AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ; ಹಲವೆಡೆ ರಸ್ತೆ ಸಂಚಾರಕ್ಕೆ ನಿರ್ಬಂಧ, ಇಲ್ಲಿದೆ ಪರ್ಯಾಯ ಮಾರ್ಗಗಳ ವಿವರ

ಶನಿವಾರ ಮಧ್ಯಾಹ್ನ 2 ರಿಂದ ರಾತ್ರಿ 7.30ರ ವರೆಗೆ ಮೋದಿ ರ‍್ಯಾಲಿ ನಡೆಯಲಿದ್ದು, ಈ ಅವಧಿಯಲ್ಲಿ ಸಂಚಾರ ನಿರ್ಬಂಧ ಹೇರಲಾಗಿದೆ. ಪರ್ಯಾಯ ರಸ್ತೆಗಳ ಬಳಕೆಗೆ ಬೆಂಗಳೂರು ಸಂಚಾರಿ ಪೊಲೀಸರು ಮನವಿ ಮಾಡಿದ್ದು, ಆ ಕುರಿತ ವಿವರ ಇಲ್ಲಿದೆ.

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ; ಹಲವೆಡೆ ರಸ್ತೆ ಸಂಚಾರಕ್ಕೆ ನಿರ್ಬಂಧ, ಇಲ್ಲಿದೆ ಪರ್ಯಾಯ ಮಾರ್ಗಗಳ ವಿವರ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Apr 28, 2023 | 5:13 PM

Share

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಜ್ಯ ವಿಧಾನಸಭೆ ಚುನಾವಣೆ (Karnataka Assembly Elections 2023) ಪ್ರಯುಕ್ತ ಶನಿವಾರ ಬೆಂಗಳೂರಿಗೆ ಆಗಮಿಸಲಿದ್ದು ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಹೀಗಾಗಿ ಭದ್ರತಾ ಕಾರಣಕ್ಕಾಗಿ ಹಲವು ಪ್ರದೇಶಗಳಲ್ಲಿ ರಸ್ತೆ ಸಂಚಾರಕ್ಕೆ ಪೊಲೀಸರು ನಿರ್ಬಂಧ ವಿಧಿಸಿದ್ದಾರೆ. ಶನಿವಾರ ಮಧ್ಯಾಹ್ನ 2 ರಿಂದ ರಾತ್ರಿ 7.30ರ ವರೆಗೆ ಮೋದಿ ರ‍್ಯಾಲಿ ನಡೆಯಲಿದ್ದು, ಈ ಅವಧಿಯಲ್ಲಿ ಸಂಚಾರ ನಿರ್ಬಂಧ ಹೇರಲಾಗಿದೆ. ಪರ್ಯಾಯ ರಸ್ತೆಗಳ ಬಳಕೆಗೆ ಬೆಂಗಳೂರು ಸಂಚಾರಿ ಪೊಲೀಸರು ಮನವಿ ಮಾಡಿದ್ದು, ಆ ಕುರಿತು ವಿವರ ನೀಡಿದ್ದಾರೆ.

ಯಾವೆಲ್ಲ ರಸ್ತೆಗಳಲ್ಲಿ ಸಂಚಾರ ನಿರ್ಬಂಭ?

  • ಹಳೆ ಏರ್ಪೋರ್ಟ್ ರಸ್ತೆ
  • ಕಬ್ಬನ್ ರಸ್ತೆ
  • ಅಂಬೇಡ್ಕರ್ ರಸ್ತೆ
  • ಕೃಂಬಿಗಲ್ ರಸ್ತೆ
  • ದೇವಾಂಗ ರಸ್ತೆ
  • ಕೇಂಬ್ರಿಡ್ಜ್ ಲೇಔಟ್ ರಸ್ತೆ
  • ಡಿಕನ್​ಸನ್ ರಸ್ತೆ
  • ಲಾಲ್ ಭಾಗ್ ವೆಸ್ಟ್ ಗೇಟ್ ರಸ್ತೆ
  • ಕೆಆರ್. ಸರ್ಕಲ್
  • ಆರ್​​ವಿ ಕಾಲೇಜ್ ರಸ್ತೆ
  • ಲಾಲ್ ಭಾಗ್ ಮುಖ್ಯ ರಸ್ತೆ
  • ಬಸನವಗುಡಿ 50 ಅಡಿ ಕೆನರಾ ಬ್ಯಾಂಕ್ ರಸ್ತೆ

ಈ ಮೇಲೆ ಉಲ್ಲೇಖಿಸಿದ ರಸ್ತೆಗಳ ಬದಲಾಗಿ ಪರ್ಯಾಯ ಮಾರ್ಗದ ಮೂಲಕ ಸಂಚಾರಕ್ಕೆ ಪೊಲೀಸರು ಮನವಿ ಮಾಡಿದ್ದಾರೆ.

ಪರ್ಯಾಯ ಮಾರ್ಗಗಳ ವಿವರ ಹೀಗಿದೆ

  1. ಮಾಗಡಿ ಕಡೆಯಿಂದ ಬೆಂಗಳೂರು ನಗರದ ಕಡೆಗೆ ಬರುವ ವಾಹನಗಳು ತಾವರೆಕೆರೆ ಜಂಕ್ಷನ್​ನಲ್ಲಿ ಬಲತಿರುವು ಪಡೆದು ಹೆಮ್ಮಿಗೆಪುರ ಕೊಮ್ಮಘಟ್ಟ ಕೆಂಗೇರಿ ಮೂಲಕ ಮೈಸೂರು ರಸ್ತೆಗೆ ಸಂಚರಿಸಬಹುದಾಗಿದೆ.
  2. ಮಾಗಡಿ ಕಡೆಯಿಂದ ತುಮಕೂರು ರಸ್ತೆ ಕಡೆಗೆ ಸಂಚರಿಸುವ ವಾಹನಗಳು ತಾವರೆಕೆರೆ ಜಂಕ್ಷನ್‌ನಲ್ಲಿ ಎಡತಿರುವು ಪಡೆದು ಸೊಂಡೇಕೊಪ್ಪ ನೆಲಮಂಗಲ ಮೂಲಕ ಸಂಚರಿಸಬಹುದು.
  3. ತುಮಕೂರು ಕಡೆಯಿಂದ ಬಂದು ನೈಸ್ ರಸ್ತೆಯಲ್ಲಿ ಸಂಚರಿಸುವ ಸರಕು ವಾಹನಗಳು ನೆಲಮಂಗಲ ಸೊಂಡೇಕೊಪ್ಪ ಬೈಪಾಸ್‌ನಲ್ಲಿ ಬಲತಿರುವು ಪಡೆದು ಸೊಂಡೇಕೊಪ್ಪ ತಾವರೆಕೆರೆ – ಹೆಮ್ಮಿಗೆಪುರ – ಕೊಮ್ಮಘಟ್ಟ ಕೆಂಗೇರಿ ಮೂಲಕ ಮೈಸೂರು ರಸ್ತೆಗೆ ಸಂಚರಿಸಬಹುದು.
  4. ನಗರದ ಒಳಭಾಗದಿಂದ ಮಾಗಡಿ ಕಡೆಗೆ ಸಂಚರಿಸುವ ವಾಹನಗಳು ಎಂಸಿ ಸರ್ಕಲ್‌ನಲ್ಲಿ ಎಡತಿರುವು ಪಡೆದು ಮೈಸೂರು ರಸ್ತೆ ಕೆಂಗೇರಿ – ಕೊಮ್ಮಘಟ್ಟ – ಹೆಮ್ಮಿಗೆಪುರ – ತಾವರೆಕೆರೆ ಮೂಲಕ ಸಂಚರಿಸಬಹುದು.
  5. ನಾಯಂಡಹಳ್ಳಿ ಕಡೆಯಿಂದ ತುಮಕೂರು ರಸ್ತೆ ಕಡೆಗೆ ಬರುವ ವಾಹನಗಳು ನಾಯಂಡಹಳ್ಳಿ ಜಂಕ್ಷನ್‌ನಲ್ಲಿ ಮೈಸೂರು ರಸ್ತೆಗೆ ಚಲಿಸಿ ಕೆಂಗೇರಿ ಆರ್ ಆರ್ ಕಾಲೇಜು ಮೂಲಕ – ರಾಮೋಹಳ್ಳಿ, ಚಂದ್ರಪ್ಪ ಸರ್ಕಲ್ – ತಾವರೆಕೆರೆ ಮೂಲಕ ಮಾಗಡಿ ರಸ್ತೆ ಮತ್ತು ತುಮಕೂರು ರಸ್ತೆಗೆ ಸಂಚರಿಸಬಹುದು.
  6. ಸಿಎಂಟಿಐ ಜಂಕ್ಷನ್‌ನಿಂದ ನಾಯಂಡಹಳ್ಳಿ ಮೈಸೂರು ರಸ್ತೆ ಕಡೆಗೆ ಹೋಗುವ ವಾಹನಗಳು ಗೊರಗುಂಟೆಪಾಳ್ಯ – ವೆಸ್ಟ್ ಆಫ್ ಕಾರ್ಡ್ ರಸ್ತೆ – ಎಂ.ಸಿ ಸರ್ಕಲ್ – ವಿಜಯನಗರ ಮೂಲಕ ಮೈಸೂರು ರಸ್ತೆಗೆ ಸಂಚರಿಸಬಹುದು.
  7. ಹಳೇ ರಿಂಗ್ ರಸ್ತೆಯಲ್ಲಿ ಕೆಂಗೇರಿ ಕಡೆಯಿಂದ ತುಮಕೂರು ರಸ್ತೆ ಕಡೆಗೆ ಬರುವ ವಾಹನಗಳು ಉಲ್ಲಾಳ ಜಂಕ್ಷನ್​​ನಲ್ಲಿ ಎಡತಿರುವು ಪಡೆದು ಉಲ್ಲಾಳ ವಿಲೇಜ್, ರಾಮಸಂದ್ರ ಬ್ರಿಡ್ಜ್ ಹೆಮ್ಮಿಗೆಪುರ ತಾವರೆಕೆರೆ ಮೂಲಕ ತುಮಕೂರು ರಸ್ತೆಗೆ ಸಂಚರಿಸಬಹುದು.

ಏಪ್ರಿಲ್ 29ರಿಂದ ಮೇ 7ರ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಹಲವು ಬಾರಿ ರಾಜ್ಯಕ್ಕೆ ಆಗಮಿಸಲಿದ್ದು, 12-15 ಚುನಾವಣಾ ಪ್ರಚಾರ ರ‍್ಯಾಲಿಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ಮೂಲಗಳು ಇತ್ತೀಚೆಗೆ ತಿಳಿಸಿದ್ದವು. ಕೇವಲ 6 ದಿನಗಳ ಅವಧಿಯಲ್ಲಿ ಹತ್ತಾರು ರೋಡ್ ಶೋ, ರ‍್ಯಾಲಿಗಳಲ್ಲಿ ಮೋದಿ ಭಾಗವಹಿಸಲಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!