ಪ್ರಧಾನಿ ಮೋದಿ ಬೆಂಗಳೂರು ಭೇಟಿ: ಶನಿವಾರ ಎಚ್​​ಎಎಲ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಪಿಎಂ

PM Narendra Modi Bengaluru Visit: ವಿಧಾನಸಭೆ ಚುನಾವಣೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಆಗಮಿಸುತ್ತಿರುವುದು ಇದು ಎರಡನೇ ಬಾರಿ ಆಗಿದೆ. ಎಚ್​​ಎಎಲ್​​ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಅವರು, ತೆಲಂಗಾಣ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ತೆರಳಲಿದ್ದಾರೆ.

ಪ್ರಧಾನಿ ಮೋದಿ ಬೆಂಗಳೂರು ಭೇಟಿ: ಶನಿವಾರ ಎಚ್​​ಎಎಲ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಪಿಎಂ
ಪ್ರಧಾನಿ ನರೇಂದ್ರ ಮೋದಿ
Follow us
Ganapathi Sharma
|

Updated on: Nov 24, 2023 | 9:33 PM

ಬೆಂಗಳೂರು, ನವೆಂಬರ್​ 24: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶನಿವಾರ ಬೆಳಗ್ಗೆ ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಘಟಕಕ್ಕೆ ಭೇಟಿ ನೀಡಲಿದ್ದಾರೆ. ಅವರು ತೇಜಸ್ ಜೆಟ್‌ಗಳ ಘಟಕ ಹಾಗೂ ಉತ್ಪಾದನಾ ಘಟಕಗಳನ್ನು ಪರಿಶೀಲನೆ ನಡೆಸಲಿದ್ದಾರೆ.

ವಿಧಾನಸಭೆ ಚುನಾವಣೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಆಗಮಿಸುತ್ತಿರುವುದು ಇದು ಎರಡನೇ ಬಾರಿ ಆಗಿದೆ. ಎಚ್​​ಎಎಲ್​​ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಅವರು, ತೆಲಂಗಾಣ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ತೆರಳಲಿದ್ದಾರೆ.

ಭಾರತೀಯ ವಾಯುಪಡೆ ಇತ್ತೀಚೆಗೆ 12 ಸುಧಾರಿತ ಸು 30-ಎಂಕೆಐ (Su-30MKI) ಫೈಟರ್ ಜೆಟ್‌ಗಳ ಖರೀದಿಗಾಗಿ ಸರ್ಕಾರಿ ಸ್ವಾಮ್ಯದ ಎಚ್‌ಎಎಲ್‌ಗೆ ಟೆಂಡರ್ ನೀಡಿದೆ. ಇವುಗಳಮನ್ನು ರಷ್ಯಾದ ಮೂಲ ಉಪಕರಣ ತಯಾರಕರ ಸಹಭಾಗಿತ್ವದಲ್ಲಿ ಎಚ್​ಎಎಲ್ ಭಾರತದಲ್ಲಿ ತಯಾರಿಸಲಿದೆ ಎಂದು ರಕ್ಷಣಾ ಮೂಲಗಳು ಈ ಹಿಂದೆಯೇ ತಿಳಿಸಿದ್ದವು. ಸರ್ಕಾರಿ ಸ್ವಾಮ್ಯದ ಕಂಪನಿಯು ಮುಂದಿನ ತಿಂಗಳೊಳಗೆ ಯೋಜನೆಯ ವಿವರಗಳು ಹಾಗೂ ಇತರ ವಿವರಗಳೊಂದಿಗೆ ಟೆಂಡರ್‌ಗೆ ಪ್ರತಿಕ್ರಿಯಿಸುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಪ್ರಧಾನಿ ಮೋದಿ ಬೆಂಗಳೂರು ಭೇಟಿ; ನವೆಂಬರ್​ 25 ರಂದು HAL ಕಾರ್ಯಕ್ರಮದಲ್ಲಿ ಭಾಗಿ

ಭಾರತದ ರಕ್ಷಣಾ ವಲಯಕ್ಕೆ ಗಮನಾರ್ಹವಾದ ಉತ್ತೇಜನ ನೀಡುವ ನಿಟ್ಟಿನಲ್ಲಿ, ಲಘು ಯುದ್ಧ ವಿಮಾನ (LCA) ‘ಮಾರ್ಕ್-2’ ಗಾಗಿ ಎಂಜಿನ್‌ಗಳು ಮತ್ತು ಸ್ವದೇಶಿ ಅತ್ಯಾಧುನಿಕ ಮಧ್ಯಮ ಗಾತ್ರದ ಯುದ್ಧ ವಿಮಾನದ (AMCA) ಮೊದಲ ಎರಡು ಸ್ಕ್ವಾಡ್ರನ್‌ಗಳನ್ನು ದೇಶೀಯವಾಗಿ ಉತ್ಪಾದಿಸಲಾಗುವುದು ಎಂದು ಡಿಆರ್​ಡಿಒ ಮುಖ್ಯಸ್ಥ ಡಾ. ಸಮೀರ್ ವಿ ಕಾಮತ್ ಇತ್ತೀಚೆಗೆ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್