AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಸಲಹೆ ಬೆನ್ನಲ್ಲೇ ಬೈಕ್ ಬಿಟ್ಟು ಮೆಟ್ರೋ ಏರಿದ ಬೆಂಗಳೂರಿಗರು! ಪಿಎಂ ಕರೆಗೆ ವ್ಯಕ್ತವಾಯ್ತು ಸಕಾರಾತ್ಮಕ ಸ್ಪಂದನೆ

ಇಂಧನ ಉಳಿತಾಯಕ್ಕಾಗಿ ಸಾರ್ವಜನಿಕ ಸಾರಿಗೆ ಬಳಸುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿದ ಕರೆಗೆ ಬೆಂಗಳೂರಿಗರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮೆಟ್ರೋ ಮತ್ತು ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಈ ಬಗ್ಗೆ ‘ಟಿವಿ9’ ಗ್ರೌಂಡ್​ ರಿಪೋರ್ಟ್​​ಗೆ ಮುಂದಾದಾಗ ಮೆಟ್ರೋದಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿರುವುದು ಕಂಡುಬಂದಿದೆ. ಮೋದಿ ಕರೆಗೆ ಪ್ರಯಾಣಿಕರು ಏನು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂಬುದು ಇಲ್ಲಿದೆ.

ಮೋದಿ ಸಲಹೆ ಬೆನ್ನಲ್ಲೇ ಬೈಕ್ ಬಿಟ್ಟು ಮೆಟ್ರೋ ಏರಿದ ಬೆಂಗಳೂರಿಗರು! ಪಿಎಂ ಕರೆಗೆ ವ್ಯಕ್ತವಾಯ್ತು ಸಕಾರಾತ್ಮಕ ಸ್ಪಂದನೆ
ಮೋದಿ ಸಲಹೆ ಬೆನ್ನಲ್ಲೇ ಬೈಕ್ ಬಿಟ್ಟು ಮೆಟ್ರೋ ಏರಿದ ಬೆಂಗಳೂರಿಗರು! (ಸಾಂದರ್ಭಿಕ ಚಿತ್ರ)Image Credit source: tv9
ಕಿರಣ್​ ಸೂರ್ಯ
| Edited By: |

Updated on: May 13, 2026 | 7:57 AM

Share

ಬೆಂಗಳೂರು, ಮೇ 13: ಪ್ರಧಾನಿ ನರೇಂದ್ರ ಮೋದಿ (Narendra Modi) ಇಂಧನ ಉಳಿತಾಯ ಮತ್ತು ಸಾರ್ವಜನಿಕ ಸಾರಿಗೆ ಬಳಕೆಯ ಬಗ್ಗೆ ನೀಡಿದ ಕರೆಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಅಂತಾರಾಷ್ಟ್ರೀಯ ಮಟ್ಟದ ಕಚ್ಚಾ ತೈಲ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮೆಟ್ರೋ (Namma Metro) ಮತ್ತು ಬಸ್‌ಗಳ ಬಳಕೆಗೆ ಪ್ರಧಾನಿ ನೀಡಿದ ಸಲಹೆಯನ್ನು ಬೆಂಗಳೂರಿಗರು ಪಾಸಿಟಿವ್ ಆಗಿ ಸ್ವೀಕರಿಸಿದ್ದಾರೆ.

ಮುಖ್ಯಾಂಶಗಳು

  • ಪ್ರಧಾನಿ ಮೋದಿ ಕರೆಯ ಬೆನ್ನಲ್ಲೇ ಬೈಕ್ ಬಿಟ್ಟು ಮೆಟ್ರೋ ಮತ್ತು ಬಿಎಂಟಿಸಿ ಬಸ್‌ಗಳತ್ತ ಮುಖ ಮಾಡಿದ ಬೆಂಗಳೂರಿಗರು.
  • ಇಂಧನ ಉಳಿತಾಯ ಮತ್ತು ದೇಶದ ಆರ್ಥಿಕ ಹಿತದೃಷ್ಟಿಯಿಂದ ಸಾರ್ವಜನಿಕ ಸಾರಿಗೆ ಬಳಕೆಗೆ ಪ್ರಯಾಣಿಕರ ಬೆಂಬಲ.
  • ಕೈಗಾರಿಕೆಗಳಿಂದ ಚಿಲ್ಲರೆ ಬಂಕ್‌ಗಳಲ್ಲಿ ಡೀಸೆಲ್ ಖರೀದಿ ಹೆಚ್ಚಳ; ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಷನ್‌ನಿಂದ ಪ್ರಧಾನಿಗೆ ದೂರು.

ಸಾರ್ವಜನಿಕ ಸಾರಿಗೆಗೆ ಹೆಚ್ಚಿದ ಜನಮನ್ನಣೆ

ಹೈದರಾಬಾದ್‌ನಲ್ಲಿ ಇತ್ತೀಚೆಗೆ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಜಾಗತಿಕ ಇಂಧನ ಬಿಕ್ಕಟ್ಟಿನ ಸಂದರ್ಭದಲ್ಲಿ ದೇಶ ಒಗ್ಗಟ್ಟಾಗಬೇಕು ಮತ್ತು ಸಾಧ್ಯವಾದಷ್ಟು ಸಾರ್ವಜನಿಕ ಸಾರಿಗೆಯನ್ನು ಬಳಸಬೇಕು ಎಂದು ವಿನಂತಿಸಿದ್ದರು. ಇದರ ಪರಿಣಾಮವಾಗಿ ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್ ನಿಲ್ದಾಣ ಮತ್ತು ಮೆಟ್ರೋ ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ‘ದೇಶದ ಹಿತದೃಷ್ಟಿಯಿಂದ ಪ್ರಧಾನಿಯವರ ಮಾತು ಸರಿಯಾಗಿದೆ. ನಾವು ಬೈಕ್ ಬಳಸುವ ಬದಲು ಮೆಟ್ರೋ ಬಳಸುವುದರಿಂದ ಹಣ ಮತ್ತು ಸಮಯ ಎರಡೂ ಉಳಿತಾಯವಾಗುತ್ತದೆ’ ಎಂದು ಅನೇಕ ಪ್ರಯಾಣಿಕರು ಅಭಿಪ್ರಾಯಪಟ್ಟಿದ್ದಾರೆ.

ಮೆಟ್ರೋ ಪ್ರಯಾಣಿಕ ಯೋಗ ನರಸಿಂಹ ಹೇಳಿದ್ದೇನು ನೋಡಿ

ಕೆಲವು ಪ್ರಯಾಣಿಕರು ತಾವು ಇಷ್ಟು ದಿನ ಕಚೇರಿಗೆ ಹೋಗಲು ಬೈಕ್ ಬಳಸುತ್ತಿದ್ದೆವು, ಆದರೆ ಈಗ ಮೆಟ್ರೋದಲ್ಲಿ ಸಂಚರಿಸಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಆಮದು ಕಡಿಮೆ ಮಾಡುವುದರಿಂದ ಭಾರತದ ಆರ್ಥಿಕತೆಗೆ ಬಲ ಸಿಗಲಿದೆ ಎಂಬ ಜಾಗೃತಿ ಜನರಲ್ಲಿ ಮೂಡುತ್ತಿದೆ.

ಡೀಸೆಲ್ ಅಭಾವ ಮತ್ತು ಮೋದಿಗೆ ದೂರು

ಇದೇ ವೇಳೆ, ದೇಶಾದ್ಯಂತ ಡೀಸೆಲ್ ಅಭಾವದ ಎಚ್ಚರಿಕೆಯನ್ನು ನೀಡಲಾಗಿದೆ. ಬಲ್ಕ್ ಸರಬರಾಜು ದರ ಮತ್ತು ಚಿಲ್ಲರೆ ಮಾರಾಟ ದರದ ನಡುವಿನ ವ್ಯತ್ಯಾಸದಿಂದಾಗಿ ದೊಡ್ಡ ಕೈಗಾರಿಕೆಗಳು ನೇರವಾಗಿ ಚಿಲ್ಲರೆ ಪೆಟ್ರೋಲ್ ಬಂಕ್‌ಗಳಿಂದ ಹೈ ಸ್ಪೀಡ್ ಡೀಸೆಲ್ (HSD) ಖರೀದಿ ಮಾಡುತ್ತಿವೆ. ಇದರಿಂದ ಚಿಲ್ಲರೆ ಬಂಕ್‌ಗಳಲ್ಲಿ ದಾಸ್ತಾನು ನಿರ್ವಹಣೆ ಕಷ್ಟವಾಗುತ್ತಿದೆ ಎಂದು ಇಂಡಿಯನ್ ಆಯಿಲ್ ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಷನ್ ಪ್ರಧಾನಿ ಮೋದಿ ಅವರಿಗೆ ದೂರು ಸಲ್ಲಿಸಿದೆ. ಕೈಗಾರಿಕೆಗಳು ನಿಗದಿತ ಬಲ್ಕ್ ಸರಬರಾಜು ಮೂಲಕವೇ ಇಂಧನ ಪಡೆಯುವಂತೆ ಕ್ರಮ ಕೈಗೊಳ್ಳಲು ಸಂಘಟನೆ ಆಗ್ರಹಿಸಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!

ಜಾಗತಿಕವಾಗಿ ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಭೀತಿ ಮತ್ತೆ ಎದುರಾಗುತ್ತಿರುವುದರಿಂದ ಇಂಧನ ಉಳಿತಾಯದ ಮುಂಜಾಗ್ರತಾ ಕ್ರಮಗಳು ಅನಿವಾರ್ಯವಾಗಿ ಪರಿಣಮಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ