ಬೆಂಗಳೂರು, ನವೆಂಬರ್ 24: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶನಿವಾರ ಬೆಳಗ್ಗೆ ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಘಟಕಕ್ಕೆ ಭೇಟಿ ನೀಡಲಿದ್ದಾರೆ. ಅವರು ತೇಜಸ್ ಜೆಟ್ಗಳ ಘಟಕ ಹಾಗೂ ಉತ್ಪಾದನಾ ಘಟಕಗಳನ್ನು ಪರಿಶೀಲನೆ ನಡೆಸಲಿದ್ದಾರೆ.
ವಿಧಾನಸಭೆ ಚುನಾವಣೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಆಗಮಿಸುತ್ತಿರುವುದು ಇದು ಎರಡನೇ ಬಾರಿ ಆಗಿದೆ. ಎಚ್ಎಎಲ್ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಅವರು, ತೆಲಂಗಾಣ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ತೆರಳಲಿದ್ದಾರೆ.
ಭಾರತೀಯ ವಾಯುಪಡೆ ಇತ್ತೀಚೆಗೆ 12 ಸುಧಾರಿತ ಸು 30-ಎಂಕೆಐ (Su-30MKI) ಫೈಟರ್ ಜೆಟ್ಗಳ ಖರೀದಿಗಾಗಿ ಸರ್ಕಾರಿ ಸ್ವಾಮ್ಯದ ಎಚ್ಎಎಲ್ಗೆ ಟೆಂಡರ್ ನೀಡಿದೆ. ಇವುಗಳಮನ್ನು ರಷ್ಯಾದ ಮೂಲ ಉಪಕರಣ ತಯಾರಕರ ಸಹಭಾಗಿತ್ವದಲ್ಲಿ ಎಚ್ಎಎಲ್ ಭಾರತದಲ್ಲಿ ತಯಾರಿಸಲಿದೆ ಎಂದು ರಕ್ಷಣಾ ಮೂಲಗಳು ಈ ಹಿಂದೆಯೇ ತಿಳಿಸಿದ್ದವು. ಸರ್ಕಾರಿ ಸ್ವಾಮ್ಯದ ಕಂಪನಿಯು ಮುಂದಿನ ತಿಂಗಳೊಳಗೆ ಯೋಜನೆಯ ವಿವರಗಳು ಹಾಗೂ ಇತರ ವಿವರಗಳೊಂದಿಗೆ ಟೆಂಡರ್ಗೆ ಪ್ರತಿಕ್ರಿಯಿಸುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದರು.
ಇದನ್ನೂ ಓದಿ: ಪ್ರಧಾನಿ ಮೋದಿ ಬೆಂಗಳೂರು ಭೇಟಿ; ನವೆಂಬರ್ 25 ರಂದು HAL ಕಾರ್ಯಕ್ರಮದಲ್ಲಿ ಭಾಗಿ
ಭಾರತದ ರಕ್ಷಣಾ ವಲಯಕ್ಕೆ ಗಮನಾರ್ಹವಾದ ಉತ್ತೇಜನ ನೀಡುವ ನಿಟ್ಟಿನಲ್ಲಿ, ಲಘು ಯುದ್ಧ ವಿಮಾನ (LCA) ‘ಮಾರ್ಕ್-2’ ಗಾಗಿ ಎಂಜಿನ್ಗಳು ಮತ್ತು ಸ್ವದೇಶಿ ಅತ್ಯಾಧುನಿಕ ಮಧ್ಯಮ ಗಾತ್ರದ ಯುದ್ಧ ವಿಮಾನದ (AMCA) ಮೊದಲ ಎರಡು ಸ್ಕ್ವಾಡ್ರನ್ಗಳನ್ನು ದೇಶೀಯವಾಗಿ ಉತ್ಪಾದಿಸಲಾಗುವುದು ಎಂದು ಡಿಆರ್ಡಿಒ ಮುಖ್ಯಸ್ಥ ಡಾ. ಸಮೀರ್ ವಿ ಕಾಮತ್ ಇತ್ತೀಚೆಗೆ ತಿಳಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ