AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಂದ ಕನ್ಯಾಕುಮಾರಿಗೆ 702 ಕಿ.ಮೀ ಸೈಕಲ್ ತುಳಿದ ಶಾಸಕ ಸುರೇಶ್ ಕುಮಾರ್; ಮೋದಿಯಿಂದ ಭಾರೀ ಮೆಚ್ಚುಗೆ

51 ವರ್ಷಗಳ ನಂತರ ಮತ್ತೊಮ್ಮೆ ಕನ್ಯಾಕುಮಾರಿಯ ವಿವೇಕಾನಂದ ಶಿಲಾ ಸ್ಮಾರಕಕ್ಕೆ ತಮ್ಮ ಸ್ನೇಹಿತರ ಜೊತೆ ಸೈಕಲ್ ಸವಾರಿ ಮಾಡಿದ್ದ ಬೆಂಗಳೂರಿನ ಬಿಜೆಪಿ ಶಾಸಕ ಸುರೇಶ್ ಕುಮಾರ್ 702 ಕಿ.ಮೀ ಸೈಕಲ್​ನಲ್ಲೇ ಪ್ರಯಾಣಿಸಿದ್ದರು. ಅಷ್ಟೇ ಅಲ್ಲದೆ, 2025ರಲ್ಲಿ ಅವರು ಒಟ್ಟು 8,000 ಕಿ.ಮೀ. ಸೈಕಲ್ ಸವಾರಿ ಮಾಡಿದ್ದರು. ಅವರ ಈ ಸಾಧನೆಗೆ ಮತ್ತು ಸೈಕ್ಲಿಂಗ್ ಕುರಿತಾದ ಪ್ರೀತಿಗೆ ಪ್ರಧಾನಿ ನರೇಂದ್ರ ಮೋದಿಯವರೇ ಕರೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿಂದ ಕನ್ಯಾಕುಮಾರಿಗೆ 702 ಕಿ.ಮೀ ಸೈಕಲ್ ತುಳಿದ ಶಾಸಕ ಸುರೇಶ್ ಕುಮಾರ್; ಮೋದಿಯಿಂದ ಭಾರೀ ಮೆಚ್ಚುಗೆ
Suresh Kumar Cycling
ಸುಷ್ಮಾ ಚಕ್ರೆ
|

Updated on:Jan 01, 2026 | 10:49 PM

Share

ಬೆಂಗಳೂರು, ಜನವರಿ 1: ಬೆಂಗಳೂರಿನಿಂದ ಕನ್ಯಾಕುಮಾರಿಯವರೆಗೆ 702 ಕಿ.ಮೀ ಸೈಕಲ್ ಸವಾರಿ ಮಾಡಿದ ಬಿಜೆಪಿ ಶಾಸಕ ಸುರೇಶ್ ಕುಮಾರ್ (Suresh Kumar) ಅವರನ್ನು ಪ್ರಧಾನಿ ಮೋದಿ (PM Modi) ಶ್ಲಾಘಿಸಿದ್ದಾರೆ. “ಬೆಂಗಳೂರಿನಿಂದ ಕನ್ಯಾಕುಮಾರಿಯವರೆಗೆ ಸೈಕಲ್ ಸವಾರಿ ಕೈಗೊಂಡ ಎಸ್. ಸುರೇಶ್ ಕುಮಾರ್ ಅವರ ಸಾಧನೆ ಶ್ಲಾಘನೀಯ ಮತ್ತು ಸ್ಫೂರ್ತಿದಾಯಕವಾಗಿದೆ. ಆರೋಗ್ಯದ ಸಮಸ್ಯೆಗಳನ್ನು ಮೆಟ್ಟಿ ನಿಂತು ಅವರು ಈ ಸಾಧನೆ ಮಾಡಿರುವುದು ಅವರ ದೃಢ ನಿರ್ಧಾರ ಮತ್ತು ಅಚಲ ಮನೋಭಾವವನ್ನು ಎತ್ತಿ ತೋರಿಸುತ್ತದೆ. ಇದು ಫಿಟ್ನೆಸ್ ಕುರಿತು ಪ್ರಮುಖ ಸಂದೇಶವನ್ನೂ ನೀಡುತ್ತದೆ. ಅವರೊಂದಿಗೆ ಮಾತನಾಡಿ, ಅವರ ಈ ಪ್ರಯತ್ನಕ್ಕೆ ಅಭಿನಂದನೆ ಸಲ್ಲಿಸಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ್ದಾರೆ.

70 ವರ್ಷದ ರಾಜಾಜಿನಗರದ ಶಾಸಕ ಸುರೇಶ್ ಕುಮಾರ್ ಇತ್ತೀಚೆಗೆ ತಿಂಗಳುಗಟ್ಟಲೆ ಅನಾರೋಗ್ಯಕ್ಕೆ ಒಳಗಾಗಿದ್ದರು. ಅಪರೂಪದ ನರವೈಜ್ಞಾನಿಕ ಕಾಯಿಲೆಯಿಂದ ಚೇತರಿಸಿಕೊಂಡಿದ್ದ ಅವರು ವಿಶ್ರಾಂತಿಯಲ್ಲಿದ್ದರು. ಆದರೂ 5 ದಿನಗಳ ಕಾಲ ಈ ಸವಾಲಿನ 702 ಕಿ.ಮೀ ಪ್ರಯಾಣವನ್ನು ಸೈಕಲ್​ನಲ್ಲೇ ಪೂರ್ಣಗೊಳಿಸಿದ್ದಾರೆ.

ಇದನ್ನೂ ಓದಿ: New Year 2026: ಹೊಸ ವರ್ಷದ ಶುಭಾಶಯ ತಿಳಿಸಿ, ಶಾಂತಿ, ಆರೋಗ್ಯ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಿದ ಪ್ರಧಾನಿ ಮೋದಿ

ರಾಜಾಜಿನಗರದ ಬಿಜೆಪಿ ಶಾಸಕ ಸುರೇಶ್ ಕುಮಾರ್, ಪ್ರಧಾನಿ ಮೋದಿಯವರೇ ಕರೆ ಮಾಡಿ ಅಭಿನಂದಿಸಿದ್ದಕ್ಕೆ ತಮ್ಮ ಸಂತೋಷ ವ್ಯಕ್ತಪಡಿಸಿದ್ದಾರೆ. “ಗಂಭೀರ ಅನಾರೋಗ್ಯದಿಂದ ಬಳಲುತ್ತಿದ್ದ ನಾನು 51 ವರ್ಷಗಳ ನಂತರ ನನ್ನ ಸೈಕ್ಲಿಂಗ್ ಸ್ನೇಹಿತರೊಂದಿಗೆ ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಪ್ರಯಾಣ ಮಾಡಿದ್ದೇನೆ. ಕನ್ಯಾಕುಮಾರಿಗೆ ಇದು ನನ್ನ ಎರಡನೇ ಸೈಕ್ಲಿಂಗ್ ಎಂದು ತಿಳಿದು ಪ್ರಧಾನಿ ಮೋದಿ ಸಂತೋಷಪಟ್ಟರು. 2025ರಲ್ಲಿ ನಮ್ಮ ತಂಡ 8,000 ಕಿ.ಮೀ ದೂರದಷ್ಟು ಸೈಕ್ಲಿಂಗ್ ಮಾಡಿರುವ ಮಾಹಿತಿ ಪಡೆದು ತಮ್ಮ ಅಚ್ಚರಿ ಮತ್ತು ಸಂತಸ ಎರಡನ್ನೂ ವ್ಯಕ್ತಪಡಿಸಿದರು. ಅದರಲ್ಲೂ ತೀವ್ರ ಅನಾರೋಗ್ಯದ ನಂತರ ನಾನು ಈ ಕಾರ್ಯ ಕೈಗೊಂಡ ಬಗ್ಗೆ ಪ್ರಧಾನ ಮಂತ್ರಿಗಳು ನನ್ನ ಬೆನ್ನು ತಟ್ಟಿದ್ದು ನನ್ನ ಸುಕೃತ” ಎಂದು ಸುರೇಶ್ ಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ.

ಮಾಜಿ ಸಚಿವರೂ ಆಗಿರುವ ಸುರೇಶ್ ಕುಮಾರ್ ಅವರು “ರಾಜಾಜಿನಗರ ಪೆಡಲ್ ಪವರ್’ ಬ್ಯಾನರ್ ಅಡಿಯಲ್ಲಿ ಯುವಕರೊಂದಿಗೆ 5 ದಿನಗಳ, 702 ಕಿಮೀ ಸೈಕಲ್ ಸವಾರಿಯನ್ನು ಮಾಡಿದ್ದಾರೆ.

ಬೆಂಗಳೂರಿನ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:47 pm, Thu, 1 January 26

Follow Us
ಸದ್ಯ ವಯನಾಡಲ್ಲಿ ಹೇಗಿದೆ ಸ್ಥಿತಿ?
ಸದ್ಯ ವಯನಾಡಲ್ಲಿ ಹೇಗಿದೆ ಸ್ಥಿತಿ?
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ