ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 5 ಕರ್ನಾಟಕ ಪ್ರವಾಸ ದಿಢೀರ್ ರದ್ದು
ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬರಬೇಕಿತ್ತು. ಏಪ್ರಿಲ್ 5ರಂದು 3 ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕಿತ್ತು. ಆದ್ರೆ ಕೊರೊನಾದಿಂದಾಗಿ ರಾಜ್ಯ ಪ್ರವಾಸ ರದ್ದಾಗಿದೆ.
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ(PM Narendra Modi) ರಾಜ್ಯ ಪ್ರವಾಸ ರದ್ದುಗೊಳಿಸಲಾಗಿದೆ. ಏಪ್ರಿಲ್ 5ರಂದು ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಬೇಕಿತ್ತು. ಆದ್ರೆ ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್‌ಗೆ(Naftali Bennett) ಕೊರೊನಾ ಸೋಂಕು(Coronavirus) ಕಾಣಿಸಿಕೊಂಡಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಪ್ರವಾಸ ರದ್ದು ಮಾಡಲಾಗಿದೆ.
ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬರಬೇಕಿತ್ತು. ಏಪ್ರಿಲ್ 5ರಂದು 3 ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕಿತ್ತು. ಆದ್ರೆ ಕೊರೊನಾದಿಂದಾಗಿ ರಾಜ್ಯ ಪ್ರವಾಸ ರದ್ದಾಗಿದೆ. ಏಪ್ರಿಲ್ 5ರಂದು ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಲೋಕಾರ್ಪಣೆ, ಮೇಲ್ದರ್ಜೆಗೇರಿಸಿದ 150 ಐಟಿಐ ಉದ್ಘಾಟನೆ ಕಾರ್ಯಕ್ರಮ, ಬೆಂಗಳೂರು ಸಬ್‌ಅರ್ಬನ್ ರೈಲು ಯೋಜನೆಗೆ ಶಂಕುಸ್ಥಾಪನೆ ಸೇರಿ ಮೂರು ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಬೇಕಿತ್ತು.
ಸದ್ಯ ಪ್ರಧಾನಿ ನಫ್ತಾಲಿ ಬೆನೆಟ್‌ಗೆ ಕೊರೊನಾ ತಗುಲಿರುವ ಬಗ್ಗೆ ಇಸ್ರೇಲ್ ಪ್ರಧಾನಿ ಕಚೇರಿಯಿಂದ ಸೋಮವಾರ ಮಾಹಿತಿ ಹೊರಬಿದ್ದಿದೆ. ಬೆನೆಟ್ ಆರೋಗ್ಯವಾಗಿದ್ದಾರೆ ಮತ್ತು ಮನೆಯಲ್ಲಿ ಸೆಲ್ಫ್ ಐಸೋಲೇಟ್ ಆಗಿದ್ದಾರೆ ಎಂದು ಇಸ್ರೇಲ್ ಪ್ರಧಾನಿ ಕಚೇರಿ ಮಾಹಿತಿ ನೀಡಿದೆ.
ಏಪ್ರಿಲ್ 6ರಂದು ಪ್ರಧಾನಿ ಮೋದಿ ಭಾಷಣ ಇನ್ನು ಮತ್ತೊಂದೆಡೆ ಏಪ್ರಿಲ್ 6ರಂದು ಬಿಜೆಪಿ ಸಂಸ್ಥಾಪನಾ ದಿನಾಚರಣೆ ಹಿನ್ನೆಲೆ ಕಾರ್ಯಕರ್ತರನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಬಿಜೆಪಿಯ ಕಾರ್ಯಕರ್ತರು, ನಾಯಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಇದನ್ನೂ ಓದಿ: ಕಾಮಗಾರಿ ಮಾಡಿದ ಬಿಲ್ ಕೊಡಿಸುವಂತೆ ಸಚಿವ ಕೆಎಸ್ ಈಶ್ವರಪ್ಪ ವಿರುದ್ಧ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಸಂತೋಷ್ ಪಾಟೀಲ್
Published On - 7:31 pm, Mon, 28 March 22