Narendra Modi: ಪ್ರಧಾನಿ ನರೇಂದ್ರ ಮೋದಿ 2 ದಿನಗಳ ಪ್ರವಾಸದ ಡಿಟೈಲ್ಸ್ ಇಲ್ಲಿದೆ
ಜೂನ್ 20ರಂದು ಮಧ್ಯಾಹ್ನ 12.30ರ ಸುಮಾರಿಗೆ ಪ್ರಧಾನಮಂತ್ರಿಯವರು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ)ಗೆ ಭೇಟಿ ನೀಡಲಿದ್ದು, ಅಲ್ಲಿ ಅವರು ʻಮೆದುಳು ಸಂಸೋಧನಾ ಕೇಂದ್ರʼವನ್ನು (ಸೆಂಟರ್ ಫಾರ್ ಬ್ರೈನ್ ರಿಸರ್ಚ್ -ಸಿಬಿಆರ್) ಉದ್ಘಾಟಿಸಲಿದ್ದಾರೆ.
ದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ(PM Narendra Modi) ಅವರು 2022ರ ಜೂನ್ 20 ಮತ್ತು 21ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಜೂನ್ 20ರಂದು ಮಧ್ಯಾಹ್ನ 12.30ರ ಸುಮಾರಿಗೆ ಪ್ರಧಾನಮಂತ್ರಿಯವರು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ)ಗೆ ಭೇಟಿ ನೀಡಲಿದ್ದು, ಅಲ್ಲಿ ಅವರು ʻಮೆದುಳು ಸಂಸೋಧನಾ ಕೇಂದ್ರʼವನ್ನು (ಸೆಂಟರ್ ಫಾರ್ ಬ್ರೈನ್ ರಿಸರ್ಚ್ -ಸಿಬಿಆರ್) ಉದ್ಘಾಟಿಸಲಿದ್ದಾರೆ. ಜೊತೆಗೆ ʻಬಾಗ್ಚಿ-ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆʼಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 1.45ಕ್ಕೆ ಬೆಂಗಳೂರಿನ ʻಡಾ. ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ʼಗೆ (ಬೇಸ್) ಭೇಟಿ ನೀಡಲಿರುವ ಅವರು, ʻಬೇಸ್ ವಿಶ್ವವಿದ್ಯಾಲಯʼದ ನೂತನ ಕ್ಯಾಂಪಸ್ ಅನ್ನು ಉದ್ಘಾಟಿಸಲಿದ್ದಾರೆ ಮತ್ತು ಡಾ. ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಯನ್ನು ಅನಾವರಣಗೊಳಿಸಲಿದ್ದಾರೆ.
ಕರ್ನಾಟಕದಲ್ಲಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು (ಐಟಿಐ) ಪರಿವರ್ತಿಸುವ ಮೂಲಕ ಅಭಿವೃದ್ಧಿಪಡಿಸಲಾದ 150 ‘ಟೆಕ್ನಾಲಜಿ ಹಬ್’ಗಳನ್ನು ಅವರು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ತದನಂತರ ಮಧ್ಯಾಹ್ನ 2.45ಕ್ಕೆ ಪ್ರಧಾನಮಂತ್ರಿಯವರು ಬೆಂಗಳೂರಿನ ಕೊಮ್ಮಘಟ್ಟ ತಲುಪಲಿದ್ದು, ಅಲ್ಲಿ ಅವರು 27,000 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ನಾನಾ ರೈಲು ಮತ್ತು ರಸ್ತೆ ಮೂಲಸೌಕರ್ಯ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸುವರು. ನಂತರ ಸಂಜೆ 5.30ಕ್ಕೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿ ಅವರು ನಾಗನಹಳ್ಳಿ ರೈಲ್ವೆ ನಿಲ್ದಾಣದಲ್ಲಿ ಕೋಚಿಂಗ್ ಟರ್ಮಿನಲ್‌ಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ʻಭಾರತೀಯ ವಾಕ್‌ಶ್ರವಣ ಸಂಸ್ಥೆʼಯಲ್ಲಿ (ಎ.ಐ.ಐ.ಎಸ್.ಎಚ್) ‘ಸಂವಹನ ಅಸ್ವಸ್ಥೆಗಳುಳ್ಳ ವ್ಯಕ್ತಿಗಳಿಗೆ ಉತ್ಕೃಷ್ಟತಾ ಕೇಂದ್ರ’ವನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಇದನ್ನೂ ಓದಿ: ವಾಹನ ಸವಾರರೇ ಗಮನಿಸಿ; ಮೋದಿ ಭೇಟಿ ಹಿನ್ನೆಲೆ ಹಲವು ರಸ್ತೆಗಳು ಬಂದ್, ಬದಲಿ ವ್ಯವಸ್ಥೆ
ನಂತರ ಸಂಜೆ 7 ಗಂಟೆಗೆ ಪ್ರಧಾನಮಂತ್ರಿಯವರು ಮೈಸೂರಿನ ಶ್ರೀ ಸುತ್ತೂರು ಮಠಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ, ಸಂಜೆ 7.45ಕ್ಕೆ ಮೈಸೂರಿನ ಚಾಮುಂಡೇಶ್ವರಿ ದೇಗುಲಕ್ಕೆ ಭೇಟಿ ನೀಡಲಿದ್ದಾರೆ. ಜೂನ್ 21ರಂದು ಬೆಳಿಗ್ಗೆ 6.30ಕ್ಕೆ ಪ್ರಧಾನಮಂತ್ರಿಯವರು 8ನೇ ʻಅಂತಾರಾಷ್ಟ್ರೀಯ ಯೋಗ ದಿನʼದ ಅಂಗವಾಗಿ ಮೈಸೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಪಾಲ್ಗೊಳ್ಳಲಿದ್ದಾರೆ. ಮೈಸೂರು ಅರಮನೆಯ ಮೈದಾನದಲ್ಲಿ ಅಂತರರಾಷ್ಟ್ರೀಯ ಯೋಗದಿನಾಚರಣೆಯಲ್ಲಿ ಭಾಗವಹಿಸಿ ಯೋಗಪಟುಗಳೊಂದಿಗೆ ಬೆರತು ಯೋಗ ಮಾಡಲಿದ್ದಾರೆ. ಬೆಳಿಗ್ಗೆ 8.10 ಕ್ಕೆ ವಸ್ತುಪ್ರದರ್ಶನ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ನಂತರ ಬೆಳಿಗ್ಗೆ 9.20 ಕ್ಕೆಮೈಸೂರು ಅರಮನೆ ಆವರಣದಿಂದ ನಿರ್ಗಮಿಸಿ ಬೆಳಿಗ್ಗೆ 9.45ಕ್ಕೆ ಮೈಸೂರಿನ ವಿಮಾನನಿಲ್ದಾಣದಿಂದ ನವದೆಹಲಿಗೆ ತೆರಳಲಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 8:31 pm, Sun, 19 June 22