Aero India 2023 ಉದ್ಘಾಟನೆಗಾಗಿ ಫೆ.12ರಂದು ಬೆಂಗಳೂರಿಗೆ ಮೋದಿ, ಬಿಎಂಟಿಸಿಯಿಂದ ವಿಶೇಷ ಬಸ್​ ವ್ಯವಸ್ಥೆ

Aero India Air Show: ಫೆ.13 ರಿಂದ ಯಲಹಂಕದ ವಾಯುನೆಲೆಯಲ್ಲಿ 14ನೇ ಆವೃತ್ತಿಯ ಏರೋ ಇಂಡಿಯಾ ಏರ್​ ಶೋ ನಡೆಯಲಿದೆ. ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ನಾಳೆ (ಫೆ.12) ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಹಾಗೇ ಏರ್​ ಶೋಗೆ ಬಿಎಂಟಿಸಿಯಿಂದ ವಿಶೇಷ ಬಸ್​ ಬಿಡಲಾಗಿದೆ. ಇಲ್ಲಿದೆ ಬಸ್​​ ವ್ಯವಸ್ಥೆ ಮಾಹಿತಿ.

Aero India 2023 ಉದ್ಘಾಟನೆಗಾಗಿ ಫೆ.12ರಂದು ಬೆಂಗಳೂರಿಗೆ ಮೋದಿ, ಬಿಎಂಟಿಸಿಯಿಂದ ವಿಶೇಷ ಬಸ್​ ವ್ಯವಸ್ಥೆ
ಏರ್​ ಶೋಗೆ ತಯಾರಿ (ಎಡಚಿತ್ರ) ಬಿಎಂಟಿಸಿ ಬಸ್​ (ಬಲಚಿತ್ರ)
Follow us
TV9 Web
| Updated By: ವಿವೇಕ ಬಿರಾದಾರ

Updated on:Feb 11, 2023 | 8:24 PM

ಬೆಂಗಳೂರು: ಫೆ.13 ರಿಂದ ನಗರದ ಯಲಹಂಕದ (Yalanka) ವಾಯುನೆಲೆಯಲ್ಲಿ 14ನೇ ಆವೃತ್ತಿಯ ಏರೋ ಇಂಡಿಯಾ ಏರ್​ ಶೋ (Aero India Air Show) ನಡೆಯಲಿದೆ. ಏರ್​ ಶೋ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಆಗಮಿಸಲಿದ್ದು, ನಾಳೆ (ಫೆ.12) ಸಂಜೆ 7 ಗಂಟೆಗೆ ರಾಜಧಾನಿಗೆ ಆಗಮಿಸಿ, ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸೋಮವಾರ (ಫೆ.13) ಏರ್​ಶೋ-2023 ಉದ್ಘಾಟಿಸಲಿದ್ದಾರೆ.  ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ (BJP) ಕೇಂದ್ರ ನಾಯಕರು ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅದರಂತೆ ವರ್ಷ ಆರಂಭವಾದಾಗಿನಿಂದ ಇಲ್ಲಿವರೆಗೆ ಪ್ರಧಾನಿ ಮೋದಿ 2 ರಿಂದ 3 ಭಾರಿ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ.

ಇದನ್ನೂ ಓದಿ: ಏರ್ ಶೋನ ಇಂಡಿಯಾ ಪೆವಿಲಿಯನ್‌ನಲ್ಲಿ ಸ್ಥಿರ-ವಿಂಗ್ ವಿಮಾನಗಳ ಆರ್ಭಟ!

ಏರೋ ಇಂಡಿಯಾ ಏರ್​ ಶೋಗೆ ಬಿಎಂಟಿಸಿ

ಯಲಹಂಕ ವಾಯುನೆಲೆಯಲ್ಲಿ ನಡೆಯಲಿರುವ ಏರ್ ಶೋಗೆ ಬಿಎಂಟಿಸಿಯಿಂದ ಹೆಚ್ಚುವರಿ‌ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಫೆ 13 ರಿಂದ 17 ರವರೆಗೆ ಏರ್ ಶೋ ನಡೆಯಲಿದೆ. ಏರ್ ಶೋ ವೀಕ್ಷಿಸಲು ಹೆಚ್ಚಿನ ಜನದಟ್ಟಣೆ ಆಗಮಿಸುವುದರಿಂದ 10 ಹೆಚ್ಚುವರಿ ಬಸ್ ಬಿಡಲು ಬಿಎಂಟಿಸಿ ಮುಂದಾಗಿದೆ. ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ದಿನಾಂಕ 16 ಹಾಗೂ 17ರಂದು ಪ್ರಯಾಣಿಕರ ಅನುಕೂಲಕ್ಕಾಗಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ಇದನ್ನೂ ಓದಿ: ಏರೋ ಇಂಡಿಯಾ ಹಿನ್ನಲೆ ನಗರದ ಈ ರಸ್ತೆಗಳಲ್ಲಿ ಸಂಚಾರ ನಿಷೇಧ; ಪರ್ಯಾಯ ರಸ್ತೆ ಮಾರ್ಗ ಇಲ್ಲಿದೆ ನೋಡಿ

ನಗರದ ವಿವಿಧ ಭಾಗದಿಂದ ಯಲಹಂಕಕ್ಕೆ 10 ಹೆಚ್ಚುವರಿ ಬಸ್ ವ್ಯವಸ್ಥೆ

ಮೆಜೆಸ್ಟಿಕ್, ಕೆಆರ್ ಮಾರ್ಕೆಟ್, ಶಿವಾಜಿನಗರ, ಹೆಬ್ಬಾಳ, ಬನಶಂಕರಿ ಟಿಟಿಎಂಸಿ, ಯಲಹಂಕ ಎನ್ ಇ ಎಸ್, ಕೆಂಗೇರಿ, ಟಿನ್ ಫ್ಯಾಕ್ಟ್ರಿ ಹಾಗೂ ಯಶವಂತಪುರದಿಂದ ಬಸ್​ ಬಿಡಲಾಗಿದೆ. ಏರ್ ಶೋಗೆ ಹೋಗುವವರು ಬಸ್​ ನಿಲ್ದಾಣದವರೆಗೆ ತಮ್ಮ ಸ್ವಂತ ವಾಹನದಲ್ಲಿ ಬಂದು, ಅಲ್ಲಿಂದ ಬಸ್​​ನಲ್ಲಿ ಹೋಗವವರಿಗೆ ನಿಲ್ದಾಣದಲ್ಲಿ ಪಾರ್ಕಿಂಗ್​ಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ. ಯಶವಂತಪುರ, ಶಾಂತಿನಗರ, ಜಯನಗರ, ಕೋರಮಂಗಲ, ಕೆಂಗೇರಿ ಬಸ್ ನಿಲ್ದಾಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಬಸ್ ನಿಲ್ದಾಣದಲ್ಲಿ ಸ್ವಂತ ವಾಹನ ಪಾರ್ಕಿಂಗ್ ಮಾಡಿ ಬಿಎಂಟಿಸಿ ಬಸ್ ಬಳಸುವಂತೆ ಸಾರ್ವಜನಿಕರಲ್ಲಿ ಬಿಎಂಟಿಸಿ ಮನವಿ ಮಾಡಿಕೊಂಡಿದೆ.

ಎಲಿವೇಟೆಡ್ ಫ್ಲೈ ಓವರ್ ನಲ್ಲಿ ಸಾರ್ವಜನಿಕರ ವಾಹನಗಳಿಗೆ ನಿಷೇಧ

ಏರ್​ ಶೋ ಹಿನ್ನೆಲೆ ಹೆಬ್ಬಾಳ ಎಸ್ಟೀಮ್ ಮಾಲ್ ಫ್ಲೈ ಓವರ್ ನಿಂದ ಯಲಹಂಕ ವರೆಗೂ ಎಲಿವೇಟೆಡ್ ಫ್ಲೈ ಓವರ್ ಮೇಲೆ ವಾಹನ ಸಂಚಾರ ನಿಷೇಧಿಸಲಾಗಿದೆ.  ಏರ್ ಶೋಗೆ ತೆರಳುವವರಿಗೆ ಮಾತ್ರ ನಿಗದಿತ ಪಾಸ್ ತೋರಿಸಿ ಎಲಿವೇಟೆಡ್ ಫ್ಲೈ ಓವರ್ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಯಲಹಂಕ , ಕೋಡಿಗೆಹಳ್ಳಿ , ಬ್ಯಾಟರಾಯನಪುರ ಸುತ್ತಮುತ್ತ ಪ್ರದೇಶ ಸಾರ್ವಜನಿಕರು ಫ್ಲೈ ಓವರ್ ಪಕ್ಕದ ಸರ್ವಿಸ್ ರಸ್ತೆ ಬಳಸುವಂತೆ ಸೂಚನೆ ನೀಡಿದ್ದಾರೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರು ಹೆಣ್ಣೂರು ಜಂಕ್ಷನ್ ಮುಖಾಂತರ ತೆರಳುವಂತೆ ಬೆಂಗಳೂರು ಸಂಚಾರ ಪೊಲೀಸರಿಂದ ವಾಹನ ಸವಾರರಿಗೆ ಸೂಚನೆ ನೀಡಿದ್ದಾರೆ.

 ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:13 pm, Sat, 11 February 23

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ