AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೋದಿಯವರ ಮನ್ ಕಿ ಬಾತ್ ನಲ್ಲಿ ನಮ್ಮ ಕಾಮ್ ಕಿ ಬಾತ್ ಸದ್ದು ಮಾಡಿವೆ’: ಗೃಹ ಸಚಿವ ಪ್ರಿಯಾಂಕ್​​ ಖರ್ಗೆ

ಕಲಬುರಗಿ ತೊಗರಿಬೇಳೆ ಮತ್ತು ರೊಟ್ಟಿಗಳ ಬಗ್ಗೆ ಪ್ರಧಾನಿ ಮೋದಿ ಮನ್​​ ಕಿ ಬಾತ್​​ನಲ್ಲಿ ಪ್ರಸ್ತಾಪಿಸಿರುವುದನ್ನು ಉಲ್ಲೇಖಿಸಿ ಬಿಜೆಪಿಯವರಿಗೆ ಕರ್ನಾಟಕ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ ತಿರುಗೇಟು ನೀಡಿದ್ದಾರೆ. ಬಿಜೆಪಿಯವರ ಪ್ರಶ್ನೆಗಳಿಗೆ ನಾನು ಉತ್ತರಿಸುವುದಕ್ಕಿಂತ ಕೇಂದ್ರ ಸರ್ಕಾರ ನನ್ನ ಕೆಲಸಗಳ ಬಗ್ಗೆ ಪುರಾವೆಗಳನ್ನು ನೀಡುತ್ತಿದೆ. ಮೋದಿಯವರ ಮನ್ ಕಿ ಬಾತ್ ನಲ್ಲಿ ನಮ್ಮ ಕಾಮ್ ಕಿ ಬಾತ್ ಸದ್ದು ಮಾಡಿವೆ ಎಂದವರು ಕೌಂಟರ್​​ ಕೊಟ್ಟಿದ್ದಾರೆ.

'ಮೋದಿಯವರ ಮನ್ ಕಿ ಬಾತ್ ನಲ್ಲಿ ನಮ್ಮ ಕಾಮ್ ಕಿ ಬಾತ್ ಸದ್ದು ಮಾಡಿವೆ': ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಗೃಹ ಸಚಿವ ಪ್ರಿಯಾಂಕ್​​ ಖರ್ಗೆImage Credit source: PTI
ಸುನಿಲ್​ ಎಮ್​ ಹೆಚ್​
| Edited By: |

Updated on:Oct 26, 2026 | 12:09 PM

Share

ಬೆಂಗಳೂರು, ಅಕ್ಟೋಬರ್​​ 26: ಕಲಬುರಗಿ ಜಿಲ್ಲೆಯಲ್ಲಿನ ಅಭಿವೃದ್ಧಿ ಕಾಮಗಾರಿಗಳ ವಿಚಾರವಾಗಿ ಪದೇ ಪದೇ ಕುಟುಕತ್ತಿದ್ದ ವಿಪಕ್ಷ ಬಿಜೆಪಿ ನಾಯಕರಿಗೆ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ ತಿರುಗೇಟು ನೀಡಿದ್ದಾರೆ. ನಮ್ಮ ಸಾಧನೆಗಳನ್ನು ಮೋದಿಯವರು ಮೆಚ್ಚುತ್ತಿದ್ದಾರೆ. ಆದರೆ ಕರ್ನಾಟಕದ ಬಿಜೆಪಿಯವರು ಮೆಚ್ಚಲು ತಯಾರಿಲ್ಲ. ನನ್ನ ಸಾಧನೆಗಳನ್ನು, ಕೆಲಸಗಳನ್ನು ಪ್ರಶ್ನಿಸುವುದು ಬಿಜೆಪಿ ಸ್ನೇಹಿತರಿಗೆ ನಿತ್ಯದ ಉದ್ಯೋಗದಂತಾಗಿದೆ. ಉತ್ತರ ಸಿಕ್ಕರೂ ಮತ್ತದೇ ಪ್ರಶ್ನೆಗಳನ್ನು ಎತ್ತುವುದು ಅವರ ಹವ್ಯಾಸವಾಗಿದೆ ಎಂದವರು ಕಿಡಿ ಕಾರಿದ್ದಾರೆ.

‘ಬಿಜೆಪಿಯವರಿಗೆ ಮೋದಿಯವರ ಮನ್ ಕಿ ಬಾತ್​​ನಲ್ಲಿ ಉತ್ತರ’

ಬಿಜೆಪಿಯವರ ಪ್ರಶ್ನೆಗಳಿಗೆ ನಾನು ಉತ್ತರಿಸುವುದಕ್ಕಿಂತ ಕೇಂದ್ರ ಸರ್ಕಾರ ನನ್ನ ಕೆಲಸಗಳ ಬಗ್ಗೆ ಪುರಾವೆಗಳನ್ನು ನೀಡುತ್ತಿದೆ. ಮೋದಿಯವರ ಮನ್ ಕಿ ಬಾತ್ ನಲ್ಲಿ ನಮ್ಮ ಕಾಮ್ ಕಿ ಬಾತ್ ಸದ್ದು ಮಾಡಿವೆ. ಕಲಬುರಗಿಗೆ ಪ್ರಿಯಾಂಕ್ ಖರ್ಗೆ ಮಾಡಿದ್ದೇನು ಎಂದು ಕೇಳುವ ಬಿಜೆಪಿಯವರಿಗೆ ಮೋದಿಯವರ ಮನ್ ಕಿ ಬಾತ್ ಉತ್ತರವಾಗಿದೆ. ಕಲಬುರಗಿ ರೊಟ್ಟಿಗಳ ಬ್ರಾಂಡಿಂಗ್ ಮತ್ತು ಮಾರುಕಟ್ಟೆ ವಿಸ್ತರಣೆಗೆ ನಾವು ಕೈಗೊಂಡ ಕ್ರಮಗಳಿಂದ ಕಲಬುರಗಿ ರೊಟ್ಟಿಗಳು ಈಗ ಜಾಗತಿಕ ಮಾರುಕಟ್ಟೆ ಪಡೆದುಕೊಂಡಿದೆ. ಈ ವಿಷಯವನ್ನು ಈ ಹಿಂದೆ ಮನ್ ಕಿ ಬಾತ್ ನಲ್ಲಿ ಪ್ರಸ್ತಾಪಿಸಿದ್ದ ಮೋದಿಯವರು ಈಗ ನಮ್ಮ ಜಿಐ ಟ್ಯಾಗ್ ಪಡೆದಿರುವ ಕಲಬುರಗಿಯ ತೊಗರಿಯನ್ನು ಮಾಲ್ಡಿವ್ಸ್ ಗೆ ರಫ್ತು ಮಾಡುತ್ತಿರುವ ಉಪಕ್ರಮವನ್ನು ಪ್ರಸ್ತಾಪಿಸಿದ್ದಾರೆ ಎಂದವರು ತಿಳಿಸಿದ್ದಾರೆ.

ಇದನ್ನೂ ಓದಿ: ಸ್ಟಿಂಗ್ ಆಪರೇಷನ್ ಟೆನ್ಷನ್ ಮಧ್ಯೆ ರಾಹುಲ್ ಗಾಂಧಿ ಭೇಟಿಗೆ ಸಮಯ ಕೇಳಿದ ಸಿದ್ದರಾಮಯ್ಯ

‘ಆತ್ಮಸಾಕ್ಷಿಯಿಂದ ತಮ್ಮ ದಿಲ್ ಕಿ ಬಾತ್ ಆಡಲಿ’

ಕಲಬುರಗಿಯ ವೈಶಿಷ್ಟ್ಯಮಯ ತೊಗರಿಯ ಮಾರುಕಟ್ಟೆಯನ್ನು ಜಾಗತಿಕ ಮಟ್ಟದಲ್ಲಿ ವಿಸ್ತರಿಸುವ ಮೂಲಕ ಜಿಲ್ಲೆಯ ರೈತರಿಗೆ ಶೇ. 30ರಷ್ಟು ಹೆಚ್ಚು ಧಾರಣೆ ದೊರಕಿಸಿಕೊಡುವಲ್ಲಿ ಯಶಸ್ವಿಯಾಗಿದ್ದೇವೆ. ಮಾತ್ರವಲ್ಲದೆ, ಜಿಲ್ಲೆಯಲ್ಲಿ ಬೆಳೆಯುವ ಹೆಸರು, ತೊಗರಿ, ಉದ್ದು, ಹುರುಳಿ ಮುಂತಾದ ಬೆಳೆಗಳನ್ನು ಸ್ಥಳೀಯವಾಗಿ ಮೌಲ್ಯವರ್ಧನೆ ಮಾಡುವ ನಿಟ್ಟಿನಲ್ಲಿ ಎನರ್ಜಿ ಬಾರ್​​ಗಳನ್ನು ತಯಾರಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡುವ ವಿಶಿಷ್ಟ ಕಾರ್ಯಕ್ರಮವೂ ಜಾರಿಯಲ್ಲಿದೆ. ಕಲಬುರಗಿ ಪಲ್ಸ್, ಭೀಮಾ ಪಲ್ಸ್, ಕಲಬುರಗಿ ಖಡಕ್ ರೊಟ್ಟಿ, ಕಮಲಾಪುರ ಕೆಂಪು ಬಾಳೆ ಸೇರಿದಂತೆ ಇಲ್ಲಿನ ರೈತರು ಉತ್ಪಾದಿಸುವ ಕೃಷಿ ಉತ್ಪನ್ನಗಳಿಗೆ ಜಾಗತಿಕ ಮಾರುಕಟ್ಟೆಯಲ್ಲಿ ಗುರುತು ಕಲ್ಪಿಸಲು ಪ್ರಯತ್ನಿಸಲಾಗುತ್ತಿದೆ. ಈ ಮೂಲಕ ರೈತರು ಮತ್ತು ಕಾರ್ಮಿಕರನ್ನು ಆರ್ಥಿಕವಾಗಿ ಸಬಲರನ್ನಾಗಿಸುವುದು ನಮ್ಮ ಉದ್ದೇಶವಾಗಿದೆ. ಬಿಜೆಪಿಯವರು ನನ್ನನ್ನು ಪ್ರಶ್ನಿಸುವ ಮತ್ತು ಟೀಕಿಸುವ ಮುನ್ನ ಮೋದಿಯವರ ಮನ್ ಕಿ ಬಾತ್ ಕೇಳಲಿ, ನಂತರ ಆತ್ಮಸಾಕ್ಷಿಯಿಂದ ತಮ್ಮ ದಿಲ್ ಕಿ ಬಾತ್ ಆಡಲಿ ಎಂದವರು ವ್ಯಂಗ್ಯವಾಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:09 pm, Mon, 26 October 26

Follow Us
ಸುನಿಲ್​ ಎಮ್​ ಹೆಚ್​
ಸುನಿಲ್​ ಎಮ್​ ಹೆಚ್​
ಕುಮಾರಿ ವೇಸ್ಟ್​ ಪೀಸ್ ಎಂದ ಸೌಂದರ್ಯಾ ಶೆಟ್ಟಿ; ನಡೆಯಿತು ದೊಡ್ಡ ಜಗಳ
ಕುಮಾರಿ ವೇಸ್ಟ್​ ಪೀಸ್ ಎಂದ ಸೌಂದರ್ಯಾ ಶೆಟ್ಟಿ; ನಡೆಯಿತು ದೊಡ್ಡ ಜಗಳ
ಸೀಗೆ ಹುಣ್ಣಿಮೆ: ಕೊಪ್ಪಳ ಹುಲಿಗೆಮ್ಮ ದೇವಸ್ಥಾನಕ್ಕೆ ಭಕ್ತರ ಮಹಾಪೂರ, ಜನಸಾಗರ
ಸೀಗೆ ಹುಣ್ಣಿಮೆ: ಕೊಪ್ಪಳ ಹುಲಿಗೆಮ್ಮ ದೇವಸ್ಥಾನಕ್ಕೆ ಭಕ್ತರ ಮಹಾಪೂರ, ಜನಸಾಗರ
ಇಂದು ಸೀಗೆ ಹುಣ್ಣಿಮೆ; ಈ ರಾಶಿಯವರಿಗೆ ಶುಭ ದಿನ
ಇಂದು ಸೀಗೆ ಹುಣ್ಣಿಮೆ; ಈ ರಾಶಿಯವರಿಗೆ ಶುಭ ದಿನ
ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಇನ್ಮುಂದೆ ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ
ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಇನ್ಮುಂದೆ ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ
ಭುವನೇಶ್ವರದಲ್ಲಿ ಆರ್‌ಬಿಐನ 169 ಕೋಟಿ ರೂ. ಮೌಲ್ಯದ ಡೇಟಾ ಸೆಂಟರ್ ಉದ್ಘಾಟನೆ
ಭುವನೇಶ್ವರದಲ್ಲಿ ಆರ್‌ಬಿಐನ 169 ಕೋಟಿ ರೂ. ಮೌಲ್ಯದ ಡೇಟಾ ಸೆಂಟರ್ ಉದ್ಘಾಟನೆ
ಕಾಮಗಾರಿ ವೀಕ್ಷಣೆಗೆ ಬಂದಿದ್ದ ಶಾಸಕ ವಿಠ್ಠಲ್ ಹಲಗೇಕರ್​​​ಗೆ ಜನರಿಂದ ಕ್ಲಾಸ್
ಕಾಮಗಾರಿ ವೀಕ್ಷಣೆಗೆ ಬಂದಿದ್ದ ಶಾಸಕ ವಿಠ್ಠಲ್ ಹಲಗೇಕರ್​​​ಗೆ ಜನರಿಂದ ಕ್ಲಾಸ್
‘ಪ್ರೇಮದ ಊರಲಿ’ ಸಿನಿಮಾ ಬಗ್ಗೆ ಸಾಯಿಕುಮಾರ್ ಮಾತು: ನಟ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಬಗ್ಗೆ ಸಾಯಿಕುಮಾರ್ ಮಾತು: ನಟ ಹೇಳಿದ್ದೇನು?
‘ಪ್ರೇಮದ ಊರಲಿ’ ಎಫೆಕ್ಟ್: ಚಿತ್ರೀಕರಣ ನಡೆದ ಸೀಗೆಗುಡ್ಡದಲ್ಲಿ ಜನಸಾಗರ
‘ಪ್ರೇಮದ ಊರಲಿ’ ಎಫೆಕ್ಟ್: ಚಿತ್ರೀಕರಣ ನಡೆದ ಸೀಗೆಗುಡ್ಡದಲ್ಲಿ ಜನಸಾಗರ
ವಾರಾಣಸಿಯ ನಮೋ ಘಾಟ್‌ನಲ್ಲಿ ಪ್ರಧಾನಿ ಮೋದಿಯ ಮನಸೆಳೆದ ಏರ್ ಶೋ
ವಾರಾಣಸಿಯ ನಮೋ ಘಾಟ್‌ನಲ್ಲಿ ಪ್ರಧಾನಿ ಮೋದಿಯ ಮನಸೆಳೆದ ಏರ್ ಶೋ
ರಾಹುಲ್ ಗಾಂಧಿ ಭೇಟಿಗೆ ಸಮಯ ಕೇಳಿದ ಸಿದ್ದರಾಮಯ್ಯ
ರಾಹುಲ್ ಗಾಂಧಿ ಭೇಟಿಗೆ ಸಮಯ ಕೇಳಿದ ಸಿದ್ದರಾಮಯ್ಯ