ಬೆಂಗಳೂರು: 2023ರ ಫೆಬ್ರವರಿ ತಿಂಗಳಲ್ಲಿ ಬೆಂಗಳೂರಿನಲ್ಲಿ ಏರ್ ಶೋ (Air Show) ಆಯೋಜಿಸಲಾಗಿದ್ದು, ಪ್ರಧಾನಿ ಮೋದಿಯವರು (PM Narendra modi) ಏರ್ ಶೋಗೆ ಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ತಿಳಿಸಿದರು.
ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕಾಲಿನ್ಸ್ ಏರೋಸ್ಪೇಸ್ ಗ್ಲೋಬಲ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಸೆಂಟರ್ನ್ನು ಉದ್ಘಾಟಿಸಿ ಮಾತನಾಡಿದ ಅವರು ಈ ಏರ್ ಶೋ ಕಾರ್ಯಕ್ರಮದಲ್ಲಿ ರಾಜ್ಯದಲ್ಲಿರುವ ಏರೋಸ್ಪೇಸ್ ಸಂಶೋಧನಾ ಕೇಂದ್ರದ ಬಗ್ಗೆ, ವಿಮಾನಯಾನ, ವಿಮಾನ ಉತ್ಪಾದನಾ ರಂಗಗಳಲ್ಲಿನ ಅವಕಾಶಗಳು ಹಾಗೂ ಸಾಧ್ಯತೆಗಳ ಬಗ್ಗೆ ಬೆಳಕು ಚೆಲ್ಲಬೇಕು. ಏರ್ ಶೋ ಅಂತರರಾಷ್ಟ್ರೀಯ ಮಟ್ಟದ ಕಾರ್ಯಕ್ರಮವಾಗಿದೆ ಎಂದರು.
ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಮಟ್ಟದ ಸಂಶೋಧನಾ ಕೇಂದ್ರ
ಭಾರತದ ಎಂಜನೀಯರಗಳ ಸಾಮರ್ಥ್ಯ ಉತ್ತಮವಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ಭಾಗಗಳನ್ನೂ ಒಳಗೊಂಡ ಸಂಪೂರ್ಣ ವಿಮಾನದ ಉತ್ಪಾದನೆಯನ್ನು ಬೆಂಗಳೂರಿನಲ್ಲಿಯೇ ಆಗಬೇಕೆಂಬುದು ನನ್ನ ಕನಸಾಗಿದೆ. ಏರೊಸ್ಪೇಸ್ ಕ್ಷೇತ್ರಕ್ಕೆ ಬೆಂಗಳೂರು ಉತ್ತಮ ಸ್ಥಳವಾಗಿದ್ದು, ಇಲ್ಲಿ ಡಿಆರ್ಡಿಒ, ಎನ್ಎ ಎಲ್, ಹೆಚ್.ಎ.ಎಲ್ನಂತಹ ಸಂಸ್ಥೆಗಳಿವೆ. ಬೆಂಗಳೂರಿನಲ್ಲಿ ಏರೋಸ್ಪೇಸ್, ಕೃತಕ ಬುದ್ಧಿಮತ್ತೆ, ನವೀಕರಿಸಬಹುದಾದ ಇಂಧನ, ಸೆಮಿ ಕಂಡಕ್ಟರ್ಗೆ ಸಂಬಂಧಿಸಿದ ಅಂತರರಾಷ್ಟ್ರೀಯ ಮಟ್ಟದ ಸಂಶೋಧನಾ ಕೇಂದ್ರಗಳಿವೆ ಎಂದರು.
ಇದನ್ನೂ ಓದಿ: ಏರ್ ಶೋಗೆ ದಿನಾಂಕ ಫಿಕ್ಸ್ , ಆತಿಥ್ಯ ವಹಿಸಲಿರುವ ಯಲಹಂಕ ಏರ್ ಫೋರ್ಸ್
ಕೊಲಿನ್ಸ್ ಏರೊಸ್ಪೆಸ್ ಎಂಜನೀಯರಿಂಗ್ ಸಂಸ್ಥೆ 25 ವರ್ಷ ಪೂರೈಸಿದೆ
ಕೊಲಿನ್ಸ್ ಏರೊಸ್ಪೆಸ್ ಎಂಜನೀಯರಿಂಗ್ ಸಂಸ್ಥೆಯನ್ನು ಆರಂಭಿಸಿದ್ದು ಸಂತಸವಾಗಿದೆ. ಈ ಸಂಸ್ಥೆ ಬೆಂಗಳೂರಿನಲ್ಲಿ 25 ವರ್ಷ ಪೂರೈಸಿದೆ. ಇದು ಸಂಸ್ಥೆಯ ಸಾಧನೆಯನ್ನು ತೋರಿಸುತ್ತದೆ. ಈ ಸಂಸ್ಥೆ ಬೆಂಗಳೂರಿನ ಪ್ರಮುಖ ಇಂಜಿನಿಯರಿಂಗ್ ಕೇಂದ್ರವಾಗಿದೆ ಇದು ನಿಮ್ಮ ಶ್ರಮದ ಫಲ. ಬೆಂಗಳೂರು, ಕರ್ನಾಟಕ, ಭಾರತ ಹೆಮ್ಮೆ ಪಡುವಂತೆ ಸಂಸ್ಥೆ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.
ಏರೋ ಸ್ಪೇಸ್ ಅತ್ಯಂತ ವಿಶೇಷ ಇದು ಮನುಷ್ಯನನ್ನು ಮತ್ತೊಂದು ಲೋಕಕ್ಕೆ ತೆಗೆದುಕೊಂಡು ಹೋಗುತ್ತದೆ. ಮನುಷ್ಯನ ಮನಸ್ಸನ್ನು ಒಂದು ಹಂತದವರೆಗೆ ವಿಸ್ತರಣೆ ಮಾಡಬಹುದು. ಮನುಷ್ಯನ ಬುದ್ದಿ ಶಕ್ತಿ ಶೇ 80 ರಷ್ಟು ಬಳಕೆಯಾಗುವುದಿಲ್ಲ. ಪರಮಹಂಸ ಅತ್ಯಂತ ಭಾರವಾದ ಮತ್ತು ಶುಭ್ರ ಪಕ್ಷಿ ಅದು ಅತಿ ಎತ್ತರದಲ್ಲಿ ಹಾರಬಹುದು. ಅದು ಮಾನಸ ಸರೋವರದಲ್ಲಿ ಇರುತ್ತದೆ. ಅದೇ ರೀತಿ ಏರೊಸ್ಪೇಸ್ ಅತ್ಯಂತ ಎತ್ತರದಲ್ಲಿ ಹಾರಬಹುದು.
ಈ ಸಂದರ್ಭದಲ್ಲಿ ಕಾಲಿನ್ಸ್ ಸಂಸ್ಥೆಯ ಅಧ್ಯಕ್ಷ ಸ್ಟೀಫನ್ ಟಿಮ್ಸ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣಾ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ: ಡಿ.11ರಂದು 3 ರಾಷ್ಟ್ರೀಯ ಆಯುಷ್ ಸಂಸ್ಥೆಗಳನ್ನು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಏರ್ ಶೋಗೆ ದಿನಾಂಕ ಫಿಕ್ಸ್
ಕೇಂದ್ರ ರಕ್ಷಣಾ ಸಚಿವಾಲಯವು ಏರೋ ಇಂಡಿಯಾದ ಬಹುನಿರೀಕ್ಷಿತ 14ನೇ ಆವೃತ್ತಿ ಬೆಂಗಳೂರು ಏರ್‌ಶೋಗೆ ದಿನಾಂಕ ನಿಗದಿ ಮಾಡಿದೆ. ಮುಂದಿನ ವರ್ಷ ಅಂದ್ರೆ 2023ರ ಫೆಬ್ರವರಿ 13ರಿಂದ 17ರವರೆಗೆ ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಪ್ರತಿಷ್ಠಿತ ಏರೋ ಇಂಡಿಯಾ ವೈಮಾನಿಕ ಪ್ರದರ್ಶ ನಡೆಯಲಿದೆ. ಕೇಂದ್ರ ರಕ್ಷಣಾ ಇಲಾಖೆಯು ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಸುವ ಅತಿದೊಡ್ಡ ಪ್ರದರ್ಶನ ಇದಾಗಿದ್ದು, ಏರ್ ಶೋ ಪ್ರದರ್ಶನ ಸಿಲಿಕಾನ್ ಸಿಟಿ ಬೆಂಗಳೂರಿನ ಹೆಗ್ಗಳಿಕೆಲ್ಲೊಂದಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:54 pm, Wed, 7 December 22