AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಲಿರುವ ಪ್ರಧಾನಿ ಮೋದಿ, ಹೆಚ್​ಡಿ ದೇವೇಗೌಡರಿಗೆ ಆಹ್ವಾನ

ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಲಿದ್ದಾರೆ.

ಬೆಂಗಳೂರಿನಲ್ಲಿ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಲಿರುವ ಪ್ರಧಾನಿ ಮೋದಿ, ಹೆಚ್​ಡಿ ದೇವೇಗೌಡರಿಗೆ ಆಹ್ವಾನ
ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಹೆಚ್​ಡಿ ದೇವೇಗೌಡರನ್ನು ಆಹ್ವಾನಿಸಿದ ಅಶ್ವತ್ಥ್​​ ನಾರಾಯಣ
TV9 Web
| Edited By: |

Updated on:Oct 19, 2022 | 3:13 PM

Share

ಬೆಂಗಳೂರು: ನವೆಂಬರ್ 11ರಂದು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಲಿದ್ದಾರೆ. ಈ ಹಿನ್ನೆಲೆ ಅ.21ರಿಂದ ನ.7ರವರೆಗೆ ರಾಜ್ಯಾದ್ಯಂತ ಪವಿತ್ರ ಮೃತ್ತಿಕಾ ಸಂಗ್ರಹಣಾ ಅಭಿಯಾನ ನಡೆಯಲಿದೆ. ಅಭಿಯಾನಕ್ಕಾಗಿ 20 ‘ನಾಡಪ್ರಭು ಕೆಂಪೇಗೌಡ ರಥ’ಗಳನ್ನು ಸಿದ್ಧ ಮಾಡಲಾಗಿದ್ದು ಇದೇ 21ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದ ಮುಂಭಾಗ ಚಾಲನೆ ನೀಡಲಿದ್ದಾರೆ ಎಂದು ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದಕ್ಕಾಗಿ ಜಿಲ್ಲಾ ಮಟ್ಟದಲ್ಲಿ ಸೂಕ್ತ ಸಮಿತಿಗಳನ್ನು ರಚಿಸಲಾಗಿದೆ. ಈ ರಥಗಳು ಆಯಾಯ ಪ್ರದೇಶ/ಜಿಲ್ಲೆಗಳನ್ನು ಪ್ರವೇಶಿಸಿದಾಗ ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಗುವುದು. ಈ ಅಭಿಯಾನದ ಅಂಗವಾಗಿ ರಾಜ್ಯದ ಪ್ರತಿಯೊಂದು ಗ್ರಾಮದ ಕೆರೆಕಟ್ಟೆ, ಕಲ್ಯಾಣಿ, ನದಿ, ಪುಷ್ಕರಿಣಿ, ಪುಣ್ಯಪುರುಷರ ಸಮಾಧಿ ಸ್ಥಳಗಳಿಂದ ಪವಿತ್ರವಾದ ಮಣ್ಣನ್ನು ಸಂಗ್ರಹಿಸಲಾಗುವುದು. ಪ್ರತಿಯೊಂದು ರಥದ ಮಾರ್ಗನಕ್ಷೆಯನ್ನೂ ಸಿದ್ಧಪಡಿಸಲಾಗಿದೆ. ಆಯಾಯ ಜಿಲ್ಲೆಗಳಲ್ಲಿ ಧಾರ್ಮಿಕ ಮುಖಂಡರು, ಚುನಾಯಿತ ಪ್ರತಿನಿಧಿಗಳು, ಸಾಹಿತಿಗಳು, ಪ್ರಗತಿಪರ ರೈತರು, ಸ್ವಸಹಾಯ ಸಂಘಗಳ ಸದಸ್ಯರು, ಹಿರಿಯ ನಾಗರಿಕರು, ಹಾಲು ಉತ್ಪಾದಕರ ಒಕ್ಕೂಟಗಳು, ಕೈಗಾರಿಕಾ ಸಂಘಗಳು ಇದರಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಅಶ್ವತ್ಥನಾರಾಯಣ ತಿಳಿಸಿದರು.

ಪವಿತ್ರ ಮೃತ್ತಿಕೆಯನ್ನು ವಿಮಾನ ನಿಲ್ದಾಣ ಆವರಣದಲ್ಲಿ ಅಭಿವೃದ್ಧಿಪಡಿಸುತ್ತಿರುವ 23 ಎಕರೆ ವಿಶಾಲವಾದ ಕೆಂಪೇಗೌಡ ಥೀಮ್‌ ಪಾರ್ಕ್‌ನಲ್ಲಿ ಬಳಸಿಕೊಳ್ಳಲಾಗುವುದು. ಇಡೀ ಕಾರ್ಯಕ್ರಮ ಮತ್ತು ಅಭಿಯಾನಗಳು ಪಕ್ಷಾತೀತವಾದ ಕಾರ್ಯಕ್ರಮವಾಗಿರಲಿದೆ. ಇಂಥದೊಂದು ಭವ್ಯ ಪ್ರತಿಮೆಯನ್ನು ಸ್ಥಾಪಿಸಬೇಕು ಎನ್ನುವ ಬೇಡಿಕೆ ಹಲವು ವರ್ಷಗಳಿಂದ ಇತ್ತು. ಅಭಿಯಾನವನ್ನು ಯಶಸ್ವಿಯಾಗಿ ನಡೆಸುವ ಸಂಬಂಧ ಈಗಾಗಲೇ ಜಿಲ್ಲಾಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಎಲ್ಲರಿಗೂ ಅಗತ್ಯ ಸಲಹೆ, ಸೂಚನೆಗಳನ್ನು ಕೊಡಲಾಗಿದೆ. ಇದಕ್ಕೆ ಜಿಪಂ ಸಿಇಒಗಳು ನೋಡಲ್‌ ಅಧಿಕಾರಿಗಳಾಗಿರುತ್ತಾರೆ. ಇದನ್ನೂ ಓದಿ: ಈ ದೀಪಾವಳಿಯಲ್ಲಿ ನೀವು ಹೊಸ ಕಾರು ಖರೀದಿಯ ಯೋಜನೆಯಲ್ಲಿದ್ದರೆ ನಿಮಗೆ ಈ ಸುದ್ದಿ ನಿರಾಶೆ ಉಂಟುಮಾಡುತ್ತೆ!

ಕೆಂಪೇಗೌಡರು ಕಟ್ಟಿದ ಬೆಂಗಳೂರು ಇಂದು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ಅವರಿಗಿದ್ದ ದೂರದೃಷ್ಟಿಯನ್ನು ಗೌರವಿಸಿ, 108 ಅಡಿ ಎತ್ತರದ ಪ್ರತಿಮೆಗೆ ‘ಪ್ರಗತಿ ಪ್ರತಿಮೆ’ ಎಂದು ನಾಮಕರಣ ಮಾಡಲಾಗಿದೆ. ಜಗತ್ತಿನ ಯಾವ ನಗರದ ವಿಮಾನ ನಿಲ್ದಾಣದಲ್ಲೂ ಅಲ್ಲಿಯ ಸಂಸ್ಥಾಪಕರ ಪ್ರತಿಮೆ ಇಲ್ಲ. ಇನ್ನುಮುಂದೆ, ಬೆಂಗಳೂರು ವಿಮಾನ ನಿಲ್ದಾಣ ಸಮುಚ್ಚಯದಲ್ಲಿ ಕೆಂಪೇಗೌಡರ ಪ್ರತಿಮೆ ಆಕರ್ಷಣೆಯ ಕೇಂದ್ರವಾಗಲಿದೆ ಎಂದರು.

ಮಾಜಿ ಪ್ರಧಾನಿ ದೇವೇಗೌಡ ಭೇಟಿಯಾದ ಅಶ್ವತ್ಥ್​​ ನಾರಾಯಣ

ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ಸಚಿವ ಅಶ್ವತ್ಥ್​​ ನಾರಾಯಣ ಭೇಟಿ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಹೆಚ್​​.ಡಿ.ದೇವೇಗೌಡರು ಸಂಪೂರ್ಣ ಗುಣಮುಖರಾಗಿದ್ದಾರೆ. ಮೃತ್ತಿಕಾ ಸಂಗ್ರಹಣಾ ಅಭಿಯಾನ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದೇನೆ. ನ.21ರಂದು ವಿಧಾನಸೌಧದ ಮುಂಭಾಗ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತೆ. ನ.11ರ ಪ್ರತಿಮೆ ಲೋಕಾರ್ಪಣೆಗೂ ಆಹ್ವಾನ ಕೊಟ್ಟಿದ್ದೇನೆ. ಮುಖ್ಯಮಂತ್ರಿಗಳು ಕೂಡ ಪ್ರತ್ಯೇಕವಾಗಿ ಆಹ್ವಾನ ನೀಡಲಿದ್ದಾರೆ ಎಂದರು.

Published On - 3:13 pm, Wed, 19 October 22

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ