ಬೆಂಗಳೂರು, ಆ.26: ಚಂದ್ರಯಾನ-3(Chandrayaan-3) ಯಶಸ್ಸಿ ಆಗುತ್ತಿದ್ದಂತೆ ಇಸ್ರೋ ವಿಜ್ಞಾನಿಗಳಿಗೆ(ISRO Scientist) ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಐತಿಹಾಸಿಕ ಸಾಧನೆಗೆ ಕಾರಣರಾದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಪ್ರಧಾನಿ ಮೋದಿ ಬೆಳಗ್ಗೆ 6.07ಕ್ಕೆ HAL ಏರ್ಪೋರ್ಟ್ಗೆ ಬಂದಿಳಿದಿದ್ದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಡಿಜಿಪಿ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್, ಬೆಂಗಳೂರು ಪ್ರಾದೇಶಿಕ ಆಯುಕ್ತ ಆದಿತ್ಯ ಅಮ್ಲಾನ್ ಬಿಸ್ವಾಸ್ ಮತ್ತು ಬೆಂಗಳೂರು ನಗರ ಡಿಸಿ ಕೆ.ಎ. ದಯಾನಂದ್ ಪ್ರಧಾನಿಗೆ ಸ್ವಾಗತಿಸಿದರು. ಜಾಲಹಳ್ಳಿ ಕ್ರಾಸ್ನಲ್ಲಿ ಚಂಡೆ ಮೇಳ, ವೀರಾಗಾಸೆ ದೊಳ್ಳುಕುಣಿತ ತಂಡ ಮೋದಿಯವರನ್ನು ಸ್ವಾಗತಿಸಿದೆ.
ವಿಧಾನಸಭಾ ಚುನಾವಣಾ ಸೋಲಿನ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿಯವರು ರಾಜ್ಯಕ್ಕೆ ಬಂದಿಳಿದಿದ್ದಾರೆ. ಜಿ 20 ಸಮ್ಮೇಳನ ಮುಗಿಸಿ ಜೋಹಾನ್ಸ್ ಬರ್ಗ್ ನಿಂದ ನೇರವಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ. ಜಾಲಹಳ್ಳಿ ಕ್ರಾಸ್ ನಿಂದ ಸುಮಾರು 350 ಮೀಟರ್ ಗಳ ದೂರ ರಸ್ತೆಯ ಎರಡೂ ಬದಿಗಳಲ್ಲಿ ಬಿಜೆಪಿ ಕಾರ್ಯಕರ್ತರು ನಿಂತು ಮೋದಿಯವರಿಗೆ ಭವ್ಯ ಸ್ವಾಗತ ಕೋರಲು ಕಾಯುತ್ತಿದ್ದಾರೆ. ದಾಸರಹಳ್ಳಿ, ರಾಜರಾಜೇಶ್ವರಿ ನಗರ, ಮಹಾಲಕ್ಷ್ಮಿ ಲೇಔಟ್, ಯಶವಂತಪುರ, ಯಲಹಂಕ ಕ್ಷೇತ್ರಗಳ ಕಾರ್ಯಕರ್ತರು ರಸ್ತೆಯ ಎರಡೂ ಬದಿ ನಿಂತು ಸ್ವಾಗತಿಸಲಿದ್ದಾರೆ.
#WATCH | Karnataka | Locals with posters and the national flag gather on the streets outside HAL airport in Bengaluru to welcome PM Narendra Modi as he will meet scientists of ISRO team involved in the Chandrayaan-3 Mission at ISRO Telemetry Tracking & Command Network Mission… pic.twitter.com/mV4fapzLDZ
— ANI (@ANI) August 26, 2023
ಇನ್ನು ಸಿಸ್ಟಮ್ ಸರ್ಕಲ್ ಬಳಿ ಸಾರ್ವಜನಿಕರು ಆಗಮಿಸುತ್ತಿದ್ದು ಭಾರತ್ ಮಾತಾಕಿ ಜೈ, ವಂದೇ ಮಾತರಂ ಅಂತ ಘೋಷಣೆ ಹೋಗಿ ಇಸ್ರೋ ವಿಜ್ಞಾನಿಗಳಿಗೆ ಜೈಕಾರ ಹಾಕುತ್ತಿದ್ದಾರೆ. ರಾಷ್ಟ್ರ ಧ್ವಜ ಹಿಡಿದು ಘೋಷಣೆ ಕೂಗುತ್ತಿದ್ದಾರೆ.
ಇದನ್ನೂ ಓದಿ: PM Modi ISRO Visit Live: ಕೆಲವೇ ಕ್ಷಣಗಳಲ್ಲಿ ಇಸ್ರೋ ಕೇಂದ್ರಕ್ಕೆ ತೆರಳಲಿರುವ ಪ್ರಧಾನಿ ನರೇಂದ್ರ ಮೋದಿ
ಬೆಂಗಳೂರಿಗೆ ಬಂದಿಳಿಯುತ್ತಿದ್ದಂತೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಚಂದ್ರಯಾನ-3 ರ ಯಶಸ್ಸಿನಿಂದ ಭಾರತಕ್ಕೆ ಹೆಮ್ಮೆ ತಂದಿರುವ ನಮ್ಮ ಇಸ್ರೋ ವಿಜ್ಞಾನಿಗಳೊಂದಿಗೆ ಸಂವಾದ ನಡೆಸಲು ಕಾತುರನಾಗಿದ್ದೇನೆ. ಅವರ ಸಮರ್ಪಣೆ ಮತ್ತು ಉತ್ಸಾಹವು ಬಾಹ್ಯಾಕಾಶ ಕ್ಷೇತ್ರದಲ್ಲಿ ನಮ್ಮ ರಾಷ್ಟ್ರದ ಸಾಧನೆಗಳ ಹಿಂದಿನ ಪ್ರೇರಕ ಶಕ್ತಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
Landed in Bengaluru. Looking forward to interacting with our exceptional @isro scientists who have made India proud with the success of Chandrayaan-3! Their dedication and passion are truly the driving forces behind our nation’s achievements in the space sector.
— Narendra Modi (@narendramodi) August 26, 2023
ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 6:09 am, Sat, 26 August 23