AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಮಡಗಾಂವ್ ವಂದೇ ಭಾರತ್​​ಗೆ ಚಾಲನೆ​​ ಸೇರಿ ವಿವಿಧ ರೈಲ್ವೇ ಕಾಮಗಾರಿಗಳ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ

Narendra Modi: ಬಹುನಿರೀಕ್ಷಿತ ಬೆಂಗಳೂರು-ಮಂಗಳೂರು-ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಬೆಂಗಳೂರಿನ ಐಐಎಂಬಿ ಆಡಿಟೋರಿಯಂನಲ್ಲಿ ವರ್ಚುವಲ್​​ ಮೂಲಕ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಜೊತೆಗೆ ಅಮೃತ್ ಭಾರತ್ ನಿಲ್ದಾಣಗಳು ಹಾಗೂ ವಿವಿಧ ರೈಲ್ವೆ ಮಾರ್ಗಗಳ ವಿದ್ಯುದ್ದೀಕರಣ, ದ್ವಿಗುಣೀಕರಣ ಕಾಮಗಾರಿಗಳನ್ನು ಲೋಕಾರ್ಪಣೆಗೊಳಿಸಿದ್ದಾರೆ.

ಬೆಂಗಳೂರು-ಮಡಗಾಂವ್ ವಂದೇ ಭಾರತ್​​ಗೆ ಚಾಲನೆ​​ ಸೇರಿ ವಿವಿಧ ರೈಲ್ವೇ ಕಾಮಗಾರಿಗಳ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ
ಬೆಂಗಳೂರು-ಮಡಗಾಂವ್ ವಂದೇ ಭಾರತ್​​ಗೆ ಚಾಲನೆ​​
ಪ್ರಸನ್ನ ಹೆಗಡೆ
|

Updated on:Nov 13, 2026 | 2:02 PM

Share

ಬೆಂಗಳೂರು, ನವೆಂಬರ್​​ 13: ಬಹು ನಿರೀಕ್ಷಿತ ಬೆಂಗಳೂರು-ಮಂಗಳೂರು-ಮಡಗಾಂವ್ ವಂದೇ ಭಾರತ್ ರೈಲಿಗೆ ಬೆಂಗಳೂರಿನ ಐಐಎಂಬಿ ಆಡಿಟೋರಿಯಂನಲ್ಲಿ ವರ್ಚುವಲ್​​ ಮೂಲಕ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಈ ರೈಲು ಬೆಂಗಳೂರು, ಕರಾವಳಿ ಕರ್ನಾಟಕ ಮತ್ತು ಗೋವಾ ನಡುವೆ ವೇಗದ ಹಾಗೂ ಆಧುನಿಕ ರೈಲು ಸಂಪರ್ಕ ಕಲ್ಪಿಸಲಿದೆ. ಹಾಸನ, ಸಕಲೇಶಪುರ, ಮಂಗಳೂರು, ಉಡುಪಿ, ಮುರುಡೇಶ್ವರ, ಗೋಕರ್ಣ ಮತ್ತು ಕಾರವಾರ ಸೇರಿದಂತೆ ಪ್ರಮುಖ ಸ್ಥಳಗಳನ್ನು ಸಂಪರ್ಕಿಸಿ ಅಂತಿಮವಾಗಿ ಗೋವಾದ ಮಡಗಾಂವ್ ತಲುಪಲಿದೆ. ಸುಮಾರು 670 ಕಿಲೋ ಮೀಟರ್ ಮಾರ್ಗದಲ್ಲಿ ಈ ರೈಲು ಕ್ರಮಿಸಲಿದೆ.

ವಿವಿಧ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ

ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ ಪುನರಾಭಿವೃದ್ಧಿಪಡಿಸಿರುವ ಚಾಮರಾಜನಗರ, ಚಿಕ್ಕಮಗಳೂರು, ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಗಳನ್ನು ಪ್ರಧಾನಿ ಮೋದಿ ಇದೇ ವೇಳೆ ಉದ್ಘಾಟಿಸಿದ್ದಾರೆ. 284 ಕಿಲೋಮೀಟರ್ ಉದ್ದದ ಗದಗ-ಹೊಟಗಿ ರೈಲು ಮಾರ್ಗ ದ್ವಿಗುಣೀಕರಣ ಯೋಜನೆಯ ಭಾಗವಾಗಿರುವ 45 ಕಿಲೋಮೀಟರ್ ಉದ್ದದ ಬಾಗಲಕೋಟೆ-ವಂಡಾಲ್ ರೈಲು ಮಾರ್ಗದ ದ್ವಿಗುಣೀಕರಣ ಕಾಮಗಾರಿಯನ್ನು ಪ್ರಧಾನಿ ಮೋದಿ ರಾಷ್ಟ್ರಕ್ಕೆ ಸಮರ್ಪಿಸಿದ್ದಾರೆ. ಈ ಯೋಜನೆಯಿಂದ ಪ್ರಯಾಣಿಕರು ಮತ್ತು ಸರಕು ಸಾಗಣೆ ರೈಲುಗಳ ಸಂಚಾರ ಸುಧಾರಿಸಲಿದೆ. ಸ್ಥಳೀಯ ವ್ಯಾಪಾರ ವಹಿವಾಟಿಗೆ ಉತ್ತೇಜನ ದೊರೆಯುವುದರ ಜೊತೆಗೆ ಕೂಡ್ಗಿ ಎನ್‌ಟಿಪಿಸಿ ವಿದ್ಯುತ್ ಸ್ಥಾವರಕ್ಕೆ ಕಲ್ಲಿದ್ದಲು ಪೂರೈಕೆ ಸುಗಮವಾಗಲಿದೆ.

ಇದನ್ನೂ ಓದಿ: 7.5 ಕಿ.ಮೀ. ಉದ್ದದ ನಮ್ಮ ಮೆಟ್ರೋ ಗುಲಾಬಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

55 ಕಿಲೋಮೀಟರ್ ಉದ್ದದ ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ಘಾಟ್ ರೈಲು ಮಾರ್ಗದ ವಿದ್ಯುದ್ದೀಕರಣ ಕಾಮಗಾರಿಯನ್ನೂ ಪ್ರಧಾನಿ ಇದೇ ವೇಳೆ ಲೋಕಾರ್ಪಣೆ ಮಾಡಿದ್ದು, ಈ ಕಾಮಗಾರಿ ಪೂರ್ಣಗೊಂಡಿರುವುದರಿಂದ ಬೆಂಗಳೂರು-ಮಂಗಳೂರು ಸಂಪೂರ್ಣ ರೈಲು ಮಾರ್ಗವು ಈಗ ವಿದ್ಯುದ್ದೀಕರಣಗೊಂಡಂತಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 1:57 pm, Fri, 13 November 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದಾರೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಗೆಳೆಯರ ಗಲಾಟೆ: ಕುನ್ನಿ ಎಂದ ಗಗನ್​​ಗೆ ಖಡಕ್ ವಾರ್ನಿಂಗ್ ಕೊಟ್ಟ ತಾಂಡವ್
ಗೆಳೆಯರ ಗಲಾಟೆ: ಕುನ್ನಿ ಎಂದ ಗಗನ್​​ಗೆ ಖಡಕ್ ವಾರ್ನಿಂಗ್ ಕೊಟ್ಟ ತಾಂಡವ್
ನಾಗ ಚೌತಿ ಹಬ್ಬದ ದಿನವೇ ದೇವಾಲಯದಲ್ಲಿ ಪ್ರತ್ಯಕ್ಷವಾದ ಹಾವು
ನಾಗ ಚೌತಿ ಹಬ್ಬದ ದಿನವೇ ದೇವಾಲಯದಲ್ಲಿ ಪ್ರತ್ಯಕ್ಷವಾದ ಹಾವು
ಪ್ರಶಾಂತಿ ಕುಟೀರ ಸುವರ್ಣ ಮಹೋತ್ಸವದಲ್ಲಿ ಮೋದಿ ಭಾಗಿ ನೇರಪ್ರಸಾರ
ಪ್ರಶಾಂತಿ ಕುಟೀರ ಸುವರ್ಣ ಮಹೋತ್ಸವದಲ್ಲಿ ಮೋದಿ ಭಾಗಿ ನೇರಪ್ರಸಾರ
ಮೋದಿ ಸಂಚರಿಸುವಲ್ಲೆಲ್ಲ ಕೈ-ಕಮಲ ಕಾರ್ಯಕರ್ತರ ಫ್ಲೆಕ್ಸ್​ಗಳು ಝಗಮಗ!
ಮೋದಿ ಸಂಚರಿಸುವಲ್ಲೆಲ್ಲ ಕೈ-ಕಮಲ ಕಾರ್ಯಕರ್ತರ ಫ್ಲೆಕ್ಸ್​ಗಳು ಝಗಮಗ!
ಲಾಭ ಪಡೆಯಲು ಕಳ್ಳಾಟ ಆಡಿದ್ರಾ ಆಸಿಯಾ? ಸೌಂದರ್ಯಾ ಛೀಮಾರಿ
ಲಾಭ ಪಡೆಯಲು ಕಳ್ಳಾಟ ಆಡಿದ್ರಾ ಆಸಿಯಾ? ಸೌಂದರ್ಯಾ ಛೀಮಾರಿ
ಇಂದು ಈ ರಾಶಿಯವರು ಅತಿಯಾಗಿ ನಂಬಿದವರಿಂದ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಅತಿಯಾಗಿ ನಂಬಿದವರಿಂದ ಮೋಸ ಹೋಗುವ ಸಾಧ್ಯತೆ
ಡಾ.ರಮ್ಯಾ ಬರೆದಿರುವ ‘ಚಲಿಸುವ ಬಂಡೆ’ ಪುಸ್ತಕದಲ್ಲಿ ಯಾವೆಲ್ಲಾ ವಿಚಾರಗಳಿವೆ?
ಡಾ.ರಮ್ಯಾ ಬರೆದಿರುವ ‘ಚಲಿಸುವ ಬಂಡೆ’ ಪುಸ್ತಕದಲ್ಲಿ ಯಾವೆಲ್ಲಾ ವಿಚಾರಗಳಿವೆ?
ಲೀಲಾವತಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ವಿನೋದ್ ರಾಜ್ ಬೇಸರ
ಲೀಲಾವತಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ವಿನೋದ್ ರಾಜ್ ಬೇಸರ
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..