AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮಸ್ತೇ ಕರ್ನಾಟಕ’: ನವೆಂಬರ್​​ 13ರ ಕರ್ನಾಟಕ ಭೇಟಿ ಬಗ್ಗೆ ಮಾಹಿತಿ ಹಂಚಿಕೊಂಡ ಪ್ರಧಾನಿ ನರೇಂದ್ರ ಮೋದಿ

ನವೆಂಬರ್ 13ರಂದು (ನಾಳೆ) ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಹಾಗೂ ಮೈಸೂರಿಗೆ ಭೇಟಿ ನೀಡಲಿದ್ದಾರೆ. ನಮ್ಮ ಮೆಟ್ರೋ ಪಿಂಕ್​​ ಲೈನ್​​ಗೆ ಚಾಲನೆ ಸೇರಿ ಬೆಂಗಳೂರಿನಲ್ಲಿ 15,600 ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಬಳಿಕ ಮೈಸೂರಿಗೆ ಭೇಟಿ ನೀಡಲಿರುವ ಅವರು ಭಾರತದ ಮೊದಲ ಎಲ್‌ಇಡಿ ಡೋಮ್ ತಾರಾಲಯ 'ಕಾಸ್ಮೋಸ್' ಉದ್ಘಾಟಿಸಲಿದ್ದಾರೆ. ಈ ಬಗ್ಗೆ ಸ್ವತಃ ಪ್ರಧಾನಿಗಳೇ ಎಕ್ಸ್​​ ಪೋಸ್ಟ್​​ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

'ನಮಸ್ತೇ ಕರ್ನಾಟಕ': ನವೆಂಬರ್​​ 13ರ ಕರ್ನಾಟಕ ಭೇಟಿ ಬಗ್ಗೆ ಮಾಹಿತಿ ಹಂಚಿಕೊಂಡ ಪ್ರಧಾನಿ ನರೇಂದ್ರ ಮೋದಿ
ಕರ್ನಾಟಕ ಭೇಟಿ ಬಗ್ಗೆ ಮಾಹಿತಿ ಹಂಚಿಕೊಂಡ ಪ್ರಧಾನಿ ನರೇಂದ್ರ ಮೋದಿ Image Credit source: PTI and Narendra Modi X Page
ಪ್ರಸನ್ನ ಹೆಗಡೆ
|

Updated on: Nov 12, 2026 | 5:08 PM

Share

ಬೆಂಗಳೂರು, ನವೆಂಬರ್​​ 12: ನಾಳೆ (ನವೆಂಬರ್​​ 13) ಕರ್ನಾಟಕದ ಬೆಂಗಳೂರು ಮತ್ತು ಮೈಸೂರು ಪ್ರವಾಸಕೈಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಈ ಕುರಿತು ಎಕ್ಸ್​​ ಪೋಸ್ಟ್​​ ಮಾಡುವ ಮೂಲಕ ಸ್ವತಃ ಮಾಹಿತಿ ಹಂಚಿಕೊಂಡಿದ್ದಾರೆ. ನಮಸ್ಕಾರ ಕರ್ನಾಟಕ. ನಾಳೆ, ನವೆಂಬರ್ 13 ರಂದು ಬೆಂಗಳೂರು ಮತ್ತು ಮೈಸೂರಿನಲ್ಲಿರಲು ಕಾತುರದಿಂದ ಎದುರು ನೋಡುತ್ತಿದ್ದೇನೆ ಎಂದವರು ಬರೆದುಕೊಂಡಿದ್ದಾರೆ. ಬೆಂಗಳೂರಿನಲ್ಲಿ 15,600 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ಮೈಸೂರಿನಲ್ಲಿ ಭಾರತದ ಮೊದಲ ಎಲ್‌ಇಡಿ ಡೋಮ್ ತಾರಾಲಯವಾದ ಕಾಸ್ಮೋಸ್ ಉದ್ಘಾಟನೆ ನೆರವೇರಿಸಲಿದ್ದಾರೆ.

ಕನ್ನಡದಲ್ಲಿಯೂ ಮಾಹಿತಿ ಹಂಚಿಕೊಂಡ ನಮೋ

ಈ ಬಗ್ಗೆ ಕನ್ನಡದಲ್ಲಿಯೂ ಪ್ರಧಾನಿ ಮಾಹಿತಿ ಹಂಚಿಕೊಂಡಿದ್ದು, ಪ್ರಶಾಂತಿ ಕುಟೀರದ ಸುವರ್ಣ ಮಹೋತ್ಸವ ಸಂಭ್ರಮಾಚರಣೆ, 15,000 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮತ್ತು ಕಾಸ್ಮೋಸ್ – ಮೈಸೂರು ತಾರಾಲಯದ ಉದ್ಘಾಟನೆ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ನಾಳೆ ಮೈಸೂರಿನಲ್ಲಿ ಪಿಎಂ ಮೋದಿ ಉದ್ಘಾಟಿಸಲಿರುವ ಟಿಲ್ಟೆಡ್ ಎಲ್​ಇಡಿ ಡೋಮ್ ತಾರಾಲಯ ಹೇಗಿದೆ ನೋಡಿ

ಬೆಳಿಗ್ಗೆ 10.45ರ ಸುಮಾರಿಗೆ ಬೆಂಗಳೂರಿನ ಪ್ರಶಾಂತಿ ಕುಟೀರದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದು, ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಮಧ್ಯಾಹ್ನ 12.45ರ ಸುಮಾರಿಗೆ ತಾವರೆಕೆರೆಯಿಂದ ಐಐಎಂಬಿ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋದಲ್ಲಿ ಪ್ರಯಾಣಿಸಲಿದ್ದಾರೆ. ಬಳಿಕ ಮಧ್ಯಾಹ್ನ 1.15ರ ಸುಮಾರಿಗೆ ಬೆಂಗಳೂರಿನಲ್ಲಿ 15,600 ಕೋಟಿ ರೂಪಾಯಿಗೂ ಅಧಿಕ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಕೆಲವು ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಈ ಸಂದರ್ಭದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ಮೈಸೂರಿಗೆ ತೆರಳಲಿರುವ ಪ್ರಧಾನಿ ಮೋದಿ, ಮಧ್ಯಾಹ್ನ 3.30ರ ಸುಮಾರಿಗೆ ಕಾಸ್ಮೋಸ್-ಮೈಸೂರು ತಾರಾಲಯವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲೂ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಿಗಳ ಕಚೇರಿ ಮಾಹಿತಿ ನೀಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಯಶಸ್ ವಿರುದ್ಧ ತಿರುಗಿ ಬಿದ್ದ ಆಸಿಯಾ: ಸ್ನೇಹ ಅಂತ್ಯ, ಪೈಪೋಟಿ ಶುರು
ಯಶಸ್ ವಿರುದ್ಧ ತಿರುಗಿ ಬಿದ್ದ ಆಸಿಯಾ: ಸ್ನೇಹ ಅಂತ್ಯ, ಪೈಪೋಟಿ ಶುರು
ಅರಣ್ಯ ಇಲಾಖೆಯಿಂದ 51 ಕಾವಾಡಿ ಹುದ್ದೆಗೆ ನೇಮಕಾತಿ ಸ್ಥಗಿತ
ಅರಣ್ಯ ಇಲಾಖೆಯಿಂದ 51 ಕಾವಾಡಿ ಹುದ್ದೆಗೆ ನೇಮಕಾತಿ ಸ್ಥಗಿತ
ಮೆಟ್ರೋ ಅನುದಾನ ಜಟಾಪಟಿ: ತೇಜಸ್ವಿ ಸೂರ್ಯ ಪತ್ರಿಕಾಗೋಷ್ಠಿ ಲೈವ್
ಮೆಟ್ರೋ ಅನುದಾನ ಜಟಾಪಟಿ: ತೇಜಸ್ವಿ ಸೂರ್ಯ ಪತ್ರಿಕಾಗೋಷ್ಠಿ ಲೈವ್
ಜೈಲಿನಿಂದ ಪರೋಲ್​​ ಮೇಲೆ ಹೊರಬಂದು ತಲೆಮರೆಸಿಕೊಂಡ ಜೀವಾವಧಿ ಶಿಕ್ಷೆ ಕೈದಿ
ಜೈಲಿನಿಂದ ಪರೋಲ್​​ ಮೇಲೆ ಹೊರಬಂದು ತಲೆಮರೆಸಿಕೊಂಡ ಜೀವಾವಧಿ ಶಿಕ್ಷೆ ಕೈದಿ
ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ಬೆಲೆ ಹೆಚ್ಚಳ ಆಯ್ತು ಈಗ ಬಾಡಿಗೆ ದರವೂ ಏರಿಕೆ!
ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ಬೆಲೆ ಹೆಚ್ಚಳ ಆಯ್ತು ಈಗ ಬಾಡಿಗೆ ದರವೂ ಏರಿಕೆ!
ಮೈಸೂರಿನಲ್ಲಿ ಯುವತಿ ಜತೆ ರ್ಯಾಪಿಡೋ ಚಾಲಕ ಅವಾಚ್ಯ ಸಂಭಾಷಣೆ
ಮೈಸೂರಿನಲ್ಲಿ ಯುವತಿ ಜತೆ ರ್ಯಾಪಿಡೋ ಚಾಲಕ ಅವಾಚ್ಯ ಸಂಭಾಷಣೆ
ಸ್ಟಿಂಗ್ ಪ್ರಕರಣ: ವಿಡಿಯೋ ಮಾಡಿದ್ದೇ ಗೊತ್ತಿಲ್ಲವೆಂದ ಕೃಪಾ ಆಳ್ವ!
ಸ್ಟಿಂಗ್ ಪ್ರಕರಣ: ವಿಡಿಯೋ ಮಾಡಿದ್ದೇ ಗೊತ್ತಿಲ್ಲವೆಂದ ಕೃಪಾ ಆಳ್ವ!
ದಾವಣಗೆರೆಯ ಸೂಳೆಕರೆಗೆ ಅಪರೂಪದ ಅತಿಥಿ ಭೇಟಿ! ನೀರುನಾಯಿಗಳು ಪ್ರತ್ಯಕ್ಷ
ದಾವಣಗೆರೆಯ ಸೂಳೆಕರೆಗೆ ಅಪರೂಪದ ಅತಿಥಿ ಭೇಟಿ! ನೀರುನಾಯಿಗಳು ಪ್ರತ್ಯಕ್ಷ
ಡಿ.2ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ
ಡಿ.2ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ
ಕರಾವಳಿ ಬಳಿಕ ಉತ್ತರ ಕರ್ನಾಟಕದತ್ತ ಮುಖ ಮಾಡಿದ ಪ್ರಮೋದ್ ಶೆಟ್ಟಿ
ಕರಾವಳಿ ಬಳಿಕ ಉತ್ತರ ಕರ್ನಾಟಕದತ್ತ ಮುಖ ಮಾಡಿದ ಪ್ರಮೋದ್ ಶೆಟ್ಟಿ