ಜನವರಿ 19ರಂದು ಕರ್ನಾಟಕಕ್ಕೆ ಮೋದಿ ಭೇಟಿ: ಪ್ರಧಾನಿಯ ಅಂದಿನ ವೇಳಾಪಟ್ಟಿ ಹೀಗಿದೆ

| Updated By: ವಿವೇಕ ಬಿರಾದಾರ

Updated on: Jan 17, 2024 | 10:47 AM

ವಿಧಾನಸಭೆ ಚುನಾವಣೆಯಾದ ಬಳಿಕ ಪ್ರಧಾನಿ ಮೋದಿಯವರು ಮೂರನೇ ಬಾರಿಗೆ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಹಿಂದೆ ಚಂದ್ರಯಾನ ಯೋಜನೆಯ ಯಶಸ್ಸಿನ ಬಳಿಕ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸುವುದಕ್ಕೆಂದೇ ಪ್ರಧಾನಿ ರಾಜ್ಯಕ್ಕೆ ಬಂದಿದ್ದರು. ಇದಾದ ಬಳಿಕ ಹೆಚ್​ಎಎಲ್​​ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಕರ್ನಾಟಕಕ್ಕೆ ಆಗಮಿಸಿದ್ದರು. ಇದೀಗ ಮೂರನೇ ಬಾರಿಗೆ ರಾಜ್ಯಕ್ಕೆ ಬರುತ್ತಿದ್ದಾರೆ.

ಜನವರಿ 19ರಂದು ಕರ್ನಾಟಕಕ್ಕೆ ಮೋದಿ ಭೇಟಿ: ಪ್ರಧಾನಿಯ ಅಂದಿನ ವೇಳಾಪಟ್ಟಿ ಹೀಗಿದೆ
ನರೇಂದ್ರ ಮೋದಿ
Follow us on

ಬೆಂಗಳೂರು, ಜನವರಿ 17: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಜನವರಿ 19 ರಂದು ಶುಕ್ರವಾರ ಕರ್ನಾಟಕಕ್ಕೆ (Karnataka) ಭೇಟಿ ನೀಡಲಿದ್ದಾರೆ. ಬೆಳಗ್ಗೆ 9.35ಕ್ಕೆ ದೆಹಲಿಯಿಂದ ಹೊರಟು ನೇರವಾಗಿ ಕಲಬುರಗಿಗೆ ತೆರಳಲಿದ್ದಾರೆ. ಕಲಬುರಗಿ ವಿಮಾನ ನಿಲ್ದಾಣದಿಂದ 9.40ಕ್ಕೆ ಹೆಲಿಕಾಫ್ಟರ್ ಮೂಲಕ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಹೋಗುತ್ತಾರೆ. ಬಳಿಕ ಮಧ್ಯಾಹ್ನ 12.10ಕ್ಕೆ ಹೆಲಿಕಾಫ್ಟರ್ ಮೂಲಕ ಸೊಲ್ಲಾಪುರದಿಂದ ಪುನಃ ಮಧ್ಯಾಹ್ನ 1 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬರುತ್ತಾರೆ

1.05 ಕ್ಕೆ ವಿಶೇಷ ವಿಮಾನದ ಮೂಲಕ ಕಲಬುರಗಿಯಿಂದ ಹೊರಟು ಮಧ್ಯಾಹ್ನ 2.10ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲಪುತ್ತಾರೆ. 2.15ಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣನಿಂದ ರಸ್ತೆ ಮಾರ್ಗವಾಗಿ ದೇವನಹಳ್ಳಿ ತಾಲೂಕಿನ ಭಟ್ಟರ ಮಾರನಹಳ್ಳಿಗೆ ಪ್ರಯಾಣ ಬೆಳೆಸುತ್ತಾರೆ.

2.45ಕ್ಕೆ ಭಟ್ಟರಮಾರನಹಳ್ಳಿಗೆ ತಲುಪಲಿರುವ ಪ್ರಧಾನಿ ಮೋದಿ, ಬಿಐಇಟಿಸಿ ಉದ್ಘಾಟನೆ ಮತ್ತು ಬೋಯಿಂಗ್ ಸುಕನ್ಯಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 3.45ಕ್ಕೆ ಭಟ್ಟರ ಮಾರನಹಳ್ಳಿಯಿಂದ ನಿರ್ಗಮಿಸಿ, 3.55ಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ. ಸಂಜೆ 4 ಗಂಟೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಚೆನ್ನೈಗೆ ತೆರಳಲಿದ್ದಾರೆ.

ಇನ್ನು ಪ್ರಧಾನಿ ಮೋದಿ ಆಗಮನ ಹಿನ್ನೆಲೆಯಲ್ಲಿ ಇಂದು (ಜ.17) ಎಸ್​ಪಿಜಿ ಅಧಿಕಾರಿಗಳು ಕಲಬುರಗಿ ವಿಮಾನ ನಿಲ್ದಾಣ  ​ಪರಿಶೀಲನೆ ಮಾಡಿದರು. ಎಸ್​ಪಿಜಿ ಅಧಿಕಾರಿಗಳಿಗೆ ಸ್ಥಳೀಯ ಪೊಲೀಸರು ಸಾಥ್ ನೀಡಿದ್ದಾರೆ.

ಇದನ್ನೂ ಓದಿ: ಸೈಬರ್ ಕ್ರೈಮ್ ತಡೆಗಟ್ಟಲು ಮಾಸ್ಟರ್ ಪ್ಲಾನ್ ರೂಪಿಸಿದ ಮೋದಿ ಸರ್ಕಾರ: ವಂಚಕರಿಗೆ ಟೆನ್ಶನ್

ಬೆಂಗಳೂರಿನಲ್ಲಿ ಮೋದಿ ರೋಡ್​ ಶೋ

ಎರಡು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ಮೋದಿ, ರೋಡ್​ ಶೋ ಕೂಡ ನಡೆಸುವ ಸಾಧ್ಯತೆ ಇದೆ. ಆದರೆ, ರೋಡ್​ ಶೋ ಸಂಬಂಧ ಬಿಜೆಪಿಯ ನಾಯಕರು ಅಧಿಕೃತ ಹೇಳಿಕೆ ನೀಡಿಲ್ಲ. ಪ್ರಧಾನಿಯವರು ಬೆಂಗಳೂರಿಗೆ ಭೇಟಿ ನೀಡುವ ಸಂಬಂಧ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಸೋಮವಾರ ಸಂಜೆ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ. ಪ್ರಧಾನಿ ಕಾರ್ಯಾಲಯದಿಂದ ಹೆಚ್ಚಿನ ಮಾಹಿತಿಯ ನಿರೀಕ್ಷೆಯಲ್ಲಿ ಬಿಜೆಪಿ ರಾಜ್ಯ ನಾಯಕರು ಇದ್ದಾರೆ ಎನ್ನಲಾಗಿದೆ.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:04 am, Wed, 17 January 24