AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಸಲಹೆ ಬೆನ್ನಲ್ಲೇ ಬೆಂಗಳೂರಿನ ಕೆಲ ಕಂಪನಿಗಳಿಂದ ವರ್ಕ್ ಫ್ರಂ ಹೋಂ ನೀಡಲು ಪ್ಲ್ಯಾನ್!

ಪ್ರಧಾನಿ ನರೇಂದ್ರ ಮೋದಿ ಅವರು ಇಂಧನ ಉಳಿತಾಯದ ಭಾಗವಾಗಿ ಮನೆಯಿಂದಲೇ ಕೆಲಸ (WFH) ಮಾಡುವಂತೆ ನೀಡಿದ ಸಲಹೆಯ ಬೆನ್ನಲ್ಲೇ ಬೆಂಗಳೂರಿನ ಕೆಲವು ಕಂಪನಿಗಳು ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ನೀಡಲು ಸಜ್ಜಾಗುತ್ತಿವೆ. ಆದರೆ, ಈ ನಿರ್ಧಾರದಿಂದ ಸಾರಿಗೆ ಉದ್ಯಮಕ್ಕೆ ಹೊಡೆತ ಬೀಳಲಿದೆ ಎಂದು ಕರ್ನಾಟಕ ರಾಜ್ಯ ಟ್ರಾವೆಲ್ಸ್ ಮಾಲೀಕರ ಸಂಘ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಕುರಿತು ಪ್ರಧಾನಿಯವರಿಗೆ ಪತ್ರ ಬರೆದಿದೆ.

ಪ್ರಧಾನಿ ಮೋದಿ ಸಲಹೆ ಬೆನ್ನಲ್ಲೇ ಬೆಂಗಳೂರಿನ ಕೆಲ ಕಂಪನಿಗಳಿಂದ ವರ್ಕ್ ಫ್ರಂ ಹೋಂ ನೀಡಲು ಪ್ಲ್ಯಾನ್!
ವರ್ಕ್ ಫ್ರಂ ಹೋಂ (ಸಾಂದರ್ಭಿಕ ಎಐ ಚಿತ್ರ)Image Credit source: MediaForge AI
ಕಿರಣ್​ ಸೂರ್ಯ
| Edited By: |

Updated on:May 14, 2026 | 10:03 AM

Share

ಬೆಂಗಳೂರು, ಮೇ 14: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇತ್ತೀಚೆಗೆ ನೀಡಿದ ಆರ್ಥಿಕ ಮಿತವ್ಯಯ ಮತ್ತು ಇಂಧನ ಉಳಿತಾಯದ ಸಲಹೆಗಳಿಗೆ ಐಟಿ ನಗರಿ ಬೆಂಗಳೂರಿನಲ್ಲಿ (Bengaluru) ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೋದಿಯವರ ವರ್ಕ್ ಫ್ರಂ ಹೋಂ ಮತ್ತು ವರ್ಚುವಲ್ ಮೀಟಿಂಗ್​​ಗಳ ಕರೆಗೆ ಪೂರಕವಾಗಿ ಬೆಂಗಳೂರಿನ ಕೆಲವು ಐಟಿ-ಬಿಟಿ ಕಂಪನಿಗಳು ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶ ನೀಡಲು ಗಂಭೀರ ಚಿಂತನೆ ನಡೆಸಿವೆ.

ಮುಖ್ಯಾಂಶಗಳು

    • ಪ್ರಧಾನಿ ಮೋದಿ ನೀಡಿದ ಮಿತವ್ಯಯದ ಸಲಹೆ ಬೆನ್ನಲ್ಲೇ ಬೆಂಗಳೂರಿನ ಐಟಿ ಕಂಪನಿಗಳಿಂದ ವರ್ಕ್ ಫ್ರಂ ಹೋಂ ನೀಡಲು ಚಿಂತನೆ.
    • ಮನೆಯಿಂದಲೇ ಕೆಲಸದ ಪ್ರಸ್ತಾವನೆಗೆ ರಾಜ್ಯ ಟ್ರಾವೆಲ್ಸ್ ಮಾಲೀಕರ ಅಸೋಸಿಯೇಷನ್ ತೀವ್ರ ಅಸಮಾಧಾನ ಮತ್ತು ವಿರೋಧ.
    • ಟ್ರಾವೆಲ್ಸ್ ಉದ್ಯಮದ ಸಂಕಷ್ಟದ ಬಗ್ಗೆ ಪ್ರಧಾನಿ ಮೋದಿಯವರಿಗೆ ಪತ್ರ ಬರೆದ ಸಂಘದ ಅಧ್ಯಕ್ಷ ರಾಧಾಕೃಷ್ಣ ಹೊಳ್ಳ.

ಪ್ರಧಾನಿ ಮೋದಿ ಸಲಹೆಗಳು

ಐಟಿ ಕಂಪನಿಗಳ ಪ್ಲ್ಯಾನ್

ಜಾಗತಿಕ ಬಿಕ್ಕಟ್ಟು ಮತ್ತು ಇಂಧನ ಉಳಿತಾಯದ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಹತ್ವದ ಸಲಹೆ ನೀಡಿದ್ದರು. ಪೆಟ್ರೋಲ್-ಡೀಸೆಲ್ ಮಿತವಾಗಿ ಬಳಸಿ, ಮನೆಯಿಂದಲೇ ಕೆಲಸ ಮಾಡಿ ಮತ್ತು ಆನ್‌ಲೈನ್ ಮೂಲಕ ಸಭೆಗಳನ್ನು ನಡೆಸಿ ಎಂದು ಅವರು ಕರೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಲವು ಪ್ರಮುಖ ಐಟಿ-ಬಿಟಿ ಕಂಪನಿಗಳು ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಿದ್ದು, ಈ ತಿಂಗಳು ಅಥವಾ ಮುಂದಿನ ತಿಂಗಳಿನಿಂದ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ಸೌಲಭ್ಯ ನೀಡಲು ನಿರ್ಧರಿಸಿವೆ ಎನ್ನಲಾಗಿದೆ.

ಟ್ರಾವೆಲ್ಸ್ ಮಾಲೀಕರ ಆಕ್ರೋಶ

ಆದರೆ, ಪ್ರಧಾನಿಯವರ ಈ ನಡೆಯನ್ನು ಕರ್ನಾಟಕ ರಾಜ್ಯ ಟ್ರಾವೆಲ್ಸ್ ಮಾಲೀಕರ ಸಂಘ ಬಲವಾಗಿ ಖಂಡಿಸಿದೆ. ಸಂಘದ ಅಧ್ಯಕ್ಷ ರಾಧಾಕೃಷ್ಣ ಹೊಳ್ಳ ಈ ಕುರಿತು ಪ್ರಧಾನಿಯವರಿಗೆ ಪತ್ರ ಬರೆದಿದ್ದು, ಅಂತರಾಷ್ಟ್ರೀಯ ಪ್ರಯಾಣ ಕಡಿತದ ನಿರ್ಧಾರವನ್ನು ಸ್ವಾಗತಿಸಿದರೂ, ವರ್ಕ್ ಫ್ರಂ ಹೋಂ ಮತ್ತು ವರ್ಚುವಲ್ ಸಭೆಗಳಿಂದ ಟ್ರಾವೆಲ್ಸ್ ಉದ್ಯಮ ನಶಿಸಿ ಹೋಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಏರ್ ಲೈನ್ಸ್ ಉದ್ಯಮಕ್ಕೆ 5500 ಕೋಟಿ ರೂ. ನೆರವು ನೀಡಲಾಗಿದ್ದು, ಟ್ರಾವೆಲ್ಸ್ ಉದ್ಯಮಕ್ಕೆ ಯಾವುದೇ ನೆರವು ನೀಡಿಲ್ಲ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ.

ಚಾಲಕರ ಅಳಲು

ದೇಶದಲ್ಲಿ ಸುಮಾರು 50 ಲಕ್ಷ ವಾಹನಗಳು ಉದ್ಯೋಗಿಗಳ ಸಾಗಾಟದಲ್ಲಿ ತೊಡಗಿಕೊಂಡಿವೆ. ಲಕ್ಷಾಂತರ ರೂಪಾಯಿ ಸಾಲ ಮಾಡಿ ವಾಹನಗಳನ್ನು ಖರೀದಿಸಿರುವ ಮಾಲೀಕರು ಮತ್ತು ಚಾಲಕರು ಈಗ ಆರ್ಥಿಕ ಸಂಕಷ್ಟ ಎದುರಿಸುವ ಭೀತಿಯಲ್ಲಿದ್ದಾರೆ. ಈ ಬಗ್ಗೆ ಮಾತನಾಡಿದ ಕ್ಯಾಬ್ ಚಾಲಕ ರಾಜು, ಐಟಿ ಕಂಪನಿಗಳನ್ನು ನಂಬಿ ಜೀವನ ಸಾಗಿಸುತ್ತಿರುವ ನಮ್ಮಂತಹವರಿಗೆ ವರ್ಕ್ ಫ್ರಂ ಹೋಂ ನಿರ್ಧಾರದಿಂದ ಬಹಳ ತೊಂದರೆಯಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಒಟ್ಟಾರೆಯಾಗಿ, ಒಂದು ಕಡೆ ಇಂಧನ ಉಳಿತಾಯದ ಗುರಿ ಇದ್ದರೆ, ಇನ್ನೊಂದೆಡೆ ಸಾರಿಗೆ ಉದ್ಯಮದ ಭವಿಷ್ಯ ಆತಂಕದಲ್ಲಿದೆ.

ಇದನ್ನೂ ಓದಿ: ವರ್ಕ್ ಫ್ರಂ ಹೋಂ, ಆನ್​ಲೈನ್ ಕ್ಲಾಸ್, ಚಿನ್ನ ಬೇಡ, ಇಂಧನದ ಮಿತ ಬಳಕೆ; ಮತ್ತೊಮ್ಮೆ ಪ್ರಧಾನಿ ಮೋದಿ ಮನವಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:08 am, Thu, 14 May 26

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ