Kempegowda Statue: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ

Kempegowda Statue: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ
Kempegowda
Follow us
TV9 Web
| Updated By: ನಯನಾ ರಾಜೀವ್

Updated on:Nov 11, 2022 | 12:13 PM

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಿಸಲಾಗಿರುವ ನಾಡಪ್ರಭು ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಅನಾವರಣಗೊಳಿಸಿದರು.

ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣದಲ್ಲಿ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಪ್ರತಿಮೆ ನಿರ್ಮಿಸಲಾಗಿದ್ದು, ಹಾಗೆಯೇ 20 ಕೋಟಿ ರೂ. ವೆಚ್ಚದಲ್ಲಿ ಕೆಂಪೇಗೌಡ ಥೀಮ್ ಪಾರ್ಕ್​ ನಿರ್ಮಿಸಲಾಗಿದೆ. ಕೆಂಪೇಗೌಡ ಪ್ರತಿಮೆ, ಥೀಮ್ ಪಾರ್ಕ್​ಗೆ ಒಟ್ಟು 84 ಕೋಟಿ ರೂ. ವೆಚ್ಚ ತಗುಲಿದೆ.

ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ಪ್ರತಿಮೆಯ ಕೆಲಸಕ್ಕೆ ಮತ್ತಷ್ಟು ಚುರುಕು ದೊರೆತಿತ್ತು. ಈ ಪ್ರತಿಮೆಗೆ 98 ಟನ್‌ ಕಂಚು ಮತ್ತು 120 ಟನ್ ಹುಕ್ಕು ಬಳಕೆ ಮಾಡಲಾಗಿದೆ. ಕೆಂಪೇಗೌಡರ‌ ಖಡ್ಗವೇ ಬರೋಬ್ಬರಿ 4000 ಸಾವಿರ ಕೆಜಿ ತೂಕವಿದೆ.

ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಬರೋಬ್ಬರು 2 ವರ್ಷ 5 ತಿಂಗಳ ಸಮಯ ತೆಗೆದುಕೊಂಡಿದ್ದರು. 85 ಎಂಜಿನಿಯರ್​ಗಳು ಕೆಲಸ ಮಾಡಿದ್ದಾರೆ.

ವರ್ಲ್ಡ್​ ಬುಕ್ ಆಫ್​ ರೆಕಾರ್ಡ್ಸ್ ಸೇರಿದ ಕೆಂಪೇಗೌಡರ ಪ್ರತಿಮೆ

ಕೆಂಪೇಗೌಡ ಕಂಚಿನ ಪ್ರತಿಮೆಯ ಒಟ್ಟು ತೂಕ 218 ಟನ್ ಆಗಿದ್ದು, ಪ್ರತಿಮೆಯ ಖಡ್ಗದ ತೂಕ 4 ಟನ್​​ ಇದೆ. 23 ಎಕರೆಯಲ್ಲಿ ಕೆಂಪೇಗೌಡ ಥೀಮ್ ಪಾರ್ಕ್​ ನಿರ್ಮಾಣ ನಿರ್ಮಿಸಲಾಗಿದ್ದು, ಮದ್ಯಾಹ್ನ 12.10 ಪ್ರಧಾನಿ ಮೋದಿಯಿಂದ ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆಗೊಳ್ಳಲಿದೆ.

ನಾಡಪ್ರಭು ಕೆಂಪೇಗೌಡರ 108 ಪ್ರಗತಿ ಪ್ರತಿಮೆ ನಿರ್ಮಾಣಕ್ಕೆ ಜೂನ್ 26 2020 ರಂದು ಅಂದಿನ ಸಿಎಂ ಬಿಎಸ್ ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಿದ್ದರು. ಸುಮಾರು 84 ಕೋಟಿ ರೂ. ವೆಚ್ಚದಲ್ಲಿ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಈ ಪ್ರತಿಮೆ 108 ಅಡಿ ಎತ್ತರದಲ್ಲಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:09 pm, Fri, 11 November 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್