ ಸೂಚನೆ.
  • ಆಶ್ರಮದಲ್ಲಿ ಹೊಸ ಧ್ಯಾನ ಮಂದಿರ ಉದ್ಘಾಟಿಸಲಿರುವ ಪ್ರಧಾನಿ ಮೋದಿ.

ಕನಕಪುರ ರಸ್ತೆ ಸಂಚರಿಸುವವರಿಗೆ ಪರ್ಯಾಯ ಮಾರ್ಗ

ಬೆಂಗಳೂರಿನಿಂದ ಕನಕಪುರದ ಕಡೆಗೆ ಸಂಚರಿಸುವ ವಾಹನಗಳು ಬೆಂಗಳೂರು-ಕೆಂಗೇರಿ-ಬಿಡದಿ-ರಾಮನಗರ ಮೂಲಕ ಕನಕಪುರ ತಲುಪಲು ಸೂಚಿಸಲಾಗಿದೆ. ಅದೇ ರೀತಿ ಕನಕಪುರದಿಂದ ಬೆಂಗಳೂರಿಗೆ ಬರುವ ವಾಹನಗಳು ಕನಕಪುರ-ಹಾರೋಹಳ್ಳಿ-ಕಗ್ಗಲಿಪುರ ರಸ್ತೆ-ಬನ್ನೇರುಘಟ್ಟ ಮಾರ್ಗವಾಗಿ ನಗರ ಪ್ರವೇಶಿಸಬೇಕಿದೆ.

ನೈಸ್ ರಸ್ತೆಯಲ್ಲೂ ಸಂಚಾರ ನಿರ್ಬಂಧ

ನೈಸ್ ರಸ್ತೆಯಲ್ಲೂ ಬೆಳಗ್ಗೆ 9 ರಿಂದ ಮಧ್ಯಾಹ್ನ 3 ರವರೆಗೆ ಸಂಚಾರ ನಿರ್ಬಂಧವಿರಲಿದ್ದು, ತುಮಕೂರು ರಸ್ತೆಯಿಂದ ಕನಕಪುರ ಕಡೆ ಹೋಗುವವರು ಸಿಎಂಟಿಐ ಜಂಕ್ಷನ್ ಬಳಿ ಬಲ ತಿರುವು ಪಡೆದು ಡಾ. ರಾಜ್‌ಕುಮಾರ್ ಪುಣ್ಯಭೂಮಿ ರಸ್ತೆ ಮೂಲಕ ಸಂಚರಿಸಬೇಕು.

ಆರ್ಟ್ ಆಫ್ ಲಿವಿಂಗ್‌ನಲ್ಲಿ ಮೋದಿ ಕಾರ್ಯಕ್ರಮ

ಬೆಳಗ್ಗೆ 11 ಗಂಟೆಗೆ ಹೆಚ್‌ಎಎಲ್‌ನಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಊದಿಪಾಳ್ಯ ಗ್ರಾಮದ ಬಳಿ ಇರುವ ಆಶ್ರಮಕ್ಕೆ ಮೋದಿ ಆಗಮಿಸಲಿದ್ದಾರೆ. ಆಶ್ರಮದ 45ನೇ ವರ್ಷಾಚರಣೆ ಮತ್ತು ಗುರೂಜಿಯವರ ಜನ್ಮದಿನದ ಸವಿನೆನಪಿಗಾಗಿ ನಿರ್ಮಿಸಲಾದ ಭವ್ಯ ಹೊಸ ಧ್ಯಾನ ಮಂದಿರವನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12.30ರ ವರೆಗೆ ಆಶ್ರಮದಲ್ಲಿ ವಿವಿಧ ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗೆ ಪ್ರಧಾನಿ ಭೇಟಿ ಹಿನ್ನೆಲೆ ಮೇ 10ರಂದು ಸಂಚಾರ ಮಾರ್ಗಗಳಲ್ಲಿ ಕೆಲ ಬದಲಾವಣೆ: ಮಾಹಿತಿ ಇಲ್ಲಿದೆ

ಪ್ರಧಾನಿ ಆಗಮನದ ಹಿನ್ನೆಲೆ ಹೆಚ್‌ಎಎಲ್ ಗೇಟ್ ನಂ. 30ರ ರಸ್ತೆಯಲ್ಲಿ ಅಂಬ್ರೆಲಾ ಜಂಕ್ಷನ್‌ನಿಂದ ಗೇಟ್ ನಂ. 30ರ ವರೆಗೆ ಮತ್ತು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಸಂಚಾರ ಹಾಗೂ ಪಾರ್ಕಿಂಗ್ ಅನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಸರ್ ಎಸ್.ಎಂ.ವಿ ಕಾಲೇಜು ಮೈದಾನ ಹಾಗೂ ಹೆಚ್‌ಎಎಲ್ ಬಸ್ ಯಾರ್ಡ್‌ನಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:48 am, Sun, 10 May 26

Follow Us
ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ
ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ