ಸಿಎಂ ಬೊಮ್ಮಾಯಿಗೆ ಕೊರೊನಾ ಸೋಂಕು ಹಿನ್ನೆಲೆ; ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಕುಟುಂಬ ಸದಸ್ಯರಿಗೂ ಸೋಂಕು ತಗುಲಿದ ಬಗ್ಗೆ ಸಿಎಂ ಮಾಹಿತಿ ನೀಡಿದ್ದಾರೆ. ಪ್ರಧಾನಿಗೆ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಎಲ್ಲರೂ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳಿ ಎಂದು ಪ್ರಧಾನಿ ಸಲಹೆ ಕೊಟ್ಟಿದ್ದಾರೆ.

ಸಿಎಂ ಬೊಮ್ಮಾಯಿಗೆ ಕೊರೊನಾ ಸೋಂಕು ಹಿನ್ನೆಲೆ; ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ
ಸಿಎಂ ಬೊಮ್ಮಾಯಿ, ಪ್ರಧಾನಿ ಮೋದಿ (ಸಂಗ್ರಹ ಚಿತ್ರ)
Follow us
TV9 Web
| Updated By: ಡಾ. ಭಾಸ್ಕರ ಹೆಗಡೆ

Updated on:Jan 11, 2022 | 5:34 PM

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಅವರ ಕುಟುಂಬ ಸದಸ್ಯರಿಗೆ ಕೊರೊನಾ ಬಂದಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಇಂದು ದೂರವಾಣಿ ಕರೆ ಮಾಡಿ ಮಾತನಾಡಿದ ಪ್ರಧಾನಿ ಬೊಮ್ಮಾಯಿಯವರ ಆರೋಗ್ಯ ವಿಚಾರಿಸಿದ್ದಾರೆ. ಸೂಕ್ತ ಚಿಕಿತ್ಸೆ ಪಡೆಯಿರಿ ಎಂದು ಸಿಎಂಗೆ ಪ್ರಧಾನಿ ಸಲಹೆ ನೀಡಿದ್ದಾರೆ. 5 ನಿಮಿಷಗಳ ಕಾಲ ಪ್ರಧಾನಿ ಮತ್ತು ಸಿಎಂ ಮಾತುಕತೆ ನಡೆಸಿದ್ದಾರೆ. ತಮಗೆ ಕೊವಿಡ್ ತಗುಲಿದ ಬಗ್ಗೆ ವಿವರಣೆ ನೀಡಿದ್ದಾರೆ.

ಕುಟುಂಬ ಸದಸ್ಯರಿಗೂ ಸೋಂಕು ತಗುಲಿದ ಬಗ್ಗೆ ಸಿಎಂ ಮಾಹಿತಿ ನೀಡಿದ್ದಾರೆ. ಪ್ರಧಾನಿಗೆ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಎಲ್ಲರೂ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳಿ ಎಂದು ಪ್ರಧಾನಿ ಸಲಹೆ ಕೊಟ್ಟಿದ್ದಾರೆ.

ಪ್ರಧಾನಿ ಜೊತೆ ಮಾತುಕತೆ ವೇಳೆ ಕರ್ನಾಟಕ ರಾಜ್ಯದಲ್ಲಿನ ಕೊವಿಡ್ ಪರಿಸ್ಥಿತಿ ಬಗ್ಗೆ ಕೂಡಾ ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಈಗ ಬೆಂಗಳೂರಿನಲ್ಲಿ ವರ್ಚುವಲ್ ಆಗಿ ಸಭೆ ನಡೆಸುತ್ತಿದ್ದೇನೆ. ಜನವರಿ 13 ರಂದು ಸಂಜೆ ತಾವು ಕರೆದಿರುವ ಕೊವಿಡ್ ವರ್ಚುಯಲ್ ಸಭೆಗೆ ಪೂರ್ವಭಾವಿ ರೂಪದಲ್ಲಿ ಈ ಸಭೆ ನಡೆಸುತ್ತಿದ್ದೇನೆ. ರಾಜ್ಯದಲ್ಲಿ ಕೊವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಲಸಿಕೆ ಅಭಿಯಾನವನ್ನು ತೀವ್ರಗೊಳಿಸಲಾಗಿದೆ. ತಜ್ಞರು ನೀಡುವ ಸಲಹೆಗಳನ್ನು ಆಧರಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ರಾಜ್ಯದಲ್ಲಿನ ಸ್ಥಿತಿಗತಿ ಕುರಿತು ಪ್ರಧಾನಿಗೆ ವಿವರಣೆ ನೀಡಿದ್ದಾರೆ.

ಇದನ್ನೂ ಓದಿ: ಕೊವಿಡ್: ಸಿಎಂ ಬೊಮ್ಮಾಯಿ‌ಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಪರೀಕ್ಷೆ, ಒಂದು ವಾರ ಹೋಂ ಕ್ವಾರಂಟೈನ್, ಪುತ್ರ-ಸೊಸೆಗೂ ಕೊರೊನಾ

ಇದನ್ನೂ ಓದಿ: Dr K Sudhakar: ಸಿಎಂ ಬೊಮ್ಮಾಯಿಗೆ ಕೊರೊನಾ ಬೆನ್ನಲ್ಲೇ ಸ್ವಯಂಪ್ರೇರಿತ ಐಸೋಲೇಷನ್​ಗೆ ಒಳಗಾದ ಆರೋಗ್ಯ ಸಚಿವ ಡಾ. ಸುಧಾಕರ್

Published On - 5:11 pm, Tue, 11 January 22

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ