AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಬೆಂಗಳೂರು ಏರ್ಪೋಟ್ ಬಳಿ ಮೋದಿ ಸಮಾವೇಶ: 2 ಲಕ್ಷಕ್ಕೂ ಅಧಿಕ‌ ಜನರಿಗೆ ಭರ್ಜರಿ ತಿಂಡಿ, ಊಟ ತಯಾರಿ, ಇಲ್ಲಿದೆ ಮೆನು

ನಾಳೆ ಏರ್ಪೋಟ್ ಬಳಿ ಕೆಂಪೇಗೌಡರ ಪ್ರತಿಮೆ ಅನಾವರಣಗೊಳ್ಳಲಿದ್ದು, ಈ ಹಿನ್ನೆಲೆ ಸಮಾವೇಶಕ್ಕೆ ಬರುವ 2 ಲಕ್ಷಕ್ಕೂ ಅಧಿಕ‌ ಜನರಿಗೆ ಅಡುಗೆ ತಯಾರಿ ಮಾಡಲಾಗುತ್ತಿದೆ.

ನಾಳೆ ಬೆಂಗಳೂರು ಏರ್ಪೋಟ್ ಬಳಿ ಮೋದಿ ಸಮಾವೇಶ: 2 ಲಕ್ಷಕ್ಕೂ ಅಧಿಕ‌ ಜನರಿಗೆ ಭರ್ಜರಿ ತಿಂಡಿ, ಊಟ ತಯಾರಿ, ಇಲ್ಲಿದೆ ಮೆನು
ಸಮಾವೇಶಕ್ಕೆ ಬರುವ ಜನರಿಗೆ ಅಡುಗೆ ತಯಾರಿ.
TV9 Web
| Edited By: |

Updated on:Nov 10, 2022 | 7:15 PM

Share

ಬೆಂಗಳೂರು: ಬೆಂಗಳೂರು ನಿರ್ಮಾತೃ ಕೆಂಪೇಗೌಡರ (Kempe Gowda) 108 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣಗೊಳಿಸಲು ನವೆಂಬರ್ 11ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ನಾಳೆ ಏರ್ಪೋಟ್ ಬಳಿ ಸಮಾವೇಶ ನಡೆಯಲಿದೆ. ಈ ಹಿನ್ನೆಲೆ ಸಮಾವೇಶಕ್ಕೆ ಬರುವ 2 ಲಕ್ಷಕ್ಕೂ ಅಧಿಕ‌ ಜನರಿಗೆ ಅಡುಗೆ ತಯಾರಿ ಮಾಡಲಾಗುತ್ತಿದೆ. 700 ಕ್ಕೂ ಅಧಿಕ ಬಾಣಸಿಗರಿಂದ ಬೆಳಗ್ಗೆ ತಿಂಡಿ ಮತ್ತು ಮಧ್ಯಾಹ್ನ ಊಟಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ತಿಂಡಿಗೆ ಟಮೋಟ ಬಾತ್, ಮೈಸೂರು ಪಾಕ್ ಇರಲಿದೆ. ಮಧ್ಯಾಹ್ನದ ಊಟಕ್ಕೆ ಪಲಾವ್, ಮೊಸರು ಬಜ್ಜಿ, ಮೊಸರನ್ನ ಮತ್ತು ಅಕ್ಕಿ ಪಾಯಸ ತಯಾರಿಸಲಾಗುತ್ತಿದೆ. ಎಸ್ಜಿಎಸ್ ಕ್ಯಾಟರಿಂಗ್ಸ್ ಮತ್ತು ಅನ್ನಪೂರ್ಣೇಶ್ವರಿ ಕ್ಯಾಟರಿಂಗ್ಸ್ ವತಿಯಿಂದ ಅಡುಗೆ ತಯಾರಿ ಮಾಡಲಾಗುತ್ತಿದೆ. ಊಟ ತಿಂಡಿ ಬಡಿಸಲು 150 ಕೌಂಟರ್ಗಳ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 08 ಗಂಟೆಯಿಂದ ತಿಂಡಿ ವ್ಯವಸ್ಥೆಯಿರಲಿದೆ. ಈಗಾಗಲೆ ಏರ್ಪೋಟ್ ಸಮಾವೇಶದ ಬಳಿ ಅಡುಗೆ ತಯಾರಿಯಲ್ಲಿ ಬಾಣಸಿಗರು ನಿರತರಾಗಿದ್ದಾರೆ.

ನಗರದ ಈ ರಸ್ತೆಗಳು ಬಂದ್, ಬದಲಿ ಮಾರ್ಗ ಬಳಸಿ

ಇನ್ನೂ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಭೇಟಿ ನೀಡುತ್ತಿರುವ ಹಿನ್ನೆಲೆ ಸಂಚಾರ ಹಾಗೂ ಭದ್ರತಾ ದೃಷ್ಟಿಯಿಂದ ಬೆಳಿಗ್ಗೆ 8 ರಿಂದ ಮದ್ಯಾಹ್ನ 2 ರವರೆಗೆ ಕೆಳಕಂಡ ರಸ್ತೆಗಳಲ್ಲಿ ಸಾರ್ವಜನಿಕ ಸಂಚಾರಕ್ಕೆ ಬಂದ್ ಇರಲಿದೆ ಎಂದು ಮೂಲಗಳು ತಿಳಿಸಿವೆ.

ಬಂದ್​​ ಇರುವ ರಸ್ತೆಗಳು:

  1. ಸಿಟಿಓ ಜಂಕ್ಷನ್, ಪೊಲೀಸ್ ತಿಮ್ಮಯ್ಯ ಜಂಕ್ಷನ್, ರಾಜಭವನ ರಸ್ತೆ, ಬಸವೇಶ್ವರ ಸರ್ಕಲ್​ಪ್ಯಾಲೇಸ್ ರಸ್ತೆ, ರೇಸ್ ಕೋರ್ಸ್ ರಸ್ತೆ, ಸ್ಯಾಂಕಿ ರಸ್ತೆ, ಕ್ವೀನ್ಸ್ ರಸ್ತೆ, ಬಳ್ಳಾರಿ ರಸ್ತೆ ಮತ್ತು ಏರ್ ಪೋರ್ಟ್ ಎಲಿವೇಟೆಡ್ ಕಾರಿಡಾರ್ ರಸ್ತೆ ಬಂದ್​ ಇರಲಿದೆ.
  2. ಶೇಷಾದ್ರಿ ರಸ್ತೆಯಲ್ಲಿ – ಮಹಾರಾಣಿ ಬ್ರಿಡ್ಜ್ ನಿಂದ – ರೈಲ್ವೆ ಸ್ಟೇಷನ್ ಪ್ರವೇಶ ದ್ವಾರದವರೆಗೆ ಬಂದ್​
  3. ಕೆ.ಜಿ ರಸ್ತೆಯಲ್ಲಿ – ಶಾಂತಲಾ ಜಂಕ್ಷನ್​​ನಿಂದ ಮೈಸೂರು ಬ್ಯಾಂಕ್‌ ಸರ್ಕಲ್ ವರೆಗೆ ಬಂದ್​
  4. ವಾಟಾಳ್ ನಾಗರಾಜ್ ರಸ್ತೆಯಲ್ಲಿ – ಕೋಡೆ ಅಂಡರ್ ಪಾಸ್​​ನಿಂದ ಪಿ.ಎಫ್ ವರೆಗೆ ಬಂದ್​
  5. ಇಂಟರ್‌ನ್ಯಾಷನಲ್ ಏ‌ಪೋರ್ಟ್‌ನ ಸುತ್ತ ಮತ್ತಲಿನ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಬಂದ್​

ಪರ್ಯಾಯ ಮಾರ್ಗಗಳು:

  1. ಮೈಸೂರು ಬ್ಯಾಂಕ್‌ ವೃತ್ತದಿಂದ ಪ್ಯಾಲೇಸ್ ರಸ್ತೆಗೆ ಬರುವ ವಾಹನ ಸವಾರರು ಕೆ.ಜಿ. ರಸ್ತೆಯ ಮೂಲಕ ಎಲ್‌.ಆರ್‌.ಡಿ.ಇ ವೃತ್ತದಿಂದ ಬಸವೇಶ್ವರ ವೃತ್ತದ ಕಡೆಗೆ ಸಂಚರಿಸುವವರು ರಾಜಭವನ ರಸ್ತೆ ಮೂಲಕ ಸಾಗಬೇಕು.
  2. ಟ್ರಿಲೈಟ್ ಜಂಕ್ಷನ್​ನಿಂದ ಮೌರ್ಯ ಜಂಕ್ಷನ್ ಮೂಲಕ ಬರುವವರು ರೇಸ್‌ ವ್ಯೂವ್ ಸರ್ಕಲ್‌ನಲ್ಲಿ – ಶಿವಾನಂದ ಸರ್ಕಲ್‌ನಲ್ಲಿ ಎಡತಿರುವು ಪಡೆದು ನೆಹರು ಸರ್ಕಲ್ ಮೂಲಕ ಸಾಗಬಹುದಾಗಿದೆ.
  3. ಕೆಕೆ ರಸ್ತೆ ಮೂಲಕ ವಿಂಡ್ಸ್‌ ಮ್ಯಾನರ್ ವೃತ್ತಕ್ಕೆ ತೆರಳುವ ವಾಹನ ಸವಾರರು ಶಿವಾನಂದ ಸರ್ಕಲ್‌ನಲ್ಲಿ-ನೆಹರು ಸರ್ಕಲ್‌ ಮೂಲಕ ಹೋಗಬಹುದಾಗಿದೆ.
  4. ಬಿಹೆಚ್‌ ಇಎಲ್ ಸರ್ಕಲ್‌ನಿಂದ ಮೇಕ್ರಿ ಸರ್ಕಲ್ ಕಡೆಗೆ ಬರುವ ವಾಹನ ಸವಾರರು ಸದಾಶಿವನಗರ ಪೊಲೀಸ್ ಠಾಣೆ – ಮಾರಮ್ಮ ಸರ್ಕಲ್ – ಮಾರ್ಗೋಸ ರಸ್ತೆ ಮೂಲಕ‌ ಸಂಚರಿಸಬಹುದು
  5. ಭಾಷ್ಯಂ ಸರ್ಕಲ್‌ನಿಂದ ಕಾವೇರಿ ಜಂಕ್ಷನ್ ಕಡೆಗೆ ಬರುವ ವಾಹನ ಸವಾರರು ಮಲ್ಲೇಶ್ವರಂ 18ನೇ ಕ್ರಾಸ್ – ಮಾರ್ಗೋಸ ರಸ್ತೆಯ ಮೂಲಕ ಹೋಗಬಹುದು.
  6. ಕ್ವೀನ್ಸ್ ವೃತ್ತದಿಂದ ಸಿ.ಟಿ.ಓ, ಕಡೆಗೆ ಬರುವ ವಾಹನ ಸವಾರರು ಸಿದ್ದಲಿಂಗಯ್ಯ ವೃತ್ತ – ಆರ್.ಆರ್.ಎಂ.ಆರ್. ರಸ್ತೆಯ ಮೂಲಕ ಸಾಗಬಹುದು.
  7. ಬಾಳೇಕುಂದ್ರಿ ಜಂಕ್ಷನ್‌ನಿಂದ ಮೆಜೆಸ್ಟಿಕ್ ಕಡೆಗೆ ಸಂಚರಿಸುವ ವಾಹನಗಳು ಕನ್ನಿಂಗ್ ಹ್ಯಾಂ ರಸ್ತೆ ಮೂಲಕ ಸಂಚರಿಸಲು‌ ಅವಕಾಶ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:15 pm, Thu, 10 November 22

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ