ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಟರ್ಮಿನಲ್ 2 ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ನ ಮೊದಲ ಹಂತವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಗ್ಗೆ ಉದ್ಘಾಟಿಸಿದ್ದು, ಈ ಟರ್ಮಿನಲ್ 2 ಉದ್ಯಾನನಗರಿಯ ಕೀರ್ತಿಗೆ ಮತ್ತೊಂದು ಸೇರ್ಪಡೆಯಾಗಿದೆ.
ಸುಮಾರು 13,000 ಕೋಟಿ ರೂಪಾಯಿ ಹೂಡಿಕೆಯಲ್ಲಿ ಸಿದ್ಧವಾಗಿರುವ ಈ ಟರ್ಮಿನಲ್ 2 ಉದ್ಯಾನ ನಗರಿ ಖ್ಯಾತಿಗೆ ಮತ್ತೊಂದು ಗರಿಯಾಗಿದೆ.
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ಟರ್ಮಿನಲ್ 2, ಎರಡನೇ ರನ್ ವೇ, ಮಲ್ಟಿಮೋಡಲ್ ಸಾರಿಗೆ ಕೇಂದ್ರ, ಪ್ರವೇಶ ರಸ್ತೆಗಳ ವಿಸ್ತರಣೆ ಮತ್ತು ಆಂತರಿಕ ರಸ್ತೆ ಮೂಲಸೌಕರ್ಯಗಳು ಪ್ರಯಾಣಿಕರಿಗೆ ಲಭ್ಯವಾಗಲಿವೆ. ಈ ಟರ್ಮಿನಲ್ 2 ವನ್ನು ಗಾರ್ಡನ್ ಟರ್ಮಿನಲ್ ಎಂದು ಕರೆಯಲಾಗುತ್ತದೆ.
ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2 ಸುಮಾರು 5-6 ಕೋಟಿ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿದೆ. ಬೆಂಗಳೂರು ವಿಮಾನ ನಿಲ್ದಾಣವನ್ನು ಕ್ಯಾಂಪಸ್‌ನಾದ್ಯಂತ ನವೀಕರಿಸಬಹುದಾದ ಶಕ್ತಿಯನ್ನು ಬಳಸಿಕೊಂಡು ಶೇ. 100ಸುಸ್ಥಿರತೆಯೊಂದಿಗೆ ರಚಿಸಲಾಗಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ 108 ಅಡಿ ಎತ್ತರದ ಬೆಂಗಳೂರು ನಗರ ಸ್ಥಾಪಕ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಇಂದು ಅನಾವರಣಗೊಳ್ಳಲಿದೆ.
Published On - 11:17 am, Fri, 11 November 22