Invest Karnataka 2022: ಇನ್ವೆಸ್ಟ್ ಕರ್ನಾಟಕ ಸಮಾವೇಶಕ್ಕೆ ಇಂದು ಪ್ರಧಾನಿ ಮೋದಿ ಚಾಲನೆ; 7 ಲಕ್ಷ ಕೋಟಿ ರೂ. ಹೂಡಿಕೆ ನಿರೀಕ್ಷೆ
ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಇಂದು ಬೆಳಿಗ್ಗೆ 10.30ಕ್ಕೆ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಆಗಿ ಚಾಲನೆ ನೀಡಲಿದ್ದಾರೆ. ಈ ಸಮಾವೇಶದಲ್ಲಿ 7 ಲಕ್ಷ ಕೋಟಿ ರೂ. ಹೂಡಿಕೆ ಹರಿದು ಬರುವ ಸಾಧ್ಯತೆ ಇದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದಿನಿಂದ ನ. 4ರವರೆಗೆ ನಡೆಯಲಿರುವ ಇನ್ವೆಸ್ಟ್ ಕರ್ನಾಟಕ-2022 (Invest Karnataka 2022) ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಇಂದು (ಬುಧವಾರ) ಬೆಳಿಗ್ಗೆ 10.30ಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ವರ್ಚುವಲ್ ಆಗಿ ಚಾಲನೆ ನೀಡಲಿದ್ದಾರೆ. ಈ ಸಮಾವೇಶದಲ್ಲಿ 7 ಲಕ್ಷ ಕೋಟಿ ರೂ. ಹೂಡಿಕೆ ಹರಿದು ಬರುವ ಸಾಧ್ಯತೆ ಇದೆ. ಖಾಸಗಿ ವಲಯದಲ್ಲಿ 3 ಲಕ್ಷ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.
ಕರ್ನಾಟಕದ ರಾಜ್ಯಪಾಲರು, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಸಚಿವರಾದ ಪಿಯೂಶ್ ಗೋಯೆಲ್, ಪ್ರಲ್ಹಾದ್ ಜೋಶಿ, ಸ್ಮೃತಿ ಇರಾನಿ, ರಾಜೀವ್ ಚಂದ್ರಶೇಖರ್, ಶೋಭಾ ಕರಂದ್ಲಾಜೆ, ಎ. ನಾರಾಯಣಸ್ವಾಮಿ ಹಾಗೂ ಖ್ಯಾತ ಉದ್ಯಮಿಗಳು ಸಮ್ಮೇಳನದಲ್ಲಿ ಭಾಗಿಯಾಗಲಿದ್ದಾರೆ. ನವೆಂಬರ್ 4ರಂದು ಜಾಗತಿಕ ಹೂಡಿಕೆದಾರರ ಸಮಾವೇಶದ ಸಮಾರೋಪ ನಡೆಯಲಿದ್ದು, ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭಾಗವಹಿಸಲಿದ್ದಾರೆ.
At 10:30 AM, will be inaugurating #InvestKarnataka2022, a Global Investors Meet which will showcase the rich potential Karnataka offers. Karnataka’s strides in diverse sectors including the StartUp world have captured global attention. #BuildForTheWorld https://t.co/0fXLumm7M5
— Narendra Modi (@narendramodi) November 2, 2022
ಕರ್ನಾಟಕ ರಾಜ್ಯ ಬಂಡವಾಳ ಹೂಡಿಕೆದಾರರಿಗೆ ನೆಚ್ಚಿನ ತಾಣವಾಗಿದೆ. ನ. 2ರಿಂದ ಕರ್ನಾಟಕದಲ್ಲಿ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯಲಿದ್ದು, ಒಟ್ಟು 7 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, ಅಂದಾಜು 3 ಲಕ್ಷ ಉದ್ಯೋಗ ಸೃಷ್ಟಿಯಾಗುವ ನೀರಿಕ್ಷೆಯಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ಇದನ್ನೂ ಓದಿ: 15 ದಿನದೊಳಗೆ ಜಾಗತಿಕ ಹೂಡಿದಾರರ ಸಮಾವೇಶಕ್ಕೆ ದಿನಾಂಕ ನಿಗದಿ; ಸಚಿವ ಮುರುಗೇಶ್ ನಿರಾಣಿ ಘೋಷಣೆ
ಈ ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಆದಿತ್ಯ ಬಿರ್ಲಾ ಸಮೂಹದ ಅಧ್ಯಕ್ಷ ಕುಮಾರಮಂಗಳಂ ಬಿರ್ಲಾ, ಕಿರ್ಲೋಸ್ಕರ್ ಮೋಟಾರ್ಸ್‌ನ ವಿಕ್ರಮ ಕಿರ್ಲೋಸ್ಕರ್, ವಿಪ್ರೋ ಅಧ್ಯಕ್ಷ ರಿಶಾದ್ ಪ್ರೇಮ್‌ಜಿ, ಅದಾನಿ ಪೋರ್ಟ್ಸ್ ಸಿಇಒ ಕರಣ್ ಅದಾನಿ, ಜೆಎಸ್‌ಡಬ್ಲ್ಯೂ ಅಧ್ಯಕ್ಷ ಸಜ್ಜನ್ ಜಿಂದಾಲ್, ಭಾರತಿ ಎಂಟರ್‌ಪ್ರೈಸಸ್‌ನ ಉಪಾಧ್ಯಕ್ಷ ರಾಜನ್ ಮಿತ್ತಲ್, ಸ್ಟೆರಲೈಟ್ ಪವರ್‌ನ ಸಿಇಒ ಮತ್ತು ಎಂಡಿ ಪ್ರತೀಕ್ ಅಗರವಾಲ್ ಮತ್ತು ಸ್ಟಾರ್‌ಬಕ್ಸ್ ಸಹಸಂಸ್ಥಾಪಕ ಜೆವ್ ಸಿಗೆಲ್ ಮತ್ತಿತರ ಉದ್ಯಮಿಗಳು ಪಾಲ್ಗೊಳ್ಳಲಿದ್ದಾರೆ.
ಮಾನ್ಯ ಪ್ರಧಾನಿ ಶ್ರೀ @narendramodi ಅವರು ಉದ್ಘಾಟಿಸಲಿರುವ ಇಂದಿನ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ರಾಜ್ಯಕ್ಕೆ ₹7 ಲಕ್ಷ ಕೋಟಿ ಹೂಡಿಕೆಯಾಗಲಿದ್ದು, ಅಂದಾಜು 3 ಲಕ್ಷ ಉದ್ಯೋಗ ಸೃಷ್ಟಿಯಾಗುವ ನೀರಿಕ್ಷೆಯಿದೆ. ಈ ಸಮಾವೇಶವು ರಾಜ್ಯದ ಭವಿಷ್ಯದ ಆರ್ಥಿಕತೆಗೆ ದಿಕ್ಸೂಚಿಯಾಗಲಿದೆ.#InvestKarnataka2022 pic.twitter.com/BYnkbP6F3T
— Basavaraj S Bommai (@BSBommai) November 2, 2022
ಈ ಸಮಾವೇಶದ ಬಗ್ಗೆ ಮಾಹಿತಿ ನೀಡಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ರಾಜ್ಯ ಸರ್ಕಾರ ಹಲವು ಕ್ಷೇತ್ರಗಳಲ್ಲಿ ಕೈಗೊಂಡಿರುವ ಕ್ರಮಗಳಿಂದಾಗಿ ರಾಜ್ಯಕ್ಕೆ ಬಂಡವಾಳ ಹೆಚ್ಚಿನ ಪ್ರಮಾಣದಲ್ಲಿ ಹರಿದುಬರಬಹುದೆಂದು ನಿರೀಕ್ಷಿಸಲಾಗಿದೆ. ಕರ್ನಾಟಕದಲ್ಲಿ 400 ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳಿದ್ದು, 5,000ಕ್ಕೂ ಹೆಚ್ಚು ಸ್ಟಾರ್ಟಪ್‌ಗಳಿವೆ. ಧಾರವಾಡದಲ್ಲಿ ಎಫ್‌ಎಂಸಿಜಿ ಕ್ಲಸ್ಟರ್ ಆರಂಭಿಸಲಾಗಿದ್ದು, ಇದರಲ್ಲಿ 20 ಕಂಪೆನಿಗಳು ಈಗಾಗಲೇ ಹೂಡಿಕೆ ಮಾಡಿವೆ. ಇದರಿಂದ ಈ ಭಾಗದ 1 ಲಕ್ಷಕ್ಕೂ ಅಧಿಕ ಮಂದಿಗೆ ಉದ್ಯೋಗ ಅವಕಾಶಗಳು ಸೃಷ್ಟಿಯಾಗುತ್ತಿವೆ. ಇದೇ ರೀತಿ ಕಲ್ಯಾಣ ಕರ್ನಾಟಕದಲ್ಲೂ ಒಂದು ಎಫ್‌ಎಂಸಿಜಿ ಕ್ಲಸ್ಟರ್ ಸ್ಥಾಪಿಸುವುದು ಸರ್ಕಾರದ ಚಿಂತನೆಯಾಗಿದೆ. ಹಾಗೇ ವಿಭಾಗಕ್ಕೊಂದು ಉದ್ಯಮ ಕ್ಲಸ್ಟರ್ ಪ್ರಾರಂಭಿಸುವ ಉದ್ದೇಶವಿದೆ ಎಂದಿದ್ದಾರೆ.
#BuildForTheWorld #Karnataka is a global #innovation and #startup hub with more than 400+ global R&D centers in the state!
Learn more about #InvestKarnataka2022 – https://t.co/GHQqFnoCbo#InvestinKarnataka pic.twitter.com/MiiQOdx056
— Invest in Karnataka (@investkarnataka) November 1, 2022
ಇದನ್ನೂ ಓದಿ: Karnataka Rain: ಕರ್ನಾಟಕದ ಕರಾವಳಿ, ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆಯ ಅಬ್ಬರ
ರಾಜ್ಯದ ಉದ್ದಗಲಕ್ಕೂ ಉದ್ಯಮ ಚಟುವಟಿಕೆ ವಿಸ್ತರಿಸಲು ಮೂಲಸೌಕರ್ಯ ಅಭಿವೃದ್ಧಿಪಡಿಸುವ ಕೆಲಸ ನಡೆದಿದೆ. ಮುಂಬೈ -ಬೆಂಗಳೂರು ಹೆದ್ದಾರಿ ಕಾಮಗಾರಿ ಚುರುಕುಗೊಂಡಿದ್ದು, ಗೋವಾ – ಹೈದರಾಬಾದ್ ಹೆದ್ದಾರಿ ಉತ್ತರ ಕರ್ನಾಟಕದ ಮೂಲಕ ಹಾದು ಹೋಗಲಿದೆ. ಕಾರವಾರ, ಮಂಗಳೂರು ಬಂದರುಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ನೂತನವಾಗಿ ಶಿವಮೊಗ್ಗ, ಹಾಸನ ಮತ್ತು ವಿಜಯಪುರ ವಿಮಾನ ನಿಲ್ದಾಣಗಳು ಆರಂಭವಾಗುತ್ತಿದ್ದು, ಇನ್ನು 18 ತಿಂಗಳಲ್ಲಿ ಇನ್ನೂ 5 ವಿಮಾನ ನಿಲ್ದಾಣಗಳು ಕಾರ್ಯಾರಂಭಿಸಲಿವೆ ಎಂದು ನಿರಾಣಿ ಹೇಳಿದ್ದಾರೆ.