ಮೋದಿ ಚಾಲನೆ ಕೊಟ್ಟ ಹಳದಿ ಮಾರ್ಗದ ಮೆಟ್ರೋ ಟಿಕೆಟ್ ದರ ಹೇಗಿದೆ? ಎಲ್ಲೆಲ್ಲಿ ನಿಲುಗಡೆ?

ಇಂದು (ಆಗಸ್ಟ್ 10) ಬೆಂಗಳೂರು ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ, ಬೆಳಗ್ಗೆ ಸಂಗೊಳ್ಳಿ ರಾಯಣ್ಣ ವಿಮಾನ ನಿಲ್ದಾಣದಲ್ಲಿ ಮೂರು ವಂದೇ ಭಾರತ್ ಎಕ್ಸ್​​ ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಿದರು. ಬಳಿಕ ಉದ್ಯಾನ ನಗರಿಯ ನಮ್ಮ ಮೆಟ್ರೋದ ಹಳದಿ ಮಾರ್ಗ (Namma Metro Yellow Line)ಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದರು. ಇನ್ನು ಮೋದಿ ಚಾಲನೆ ಕೊಟ್ಟಿರುವ ಯೆಲ್ಲೋ ಮಾರ್ಗದ ಪ್ರಯಾಣ ದರ ಎಷ್ಟು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಮೋದಿ ಚಾಲನೆ ಕೊಟ್ಟ ಹಳದಿ ಮಾರ್ಗದ ಮೆಟ್ರೋ ಟಿಕೆಟ್ ದರ ಹೇಗಿದೆ? ಎಲ್ಲೆಲ್ಲಿ ನಿಲುಗಡೆ?
ಹಳದಿ ಮಾರ್ಗ ಮೆಟ್ರೀಗೆ ಮೋದಿ ಚಾಲನೆ

Updated on: Aug 10, 2025 | 12:51 PM

ಬೆಂಗಳೂರು, (ಆಗಸ್ಟ್ 10): ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು (ಆಗಸ್ಟ್ 10) ಬೆಂಗಳೂರಿನ ಆರ್​​.ವಿ ರಸ್ತೆಯಿಂದ ಬೊಮ್ಮಸಂದ್ರದ ನಡುವಿನ ಹಳದಿ ಮಾರ್ಗದ ಮೆಟ್ರೋ (Yellow Metro Line) ಸಂಚಾರಕ್ಕೆ ಚಾಲನೆ ನೀಡಿದರು. ರಾಗಿಗುಡ್ಡ ಮೆಟ್ರೋ ನಿಲ್ದಾಣದಲ್ಲಿ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿಸಿದ್ದು, ಈ ವೇಳೆ ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, (Siddaramaiah) ಕೇಂದ್ರ ಸಚಿವರಾದ ಮನೋಹರ್​ ಲಾಲ್ ಖಟ್ಟರ್, ಶೋಭಾ ಕರಂದ್ಲಾಜೆ, ಡಿಸಿಎಂ ಡಿ.ಕೆ.ಶಿವಕುಮಾರ್​, ಸಂಸದರಾದ ಡಾ.ಸಿ.ಎನ್.ಮಂಜುನಾಥ್, ತೇಜಸ್ವಿ ಸೂರ್ಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ಉಪಸ್ಥಿತರಿದ್ದರು. 2014ರಲ್ಲಿ ಆರಂಭವಾದ ಈ ಕಾಮಗಾರಿ 2021ಕ್ಕೆ ಪೂರ್ಣಗೊಳ್ಳಬೇಕಿತ್ತು. ಆದರೆ ಕಾರಣಾಂತರಗಳಿಂದ ಮುಂದೂಡಿಕೆ ಮಾಡಿ ಈಗ ಉದ್ಘಾಟನೆ ಮಾಡಲಾಗುತ್ತಿದೆ. ಈ ಮಾರ್ಗಕ್ಕೆ ಒಟ್ಟು 7,616 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗಿದೆ.

ಒಟ್ಟು 16 ನಿಲ್ದಾಣಗಳು

ಆರ್‌.ವಿ ರಸ್ತೆ ಮತ್ತು ಬೊಮ್ಮಸಂದ್ರ ನಡುವೆ ಮೂರು ಮೆಟ್ರೋ ರೈಲುಗಳು ಸಂಚಾರ ಮಾಡಲಿದ್ದು, ಮೆಟ್ರೋದ ಹಳದಿ ಮಾರ್ಗ 19.15 ಕಿಲೋ ಮೀಟರ್‌‌ ಉದ್ದವಿದೆ. ಇನ್ನು ಈ ಮಾರ್ಗದಲ್ಲಿ ಒಟ್ಟು 16 ನಿಲ್ದಾಣಗಳು ಇವೆ. ಆರ್.ವಿ.ರೋಡ್​, ರಾಗಿಗುಡ್ಡ, ಜಯದೇವ ಆಸ್ಪತ್ರೆ, ಬಿಟಿಎಂ ಲೇಔಟ್, ಸಿಲ್ಕ್ ಬೋರ್ಡ್, ಬೊಮ್ಮನಹಳ್ಳಿ, ಹೊಂಗಸಂದ್ರ, ಕೂಡ್ಲುಗೇಟ್, ಸಿಂಗಸಂದ್ರ, ಹೊಸೂರು ರಸ್ತೆ, ಬೆರಟೇನ ಅಗ್ರಹಾರ, ಎಲೆಕ್ಟ್ರಾನಿಕ್ ಸಿಟಿ ಕೋನಪ್ಪ ಅಗ್ರಹಾರ, ಹುಸ್ಕೂರು ರಸ್ತೆ, ಹೆಬ್ಬಗೋಡಿ, ಬೊಮ್ಮಸಂದ್ರ.

ಇದನ್ನೂ ಓದಿ: ಮೋದಿ ಚಾಲನೆ ನೀಡಿದ ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲಿನ ಟಿಕೆಟ್ ಎಷ್ಟು? ಇಲ್ಲಿದೆ ವೇಳಾಪಟ್ಟಿ

ಸದ್ಯ ಪ್ರತಿ 20 ರಿಂದ 25 ನಿಮಿಷಗಳ ಅಂತರದಲ್ಲಿ ಒಂದು ಮೆಟ್ರೋ ಸಂಚಾರ ಇರಲಿದೆ. ನಿತ್ಯ 20-30 ಸಾವಿರ ಪ್ರಯಾಣಿಕರು ಈ ಮಾರ್ಗದಲ್ಲಿ ಸಂಚಾರ ಮಾಡಲಿದ್ದಾರೆ. 2026ರವೇಳೆಗೆ 12 ರೈಲುಗಳು ಹಳದಿ ಮಾರ್ಗಕ್ಕೆ ಸೇರ್ಪಡೆ ಆಗಲಿದೆ. ಆ ಮೂಲಕ ಹಳದಿ ಮಾರ್ಗದಲ್ಲಿ 15 ಮೆಟ್ರೋಗಳು ಓಡಾಡಲಿವೆ. ಅಂತೆಯೇ ಮುಂಬರುವ ದಿನಗಳಲ್ಲಿ ಮೆಟ್ರೋ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗಲಿದ್ದು, 3.5 ಲಕ್ಷ ಮಂದಿ ಪ್ರಯಾಣಿಕರು ಪ್ರಯಾಣಿಸಬಹುದು ಎಂದು ಬಿಎಂಆರ್​ಸಿಎಲ್ ಅಂದಾಜಿಸಿದೆ.

ಯಲ್ಲೋ ಮಾರ್ಗ ಮೆಟ್ರೋದ ಪ್ರಯಾಣ ದರ

  • ಆರ್ ವಿ ರಸ್ತೆಯಿಂದ ರಾಗಿಗುಡ್ಡದ ವರೆಗೆ 10 ರೂಪಾಯಿ.
  • ಆರ್ ವಿ ರಸ್ತೆ-ಜಯದೇವ 10 ರೂಪಾಯಿ.
  • ಆರ್ ವಿ ರಸ್ತೆ- BTM ಲೇಔಟ್ 20 ರೂ.
  • ಆರ್ ವಿ ರಸ್ತೆ -ಬೊಮ್ಮನಹಳ್ಳಿ 30 ರೂ.
  • ಆರ್ ವಿ ರಸ್ತೆ -ಕೂಡ್ಲೂಗೇಟ್ 40 ರೂ.
  • ಆರ್ ವಿ ರಸ್ತೆ -ಸಿಂಗಸಂದ್ರ 50 ರೂ.
  • ಆರ್ ವಿ ರಸ್ತೆ -ಎಲೆಕ್ಟ್ರಾನಿಕ್ ಸಿಟಿ 60 ರೂ.
  • ಆರ್ ವಿ ರಸ್ತೆ -ಬೊಮ್ಮಸಂದ್ರ 60 ರೂ.
  • ಸಿಲ್ಕ್ ಬೋರ್ಡ್- ಬೊಮ್ಮಸಂದ್ರ 60 ರೂ.

ವಿಶೇಷವಾಗಿ ಪ್ರತಿಷ್ಠಿತ ಜಯದೇವ ಆಸ್ಪತ್ರೆಗೆ ಸುಲಭವಾಗಿ ತಲುಪಬಹುದಾಗಿದೆ. ಇನ್ಫೋಸಿಸ್‌ ಹಾಗೂ ಬಯೋಕಾನ್‌ ಸಂಸ್ಥೆಗೆ ತೆರಳುವ ಸಾವಿರಾರು ಉದ್ಯೋಗಿಗಳಿಗೆ ಸಂಚಾರ ಸುಲಭವಾಗಲಿದೆ. ಬೆಂಗಳೂರಿನಿಂದ ತಮಿಳುನಾಡಿನ ಹೊಸೂರಿಗೆ ತೆರಳುವವರಿಗೂ ಸಾಕಷ್ಟು ಅನುಕೂಲವಾಗಲಿದ್ದು, ಸಂಚಾರ ದಟ್ಟಣೆ ತಗ್ಗುವ ನಿರೀಕ್ಷೆ ಇದೆ.

Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us