PM Modi in Bengaluru: ಬೆಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಬೆಳಗ್ಗೆ 6.07ಕ್ಕೆ HAL ಏರ್​ಪೋರ್ಟ್​ಗೆ ಬಂದಿಳಿದಿದ್ದು ಅದ್ಧೂರಿ ಸ್ವಾಗತ ಕೋರಲಾಗಿದೆ. ಜಾಲಹಳ್ಳಿ ಕ್ರಾಸ್​​ನಲ್ಲಿ ಚಂಡೆ ಮೇಳ, ವೀರಾಗಾಸೆ ದೊಳ್ಳುಕುಣಿತ ತಂಡ ಮೋದಿಯವರನ್ನು ಸ್ವಾಗತಿಸಿದೆ. ವಿಧಾನಸಭಾ ಚುನಾವಣಾ ಸೋಲಿನ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿಯವರು ರಾಜ್ಯಕ್ಕೆ ಬಂದಿಳಿದಿದ್ದಾರೆ. ಜಿ 20 ಸಮ್ಮೇಳನ ಮುಗಿಸಿ ಜೋಹಾನ್ಸ್ ಬರ್ಗ್ ನಿಂದ ನೇರವಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ.

PM Modi in Bengaluru: ಬೆಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ
ಬೆಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: ಆಯೇಷಾ ಬಾನು

Updated on:Aug 26, 2023 | 6:41 AM

ಬೆಂಗಳೂರು, ಆ.26: ಚಂದ್ರಯಾನ-3(Chandrayaan-3) ಯಶಸ್ಸಿ ಆಗುತ್ತಿದ್ದಂತೆ ಇಸ್ರೋ ವಿಜ್ಞಾನಿಗಳಿಗೆ(ISRO Scientist) ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಐತಿಹಾಸಿಕ ಸಾಧನೆಗೆ ಕಾರಣರಾದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಪ್ರಧಾನಿ ಮೋದಿ ಬೆಳಗ್ಗೆ 6.07ಕ್ಕೆ HAL ಏರ್​ಪೋರ್ಟ್​ಗೆ ಬಂದಿಳಿದಿದ್ದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಡಿಜಿಪಿ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್, ಬೆಂಗಳೂರು ಪ್ರಾದೇಶಿಕ ಆಯುಕ್ತ ಆದಿತ್ಯ ಅಮ್ಲಾನ್ ಬಿಸ್ವಾಸ್ ಮತ್ತು ಬೆಂಗಳೂರು ನಗರ ಡಿಸಿ ಕೆ.ಎ.‌ ದಯಾನಂದ್ ಪ್ರಧಾನಿಗೆ ಸ್ವಾಗತಿಸಿದರು. ಜಾಲಹಳ್ಳಿ ಕ್ರಾಸ್​​ನಲ್ಲಿ ಚಂಡೆ ಮೇಳ, ವೀರಾಗಾಸೆ ದೊಳ್ಳುಕುಣಿತ ತಂಡ ಮೋದಿಯವರನ್ನು ಸ್ವಾಗತಿಸಿದೆ.

ವಿಧಾನಸಭಾ ಚುನಾವಣಾ ಸೋಲಿನ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿಯವರು ರಾಜ್ಯಕ್ಕೆ ಬಂದಿಳಿದಿದ್ದಾರೆ. ಜಿ 20 ಸಮ್ಮೇಳನ ಮುಗಿಸಿ ಜೋಹಾನ್ಸ್ ಬರ್ಗ್ ನಿಂದ ನೇರವಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ. ಜಾಲಹಳ್ಳಿ ಕ್ರಾಸ್ ನಿಂದ ಸುಮಾರು 350 ಮೀಟರ್ ಗಳ ದೂರ ರಸ್ತೆಯ ಎರಡೂ ಬದಿಗಳಲ್ಲಿ ಬಿಜೆಪಿ ಕಾರ್ಯಕರ್ತರು ನಿಂತು ಮೋದಿಯವರಿಗೆ ಭವ್ಯ ಸ್ವಾಗತ ಕೋರಲು ಕಾಯುತ್ತಿದ್ದಾರೆ. ದಾಸರಹಳ್ಳಿ, ರಾಜರಾಜೇಶ್ವರಿ ನಗರ, ಮಹಾಲಕ್ಷ್ಮಿ ಲೇಔಟ್, ಯಶವಂತಪುರ, ಯಲಹಂಕ ಕ್ಷೇತ್ರಗಳ ಕಾರ್ಯಕರ್ತರು ರಸ್ತೆಯ ಎರಡೂ ಬದಿ ನಿಂತು ಸ್ವಾಗತಿಸಲಿದ್ದಾರೆ.

ಇನ್ನು ಸಿಸ್ಟಮ್ ಸರ್ಕಲ್ ಬಳಿ ಸಾರ್ವಜನಿಕರು ಆಗಮಿಸುತ್ತಿದ್ದು ಭಾರತ್ ಮಾತಾಕಿ ಜೈ, ವಂದೇ ಮಾತರಂ ಅಂತ ಘೋಷಣೆ ಹೋಗಿ ಇಸ್ರೋ ವಿಜ್ಞಾನಿಗಳಿಗೆ ಜೈಕಾರ ಹಾಕುತ್ತಿದ್ದಾರೆ. ರಾಷ್ಟ್ರ ಧ್ವಜ ಹಿಡಿದು ಘೋಷಣೆ ಕೂಗುತ್ತಿದ್ದಾರೆ.

ಇದನ್ನೂ ಓದಿ: PM Modi ISRO Visit Live: ಕೆಲವೇ ಕ್ಷಣಗಳಲ್ಲಿ ಇಸ್ರೋ ಕೇಂದ್ರಕ್ಕೆ ತೆರಳಲಿರುವ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರಿಗೆ ಬಂದಿಳಿಯುತ್ತಿದ್ದಂತೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಚಂದ್ರಯಾನ-3 ರ ಯಶಸ್ಸಿನಿಂದ ಭಾರತಕ್ಕೆ ಹೆಮ್ಮೆ ತಂದಿರುವ ನಮ್ಮ ಇಸ್ರೋ ವಿಜ್ಞಾನಿಗಳೊಂದಿಗೆ ಸಂವಾದ ನಡೆಸಲು ಕಾತುರನಾಗಿದ್ದೇನೆ. ಅವರ ಸಮರ್ಪಣೆ ಮತ್ತು ಉತ್ಸಾಹವು ಬಾಹ್ಯಾಕಾಶ ಕ್ಷೇತ್ರದಲ್ಲಿ ನಮ್ಮ ರಾಷ್ಟ್ರದ ಸಾಧನೆಗಳ ಹಿಂದಿನ ಪ್ರೇರಕ ಶಕ್ತಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ಸಾಗುವ ಮಾರ್ಗ

    • ಹಳೆ ವಿಮಾನ ನಿಲ್ದಾಣ ರಸ್ತೆ
    • ಹಳೆ ಮದ್ರಾಸ್ ರಸ್ತೆ
    • ಎಂ.ಜಿ. ರಸ್ತೆ
    • ಕಬ್ಬನ್ ರಸ್ತೆ
    • ರಾಜಭವನ ರಸ್ತೆ
    • ಬಳ್ಳಾರಿ ರಸ್ತೆ
    • ಮೇಖ್ರಿ ಸರ್ಕಲ್
    • ಸಿ.ವಿ. ರಾಮನ್ ರಸ್ತೆ
    • ಯಶವಂತಪುರ ಫ್ಲೈ ಓವರ್
    • ತುಮಕೂರು ರಸ್ತೆ
    • ಗೊರಗುಂಟೆಪಾಳ್ಯ
    • ಜಾಲಹಳ್ಳಿ ಕ್ರಾಸ್

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:09 am, Sat, 26 August 23

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ