PM Modi Bangalore Visit: ಬೆಂಗಳೂರು ರೈಲು ನಿಲ್ದಾಣಕ್ಕೆ ನಾಳೆ ಪ್ರಧಾನಿ ಮೋದಿ; ಹಲವು ರೈಲುಗಳ ಸಂಚಾರ ವ್ಯತ್ಯಯ, ಬಿಗಿಭದ್ರತೆ

ಬೆಳಿಗ್ಗೆ 8ರಿಂದ 11:30ರ ಅವಧಿಯಲ್ಲಿ ನಗರ ರೈಲು ನಿಲ್ದಾಣಕ್ಕೆ ಬರಬೇಕಿದ್ದ ಹಾಗೂ ನಗರ ರೈಲು ನಿಲ್ದಾಣದಿಂದ ಸಂಚರಿಸಬೇಕಿದ್ದ ಹಲವು ರೈಲುಗಳನ್ನು ಯಶವಂತಪುರ ಹಾಗೂ ಬೈಯಪ್ಪನಹಳ್ಳಿ ನಿಲ್ದಾಣಗಳಿಗೆ ಮಾರ್ಗ ಬದಲಾವಣೆ ಮಾಡಲಾಗಿದೆ.

PM Modi Bangalore Visit: ಬೆಂಗಳೂರು ರೈಲು ನಿಲ್ದಾಣಕ್ಕೆ ನಾಳೆ ಪ್ರಧಾನಿ ಮೋದಿ; ಹಲವು ರೈಲುಗಳ ಸಂಚಾರ ವ್ಯತ್ಯಯ, ಬಿಗಿಭದ್ರತೆ
ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Nov 10, 2022 | 12:29 PM

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ (ಬೆಂಗಳೂರು ನಗರ ರೈಲು ನಿಲ್ದಾಣ) ನಾಳೆ (ನ 11) ವಂದೇ ಭಾರತ್ ಎಕ್ಸ್​ಪ್ರೆಸ್​ (Vande Bharath Express) ಸಂಚಾರಕ್ಕೆ ಹಸಿರು ನಿಶಾನೆ ತೋರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ರೈಲು ನಿಲ್ದಾಣ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಬೆಳಿಗ್ಗೆ 8ರಿಂದ 11:30ರ ಅವಧಿಯಲ್ಲಿ ನಗರ ರೈಲು ನಿಲ್ದಾಣಕ್ಕೆ ಬರಬೇಕಿದ್ದ ಹಾಗೂ ನಗರ ರೈಲು ನಿಲ್ದಾಣದಿಂದ ಸಂಚರಿಸಬೇಕಿದ್ದ ಹಲವು ರೈಲುಗಳನ್ನು ಯಶವಂತಪುರ ಹಾಗೂ ಬೈಯಪ್ಪನಹಳ್ಳಿ ನಿಲ್ದಾಣಗಳಿಗೆ ಮಾರ್ಗ ಬದಲಾವಣೆ ಮಾಡಲಾಗಿದೆ. ಈ ಅವಧಿಯಲ್ಲಿ ನಗರ ರೈಲು ನಿಲ್ದಾಣದಿಂದ ಸಂಚಾರ ಆರಂಭಿಸಬೇಕಿದ್ದ ರೈಲುಗಳು 12 ಗಂಟೆಯ ನಂತರ ಹೊರಡಲಿವೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಅಧಿಕೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.

ರೈಲು ನಿಲ್ದಾಣ ಹಾಗೂ ಸುತ್ತಮುತ್ತಲ ಪ್ರದೇಶಗಳಿಗೆ ಪೊಲೀಸರು ಹಾಗೂ ರೈಲ್ವೆ ಇಲಾಖೆಯಿಂದ ಭದ್ರತೆ ಕಲ್ಪಿಸಲಾಗಿದೆ. ಬೆಳಗ್ಗೆ 8 ಗಂಟೆಯಿಂದ ಯಾವುದೇ ರೈಲುಗಳು ನಗರ ನಿಲ್ದಾಣಕ್ಕೆ ಬರುವುದಿಲ್ಲ. ಪ್ಲಾಟ್​ಫಾರಂ 7 ಅಥವಾ 8ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಂದೇ ಭಾರತ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ. ರೈಲು ನಿಲ್ದಾಣ ಸುತ್ತಮುತ್ತಲ ಪ್ರದೇಶದ ಭದ್ರತೆಗಾಗಿ 1200ಕ್ಕೂ ಹೆಚ್ಚು ರೈಲ್ವೆ ಪೊಲೀಸರನ್ನು ನೇಮಿಸಲಾಗಿದೆ.

ಬೆಳಿಗ್ಗೆ 9 ಗಂಟೆಗೆ ಮೋದಿ ಎಚ್​ಎಎಲ್​ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ ಹೆಲಿಕಾಪ್ಟರ್​ನಲ್ಲಿ ಮೇಖ್ರಿ ಸರ್ಕಲ್ ಸಮೀಪದ ಏರ್​ಫೋರ್ಸ್​​ ಕಮಾಂಡ್​ಗೆ ಬರಲಿದ್ದಾರೆ. ಅಲ್ಲಿಂದ ಕಾರಿನಲ್ಲಿ ನಗರ ರೈಲು ನಿಲ್ದಾಣಕ್ಕೆ ತೆರಳಲಿದ್ದಾರೆ. ಮಾರ್ಗದಲ್ಲಿ ಭದ್ರತೆಗಾಗಿ 6,500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. 20 ಕೆಎಸ್​ಆರ್​ಪಿ ಹಾಗೂ ಸಿಎಆರ್ ತುಕಡಿಗಳು ಕಾರ್ಯನಿರ್ವಹಿಸಲಿವೆ. ರೈಲು ‌ನಿಲ್ದಾಣದಿಂದ ವಿಮಾನ ನಿಲ್ದಾಣಕ್ಕೆ ಕಾರು ಅಥವಾ ಹೆಲಿಕಾಪ್ಟರ್​ ಮೂಲಕ ತೆರಳಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಭೇಟಿ ವಿವರ ಹೀಗಿದೆ:

ಬೆಳಿಗ್ಗೆ 9 ಗಂಟೆಗೆ ಎಚ್​ಎಎಲ್ ಏರ್​ಪೋರ್ಟ್​ಗೆ ಪ್ರಧಾನಿ ಮೋದಿ ಆಗಮನ.

9.45ಕ್ಕೆ ಹೆಚ್​ಎಎಲ್ ಏರ್ ಪೋರ್ಟ್​ನಿಂದ ಹೆಲಿಕಾಪ್ಟರ್ ಮೂಲಕ ವಿಧಾನಸೌಧಕ್ಕೆ ಆಗಮಿಸಲಿದ್ದಾರೆ.

9.45 ರಿಂದ 9.55 ರವರೆಗೆ ಶಾಸಕರ ಭವನದಲ್ಲಿ ಕನಕದಾಸ ಮತ್ತು ವಾಲ್ಮೀಕಿ ಪ್ರತಿಮೆಗೆ ಪುಷ್ಪಾರ್ಚನೆ.

10 ಗಂಟೆಗೆ ವಿಧಾನಸೌಧದಿಂದ ರಸ್ತೆ ಮಾರ್ಗವಾಗಿ ಕೆಎಸ್​ಆರ್ ರೈಲು ನಿಲ್ದಾಣಕ್ಕೆ ಪ್ರಯಾಣ.

10.20ಕ್ಕೆ ರೈಲು ನಿಲ್ದಾಣ ತಲುಪಲಿರುವ ಮೋದಿ,

10.20 ರಿಂದ 10.40 ವಂದೇ ಭಾರತ್, ಭಾರತ್ ಗೌರವ್ ಕಾಶಿ ದರ್ಶನ್ ರೈಲುಗಳಿಗೆ ಹಸಿರು ನಿಶಾನೆ.

10.45ಕ್ಕೆ ರೈಲು ನಿಲ್ದಾಣದಿಂದ ಹೆಬ್ಬಾಳ ಎಎಫ್ ಟಿಟಿಸಿ ಹೆಲಿಪ್ಯಾಡ್​ಗೆ ರಸ್ತೆ ಮಾರ್ಗವಾಗಿ ಪ್ರಯಾಣ.

10.55ಕ್ಕೆ ಎಎಫ್ ಟಿಟಿಸಿ ಹೆಲಿಪ್ಯಾಡ್​ಗೆ ಆಗಮನ.

11 ಗಂಟೆಗೆ ಎಎಫ್ ಟಿಟಿಸಿ ಹೆಲಿಪ್ಯಾಡ್​​ನಿಂದ ಕೆಂಪೇಗೌಡ ಏರ್ ಪೋರ್ಟ್​ಗೆ ಹೆಲಿಕಾಪ್ಟರ್ ಮೂಲಕ ಪ್ರಯಾಣ.

11.20ಕ್ಕೆ ಕೆಂಪೇಗೌಡ ಏರ್​ಪೋರ್ಟ್​ಗೆ ಆಗಮನ.

11.30 ರಿಂದ 11.50 ಏರ್​ಪೋರ್ಟ್ ಟರ್ಮಿನಲ್-2 ಉದ್ಘಾಟನೆ.

12 ಗಂಟೆಗೆ ಕೆಂಪೇಗೌಡ ಪ್ರತಿಮೆ ಸ್ಥಳಕ್ಕೆ ಆಗಮನ.

12.00 ರಿಂದ 12.20 ಪ್ರತಿಮೆ ಲೋಕಾರ್ಪಣೆ.

12.20ಕ್ಕೆ ರಸ್ತೆ ಮಾರ್ಗವಾಗಿ ಪ್ರತಿ‌ಮೆ ಸ್ಥಳದಿಂದ ಸಮಾವೇಶ ಸ್ಥಳಕ್ಕೆ ರಸ್ತೆ ಮಾರ್ಗವಾಗಿ ಪ್ರಯಾಣ.

12.30ಕ್ಕೆ ಸಾರ್ವಜನಿಕ ಸಮಾವೇಶ ಸ್ಥಳಕ್ಕೆ ಆಗಮನ.

12.30 ರಿಂದ 01.30 ಸಾರ್ವಜನಿಕ ಸಮಾವೇಶ.

01.30ಕ್ಕೆ ರಸ್ತೆ ಮಾರ್ಗವಾಗಿ ಕೆಂಪೇಗೌಡ ಏರ್ ಪೋರ್ಟ್​ಗೆ ಪ್ರಯಾಣ.

01.40ಕ್ಕೆ ಏರ್​ಪೋರ್ಟ್​ಗೆ ತಲುಪಲಿರುವ ಪ್ರಧಾನಿ ಮೋದಿ,

01.45ಕ್ಕೆ ಕೆಂಪೇಗೌಡ ಏರ್​ಪೋರ್ಟ್​ನಿಂದ ತಮಿಳುನಾಡಿನ ಮಧುರೈಗೆ ನಿರ್ಗಮನ.

Published On - 12:29 pm, Thu, 10 November 22

29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ