ಎಲ್ಲರೂ ಮೊಬೈಲ್ನ ಫ್ಲ್ಯಾಶ್ ಲೈಟ್ ಆನ್ ಮಾಡುವಂತೆ ಮನವಿ ಮಾಡಿದ ಮೋದಿ, ವಿಜಯ ಸಂಕಲ್ಪದ ಪ್ರಕಾಶ ಪ್ರತಿ ಮನೆ, ಪ್ರತಿಯೊಬ್ಬರ ಮನ ತಲುಪುವಂತೆ ಮಾಡಬೇಕು ಎಂದು ಕರೆ ನೀಡಿದರು. ಕೊನೆಯಲ್ಲಿ ಕಮಲ್ ಕಿಲೇಗ, ಕಮಲ್ ಕಿಲೇಗ ಘೋಷಣೆ ಕೂಗಲಾಯಿತು. ಅದರೊಂದಿಗೆ ಮೋದಿ ಕಾರ್ಯಕ್ರಮ ಸಂಪನ್ನಗೊಂಡಿತು.
ಮೋದಿ ಸಮಾಧಿಗೆ ಗುಂಡಿ ತೋಡುತ್ತಿದ್ದೇವೆ ಎಂದು ಕಾಂಗ್ರೆಸ್ ಹೇಳಿತ್ತು. ಆದರೆ, ಮೋದಿ ನಿಮ್ಮ ಕಮಲ ಅರಳಲಿದೆ ಎಂದು ಜನರು ಹೇಳುತ್ತಿದ್ದಾರೆ. ಕರ್ನಾಟಕದಲ್ಲಿ ಬೆಂಗಳೂರು ನಗರ ವೇಗಗತಿಯಲ್ಲಿ ಬೆಳೆಯುತ್ತಿದೆ. ಅದಕ್ಕಾಗಿ ಸಿಎಂ ಬೊಮ್ಮಾಯಿ ಮತ್ತು ಸಂಪುಟದ ಸದಸ್ಯರಿಗೆ ಅಭಿನಂದನೆ ಸಲ್ಲಿಸುತ್ತಿದ್ದೇನೆ ಎಂದು ಮೋದಿ ಹೇಳಿದರು.
ಕಾಂಗ್ರೆಸ್ ರಾಜ್ಯವನ್ನು ನಾಯಕರ ತಿಜೋರಿ ತುಂಬಿಸುವ ಎಟಿಎಂ ಆಗಿ ಮಾತ್ರ ಕಾಣುತ್ತಿದೆ. ಕಾಂಗ್ರೆಸ್ನವರು ಗ್ಯಾರಂಟಿ ನೀಡುತ್ತಿದ್ದಾರೆ. ಅವರ ಗ್ಯಾರಂಟಿ ಪರಿಣಾಮ ಬೀರದು ಎಂಬುದಕ್ಕೆ ಹಿಮಾಚಲ ಪ್ರದೇಶವೇ ಉದಾಹರಣೆ. ಅಲ್ಲಿ ಚುನಾವಣೆಗೂ ಮುನ್ನ ದೊಡ್ಡ ದೊಡ್ಡ ಘೋಷಣೆಗಳನ್ನು ಮಾಡಿದರು. ಆದರೆ ಆಮೇಲೆ ಬಜೆಟ್ನಲ್ಲಿ ಏನೇನೂ ನೀಡಲಿಲ್ಲ. ಅವರ ಗ್ಯಾರಂಟಿಗಳು ಅಷ್ಟೇ. ಕರ್ನಾಟಕದಲ್ಲಿಯೂ ಅವರಿಗೆ ಯಾವುದೇ ಪಾಸಿಟಿವ್ ಅಜೆಂಡಾಗಳಿಲ್ಲ. ಕಾಂಗ್ರೆಸ್ ಕನಸು ಕಾಣುತ್ತಿದೆ.
ದಲಿತ, ಆದಿವಾಸಿ ಸೇರಿದಂತೆ ವಂಚಿತ ಸಮುದಾಯಗಳ ಏಳಿಗೆಯೇ ನಮ್ಮ ಆದ್ಯತೆಯಾಗಿದೆ. ಎಲ್ಲ ಆಶಯಗಳನ್ನು ಈಡೇರಿಸುವುದಕ್ಕಾಗಿ ಪೂರ್ಣ ಬಹುಮತದ ಅಗತ್ಯವಿದೆ. ಕರ್ನಾಟಕಕ್ಕೆ ಸ್ಥಿರ ಸರ್ಕಾರ ಬೇಕಾಗಿದೆ ಎಂದ ಮೋದಿ, ರಾಜ್ಯಕ್ಕೆ ಪೂರ್ಣ ಬಹುಮತದ ಸರ್ಕಾರ ಬೇಕೋ ಬೇಡವೋ ಎಂದು ಜನರನ್ನು ಪ್ರಶ್ನಿಸಿದರು. ಕರ್ನಾಟಕದ ಉಜ್ವಲ ಭವಿಷ್ಯಕ್ಕಾಗಿ ಇದು ಅಗತ್ಯ ಎಂದು ಅವರು ಪ್ರತಿಪಾದಿಸಿದರು.
ಬೆಂಗಳುರು ಮೈಸೂರು ಎಕ್ಸ್ಪ್ರೆಸ್ ವೇ, ವೈಟ್ಫಿಲ್ಡ್ ಮೆಟ್ರೋ ಲೋಕಾಪರ್ಣೆ ಸೇರಿದಂತೆ ಕರ್ನಾಟಕದಲ್ಲಿ ಕೈಗೊಂಡ ಅಭಿವೃದ್ಧಿ ಯೋಜನೆಗಳನ್ನು ಉಲ್ಲೇಖಿಸಿದ ಮೋದಿ, ಡಬಲ್ ಎಂಜಿನ್ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವಾಗಿದೆ ಎಂದರು. ಹಿಂದ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರದಲ್ಲಿತ್ತು. ಆ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಪ್ರಯೋಜನ ಹೆಚ್ಚು ರೈತರಿಗೆ ದೊರೆಯದಂತೆ ಮಾಡಿತ್ತು. ಆದರೆ, ಡಬಲ್ ಎಂಜಿನ್ ಸರ್ಕಾರ ಬಂದ ನಂತರ ಹೆಚ್ಚು ರೈತರಿಗೆ ಪ್ರಯೋಜನ ದೊರೆಯುವಂತಾಯಿತು. ಕರ್ನಾಟಕ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ಮತ್ತೆ ಹಣ ಸೇರಿಸಿ ರೈತರಿಗೆ ನೀಡಿತು. ಇದು ಡಬಲ್ ಎಂಜಿನ್ ಸರ್ಕಾರ ಪ್ರಯೋಜನ ಎಂದು ಮೋದಿ ಹೇಳಿದರು.
ಸಾಮಾಜಿಕ ಮಾಧ್ಯಮದಲ್ಲಿ ಒಂದು ವಿಡಿಯೋ ನೋಡಿದೆ. ರಾಜ್ಯದ ಪ್ರತಿಪಕ್ಷದ ಪ್ರಮುಖ ನಾಯಕರೊಬ್ಬರು ಕಾರ್ಯಕರ್ತರ ಕಪಾಳಕ್ಕೆ ಹೊಡೆಯುತ್ತಿದ್ದರು. ತಮ್ಮದೇ ಪಕ್ಷದ ಕಾರ್ಯಕರ್ತರನ್ನು ಗೌರವಿಸದವರು ಜನತಾ ಜನಾರ್ದನನ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ, ಬಿಜೆಪಿಯಲ್ಲಿ ಹಾಗಲ್ಲ. ಹಿರಿಯ, ಕಿರಿಯ ಎಂಬುದಿಲ್ಲ. ಎಲ್ಲರೂ ಒಂದೇ. ಎಲ್ಲ ಕಾರ್ಯಕರ್ತರನ್ನೂ ಗೌರವಿಸುತ್ತೇವೆ. ಕರ್ನಾಟಕದ ಎಲ್ಲ ಕಾರ್ಯಕರ್ತರೂ ನನ್ನ ಪರಮ ಮಿತ್ರರು. ನನ್ನ ಸಹೋದರರು ಎಂದು ಮೋದಿ ಹೇಳಿದರು.
ಹರಿಹರೇಶ್ವರ್ ಮಂದಿರದ ರೂಪದಲ್ಲಿ ಹರಿ ಮತ್ತು ಹರರ ಸಮನ್ವಯವಾಗಿದೆ. ಅಂಥ ಹರಿಹರದ ಸಮೀಪದಲ್ಲಿರುವ ಈ ಪುಣ್ಯ ಕ್ಷೇತ್ರದಲ್ಲಿ ಕರ್ನಾಟಕ ಬಿಜೆಪಿಯ ನಾಲ್ಕು ವಿಜಯ ಯಾತ್ರೆಗಳ ಮಹಾಸಂಗಮವಾಗಿದೆ. ಇದಕ್ಕಾಗಿ ಕರ್ನಾಟಕ ಬಿಜೆಪಿಯ ಎಲ್ಲ ಕಾರ್ಯಕರ್ತರಿಗೆ ಹೃದಯಾಂತರಾಳದ ಧನ್ಯವಾದ ಸಮರ್ಪಿಸುತ್ತಿದ್ದೇನೆ. ಪ್ರತಿ ಯಾತ್ರೆಯಲ್ಲೂ ಜನರ ವಿಶ್ವಾಸ ವ್ಯಕ್ತವಾಗಿರುವುದನ್ನು ವಿಡಿಯೋಗಳಲ್ಲಿ ನೋಡಿದ್ದೇನೆ. ಇದು ಅಭೂತಪೂರ್ವ ಮತ್ತು ಅದ್ಭುತ ಎಂದು ಮೋದಿ ಹೇಳಿದರು.
ಕಲಬುರ್ಗಿ ಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತವರಲ್ಲೇ ಬಿಜೆಪಿ ಗೆಲುವು ಸಾಧಿಸಿದೆ. ಇದು ವಿಜಯ ಯಾತ್ರೆಯ ಆರಂಭವಾಗಿದೆ. ವಿಜಯ ಸಂಕಲ್ಪ ಇಲ್ಲಿಂದಲೇ ಶುರುವಾಗಿದೆ ಎಂದು ಮೋದಿ ಹೇಳಿದರು.
ದಾವಣಗೆರೆಯ ನನ್ನ ಸಹೋದರ ಸಹೋದರಿಯರಿಗೆ ನಮಸ್ಕಾರಗಳು, ಕರ್ನಾಟಕದ ನನ್ನ ಬಿಜೆಪಿ ಕಾರ್ಯಕರ್ತ ಬಾಂಧವರಿಗೆ ನಮಸ್ಕಾರಗಳು ಎಂದು ಕನ್ನಡದಲ್ಲೇ ಮೋದಿ ಮಾತು ಆರಂಭಿಸಿದರು. ಕರ್ನಾಟಕದ ಬಿಜೆಪಿಗೆ ಧನ್ಯವಾದ ಸಮರ್ಪಿಸುತ್ತೇನೆ. ರಾಜ್ಯ ಬಿಜೆಪಿ ಈ ಕಾರ್ಯಕ್ರಮ ಆಯೋಜಿಸಿದ್ದರಿಂದ ನನಗೆ ನಿಮ್ಮನ್ನೆಲ್ಲ ಕಾಣಲು ಸಾಧ್ಯವಾಯಿತು. ನಿಮ್ಮೆಲ್ಲರ ದರ್ಶನ ನನಗೆ ದೊಡ್ಡ ಸೌಭಾಗ್ಯ ಎಂದು ಮೋದಿ ಹೇಳಿದರು.
ಕರ್ನಾಟಕದಲ್ಲಿ ಬಹುಮತ ಪಡೆದು ಮತ್ತೆ ಸರ್ಕಾರ ರಚನೆ ಮಾಡುತ್ತೇವೆ. ಮೋದಿ ಪ್ರಧಾನಿಯಾದ ಬಳಿಕ ಒಂದು ದಿನವೂ ವಿಶ್ರಾಂತಿ ಪಡೆದಿಲ್ಲ. ನಾವು ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸೋಣ. 2 ತಿಂಗಳು ಸರ್ಕಾರ ಯೋಜನೆಗಳನ್ನು ತಿಳಿಸಿ ಜನರ ಮನ ಗೆಲ್ಲೋಣ. ಇದು ವಿಜಯಯಾತ್ರೆಯ ಆರಂಭ ಎಂದು ದಾವಣಗೆರೆಯ ಜಿಎಂಐಟಿ ಮೈದಾನದಲ್ಲಿ ಮಹಾಸಂಗಮ ಸಮಾವೇಶದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು. ಕಾಂಗ್ರೆಸ್ ಪಕ್ಷ ಅನೇಕ ಗ್ಯಾರಂಟಿ ಕಾರ್ಡ್ ಕೊಡಲು ಹೊರಟಿದೆ. ಕಾಂಗ್ರೆಸ್ಸಿಗರು 70 ವರ್ಷಗಳ ಕಾಲ ಏನು ಕಡುಬು ತಿನ್ನುತ್ತಾ ಇದ್ರಾ? 70 ವರ್ಷ ಅಧಿಕಾರದಲ್ಲಿದ್ದ ಕಾಂಗ್ರೆಸ್ ಅಭಿವೃದ್ಧಿ ಕೆಲಸ ಮಾಡಲಿಲ್ಲ. ಆದ್ರೆ ನಮ್ಮ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಕಾಂಗ್ರೆಸ್ ಭರವಸೆಗಳನ್ನು ನಂಬುವ ಸ್ಥಿತಿಯಲ್ಲಿ ರಾಜ್ಯದ ಜನ ಇಲ್ಲ ಎಂದು ಅವರು ಹೇಳಿದರು.
ವಿಜಯಸಂಕಲ್ಪ ಮಹಾಸಂಗಮ ಸಮಾವೇಶದ ವೇದಿಕೆಗೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ. ಸಮಾವೇಶದ ವೇದಿಕೆ ಸುತ್ತ ಪ್ರದಕ್ಷಿಣೆ ಹಾಕಿದ ನಂತರ ಅವರು ವೇದಿಕೆಗೆ ಬಂದರು. ನೆರೆದಿದ್ದ ಜನಸ್ತೋಮ ‘ಮೋದಿ ಮೋದಿ’ ಎಂಬ ಘೋಷಣೆಗಳನ್ನು ಕೂಗುತ್ತಿತ್ತು.
ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರಿನ ಕಾರ್ಯಕ್ರಮ ಮುಗಿಸಿ ಪ್ರಧಾನಿ ನರೇಂದ್ರ ಮೋದಿ ಇದೀಗ ದಾವಣಗೆರೆ ತಲುಪಿದ್ದಾರೆ.
ವೈಟ್ಫೀಲ್ಡ್ನಲ್ಲಿ ಮೆಟ್ರೋ ಮಾರ್ಗ ಉದ್ಘಾಟಿಸಿದ ಮೋದಿ ಮೆಟ್ರೋದಲ್ಲಿ ಪ್ರಯಾಣಿಸಿದ ನಂತರ ಇದೀಗ ದಾವಣಗೆರೆಗೆ ನಿರ್ಗಮಿಸಿದ್ದಾರೆ.
ವೈಟ್ಫೀಲ್ಡ್ನಲ್ಲಿ ಮೆಟ್ರೋ ಮಾರ್ಗ ಉದ್ಘಾಟಿಸಿದ ಮೋದಿ, ಅದೇ ಮೆಟ್ರೋದಲ್ಲಿ ಪ್ರಯಾಣ ಮಾಡಿದ್ದಾರೆ.
Karnataka | PM Modi inaugurates Whitefield (Kadugodi) to Krishnarajapura line of Bengaluru Metro pic.twitter.com/C07MbTMxU7
— ANI (@ANI) March 25, 2023
ಬೆಂಗಳೂರಿನ ವೈಟ್ಫೀಲ್ಡ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮೆಟ್ರೋ ಮಾರ್ಗ ಉದ್ಘಾಟನೆ ಮಾಡಿದರು. ಕೆ.ಆರ್.ಪುರಂನಿಂದ ವೈಟ್‌ಫೀಲ್ಡ್‌ವರೆಗಿನ ನೂತನ ಮೆಟ್ರೋ ಮಾರ್ಗ 4,500 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿದೆ. 13.71 ಕಿಲೋಮೀಟರ್ ಇರುವ ನೂತನ ನೇರಳ ಮಾರ್ಗ 12 ಮೆಟ್ರೋ ನಿಲ್ದಾಣಗಳನ್ನು ಹೊಂದಿದೆ.
ವೈಟ್ ಫೀಲ್ಡ್ – ಕೆಆರ್ ಪುರಂ ಮೆಟ್ರೋ ಲೈನ್ ಲೋಕಾರ್ಪಣೆಗೆ ಕ್ಷಣಗಣನೆ ಆರಂಭ, ಕೆಲವೇ ಕ್ಷಣಗಳಲ್ಲಿ 13.71 ಕಿಮೀ ಉದ್ದದ ಮೆಟ್ರೋ ಲೈನ್ ಉದ್ಘಾಟಿಸಲಿರುವ ಪ್ರಧಾನಿ ಮೋದಿ.
ಕೆಲವೇ ಕ್ಷಣಗಳಲ್ಲಿ ಸತ್ಯಸಾಯಿ ಆಶ್ರಮದ ಹೆಲಿಪ್ಯಾಡ್ಗೆ ಆಗಮಿಸಲಿರುವ ಮೋದಿ, ಕಾರಿನ ಮೂಲಕ ಮೆಟ್ರೋ ಸ್ಟೇಷನ್ ವರೆಗೆ ರೋಡ್ ಶೋ ನಡೆಸಲಿದ್ದಾರೆ. ನಂತರ=ಮೆಟ್ರೋ ಸ್ಟೇಷನ್ಗೆ ತೆರಳಿ ಅಲ್ಲಿಂದ ಸತ್ಯಸಾಯಿ ಆಸ್ಪತ್ರೆ ನಿಲ್ದಾಣದವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಬೆಳೆಸಲಿದ್ದಾರೆ.
ಕರ್ನಾಟಕದ ನನ್ನ ಸಹೋದರ, ಸಹೋದರಿಯರಿಗೆ ನಮಸ್ಕಾರ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ, ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ವಿಶ್ವೇಶ್ವರಯ್ಯ ಜನ್ಮಸ್ಥಳವಾಗಿದೆ. ಇಂತಹ ಪುಣ್ಯಭೂಮಿಗೆ ಬಂದಿದ್ದು ನನ್ನ ಸೌಭಾಗ್ಯ. ಸತ್ಯಸಾಯಿ ಆಶ್ರಮದಿಂದ ಶೈಕ್ಷಣಿಕ, ಸಾಮಾಜಿಕ, ವೈದ್ಯಕೀಯ ಸೇವೆ ನಡೆಯುತ್ತಿದೆ. 2014ಕ್ಕಿಂತ ಮೊದಲು 300ಕ್ಕಿಂತ ಕಡಿಮೆ ಮೆಡಿಕಲ್ ಕಾಲೇಜುಗಳಿದ್ದವು ಇಂದು ದೇಶದಲ್ಲಿ 650ಕ್ಕೂ ಹೆಚ್ಚು ಮೆಡಿಕಲ್ ಕಾಲೇಜುಗಳಿವೆ. ಕರ್ನಾಟಕದಲ್ಲೇ ಸುಮಾರು 70ಕ್ಕೂ ಹೆಚ್ಚು ಮೆಡಿಕಲ್ ಕಾಲೇಜುಗಳು ಇವೆ. ಡಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕ ಅಭಿವೃದ್ಧಿ ಆಗುತ್ತಿದೆ. ಬಡವರ ಅಭಿವೃದ್ಧಿಯೇ ಬಿಜೆಪಿಯ ಪರಮೋಚ್ಛ ಗುರಿಯಾಗಿದೆ. ಆಯುಷ್ಮಾನ ಭಾರತ್ ಯೋಜನೆಯಿಂದ ಬಡ ರೋಗಿಗಳಿಗೆ ಅನುಕೂಲವಾಗಿದೆ. ಕರ್ನಾಟಕದ ಲಕ್ಷಾಂತರ ರೋಗಿಗಳಿಗೆ ಯೋಜನೆಯಿಂದ ಅನುಕೂಲವಾಗಿದೆ ಎಂದು ಹೇಳಿದರು. ಜತೆಗೆ, ಸಿಎಂ ಬೊಮ್ಮಾಯಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು. ಆರೋಗ್ಯದ ಜೊತೆಗೆ ಮಹಿಳೆಯರ ಕಲ್ಯಾಣ ನಮ್ಮ ಸರ್ಕಾರದ ಗುರಿ. ಗ್ರಾಮಗಳಲ್ಲಿ ಮಹಿಳಾ ಸಂಘಗಳ ಮೂಲಕ ಮಹಿಳೆಯರ ಸಶಕ್ತೀಕರಣವಾಗುತ್ತಿದೆ ಎಂದು ಮೋದಿ ಹೇಳಿದರು. ಅಲ್ಲದೆ, ಸಾಯಿಬಾಬಾ ಜೊತೆ ನನಗೆ ನಿಕಟ ಸಂಬಂಧ ಇತ್ತು ಎಂದರು.
ವೈಟ್ ಫಿಲ್ಡ್ ಮೆಟ್ರೋ ಲೈನ್ ಲೋಕಾರ್ಪಣೆ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರನ್ನು ನೋಡಲು ಸಾವಿರಾರು ಸಂಖ್ಯೆಯಲ್ಲಿ ಜನ ಆಗಮಿಸುತ್ತಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಆಶ್ರಮದ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ & ಸಂಶೋಧನಾ ಸಂಸ್ಥೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು.
ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಬಳಿಯ ಸತ್ಯಸಾಯಿ ಗ್ರಾಮಕ್ಕೆ ಪ್ರಧಾನಿ ಮೋದಿ ಆಗಮನ. ಮೆಡಿಕಲ್ ಕಾಲೇಜು ಉದ್ಘಾಟನಾ ಕಾರ್ಯಕ್ರಮದಲ್ಲಿ ಮೋದಿ ಭಾಗಿ.
ವಿಶ್ವೇಶ್ವರಯ್ಯ ಸಮಾಧಿ ಸ್ಥಳದತ್ತ ಆಗಮಿಸುತ್ತಿರುವ ಪ್ರಧಾನಿ ಮೋದಿ. ಮುದ್ದೇನಹಳ್ಳಿ ಸರ್ಕಲ್ ಬಳಿ ಜಮಾಯಿಸಿರುವ ಸಾರ್ವಜನಿಕರು. ಪ್ರಧಾನಿ ಮೋದಿ ಕಣ್ತುಂಬಿಕೊಳ್ಳಲು ಕಾಯುತ್ತಿರುವ ಸಾರ್ವಜನಿಕರು. ಸಾರ್ವಜನಿಕರತ್ತ ಕೈಬೀಸಿ ಸಮಾಧಿ ಸ್ಥಳ ತಲುಪಿದ ಪ್ರಧಾನಿ ಮೋದಿ.
ಪ್ರಧಾನಿ ನರೇಂದ್ರ ಮೋದಿ ಅವರು ಚಿಕ್ಕಬಳ್ಳಾಪುರ ತಲುಪಿದರು. ಎಚ್ಎಎಲ್ ಏರ್ಪೋರ್ಟ್ನಿಂದ ವಾಯುಪಡೆ ಹೆಲಿಕಾಪ್ಟರ್ ಮೂಲಕ ಅವರು ಆಗಮಿಸಿದರು.
ಪ್ರಧಾನಿ ನರೇಂದ್ರ ಮೋದಿಗೆ ಬೆಳ್ಳಿ ಇಟ್ಟಿಗೆ ಕಾಣಿಕೆ ಕೊಡಲು ಬಿಜೆಪಿ ಮುಖಂಡ ಯಶವಂತರಾವ್ ಜಾಧವ್ ತಯಾರಿ ನಡೆಸಿದ್ದಾರೆ. ಅಯೋದ್ಯೆ ರಾಮಮಂದಿರ ಮತ್ತು ರಾಮನ ಕೆತ್ತನೆ ಇರೋ ಇಟ್ಟಿಗೆ ಉಡುಗೊರೆ ನೀಡಲಾಗುತ್ತದೆ.
ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ಮೋದಿ ಸೇನಾ ಹೆಲಿಕಾಪ್ಟರ್ನಲ್ಲಿ ಮುದ್ದೇನಹಳ್ಳಿಯತ್ತ ಹೊರಟಿದ್ದಾರೆ.
ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆ ಮೋದಿ ಸ್ವಾಗತಿಸಲು ಸಿಎಂ ಬಸವರಾಜ ಬೊಮ್ಮಾಯಿ ಹೆಚ್ಎಎಲ್ ಏರ್‌ಪೋರ್ಟ್ ಗೆ ಆಗಮಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯಿಂದ ವೈಟ್ ಫೀಲ್ಡ್ ಮೆಟ್ರೋ ಸ್ಟೇಷನ್ ಲೋಕಾರ್ಪಣೆ ಹಿನ್ನೆಲೆ ಮೆಟ್ರೋ ಸ್ಟೇಷನ್ ಬಳಿ ರಸ್ತೆಗಳು ಸಿಂಗಾರಗೊಂಡಿವೆ. ಕೇಸರಿ ಬಾವುಟಗಳು ರಾರಾಜಿಸುತ್ತಿವೆ. ಸತ್ಯಸಾಯಿ ಆಶ್ರಮದ ಎಲಿಪ್ಯಾಡ್ ನಿಂದ ನೇರ ಮೆಟ್ರೋ ಸ್ಟೇಷನ್ ಬಳಿ ಆಗಮಿಸುವ ಮೋದಿ ಪ್ರಯಾಣ ಮಾಡುವ ರಸ್ತೆಯುದ್ದಕ್ಕೂ ಬೃಹತ್ ಕಟೌಟ್ ಹಾಗೂ ಬಾವುಟಗಳು ಅಬ್ಬರಿಸುತ್ತಿವೆ. ಮೋದಿ ಆಗಮನ ಹಿನ್ನೆಲೆ ಮೆಟ್ರೋ ಸ್ಟೇಷನ್ ಸುತ್ತಾಮುತ್ತಾ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ದಾವಣಗೆರೆಯಲ್ಲಿ ಇವತ್ತು ಬಿಜೆಪಿ ಮಹಾಸಂಗಮ ಬೃಹತ್ ಸಮಾವೇಶ ನಡೆಯಲಿದೆ. ಇದಕ್ಕಾಗಿ ಸ್ವತಃ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗುತ್ತಿದ್ದಾರೆ. ಈ ಹಿನ್ನೆಲೆ ದಾವಣಗೆರೆ ನಗರದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ನೋಡಿದಲ್ಲೆಲ್ಲಾ ಪೊಲೀಸ್ ಅಧಿಕಾರಿಗಳೇ ಕಾಣುತ್ತಿದ್ದಾರೆ. ಮತ್ತೊಂದೆಡೆ ಮೋದಿ ಕಾರ್ಯಕ್ರಮಕ್ಕೆ ಬರುವ ಜನರಿಗಾಗಿ ಭರ್ಜರಿ ಊಟದ ವ್ಯವಸ್ಥೆ ಮಾಡಲಾಗಿದೆ.
ಚಿಕ್ಕಬಳ್ಳಾಪುರ: ಮುದ್ದೇನಹಳ್ಳಿ ಗ್ರಾಮದ ಸತ್ಯಸಾಯಿ ಆಶ್ರಮಕ್ಕೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಮಿಸುತ್ತಿರುವ ಹಿನ್ನಲೆ ಮುದ್ದೇನಹಳ್ಳಿ ಗ್ರಾಮದಲ್ಲಿ ಪೊಲೀಸರು ಹೆಜ್ಜೆ ಹೆಜ್ಜೆಗೂ ಹೈ ಅಲರ್ಟ್ ಮಾಡಿದ್ದಾರೆ. ರಸ್ತೆಯುದ್ದಕ್ಕೂ ಬ್ಯಾರಿಕೇಡ್ ಹಾಕಿ ಭಾರಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ವೈಟ್ ಫೀಲ್ಡ್-ಕೆ.ಆರ್.ಪುರ ಮೆಟ್ರೋ(Whitefield-KR Puram metro) ಸಂಚಾರಕ್ಕೆ ಇಂದು ಹಸಿರು ನಿಶಾನೆ ಸಿಗಲಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿಯೇ(Narendra Modi) ಬೆಂಗಳೂರಿಗೆ ಆಗಮಿಸಲಿದ್ದು, ಯೋಜನೆ ಲೋಕಾರ್ಪಣೆ ಗೊಳಿಸಲಿದ್ದಾರೆ.
ವೈಟ್ ಫೀಲ್ಡ್-ಕೆ.ಆರ್.ಪುರ ಮೆಟ್ರೋ ಉದ್ಘಾಟನೆಗೆ ಮೋದಿ ಆಗಮನ; ಹಲವು ಕಡೆ ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗ ವಿವರ ಇಲ್ಲಿದೆ#NarendraModi #whitefieldkrpurammetro #bengaluru #nammametro #BMRCL #BasavarajBommaihttps://t.co/I4d8iQWR4b
— TV9 Kannada (@tv9kannada) March 25, 2023
ರಾಜ್ಯ ವಿಧಾನಸಭಾ ಚುನಾವಣೆಗೆ (Karnataka Assembly Elections 2023) ಕೌಂಟ್‌ಡೌನ್ ಶುರುವಾಗಿದೆ. ರಾಜ್ಯಕ್ಕೆ ಇಂದು ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ರಾಜಧಾನಿ ಬೆಂಗಳೂರು, ಚಿಕ್ಕಬಳ್ಳಾಪುರ, ದಾವಣಗೆರೆ ಸೇರಿ ಮಧ್ಯ ಕರ್ನಾಟಕದಲ್ಲಿ ಮತಬೇಟೆ ನಡೆಸಿದ್ದಾರೆ. ಕರುನಾಡಿನಲ್ಲಿ ಬಿಜೆಪಿ ಭದ್ರಕ್ಕೆ ಸೂತ್ರ ಹೆಣೆಯಲಾಗಿದೆ. ಸದ್ಯ ರಾಜ್ಯದಲ್ಲಿ ಮೋದಿ ರಂಗು ಮೇಳೈಸಿದೆ. ಎಲ್ಲೆಡೆ ಕೇಸರಿ ಬಾವುಟಗಳು ಹಾರಾಡಿವೆ. ಬೆಳಗ್ಗೆ 10.10ಕ್ಕೆ ಹೆಚ್ಎಎಲ್ ಏರ್ಪೋರ್ಟ್ಗೆ ಬಂದ ಮೋದಿ ಅಲ್ಲಿಂದ ಹೆಲಿಕಾಪ್ಟರ್ನಲ್ಲಿ ಚಿಕ್ಕಬಳ್ಳಾಪುರಕ್ಕೆ ತೆರಳಿದ್ದಾರೆ. ಬೆಳಗ್ಗೆ 10.35ಕ್ಕೆ ಚಿಕ್ಕಬಳ್ಳಾಪುರ ತಲುಪಿ ಬೆಳಗ್ಗೆ 10.45ಕ್ಕೆ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ & ಸಂಶೋಧನಾ ಸಂಸ್ಥೆ ಉದ್ಘಾಟನೆ ಮಾಡಿದ್ದಾರೆ. ಮಧ್ಯಾಹ್ನ 12.55ಕ್ಕೆ ವೈಟ್ಫೀಲ್ಡ್ ಮೆಟ್ರೋ ಸ್ಟೇಷನ್ಗೆ ಆಗಮಿಸಿ ಮಧ್ಯಾಹ್ನ 1 ಗಂಟೆಗೆ ವೈಟ್ಫೀಲ್ಡ್ ಮೆಟ್ರೋ ಮಾರ್ಗ ಉದ್ಘಾಟಿಸಿದ್ದಾರೆ. ಉದ್ಘಾಟನೆ ನಂತರ ಮೆಟ್ರೋದಲ್ಲಿ ಪ್ರಯಾಣ ಮಾಡಿದ್ದಾರೆ. ಇನ್ನು ಮಧ್ಯಾಹ್ನ 1.50ಕ್ಕೆ ಬೆಂಗಳೂರಿನಿಂದ ಹೆಲಿಕಾಪ್ಟರ್ನಲ್ಲಿ ದಾವಣಗೆರೆಗೆ ತೆರಳಿ ಮಧ್ಯಾಹ್ನ 3.30ಕ್ಕೆ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಿ ಸಂಜೆ 5.15ಕ್ಕೆ ದಾವಣಗೆರೆಯಿಂದ ಹೆಲಿಕಾಪ್ಟರ್ನಲ್ಲಿ ಶಿವಮೊಗ್ಗಕ್ಕೆ ಪ್ರಯಾಣಿಸಿದ್ದಾರೆ. ಬಳಿಕ ಸಂಜೆ 5.55ಕ್ಕೆ ಶಿವಮೊಗ್ಗ ಏರ್ಪೋರ್ಟ್ನಿಂದ ದೆಹಲಿಗೆ ತೆರಳಲಿದ್ದಾರೆ. ಬನ್ನಿ ಮೋದಿ ಅವರ ರಾಜ್ಯದ ಭೇಟಿಯ ಸಂಪೂರ್ಣ ಅಪ್ಡೇಟ್ಸ್ ಇಲ್ಲಿದೆ.
Published On - 9:42 am, Sat, 25 March 23