ಕೊರೊನಾ ನಿರ್ವಹಣೆಗೆ ತಂತ್ರಜ್ಞಾನ ಬಳಕೆ: ಕರ್ನಾಟಕದ ಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ

ಕೊರೊನಾ ಸೋಂಕಿನ 3ನೇ ಅಲೆಯ ಕುರಿತು ಮುನ್ನೆಚ್ಚರಿಕೆ ವಹಿಸಬೇಕು ಮತ್ತು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಪ್ರಧಾನಿ ಸೂಚಿಸಿದರು.

ಕೊರೊನಾ ನಿರ್ವಹಣೆಗೆ ತಂತ್ರಜ್ಞಾನ ಬಳಕೆ: ಕರ್ನಾಟಕದ ಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
ಸಿಎಂ ಬೊಮ್ಮಾಯಿ, ಪ್ರಧಾನಿ ಮೋದಿ (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 13, 2022 | 11:03 PM

ಬೆಂಗಳೂರು: ಕೊವಿಡ್ ನಿರ್ವಹಣೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಎಲ್ಲ ಮುಖ್ಯಮಂತ್ರಿಗಳ ಜೊತೆಗೆ ಗುರುವಾರ ಪರಾಮರ್ಶನ ಸಭೆ ನಡೆಸಿ ವಿವಿಧ ರಾಜ್ಯಗಳು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಕೊರೊನಾ ನಿರ್ವಹಣೆಗೆ ಕರ್ನಾಟಕ ತೆಗೆದುಕೊಂಡಿರುವ 5-ಟಿ ಸೂತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು. ಟೆಸ್ಟಿಂಗ್, ಟ್ರ್ಯಾಕಿಂಗ್, ಟ್ರೇಸಿಂಗ್, ಟ್ರಯಾಜಿಂಗ್, ಟೆಕ್ನಾಲಜಿ ಎನ್ನುವ 5-ಟಿ ಬಳಕೆಯ ಸೂತ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿವರಿಸಿದರು. ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪರೀಕ್ಷೆ ನಡೆಸುತ್ತಿರುವ ಬಗ್ಗೆ ಹಾಗೂ ಲಸಿಕೆ ಹಾಕಿಸಿಕೊಂಡವರ ಪ್ರಮಾಣದ ಬಗ್ಗೆಯೂ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು. ಲಸಿಕಾಕರಣ ಮತ್ತು ಟೆಸ್ಟಿಂಗ್ ಸರಾಸರಿಯು ದೇಶದ ಸರಾಸರಿಗಿಂತ ಹೆಚ್ಚಾಗಿರುವ ಬಗ್ಗೆ ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದರು. ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಧಾನಿಗೆ ಮುಖ್ಯಮಂತ್ರಿ ಮಾಹಿತಿ ನೀಡಿದರು. ಆಕ್ಸಿಜನೇಟೆಡ್ ಬೆಡ್, ಆಕ್ಸಿಜನ್ ಘಟಕ ಹೆಚ್ಚಿಸಲು ಕೇಂದ್ರ ಸರ್ಕಾರ ನೆರವು ನೀಡಬೇಕು ಎಂದು ಬೊಮ್ಮಾಯಿ ಕೋರಿದರು.

ಹೋಂ ಐಸೊಲೇಷನ್ ಮೇಲ್ವಿಚಾರಣೆಗೆ ಸಮರ್ಪಕ ತಂತ್ರಜ್ಞಾನ ಬಳಕೆ ಮಾಡುತ್ತಿರುವ ಬಗ್ಗೆಯೂ ಮೋದಿ ಶ್ಲಾಘಿಸಿದರು. ಕೊರೊನಾ ಮೂರನೇ ಅಲೆ ಫೆಬ್ರುವರಿಯಲ್ಲಿ ತೀವ್ರಗೊಳ್ಳುವ ನಿರೀಕ್ಷೆಯಿದೆ. ಈ ಕುರಿತು ಮುನ್ನೆಚ್ಚರಿಕೆ ವಹಿಸಬೇಕು ಮತ್ತು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಪ್ರಧಾನಿ ಸೂಚಿಸಿದರು. ಕೇಂದ್ರ ಸರ್ಕಾರವು ಘೋಷಿಸಿರುವ ₹ 23,000 ಕೋಟಿ ಪ್ಯಾಕೇಜ್‌ ಬಳಸಿಕೊಂಡು ಆರೋಗ್ಯ ಮೂಲಸೌಕರ್ಯ ಹೆಚ್ಚಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬೊಮ್ಮಾಯಿಗೆ ಪ್ರಧಾನಿ ನರೇಂದ್ರ ಮೋದಿ ಸಲಹೆ ಮಾಡಿದರು.

Covid 19 Karnataka Update: 25 ಸಾವಿರ ದಾಟಿ ಸೋಂಕು, ಪಾಸಿಟಿವಿಟಿ ಪ್ರಮಾಣ ಶೇ 12 ಕರ್ನಾಟಕದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಒಂದೇಸಮನೆ ಹೆಚ್ಚಾಗುತ್ತಿದೆ. ಗುರುವಾರ (ಜ.13) ರಾಜ್ಯದಲ್ಲಿ ಒಟ್ಟು 25,005 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಎಂಟು ಮಂದಿ ಮೃತಪಟ್ಟಿದ್ದಾರೆ. 2363 ಮಂದಿ ಸೋಂಕಿನಿಂದ ಚೇತರಿಸಿಕೊಂಡು ವಿವಿಧ ಆಸ್ಪತ್ರೆಗಳಿಂದ ಡಿಸ್​ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 1,15,733 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ 12.39 ಇದೆ. ಸೋಂಕಿನಿಂದ ಸಾಯುವವರ ಪ್ರಮಾಣ ಶೇ 0.03 ಇದೆ. ರಾಜ್ಯದಲ್ಲಿ ಈವರೆಗೆ ಒಟ್ಟು 31,24,524 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 29,70,365 ಜನರು ಚೇತರಿಸಿಕೊಂಡಿದ್ದಾರೆ. ಈವರೆಗೆ ಒಟ್ಟು 38,397 ಮಂದಿ ಮೃತಪಟ್ಟಿದ್ದಾರೆ.

ಬೆಂಗಳೂರು ನಗರದಲ್ಲಿ ಎಂದಿನಂತೆ ಸೋಂಕಿತರ ಸಂಖ್ಯೆ ರಾಜ್ಯದಲ್ಲಿಯೇ ಅತಿಹೆಚ್ಚು ವರದಿಯಾಗಿದೆ. ಬೆಂಗಳೂರಿನ 18,374 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 1132 ಜನರು ಚೇತರಿಸಿಕೊಂಡಿದ್ದಾರೆ. ಮೂವರು ಮೃತಪಟ್ಟಿದ್ದಾರೆ. ನಗರದಲ್ಲಿ ಪ್ರಸ್ತುತ 90,893 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ ಒಟ್ಟು 16,436 ಜನರು ಸಾವನ್ನಪ್ಪಿದ್ದಾರೆ. ನಗರದಲ್ಲಿ ಈವರೆಗೆ 13,53,331 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,46,001 ಜನರು ಚೇತರಿಸಿಕೊಂಡಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಬಾಗಲಕೋಟೆ 5, ಬಳ್ಳಾರಿ 185, ಬೆಳಗಾವಿ 276, ಬೆಂಗಳೂರು ಗ್ರಾಮಾಂತರ 390, ಬೀದರ್ 97, ಚಾಮರಾಜನಗರ 176, ಚಿಕ್ಕಬಳ್ಳಾಪುರ 119, ಚಿಕ್ಕಮಗಳೂರು 90, ಚಿತ್ರದುರ್ಗ 78, ದಕ್ಷಿಣ ಕನ್ನಡ 625, ದಾವಣಗೆರೆ 92, ಧಾರವಾಡ 399, ಗದಗ 69, ಹಾಸನ 490, ಹಾವೇರಿ 19, ಕಲಬುರ್ಗಿ 346, ಕೊಡಗು 72, ಕೋಲಾರ 293, ಕೊಪ್ಪಳ 32, ಮಂಡ್ಯ 406, ಮೈಸೂರು 695, ರಾಯಚೂರು 122, ರಾಮನಗರ 112, ಶಿವಮೊಗ್ಗ 212, ತುಮಕೂರು 547, ಉಡುಪಿ 379, ಉತ್ತರ ಕನ್ನಡ 250, ವಿಜಯಪುರ 39, ಯಾದಗಿರಿ 16.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ಬೆಂಗಳೂರು ನಗರದಲ್ಲಿ ಮೂವರು, ಕಲಬುರ್ಗಿ, ಮೈಸೂರು, ತುಮಕೂರು, ವಿಜಯಪುರ ಮತ್ತು ಬೆಳಗಾವಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: Coronavirus: ಬೆಂಗಳೂರು ಅಪಾರ್ಟ್​ಮೆಂಟ್ ನಿವಾಸಿಗಳಿಗೆ ಕೊರೊನಾ ಮಾರ್ಗಸೂಚಿ ಬಿಡುಗಡೆ, ಕೊಪ್ಪಳ ಗವಿಮಠ ಜಾತ್ರೆ ರದ್ದು ಇದನ್ನೂ ಓದಿ: ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ಸಭೆ; ಕರ್ನಾಟಕ ಕೊರೊನಾ ಪರಿಸ್ಥಿತಿ ವಿವರಿಸಿದ ಸಿಎಂ ಬೊಮ್ಮಾಯಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ