AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಇಂದು ಪ್ರಧಾನಿ ಮೋದಿ ಭೇಟಿ: ಈ ಮಾರ್ಗದಲ್ಲಿ ಮೆಟ್ರೋ, ವಾಹನಗಳ ಸಂಚಾರ ನಿರ್ಬಂಧ!

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಆ ಮೂಲಕ ಸಿಲಿಕಾನ್​ ಸಿಟಿ ಜನರ ಬಹುದಿನಗಳ ಕನಸು ನನಸಾಗುತ್ತಿದೆ. ಹೀಗಾಗಿ ನಗರದ ಹಲವೆಡೆ ವಾಹನಗಳು ಸೇರಿದಂತೆ ಮೆಟ್ರೋ ಸಂಚಾರದಲ್ಲಿ ಕೂಡ ಕೆಲ ಬದಲಾವಣೆಗಳನ್ನು ಮಾಡಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರಿಗೆ ಇಂದು ಪ್ರಧಾನಿ ಮೋದಿ ಭೇಟಿ: ಈ ಮಾರ್ಗದಲ್ಲಿ ಮೆಟ್ರೋ, ವಾಹನಗಳ ಸಂಚಾರ ನಿರ್ಬಂಧ!
ಸಂಚಾರ ಸಲಹೆ
Shivaprasad B
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 10, 2025 | 8:04 AM

Share

ಬೆಂಗಳೂರು, ಆಗಸ್ಟ್ 10: ಬೆಂಗಳೂರಿಗರ ಬಹುದಿನಗಳ ಕನಸು ಇಂದು ನನಸಾಗುತ್ತಿದೆ. ಮೆಟ್ರೋ ಹಳದಿ (Yellow Line Metro) ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಹಸಿರು ನಿಶಾನೆ ತೋರಿಸಲಿದ್ದಾರೆ. ಪ್ರಧಾನಿ ಮೋದಿ ಭೇಟಿ ಹಿನ್ನಲೆ  ನಗರದ ಹಲವೆಡೆ ಸಂಚಾರ ಬದಲಾವಣೆ ಮಾಡಲಾಗಿದ್ದು, ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ. ಸದ್ಯ ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 2:30ರವರೆಗೆ ನೈಸ್ ರಸ್ತೆ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಸಂಚಾರ ನಿರ್ಬಂಧ

  • ಬನ್ನೇರುಘಟ್ಟ ರಸ್ತೆ ನೈಸ್ ಟೋಲ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್‌ವರೆಗೆ
  • ಕನಕಪುರ ರಸ್ತೆ ನೈಸ್ ಟೋಲ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
  • ನಾಯಂಡಹಳ್ಳಿ ನೈಸ್​​​ ಟೋಲ್ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
  • ಸೋಂಪುರ ನೈಸ್ ಟೋಲ್​​ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
  • ಪಿಇಎಸ್ ಕಾಲೇಜು ನೈಸ್ ಟೋಲ್​ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
  • ಕೆಂಗೇರಿ ನೈಸ್ ಟೋಲ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
  • ಮಾಗಡಿ ರಸ್ತೆ ನೈಸ್ ಟೋಲ್​ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
  • ಮಾಧವರ ರಸ್ತೆ ನೈಸ್ ಟೋಲ್​ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
  • ಪಾರ್ಲೆ ಬಿಸ್ಕಟ್ಸ್ ಫ್ಯಾಕ್ಟರಿ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ

ಪರ್ಯಾಯ ಮಾರ್ಗಗಳು

ನೆಲಮಂಗಲ ನೈಸ್ ಟೋಲ್-ಮಾಗಡಿ ರಸ್ತೆ ನೈಸ್ ಟೋಲ್-ಕೆಂಗೇರಿ ನೈಸ್ ಟೋಲ್-ಕನಕಪುರ ಟೋಲ್ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಸಂಚರಿಸುವ ವಾಹನಗಳನ್ನು ಬನ್ನೇರುಘಟ್ಟ ರಸ್ತೆ ನೈಸ್ ಟೋಲ್‌ನಲ್ಲಿ ತಡೆದು, ಬನ್ನೇರುಘಟ್ಟ ರಸ್ತೆಗೆ ವಾಹನಗಳನ್ನು ಡೈವರ್ಶನ್ ಮಾಡುತ್ತಿದ್ದು, ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಚಲಿಸುವ ವಾಹನಗಳು ಪ್ರಮುಖವಾಗಿ ಬನ್ನೇರುಘಟ್ಟ ರಸ್ತೆ ಮಾರ್ಗವಾಗಿ-ನೈಸ್ ರಸ್ತೆ ಜಂಕ್ಷನ್-ಶೇರ್‌ವುಡ್ ಜಂಕ್ಷನ್-ಕೋಳಿಫಾರಂಗೇಟ್ ಜಂಕ್ಷನ್-ಬನ್ನೇರುಘಟ್ಟ ಗಾಮ-ಜಿಗಣಿ ಮಾರ್ಗವಾಗಿ ಹೊಸೂರು ರಸ್ತೆ/ಎಲೆಕ್ಟ್ರಾನಿಕ್ ಸಿಟಿ ಕಡೆಗೆ ತಲುಪಬಹುದಾಗಿದೆ.

ಇದನ್ನೂ ಓದಿ
Image
ಬೆಂಗಳೂರಿಗೆ ಭೇಟಿ ಬಗ್ಗೆ ಕನ್ನಡದಲ್ಲೇ ಪ್ರಧಾನಿ ಮೋದಿ ಟ್ವೀಟ್
Image
ನಾಳೆ ನಮ್ಮ ಮೆಟ್ರೋ ಹಳದಿ ಮಾರ್ಗ​ ಉದ್ಘಾಟಿಸುವ ಪ್ರಧಾನಿ ಮೋದಿ
Image
4 ಗಂಟೆಯಲ್ಲಿ 3 ಕಾರ್ಯಕ್ರಮ: ಪ್ರಧಾನಿ ಮೋದಿ ಬೆಂಗಳೂರು ಭೇಟಿ ವೇಳಾಪಟ್ಟಿ
Image
ನಾಳೆ ಯೆಲ್ಲೋ ಮೆಟ್ರೋ ಮಾರ್ಗ ಉದ್ಘಾಟನೆ: ಭಾನುವಾರ ಈ ರಸ್ತೆಗಳು ಬಂದ್

ಬೆಂಗಳೂರು ಸಂಚಾರ ಪೊಲೀಸ್​ ಟ್ವೀಟ್​

ದಾಬಸ್‌ಪೇಟೆ ಬಳಿ ಎಡ ತಿರುವು ಪಡೆದು-ದೊಡ್ಡಬಳ್ಳಾಪುರ-ದೇವನಹಳ್ಳಿ-ಸೂಲಿಬೆಲೆ-ಹೊಸಕೋಟೆ-ಮಾರ್ಗವಾ ಚಲಿಸಿ-ಚಂದಾಪುರ-ಅತ್ತಿಬೆಲೆ-ಹೊಸೂರು ರಸ್ತೆ ತಲುಪಬಹುದಾಗಿದೆ.

ಈ ಮಾರ್ಗದ ಮೆಟ್ರೋ ತಾತ್ಕಾಲಿಕ ಬಂದ್

ಇನ್ನು ಬಿಎಂಆರ್​​ಸಿಎಲ್​​ನಿಂದ ಕೂಡ ಮಾಧ್ಯಮ ‌ಪ್ರಕಟಣೆ ಹೊರಡಿಸಿದ್ದು, ಪ್ರಧಾನ ಮೋದಿ ರಸ್ತೆ ಸಂಚಾರದ ಕಾರಣದಿಂದ ಆಗಸ್ಟ್ 10 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಲಾಲ್‌ಬಾಗ್, ಸೌತ್ ಎಂಡ್ ಸರ್ಕಲ್, ಜಯನಗರ ಮತ್ತು ಆರ್.ವಿ. ರಸ್ತೆ ಮೆಟ್ರೋ ನಿಲ್ದಾಣಗಳನ್ನು ಸಾರ್ವಜನಿಕರಿಗೆ ತಾತ್ಕಾಲಿಕವಾಗಿ ಮುಚ್ಚಲಾಗುವುದು ಎಂದು ತಿಳಿಸಿದೆ.

ಬಿಎಂಆರ್​​ಸಿಎಲ್ ಟ್ವೀಟ್​

ನಮ್ಮ ಮೆಟ್ರೋ ಪ್ರಯಾಣಿಕರು ಈ ತಾತ್ಕಾಲಿಕ ಮುಚ್ಚುವಿಕೆಯನ್ನು ಗಮನಿಸಿ ಅದಕ್ಕೆ ಅನುಗುಣವಾಗಿ ತಮ್ಮ ಪ್ರಯಾಣವನ್ನು ಯೋಚಿಸಲು ಸೂಚಿಸಲಾಗಿದೆ. ಉಂಟಾದ ಅನಾನುಕೂಲತೆಗೆ ಬಿಎಂಆರ್​​ಸಿಎಲ್ ವಿಷಾದಿಸಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೋರಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!