AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯೋಗ’ಕ್ಕೆ ಕರ್ನಾಟಕದ ಕೊಡುಗೆ ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರಿನ ಪ್ರಶಾಂತಿ ಕುಟೀರದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ, ಯೋಗ ಕ್ಷೇತ್ರಕ್ಕೆ ಕರ್ನಾಟಕದ ಕೊಡುಗೆಯನ್ನು ಸ್ಮರಿಸಿದ್ದಾರೆ. ವರನಟ ಡಾ. ರಾಜ್‌ಕುಮಾರ್ ಮತ್ತು ಹೆಚ್.ವಿ. ಶೇಷಾದ್ರಿ ಅವರನ್ನು ಉಲ್ಲೇಖಿಸಿ ಮಾತನಾಡಿದ ಅವರು, ಶಾಂತಿ ಕುಟೀರಂನ 50 ವರ್ಷಗಳ ಪಯಣವು ಸೇವೆ ಮತ್ತು ಸಮರ್ಪಣೆಯ ಕಥೆಯಾಗಿದೆ ಎಂದಿದ್ದಾರೆ.

'ಯೋಗ'ಕ್ಕೆ ಕರ್ನಾಟಕದ ಕೊಡುಗೆ ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ
ನರೇಂದ್ರ ಮೋದಿ Image Credit source: PTI
ಪ್ರಸನ್ನ ಹೆಗಡೆ
|

Updated on:Nov 13, 2026 | 12:15 PM

Share

ಬೆಂಗಳೂರು, ನವೆಂಬರ್​ 13: ಕರ್ನಾಟಕವು ಹಲವು ದಶಕಗಳಿಂದ ಯೋಗ ಕೇಂದ್ರವಾಗಿದ್ದು, ಇಲ್ಲಿನ ಅನೇಕರು ಯೋಗ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ ಎಂದು ಬೆಂಗಳೂರಿನಲ್ಲಿ ಪ್ರಶಾಂತಿ ಕುಟೀರದ 50ನೇ ವರ್ಷದ ಸಂಭ್ರಮಾಚರಣೆ ಮತ್ತು ಚಿಂ ಸಂಘಟಕರಾಗಿದ್ದ ಹೊಂಗಸಂದ್ರ ವೆಂಕಟರಾಮಯ್ಯ ಶೇಷಾದ್ರಿ  ಅವರ ಜನ್ಮ ಶತಮಾನೋತ್ಸವವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ. ಯೋಗದ ಮಹತ್ವದ ಬಗ್ಗೆ ವಿವರಣೆ ವೇಳೆ ವರನಟ ಡಾ.ರಾಜ್​ಕುಮಾರ್ ಅವರನ್ನೂ ಪ್ರಧಾನಿ ​ಸ್ಮರಿಸಿದ್ದಾರೆ. ಹೆಚ್​.ವಿ.ಶೇಷಾದ್ರಿಯವರು ಲಕ್ಷಾಂತರ ಜನರಿಗೆ ಸ್ಫೂರ್ತಿಯಾಗಿದ್ದರು. ಆರ್​ಎಸ್​ಎಸ್​ನಲ್ಲಿ ಇದ್ದುಕೊಂಡು ಅನೇಕರಿಗೆ ಮಾರ್ಗದರ್ಶಕರಾಗಿದ್ದರು ಎಂದವರು ತಿಳಿಸಿದ್ದಾರೆ.

ಡಾ. ರಾಜ್‌ಕುಮಾರ್ ಅವರನ್ನೂ ಸ್ಮರಿಸಿದ ಮೋದಿ

ಕನ್ನಡ ಚಿತ್ರರಂಗದ ಮೇರು ನಟ ಡಾ. ರಾಜ್‌ಕುಮಾರ್ ಅವರನ್ನೂ ಉದಾಹರಿಸಿದ ಪ್ರಧಾನಿ ಮೋದಿ, ಕಲಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರೂ ಯೋಗಕ್ಕೆ ಕೊಡುಗೆ ನೀಡಿದ ಅನೇಕ ಮಹನೀಯರು ನಮ್ಮಲ್ಲಿದ್ದಾರೆ ಎಂದರು. ಪ್ರಶಾಂತಿ ಕುಟೀರಂನ 50 ವರ್ಷಗಳ ಪಯಣವು ಸೇವೆ ಮತ್ತು ಸಮರ್ಪಣೆಯ ಕಥೆಯಾಗಿದೆ. ಪ್ರತಿಯೊಬ್ಬ ಭಾರತೀಯನೂ ಈ ಬಗ್ಗೆ ತಿಳಿದುಕೊಳ್ಳಬೇಕು. ಒಂದು ಸರಳ ಯೋಗ ಕೇಂದ್ರವು ಇಷ್ಟು ದೊಡ್ಡ ಆಂದೋಲನವಾಗಿ ಬೆಳೆದಿರುವುದು ಸ್ವತಃ ಸ್ಫೂರ್ತಿದಾಯಕ ಸಂಗತಿ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಹೆಚ್.ವಿ. ಶೇಷಾದ್ರಿ ಅವರನ್ನು ನೆನಪಿಸಿಕೊಂಡಾಗ ಮೊದಲು ನೆನಪಾಗುವುದು ಅವರ ಸರಳ ಸ್ವಭಾವ. ದೊಡ್ಡ ವ್ಯಕ್ತಿತ್ವ ಮತ್ತು ಅಪಾರ ಅನುಭವ ಹೊಂದಿದ್ದರೂ ಅವರ ನಡೆನುಡಿಯಲ್ಲಿ ವಿನಯವಿತ್ತು. ತಾವು ಹಿಂದೆಯೇ ಉಳಿದು ಇತರರನ್ನು ಮುಂದೆ ತರುವುದು, ಜನರನ್ನು ಒಗ್ಗೂಡಿಸಿ ದೇಶಕ್ಕಾಗಿ ಅವರನ್ನು ಸಿದ್ಧಪಡಿಸುವುದರಲ್ಲಿ ಅವರು ನಂಬಿಕೆ ಇಟ್ಟಿದ್ದರು. ಇದು ಅವರ ಜೀವನದ ಪ್ರಮುಖ ಕಾರ್ಯವಾಗಿತ್ತು ಎಂದು ಮೋದಿ ಸ್ಮರಿಸಿದ್ದಾರೆ. ಮಗುವಿನ ಆರೈಕೆಗಾಗಿ ತಾಯಿ ಇಡೀ ರಾತ್ರಿ ನಿದ್ರಿಸದೆ ಮಗುವಿನ ಯೋಗಕ್ಷೇಮ ನೋಡಿಕೊಳ್ಳುತ್ತಾಳೆ. ಯಾವುದೇ ಸ್ವಾರ್ಥವಿಲ್ಲದೆ ದುಡಿಯುತ್ತಾಳೆ. ಇದೇ ಭಾವನೆಯನ್ನು ಸಮಾಜದ ಕಡೆಗೂ ವಿಸ್ತರಿಸಿದರೆ ಸಮಾಜಕ್ಕೆ ಅಪಾರ ಒಳಿತಾಗುತ್ತದೆ ಎಂದು ಶೇಷಾದ್ರಿ ಅವರು ಆಗಾಗ್ಗೆ ಉದಾಹರಣೆ ನೀಡುತ್ತಿದ್ದರು ಎಂದಿದ್ದಾರೆ. ಹೆಚ್.ವಿ. ಶೇಷಾದ್ರಿ ಅವರ ಪ್ರೀತಿ ಮತ್ತು ಮಾರ್ಗದರ್ಶನವನ್ನು ಹಲವು ವರ್ಷಗಳ ಕಾಲ ತಾವು ಪಡೆದಿದ್ದಾಗಿ ತಿಳಿಸಿದ ಪ್ರಧಾನಿ ಮೋದಿ, ಅವರೊಂದಿಗೆ ಕಳೆದ ಕ್ಷಣಗಳು ಮತ್ತು ಅವರು ಹೇಳುತ್ತಿದ್ದ ಮಾತುಗಳು ಇಂದಿಗೂ ತಮ್ಮ ಪಾಲಿಗೆ ಅಮೂಲ್ಯ ನೆನಪು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಶಾಂತಿ ಕುಟೀರಕ್ಕೆ ಸುವರ್ಣ ಸಂಭ್ರಮ: ಯೋಗ ಕ್ಷೇತ್ರದ ಐದು ದಶಕಗಳ ಪಯಣಕ್ಕೆ ಪ್ರಧಾನಿ ಮೋದಿ ಸಾಕ್ಷಿ

ನಾವು ಸಮಾಜಕ್ಕೆ ಎರಡೂ ಕೈಗಳಿಂದ ಕೊಟ್ಟರೆ, ಸಮಾಜ ಲಕ್ಷಾಂತರ ಕೈಗಳಿಂದ ನಮಗೆ ಮರಳಿ ನೀಡುತ್ತದೆ ಎಂದು ಶೇಷಾದ್ರಿ ಅವರು ಹೇಳುತ್ತಿದ್ದರು. ತಮ್ಮ ಜೀವನದಲ್ಲಿ ಈ ಮಾತು ಹಲವು ಬಾರಿ ನಿಜವಾಗಿರುವುದನ್ನು ಕಂಡಿದ್ದೇನೆ. ಜನರ ಸೇವೆ ಮಾಡುವಾಗಲೆಲ್ಲ ಅವರ ಆಶೀರ್ವಾದ ದೊರೆತಿದೆ. ಅದುವೇ ತಮ್ಮ ಜೀವನದ ಅತ್ಯಂತ ದೊಡ್ಡ ಆಸ್ತಿಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಕಳೆದ 12 ವರ್ಷಗಳಲ್ಲಿ ಭಾರತ ತನ್ನ ಸಂಸ್ಕೃತಿ, ಜ್ಞಾನ ವಿಜ್ಞಾನವನ್ನು ಪೂರ್ಣ ವಿಶ್ವಾಸದೊಂದಿಗೆ ಜಗತ್ತಿನ ಮುಂದೆ ಇಡುತ್ತಿದೆ. ಇದರ ಫಲವಾಗಿ ಇಂದು ವಿಶ್ವ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ವಿಶ್ವದ ಎಲ್ಲಾ ರಾಷ್ಟ್ರಗಳು ಪ್ರತಿವರ್ಷವೂ ಯೋಗ ದಿನ ಆಚರಿಸುತ್ತಿದ್ದು, ಅಮೆರಿಕದಿಂದ ಆಸ್ಟ್ರೇಲಿಯಾವರೆಗೆ ಯೋಗ ದಿನಾಚರಣೆ ಮಾಡಲಾಗ್ತಿದೆ. ವಿದೇಶಿಯರಿಗೆ ಭಾರತ ಅರಿತುಕೊಳ್ಳಲು ಯೋಗವು ಒಂದು ಬಾಗಿಲು ಆಗಿದೆ. ವಿಶ್ವದ ಯಾವುದೇ ದೇಶಕ್ಕೆ ನಾನು ಹೋದ್ರೂ ಯೋಗದ ಬಗ್ಗೆ ಅಲ್ಲಿನ ನಾಯಕರು ನನ್ನ ಜೊತೆ ಚರ್ಚೆ ಮಾಡುತ್ತಾರೆ. ವಿಶ್ವದ ದೊಡ್ಡ ರಾಷ್ಟ್ರಗಳ ಅಧ್ಯಕ್ಷರ ಕುಟುಂಬವು ಯೋಗದಲ್ಲಿ ತೊಡಗಿವೆ. ಇದು ಭಾರತೀಯರ ನಮ್ಮೆಲ್ಲರ ಸಾಮೂಹಿಕ ಪ್ರಯತ್ನದಿಂದ ಸಾಧ್ಯವಾಗಿದೆ. ಮುಂದಿನ 25 ವರ್ಷಗಳಲ್ಲಿ ಭಾರತವು ವಿಕಸಿತ ಭಾರತ ಆಗಲಿದೆ ಎಂದು ಪ್ರಧಾನಿ ಹೇಳಿದ್ದಾರೆ.

‘ಸ್ವಾಮಿ ವಿವೇಕಾನಂದರಂತಹ ಮಹಾತ್ಮರ ಪ್ರೇರಣೆ’

ಭಾರತವು ಬ್ರಿಟಿಷರ ಗುಲಾಮಗಿರಿಯ ಸಂಕೋಲೆಗಳಲ್ಲಿ ಸಿಲುಕಿದ್ದ ಸಂದರ್ಭದಲ್ಲಿ ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿದ್ದರು. ಅದೇ ಸಮಯದಲ್ಲಿ ಸ್ವಾಮಿ ವಿವೇಕಾನಂದರಂತಹ ರಾಷ್ಟ್ರೀಯ ಆಧ್ಯಾತ್ಮಿಕ ನಾಯಕರು ಭಾರತದ ಆಧ್ಯಾತ್ಮಿಕ ಪ್ರಜ್ಞೆಯನ್ನು ಜಾಗೃತಗೊಳಿಸುವುದರ ಜೊತೆಗೆ ದೇಶದ ಯುವಜನತೆಗೆ ಯೋಗದ ಮಾರ್ಗವನ್ನು ತೋರಿಸುತ್ತಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಸ್ವಾಮಿ ವಿವೇಕಾನಂದರಂತಹ ಮಹಾತ್ಮರ ಪ್ರೇರಣೆಯಿಂದಲೇ ಪ್ರಶಾಂತಿ ಕುಟೀರಂನಂತಹ ಸಂಸ್ಥೆಗಳು ಸ್ಥಾಪನೆಯಾದವು. ಈ ಸಂಸ್ಥೆಯು ಯೋಗವನ್ನು ಜನಸಾಮಾನ್ಯರಿಗೆ ತಲುಪಿಸುವ ಕೆಲಸವನ್ನಷ್ಟೇ ಮಾಡದೆ, ಆಧುನಿಕ ವೈಜ್ಞಾನಿಕ ಮಾನದಂಡಗಳ ಮೂಲಕ ಯೋಗದ ಪರಿಣಾಮಕಾರಿತ್ವವನ್ನು ಪರಿಶೀಲಿಸುವ ಸಂಶೋಧನೆಯನ್ನೂ ನಡೆಸಿದೆ ಎಂದು ತಿಳಿಸಿದ್ದಾರೆ.

‘ಸ್ವಾತಂತ್ರ್ಯಾನಂತರ  ಮೊದಲ ಬಾರಿಗೆ ದೇಶದಲ್ಲಿ ಪ್ರತ್ಯೇಕ ಆಯುಷ್ ಸಚಿವಾಲಯ’

ಆಯುರ್ವೇದ ಮತ್ತು ಯೋಗದ ಪ್ರಯೋಜನಗಳನ್ನು ಪ್ರತಿಯೊಬ್ಬ ನಾಗರಿಕನಿಗೂ ತಲುಪಿಸುವುದು ಸರ್ಕಾರದ ಪ್ರಯತ್ನವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಸಮಗ್ರ ಆರೋಗ್ಯ ರಕ್ಷಣೆಯು ಜಗತ್ತಿನಾದ್ಯಂತ ಹೊಸ ಆಂದೋಲನವಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಆಯುರ್ವೇದ ಮತ್ತು ಪ್ರಕೃತಿ ಚಿಕಿತ್ಸೆಯ ಬಗ್ಗೆಯೂ ಆಸಕ್ತಿ ಹೆಚ್ಚುತ್ತಿದೆ. ಸ್ವಾತಂತ್ರ್ಯಾನಂತರ ಇದೇ ಮೊದಲ ಬಾರಿಗೆ ದೇಶದಲ್ಲಿ ಪ್ರತ್ಯೇಕ ಆಯುಷ್ ಸಚಿವಾಲಯವನ್ನು ಸ್ಥಾಪಿಸಲಾಗಿದೆ. ಆಯುಷ್ ಉತ್ಪನ್ನಗಳ ರಫ್ತಿನ ಪ್ರಮಾಣವೂ ಹೆಚ್ಚುತ್ತಿದೆ. ಆಯುಷ್ ಕ್ಷೇತ್ರಕ್ಕೆ ಸಂಬಂಧಿಸಿದ ಆರ್ಥಿಕ ವಲಯವು ಹಲವು ಲಕ್ಷ ಕೋಟಿ ರೂಪಾಯಿಗಳ ಮಟ್ಟಕ್ಕೆ ಬೆಳೆದಿದೆ ಎಂದು ಮೋದಿ ಹೇಳಿದ್ದಾರೆ.

ಅರಿಶಿನಕ್ಕೆ ಜಾಗತಿಕ ಮಟ್ಟದಲ್ಲಿ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅದರ ಉತ್ಪಾದನೆ, ಗುಣಮಟ್ಟ ಮತ್ತು ರಫ್ತಿಗೆ ಉತ್ತೇಜನ ನೀಡಲು ಸರ್ಕಾರವು ರಾಷ್ಟ್ರೀಯ ಅರಿಶಿನ ಮಂಡಳಿಯನ್ನೂ ಸ್ಥಾಪಿಸಿದೆ. 140 ಕೋಟಿ ಭಾರತೀಯರು ವಿಕಸಿತ ಭಾರತದ ನಿರ್ಮಾಣದ ಸಾಮಾನ್ಯ ಗುರಿಯೊಂದಿಗೆ ಮುನ್ನಡೆಯುತ್ತಿದ್ದಾರೆ. ಇತ್ತೀಚಿನ ವಿಶ್ವಬ್ಯಾಂಕ್ ವರದಿಯು ಈ ಪ್ರಯತ್ನಕ್ಕೆ ಹೊಸ ವೇಗ ನೀಡಿದೆ. ಕಳೆದ 12ರಿಂದ 13 ವರ್ಷಗಳಲ್ಲಿ ಸುಮಾರು 50 ಕೋಟಿ ಭಾರತೀಯರು ತೀವ್ರ ಬಡತನದಿಂದ ಹೊರಬಂದಿದ್ದಾರೆ ಎಂದು ವರದಿ ತಿಳಿಸಿದೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 11:58 am, Fri, 13 November 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದಾರೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಪ್ರಶಾಂತಿ ಕುಟೀರ ಸುವರ್ಣ ಮಹೋತ್ಸವದಲ್ಲಿ ಮೋದಿ ಭಾಗಿ ನೇರಪ್ರಸಾರ
ಪ್ರಶಾಂತಿ ಕುಟೀರ ಸುವರ್ಣ ಮಹೋತ್ಸವದಲ್ಲಿ ಮೋದಿ ಭಾಗಿ ನೇರಪ್ರಸಾರ
ಲಾಭ ಪಡೆಯಲು ಕಳ್ಳಾಟ ಆಡಿದ್ರಾ ಆಸಿಯಾ? ಸೌಂದರ್ಯಾ ಛೀಮಾರಿ
ಲಾಭ ಪಡೆಯಲು ಕಳ್ಳಾಟ ಆಡಿದ್ರಾ ಆಸಿಯಾ? ಸೌಂದರ್ಯಾ ಛೀಮಾರಿ
ಇಂದು ಈ ರಾಶಿಯವರು ಅತಿಯಾಗಿ ನಂಬಿದವರಿಂದ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಅತಿಯಾಗಿ ನಂಬಿದವರಿಂದ ಮೋಸ ಹೋಗುವ ಸಾಧ್ಯತೆ
ಡಾ.ರಮ್ಯಾ ಬರೆದಿರುವ ‘ಚಲಿಸುವ ಬಂಡೆ’ ಪುಸ್ತಕದಲ್ಲಿ ಯಾವೆಲ್ಲಾ ವಿಚಾರಗಳಿವೆ?
ಡಾ.ರಮ್ಯಾ ಬರೆದಿರುವ ‘ಚಲಿಸುವ ಬಂಡೆ’ ಪುಸ್ತಕದಲ್ಲಿ ಯಾವೆಲ್ಲಾ ವಿಚಾರಗಳಿವೆ?
ಲೀಲಾವತಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ವಿನೋದ್ ರಾಜ್ ಬೇಸರ
ಲೀಲಾವತಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ವಿನೋದ್ ರಾಜ್ ಬೇಸರ
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..
ಬೆಂಗಳೂರಿನ ಮನಮೋಹಕ ತಾಣ ನಲ್ಲಿಗುಡ್ಡೆ ಅಭಿವೃದ್ಧಿಗೆ ಸರ್ಕಾರದ ಒತ್ತು
ಬೆಂಗಳೂರಿನ ಮನಮೋಹಕ ತಾಣ ನಲ್ಲಿಗುಡ್ಡೆ ಅಭಿವೃದ್ಧಿಗೆ ಸರ್ಕಾರದ ಒತ್ತು
‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ
‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ
'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್
'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್